Connect with us

ಬಹಿರಂಗ

ಕರ್ನಾಟಕದ ಅಂಬೇಡ್ಕರ್ ‘ಪ್ರೊ.ಬಿ.ಕೃಷ್ಣಪ್ಪ’..!

Published

on

ಪ್ರೋ.ಬಿ.ಕೃಷ್ಣಪ್ಪ ಅಂದ್ರೆ ಅದೊಂದು ಅಂಬೇಡ್ಕರ್ ಸಿದ್ದಾಂತದ ಮಾತೃಕೆ.ಕರ್ನಾಟಕದ ಕೋಟ್ಯಂತರ ಶೋಷಿತರ ಎದೆಯೊಳಗೆ ಮನುಷ್ಯತ್ವಕ್ಕಾಗಿ ಹೋರಾಟದ ಕಿಚ್ಚಚ್ಚಿದ ಸಂಘರ್ಷದ ಬೆಂಕಿ. ಭೀಮವಾದವೆಂಬ ಬೀಜವನ್ನು ನಾಡಿನ ದಲಿತರ ತಲೆಯೊಳಗೆ ಬಿತ್ತಿದ ಅಪ್ಪಟ ಅಂಬೇಡ್ಕರ್ ವಾದಿ.

ಸಾಮಾಜಿಕ ಸಂಕಟಗಳಿಗೆ ಸಿಲುಕಿ ನಲುಗಿದ್ದ ಅಸ್ಪೃಶ್ಯರಿಗೆ ಧ್ವನಿಯಾದವರು.ತಾನು ಗಂಧದಂತೆ ತೇದು ನಾಶವಾಗಿ ದಲಿತರಿಗೆ ಸುಗಂದ ನೀಡಿದ ಮಹಾತ್ಮನೆಂದತೆ ಬಿ.ಕೃಷ್ಣಪ್ಪ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಎಂಬ ಹಳ್ಳಿಯಲ್ಲಿ ತಾಯಿ ಚೌಡಮ್ಮ ತಂದೆ ಬಸಪ್ಪರ ಮಗನಾಗಿ ಜನಿಸಿದ ಬಿಕೆ ಬಾಲ್ಯದ ಬದುಕಿನಲ್ಲಿಯೆ ಅನೇಕ ಅವಮಾನ ಅಪಮಾನ ಅನುಭವಿಸಿ ಅದರ ವಿರುದ್ದ ಪ್ರತಿರೋಧ ಒಡ್ಡುತ್ತಿದ್ದ ಛಲಗಾರ.
ಕನ್ನಡದಲ್ಲಿ ಎಮ್ ಎ ಮುಗಿಸಿ ಭದ್ರಾವತಿಯ ಸರ್ ಎಮ್.ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತಿದ್ದರು.

ಅಂಬೇಡ್ಕರ್ ಸಿದ್ದಾಂತಕ್ಕೆ ಬದ್ದನಾಗಿದ್ದ ಬಿಕೆ ತಾನು ಪ್ರೀತಿಸಿದ ಬ್ರಾಹ್ಣರ ಹುಡುಗಿಯಾದ ಇಂದಿರಾರವರನ್ನು ಮದುವೆಯಾಗುವುದರ ಮೂಲಕ ಬಸವಾದಿಶರಣರು ಪ್ರೋತ್ಸಾಹಿಸಿದ ಹಾಗು ಬಾಬಸಾಹೇಬರು ಒಪ್ಪಿಕೊಂಡಿದ್ದ ಅಂತರ್ಜಾತಿ ವಿವಾಹವಾದರು.ಇದರೊಂದಿಗೆ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಉಕ್ಕಿನ ಕಾರ್ಖಾನೆಯಲ್ಲಿ ನಡೆಯುತಿದ್ದ ದಲಿತರ ಮೇಲಿನ ದೌರ್ಜನ್ಯಗಳು ದಲಿತ ಸಂಘರ್ಷ ಸಮಿತಿ ಸ್ಥಾಪಿಸಲು ತತ್ ಕ್ಷಣದ ಕಾರಣವಾಯಿತು. 1974ರಲ್ಲಿ ಬಿಕೆಯವರು ಟಿ.ರಾಜಣ್ಣ.ಎಸ್.ಟಿ.ರಾಜು,ಎನ್ .ಗಿರಿಯಪ್ಪ.ಈರಯ್ಯ.ಬೋರಯ್ಯ ಮುಂತಾದ ದಲಿತರ ಸಮ್ಮುಖದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯೆಂಬ ಸಂಘಟನೆಯನ್ನು ಹುಟ್ಟು ಹಾಕಿದರು.

ಎಲ್ಲೆಡೆ ನಡೆಯುತಿದ್ದ ದಲಿತರ ಶೋಷಣೆ. ದೌರ್ಜನ್ಯ. ಕೊಲೆ.ಹಲ್ಲೆಅತ್ಯಾಚಾರಗಳು ನಾಯಿಕೊಡೆಯಂತೆ ರಾರಜಿಸುತಿದ್ದವು ಇದೊಂದು ಸಂದಗ್ದ ಸಮಯ ಬಿಕೆಯವರಿಗೆ ಸಿಕ್ಕಿದ್ದೆ ತಡ ಈ ದಲಿತ ಸಂಘಟನೆ ರಾಜ್ಯಾದ್ಯಂತ ಕಾಳ್ಗಿಚ್ಚಿನಂತೆ ಹಬ್ಬಿತು.ಚಂದ್ರಗುತ್ತಿಯ ಬೆತ್ತಲೆ ಸೇವೆ ವಿರುದ್ದ .ತತ್ತೂರಿನಲ್ಲಿ ದಲಿತರಿಗೆ ಮಲ ತಿನಿಸಿದ ಪ್ರಕರಣ.ಕ್ಯಾಸಿನಕೆರೆ ಅಸ್ಪೃಶ್ಯತೆ ವಿರುದ್ದ.ಪತ್ರಸಂಗಪ್ಪನ ಕೊಲೆ.ದುರ್ಗಪ್ಪನ ಕೊಲೆ.ಭೂಪರವಾನಗಿ ನಿಷೇಧ ಕಾಯ್ದೆಯ ಪರ.ಸಿದ್ಲಿಪುರ ಭೂಮಿ ಹೋರಾಟ. ಮೊದಲಾದ ಅಮಾನವೀಯ ಪ್ರಕರಣಗಳ ವಿರುದ್ದ ಪ್ರತಿಭಟಿಸಿ ದೇಶಾದ್ಯಂತ ಹೆಸರಾಗಿತ್ತು.ಬಿಕೆಯವರು ಬಾಬಸಾಹೇಬರ ಬರಹಗಳನ್ನು ಸಂಪೂರ್ಣವಾಗಿ ಓದಿ ಕೊಂಡಿದ್ದರು ಬುದ್ದನ ಸಿದ್ದಾಂತ ಬಸವಣ್ಣನ ಕಾಯಕ ಪರಂಪರೆ ಬಿಕೆಯವರಿಗೆ ಶಕ್ತಿಸಾಧಕಗಳಾದವು.

ಬಿಕೆ ಕರ್ನಾಟಕದಾದ್ಯಂತ ಯುವಕನಂತೆ ತಿರುಗಿ ಬಾಬಸಾಹೇಬರ ಹೋರಾಟಗಳನ್ನು ತಿಳಿಸುವುದರ ಮೂಲಕ ಕೋಟ್ಯಂತರ ದಲಿತರಲ್ಲಿ ಹೋರಾಟದ ಕಿಚ್ಚು ಹೊತ್ತಿಸಿ ಸ್ವಾಭಿಮಾನದ ನಾಯಕರನ್ನು ಹುಟ್ಟುಹಾಕಿದರು. ದೇಶದ ಯಾವುದೆ ಮೂಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದರೆ ದಸಂಸ ಅದನ್ನು ಖಂಡಿಸುತಿತ್ತು ಬಡಬಗ್ಗರಿಗೆ ದೀನದಲಿತರ ವಿರುದ್ದ ಮಾಡುವ ಕಾನೂನು ಕಾಯ್ದೆಗಳನ್ನು ವಿರೋಧಿಸುತ್ತಾ ಶೋಷಣೆ ತಡೆಯುವಲ್ಲಿ ವಿಪಲವಾದ ಸರ್ಕಾರಗಳಿಗೆ ದಸಂಸ ಸಿಂಹಸ್ವಪ್ನವಾಗಿ ಗುಡುಗುತಿತ್ತು.ಒಂದು ರೀತಿಯಲ್ಲಿ ವಿರೋಧಪಕ್ಷದನಾಯಕಂತೆ ಕಾರ್ಯವನ್ನು ನಿರ್ವಹಿಸುತಿತ್ತು.

ಅದಾಗಲೆ ಉತ್ತರ ಪ್ರದೇಶದಲ್ಲಿ ಬಹುಜನ ಚಳುವಳಿ ಆಳುವ ಮಟ್ಟಿಗೆ ಹಬ್ಬಿರುತ್ತದೆ”ಪೊಲಿಟಿಕಲ್ ಪವರ್ ಇಸ್ ದ ಮಾಸ್ಟರ್ ಕೀ”ಎಂಬ ಬಾಬಸಾಹೇಬರ ಮಹದಾಸೆಯಂತೆ ರಾಕೀಯ ವಿಜ್ಞಾನಿ ದಾದಾಸಾಹೇಬ್ ಕಾನ್ಷಿರಾಂ ಸಾಹೇಬರು ಉತ್ತರದಲ್ಲಿ ದಲಿತರನ್ನು ಬೇಡುವ ವರ್ಗಕ್ಕೆ ಮಾತ್ರ ಸೀಮಿತಗೊಳಿಸದೆ ಆಳುವ ವರ್ಗಮಾಡುವ ಕೆಲಸವನ್ನು ಪೂರ್ವಿಕರ ಇತಿಹಾಸದೊಂದಿಗೆ ರಾಜ್ಯಾಧಿಕಾರದ ಮಹತ್ವನ್ನು ಹೇಳಿ ಯಶಸ್ವಿಯಾಗಿದ್ದರು.ಇದು ಕೇವಲ ಉತ್ತರಪ್ರದೇಶದಕ್ಕೆ ಮಾತ್ರ ಸೀಮಿತವಾಗದೆ ಅಖಂಡ ಭಾರತದಾದ್ಯಂತ ಬಹುಜನ ಚಳುವಳಿಯನ್ನು ಕಟ್ಟಲಿಕೆ ಯೋಚಿಸುತ್ತಾರೆ ಅಂತಹ ಸಂದರ್ಭದಲ್ಲಿ ದಕ್ಷಿಣ ಭಾರತದಲ್ಲಿ ಸಿಕ್ಕಿದ ದೊಡ್ಡ ಶಕ್ತಿ ಒಳ್ಳೆ ವ್ಯಕ್ತಿ ಎಂದರೆ ಬಿಕೆಯವರು.

ಕಾನ್ಷೀರಾಮ್ ಸಾಹೇಬರು ಬಿಕೆಯೊಂದಿಗೆ ಮಾತನಾಡಿ ಬಾಬಸಾಹೇಬರ “ಕೊನೆ ಆಸೆ” ಯನ್ನು ಹೇಳುತ್ತಾರೆ.ಅಲ್ಲದೆ ದಲಿತ ಹೋರಾಟಗಳು ಮನವಿ ಕೊಡುವುದಕ್ಕೆ ಸೀಮಿತಗೊಳ್ಳದೆ ಮನಸ್ಸು ಮಾಡಿದರೆ ಮನವಿ ತೆಗೆದುಕೊಳ್ಳಬಹುದು ಎಂಬುದು ಬಿಕೆಯವರಲ್ಲಿ ಚಿಗೊರಡೆಯಿತು.ಬಿಕೆಯವರು ಒಂದು ದಿನ ಇಡೀ ದಲಿತ ನಾಯಕರನ್ನು ಸಭೆಕರೆದು “ನಾನು ಗುಡ್ಡಕ್ಕೆ ಕಲ್ಲೊತ್ತೆ” ಇಷ್ಟು ವರ್ಷ ಏನು ಸಾಧಿಸಲಿಕೆ ಆಗಲಿಲ್ಲ ಆಗಾಗಿ ದಲಿತರ ವಿಮೋಚನೆಗೆ ರಾಜ್ಯಾಧಿಕಾರವೆ ಮೂಲ ಮದ್ದು.ಬಾಬಸಾಹೇಬರ ಮಹದಾಸೆಯು ಇದೆ ಆಗಿತ್ತು ಆಗಾಗಿ ದಸಂಸವನ್ನು ಬಿಎಸ್ ಪಿಗೆ ವಿಲೀನಗೊಳಿಸೋಣ ದೇಶಾದ್ಯಂತ ಬೀಸುತ್ತಿರುವ ಪರಿವರ್ತನೆ ಗಾಳಿ ನಾಡಿನೆಲ್ಲೆಡೆ ಬೀಸಲಿ ಎಂದರು. ಅಲ್ಲದೆ ಎಲ್ಲರು ಒಪ್ಪಿದ್ದರು ರಾತ್ರಿಯ ವೇಳೆ ಜನತಾದಳದ ಬೂಟುನೆಕ್ಕಿ ಬೆಳಿಗ್ಗೆ ದೊಡ್ಡ ದಲಿತನಾಯಕರಂತೆ ನಟಿಸುತಿದ್ದ ಗೋಮುಖವ್ಯಾಘ್ರರು ಒಲ್ಲದ ಮನಸಿನಲ್ಲಿ ಒಪ್ಪುತ್ತಾರೆ.

ಬಿಕೆಯವರಿಗೆ ಈಗ ಆನೆಬಲ ಬರುತ್ತದೆ.”ಪರಿವರ್ತನೆಗಾಗಿ ಬಿಎಸ್ಪಿಗೆ”ಎಂಬ ಸ್ಲೋಗನ್ ಹಿಡಿದು ಊರೂರು ಅಲೆದು ಬಹುಜನ ಚಳುವಳಿಯನ್ನು ಕಟ್ಟುತ್ತಾರೆ.ಅಂಬೇಡ್ಕರ್ ವಾದಕ್ಕಿರುವ ಶಕ್ತಿಯನ್ನು ಎಲ್ಲರಿಗು ತಿಳಿಸುತ್ತಾರೆ.ಹೇಗಾದರು ಮಾಡಿ ಆಳುವ ವರ್ಗವಾಗಲೇಬೇಕು ಎಂಬ ಹಠ ಹಿಡಿಯುತ್ತಾರೆ.

ಅದೆ ಸಮಯದಲ್ಲಿ ಉತ್ತರಪ್ರದೇಶದಲ್ಲಿ ಬಿಎಸ್ಪಿ ಎಸ್ಪಿಯೊಂದಿಗೆ ಮೈತ್ರಿಕಡಿದುಕೊಂಡು ಬಿಜೆಪಿಯೊಂದಿಗೆ ಕೈ ಜೋಡಿಸಿ ಅಕ್ಕಾಮಾಯವತಿಯನ್ನು ಮುಖ್ಯಮಂತ್ರಿ ಮಾಡಿ ಮೈತ್ರಿ ಮುಂದುವರೆಸುತ್ತದೆ.
ಯಾರಾದರೇನು.?ನಮಗೆ ಬೇಕಾಗಿರುವುದು ರಾಜ್ಯಾಧಿಕಾರ.ಎಂಬ ತತ್ವ ಕಾನ್ಷಿರಾಂ ಅವರದಾಗಿತ್ತು.ಆದರೆ ದಲಿತ ಚಳುವಳಿಯ ಮೆದುಳಿನಂತೆ ಕೆಲಸ ಮಾಡುತಿದ್ದ ಬುದ್ದಿಗೇಡಿ ಬುದ್ದಿಜೀವಿಗಳು ಹಾಗು ಜನತಾದಳದ ಮಲಮೂತ್ರಕುಡಿಯಲು ಸಂಧರ್ಭಗಳನ್ನು ಕಾಯುತಿದ್ದ ದಲಿತ ನಾಯಕರು”ಅಯ್ಯೊ ಕೋಮುವಾದಿಗಳೊಂದಿಗೆ ಕೈ ಜೋಡಿಸಿದ್ದಾರೆ ಎಂದು ಡಂಗುರ ಸಾರುತ್ತಲೆ ದಸಂಸವನ್ನು ಕತ್ತಿಯಿಂದ ಎರಡು ಸೀಳು ಮಾಡಿದರು.

ಬಿಕೆಯೊಂದಿಗಿದ್ದ ಡಿಜಿ ಸಾಗರ್ ರವರು ಹೊರಬಂದು ಸಾಗರ್ ಬಣವೆಂದು ಮಾಡಿಕೊಂಡು ಜನತಾದಳಕ್ಕೆ ಬೇಷರತ್ತಾಗಿ ಬೆಂಬಲ ಸೂಚಿಸುತ್ತಾರೆ. ಇನ್ನು ಎದೆಯೊಳಗೆ ಗಾಂಧಿವಾದದ ಬೀಜ ಬೀಳಿಸಿಕೊಂಡಿದ್ದ ದೇವನೂರು ಮಹಾದೇವರು.ಕಮ್ಯುನಿಸ್ಟ್ ಚಳುವಳಿಯನ್ನು ಮೈಗಂಟಿಸಿಕೊಂಡು ಇಕ್ರಲಾ ವದಿರ್ಲಾ ಎಂದು ಹಾಡುತಿದ್ದ ಡಾ.ಸಿದ್ದಲಿಂಗಯ್ಯರವರು ಮುಂತಾದ ಸಾಹಿತಿಗಳು ಉತ್ತರದ ನಿರ್ಧಾರವನ್ನು ಖಡಾಖಂಡಿತವಾಗಿ ವಿರೋಧಿಸಿದರು.
ಇದರೊಂದಿಗೆ ಬಿಕೆಯವರನ್ನು ಒಬ್ಬಂಟಿಗಾರನ್ನಾಗಿ ಮಾಡಿದರು.

ಆದರೆ ಬಿಕೆಗೆ ನೋವಾದರು ಎದೆಗುಂದದೆ “ಕಾನ್ಷಿರಾಂ ಸಾಹೇಬರು ಏನೆ ನಿರ್ಧಾರ ತೆಗೆದುಕೊಂಡರು ಅದು ದಲಿತರಿಗೆ ಬಹುಜನರಿಗೆ ಒಳ್ಳೆಯದಾಗಲಿಕೆ ನಿರ್ಧಾರ ತೆಗೆದು ಕೊಂಡಿದ್ದಾರೆ ಎಂದು ಕಾನ್ಷಿರಾಂರ ಮೈತ್ರಿಯನ್ನು ಸಮರ್ಥಿಸಿಕೊಂಡರು.ಬಿಕೆ ಅಂದ್ರೆ ಅಂಬೇಡ್ಕರ್ ಬಂಡೆಯಂತೆ ಗಟ್ಟಿಯಾಗಿದ್ದರು. ಎಮ್.ಜಯಣ್ಣ. ಶ್ರೀಧರ್ ಕಲ್ವೀರ್.ಹೂಡಿ ವೆಂಕಟೇಶ್.ಕೋಲಾರದ ಶಿವಣ್ಣ.ಮಂಗಳೂರಿನ ಗಂಗಾದರಯ್ಯ.ಚಂದ್ರಪ್ರಸಾಧ್ ತ್ಯಾಗಿ.ಮಾವಳ್ಳಿ ಶಂಕರ್.ಮುಂತಾದ ದಲಿತ ನಾಯಕರನ್ನು ಒಟ್ಟುಗೊಡಿಸಿ ಎಮ್.ಜಯಣ್ಣರವರನ್ನು ದಸಂಸದ ರಾಜ್ಯಸಂಚಾಲಕರನ್ನಾ ಮಾಡಿ ತಾವುಗಳು ಎಲ್ಲರ ಸಹಕಾರದಿಂದ ಬಹುಜನ ಚಳುವಳಿಯನ್ನು ಮುಂದುವರೆಸಿದರು.

ಚಿತ್ರದುರ್ಗದಲ್ಲಿ ಎಮ್ ಜಯಣ್ಣನವರ ನೇತೃತ್ವದಲ್ಲಿ ” ದಲಿತರ ಪುನಶ್ಚೇತನ ಸಮಾವೇಶ” ಮಾಡಲು ನಿಂತಾಗ ಕೆಲವು ಬುದ್ದಿಜೀವಿಗಳು ಬರದೆ ಬರುವವರನ್ನು ಬಿಡದೆ ಬಿಕೆಯವರಿಗೆ ನೋವು ಮಾಡಿದರು.ಆದರೆ ಆ ಸಮಾವೇಶ ತುಂಬಾಯಶಸ್ವಿಯಾಯಿತು.ಕೆಲವು ಘಟಾನುಘಟಿ ದಲಿತ ನಾಯಕರು ಬರದಿದ್ದಕ್ಕೆ ಅಸಮಧಾನವು ಆಯಿತು.

ಬಿ.ಕೆಯವರು ಯಾವ ವಾದವನ್ನು ಬೆನ್ನತ್ತಲಿಲ್ಲ
“ನಮ್ಮ ರಾಷ್ಟನಾಯಕ ಬಾಬಸಾಹೇಬ ಅಂಬೇಡ್ಕರ್.ನಮ್ಮ ಸಿದ್ದಾಂತ ಅಂಬೇಡ್ಕರ್ ವಾದ.ನಮ್ಮ ಪಕ್ಷ ಬಹುಜನ ಸಮಾಜ ಪಕ್ಷ. ನಮ್ಮ ಧರ್ಮ ಬೌದ್ದ ಧರ್ಮ ಎಂಬ ಮಹಾಸಂದೇಶಗಳನ್ನು ದಲಿತರಿಗೆ ನೀಡಿದರು ಇದಲ್ಲದೆ ಇನ್ನ ಯಾವುದರಿಂದಲೂ ನೀವು ಉದ್ದಾರವಾಗುವುದಿಲ್ಲ ಎಂದು ಭವಿಷ್ಯ ನುಡಿದರು.

ಬಿಕೆಯವರಿಗೆ ತುಂಬಾ ನೋವಿನ ದಿನಗಳು ಬರಲಾರಂಬವಾದವು ಮನುವಾದಿಗಳಿಗಿಂತ ತನ್ನವರೆ ತನಗೆ ಮೇಲಿಂದ ಮೇಲೆ ಗಾಯಮಾಡಿದರು.ತಾನು ಬೆಳೆಸಿದ ಹುಡುಗರು ಹಾಗುನಾನು ಕಲಿಸಿದ ಸಂಘರ್ಷದ ಪಾಠವನ್ನು ಇಂದು ತನಗೆ ಕಲಿಸುತ್ತಿರುವುದು.ದಲಿತ ಸಂಘಟನೆಯಲ್ಲಿ.ಚೆಡ್ಡಿಹಾಕುವ ಬಾಲಕರೆಲ್ಲಾ ಬಿಕೆಯವರಿಗೆ ಅರಳುಮರಳು ಎಂದು ಛೇಡಿಸುವುದನ್ನು ಕಣ್ಣಾರೆ ಕಂಡು ಮಮ್ಮಲ ಮರುಗುತಿದ್ದರು.

ಬಿಕೆ ಬಾಬಸಾಹೇಬರಂತೆ ಶಿಸ್ತಿಗೆ ತುಂಬಾ ಒತ್ತುಕೊಡುತಿದ್ದರು ತಮ್ಮ ಬಟ್ಟೆಗಳನ್ನೆಲ್ಲಾ ತಾವೆ ತೊಳೆದುಕೊಳ್ಳುತಿದ್ದರು.ಕುಡಿತ ಸಿಗರೇಟ್ ಮಸ್ತ್ ಮಾಜಾನೆ ಇಲ್ಲದ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು.ಸರಾಯಿಬೇಡ “ಹೋಬಳಿಗೊಂದು ವಸತಿಶಾಲೆ” ಬೇಕು ಎಂದು ಬಿಕೆ ಚಳುವಳಿ ಮಾಡಿದರೆ ಕೆಲವು ಬುದ್ದಿಜೀವಿ ದಲಿತನಾಯಕರು ” ಕುಡಿಯುವುದು ದಲಿತರ ಹಕ್ಕು”ಎಂದು ಉದ್ದುದ್ದ ಲೇಖನ ಬರೆದಿದ್ದುಂಟು.

ಇನ್ನು “ಮಹಾತ್ಮಾ ಗಾಂಧಿ” ಸಿನಿಮಾ ಬಂದಾಗ ಅದರಲ್ಲಿ ಪೂನ ಒಪ್ಪಂದದ ಘಟನೆಯನ್ನು ಸಿನಿಮಾದಲ್ಲಿ ಸೇರಿಸಿರಲಿಲ್ಲ ಈ ವಿಚಾರ ತಿಳಿದ ಬಿಕೆ ಹಾಗು ದಸಂಸ ರಾಜ್ಯಾದ್ಯಂತ ಉಗ್ರವಾಗಿ ಹೋರಾಟ ಮಾಡಿ ಪೂನ ಒಪ್ಪಂದ ದೃಶ್ಯವಿಲ್ಲದ ಈ ಸಿನಿಮಾ ಸಂಪೂರ್ಣ ಬ್ಯಾನ್ ಆಗಬೇಕೆಂದು ಖಂಡಿಸಿದರು. ಆದರೆ ದೇವನೂರು ಮಹಾದೇವರವರು ಮಾತ್ರ”ನಾನು ಗಾಂಧಿ ಸಿನಿಮಾ ನೋಡಿದೆ ಅದರಲ್ಲಿ ದಲಿತರಿಗೆ ಅಪಮಾನದ ಅಂಶಗಳಿಲ್ಲ ಎಂದು ಪತ್ರಿಕೆಯಲ್ಲಿ ಲೇಖನ ಬರೆದರು.

ಬಿ.ಕೃಷ್ಣಪ್ಪರ ಕೊನೆಯ ದಿನಗಳು ತುಂಬಾ ನೋವಿನಿಂದ ಕೂಡಿದ್ದವು.ಹೆಜ್ಜೆ ಹೆಜ್ಜೆಗು ಮುಳ್ಳಾಗಿ ಕಾಡುತಿದ್ದ ಮನುವಾದಿಗಳು ಒಂದೆಡೆಯಾದರೆ ತಮ್ಮವರೆ ತನಗೆ ಚೂರಿಹಾಕಿದ್ದು ಒಂದುಕಡೆಯಾಗುತ್ತದೆ.
ಬಿಕೆಯವರು ಕೋಲಾರದಲ್ಲಿ ಚುನಾವಣೆಗೆ ನಿಂತಾಗ ಹೀನಾಯ ಸೋಲನ್ನು ಉಣ್ಣುತ್ತಾರೆ ಅಂದಿನ ಜನತಾದಳ ಹಾಗು ಕಾಂಗ್ರೆಸ್‌ ಬಿಕೆಯವರನ್ನು ಸೋಲಿಸಿತು.ಅಂದು ಬಾಬಸಾಹೇಬ ಅಂಬೇಡ್ಕರ್ ಅವರನ್ನು ಸೋಲಿಸಿದಂತೆ ಬಿಕೆಯವರನ್ನು ಸೋಲಿಸಿದರು.ಅವರೆ ಸಾಕಿಬೆಳೆಸಿದ ದಲಿತನಾಯಕರಿಂದ ಅವಮಾನಕ್ಕೆ ಗುರಿಯಾದರು.ಇದು ಬಿಕೆಯವರ ಸೋಲಾಗಿರಲಿಲ್ಲ ಅಂಬೇಡ್ಕರ್ ವಾದದ ಸೋಲಾಗಿತ್ತು.

ಅವರೆ ಕಟ್ಟಿ ಬೆಳೆಸಿದ ದಸಂಸ ತನ್ನ ಕಣ್ಣೆದುರಿಗೆ ಹೊಡೆದು ಚೂರುಚೂರಾಗಿರುತ್ತಿರುವುದನ್ನು ಕಂಡು ಸಂಕಟ ವೇಧನೆ ಪಡುತಿದ್ದರು.ಬಹುಸಂಖ್ಯಾತ ಶೋಷಿತರ ಹಕ್ಕುಗಳನ್ನು ರಕ್ಷಿಸುವಂತ ದಲಿತ ಸಾಹಿತಿಬುದ್ದಿಜೀವಿಗಳು ವ್ಯವಸ್ಥೆ ಯೊಂದಿಗೆ ರಾಜಿಯಾಗಿ ಗುಲಾಮರಾಗಿ ಚಮಚಗಳಾಗಿ ಬದುಕುತಿದ್ದು ಬಿಕೆಯವರಿಗೆ ಅಗಾಧ ನೋವು ತರಿಸುತ್ತೆ.ಹೇಗಾದರು ಮಾಡಿ ಬಿಎಸ್ಪಿಯನ್ನು ಅಧಿಕಾರಕ್ಕೆ ತರಬೇಕೆಂದು ಹಾಗು ಕೊನೆ ಪಕ್ಷ ವಿರೋಧ ಪಕ್ಷದ ನಾಯಕನಾಗಬೇಕು ಎಂದು ಬಹುದೊಡ್ಡ ಕನಸ್ಸ ಕಂಡರು.

ಅಂದು ಗದಗದಲ್ಲಿ ಬಾಬಸಾಹೇಬ ಅಂಬೇಡ್ಕರವರ ಜನ್ಮ ದಿನೋತ್ಸವಕ್ಕೆ ಉದ್ಘಾಟಕರಾಗಿ ಹೋಗಿದ್ದರು ಸ್ಟೇಟ್ ಕನ್ವಿನರ್ ಆಗಿದ್ದ ಎಮ್.ಜಯಣ್ಣ ಆ ಕಾರ್ಯಕ್ರಮದ ಉಸ್ತುವಾರಿ ಆಗಿದ್ದರು.ಕಾರ್ಯಕ್ರಮ ಆರಂಭಗೊಂಡಿದೆ .ಬಿಕೆ ಗದಗದ ಲಾಡ್ಜನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತಿದ್ದರು.ಇನ್ನೇನು ಸಾವಿರಾರು ಜನರನ್ನು ಕುರಿತು ಮಾತನಾಡಲು ಎಲ್ಲ ಸಿದ್ದತೆ ಮಾಡಿಕೊಂಡಿದ್ದರು.ಆಯೋಜಕರಿಗೆ ನೀವು ಕಾರ್ಯಕ್ರಮ ಆರಂಭಿಸಿ ನಂತರ ಬರುತ್ತೇನೆ ಎಂದು ಸಂದೇಶ ರವಾನೆ ಮಾಡಿದರು.ಕಾರ್ಯಕ್ರಮ ಆರಂಭವಾಗಿದೆ ಎಲ್ಲರು ಬಿಕೆಯವರ ಮಾತುಗಳನ್ನು ಆಲಿಸಲು ಹಳ್ಳಿಹಳ್ಳಿಗಳಿಂದ ತಂಡೋಪತಂಡವಾಗಿ ಆಗಮಿಸಿ ಕಾದು ಕುಳಿತಿದ್ದಾರೆ.ವೇದಿಕೆ ಮೇಲಿದ್ದ ವ್ಯಕ್ತಿಯೊಬ್ಬ ಮೈಕಿನ ಮುಂದೆ ಬಂದು ಬಿ.ಕೆಯವರಿಗೆ ಹೃದಯಘಾತವಾಯಿತಂತೆ ಆಸ್ಪತ್ರೆಗೆ ದಾಖಲಿಸಿದೆ ಎಂದಾಗ ಇಡೀ ಸಭೆಯೆ ಆತಂಕಕ್ಕೆ ಸಿಲುಕುತ್ತದೆ.

ಏನಾಗುತ್ತೊ..ಎಂಬ ಭಯದಿಂದಲೆ ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತಿದ್ದರು.ಆಸ್ಪತ್ರೆಗೆ ಆಗಮಿಸಿದ ಜಯಣ್ಣನವರಿಗೆ ಬಿ.ಕೆ.ಕೇಳಿದ್ದು ಪ್ರೋಗ್ರಾಂ ಚನ್ನಗಾಯ್ತೇನೊ ಎಂದು.ಹೂಂ ಚನ್ನಾಗಾಯ್ತು ನೀವು ಮೊದಲು ಗುಣವಾಗ್ರಿ ಎಂದಾಗ .ನನ್ಗೇನು ಆಗಿಲ್ಲ ನಾ ಚನ್ನಾಗಿದಿನಿ ಎಂದರು.ಬಿಕೆಯವರ ಹೆಂಡತಿಯಾದ ಶ್ರೀಮತಿ ಇಂದಿರಾ ಹಾಗು ಮಕ್ಕಳು ಬಂದು ಬಿಕೆಯವರನ್ನು ನೋಡುತ್ತಾರೆ ,ಬಿಕೆ ಇನ್ನೇನು ಮೇಲೇಳಿ ಮಾತನಾಡಬೇಕೆಂದು ತವಕಿಸುತ್ತಲೇ ಕೊನೆಯುಸಿರೆಳೆದರು. ಈ ಅಘಾತದ ಸುದ್ದಿ ತಿಳಿದ ದಲಿತರಿಗೆ ತಂದೆ ಕಳೆದುಕೊಂಡ ಅನಾಥ ಪ್ರಜ್ಞೆ ಕಾಡಲಾರಂಭಿಸುತ್ತದೆ.ನೆರೆದಿದ್ದವರ ಕಣ್ಣಾಲೆಗಳು ತುಂಬಿ ಬಂದವು.ಕರ್ನಾಟಕದ ಶೋಷಿತರು ದಲಿತಚಳುವಳಿಯ ಮಾತೃಕೆಯನ್ನೆ ಕಳೆದುಕೊಂಡತಾಯಿತು.

ಬಿಕೆ ಎಂದು ಅಧಿಕಾರದ ಆಸೆಗೆ ಒಳಗಾಗಲಿಲ್ಲ.ಮಂತ್ರಿ MLA.MP.ನಿಗಮ ಮಂಡಳಿ ಸ್ಥಾನಮಾನದ ಆಸೆಆಕಾಂಶೆಗಳು ಸಾಲಾಗಿ ಹರಿದು ಬಂದರು ಯಾವುದಕ್ಕೊ ತಲೆ ಕೆಡಿಸಿಕೊಳ್ಳಲಿಲ್ಲ.ಎಲ್ಲವನ್ನು ತಮ್ಮ ಕಾಲಿನಿಂದ ತಳ್ಳಿದರು.ತಾವು ನಂಬಿದ್ದ ಅಂಬೇಡ್ಕರ್ ವಾದಕ್ಕೆ ಯಾವತ್ತು ರಾಜಿಮಾಡಿಕೊಳ್ಳಲಿಲ್ಲ.ಅಂಬೇಡ್ಕರ್ ವಾದವೆಂಬ ಹಣತೆಯನ್ನು ಎಲ್ಲರ ಮನಮನೆಯಲ್ಲೂ ಹಚ್ಚಿದರು. ದಲಿತರು ಅಂಬೇಡ್ಕರ್ ವಾದದಿಂದ ಮಾತ್ರ ಮುಕ್ತಿ ಎಂದು ಸಾರಿಸಾರಿ ಹೇಳುತಿದ್ದರು.

ಬಿಕೆ ಇವತ್ತು ಇಲ್ಲ ಆದರೆ ಅವರು ಹೇಳಿದ” ದಲಿತರ ಗುಡಿಸಲಲ್ಲಿ ಹೋರಾಟದ ಹಣತೆ ಹಚ್ಚಿದ್ದೇನೆ ಹೊರಗೆ ಬಿರುಗಾಳಿ ರಭಸವಾಗಿ ಬೀಸುತ್ತಿದೆ.ಈ ಹಣತೆ ಆರದಂತೆ ನೋಡಿಕೊಳ್ಳಿ.ನಮ್ಮ ನಾಯಕ ಬಾಬಸಾಹೇಬರು,ನಮ್ಮ ಪಕ್ಷ ಬಹುಜನ ಸಮಾಜ ಪಕ್ಷ,ನಮ್ಮ ಸಿದ್ದಾಂತ ಅಂಬೇಡ್ಕರ್ ವಾದ.ನಮ್ಮ ಧರ್ಮ ಬೌದ್ದ ಧರ್ಮ ಈ ನನ್ನ ಮಾತುಗಳೆ ಅಂತಿಮ ನನ್ನ ಮಹದಾಸೆ ಎಂದು ಕಣ್ಣೀರಾಕಿ ಹೇಳಿದ ಬಿಕೆಯವರ ಮಾತುಗಳನ್ನು ಇಂದಿನ ದಲಿತರು ಬಹುಜನರು ಅರ್ಥಮಾಡಿಕೊಳ್ಳಬೇಕಾಗಿದೆ.
ವರ್ತಮಾನವು ಸಂವಿಧಾನ ಹಾಗು ಅಂಬೇಡ್ಕರ್ ವಾದ ಅಪಾಯಕಾರಿ ಸಂಧರ್ಭದಲ್ಲಿ ನಿಂತಿದೆ ಇಗ್ಲಾದ್ರು ತಮ್ಮ ದಲಿತ ನಾಯಕರು ಒಣಪ್ರತಿಷ್ಟೆಗಳನ್ನು ಬಿಟ್ಟು ಬಿಕೆಯವರ ಹಾದಿಯಲ್ಲಿ ನಡೆಯಲಿ.

ಹುಚ್ಚಂಗಿ ಪ್ರಸಾದ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು

Published

on

~ಗೋವರ್ಧನ ನವಿಲೇಹಾಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಸಂತೋಷದ ಸುದ್ದಿಯಾದರೂ, ಎಸ್‌ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.

ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್‌ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್‌ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.

ಸಮರ್ಥ್ ಶಾಮನೂರು ಅವರ ಮುಂದಿನ ನಡೆ

ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.

ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.

ಬಿಜೆಪಿಯ ಮುಂದಿನ ಸವಾಲುಗಳು

ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.

ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್‌ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.

ಎಸ್‌ಡಿಪಿಐ ಮುಂದಿನ ಸವಾಲು

ಎಸ್‌ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್‌ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್‌ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.

ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.

ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್‌ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.

ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ12 hours ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ15 hours ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ1 day ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ1 day ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ1 week ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

Trending