ರಾಜಕೀಯ
ದೇಶದ ಸಾರ್ವಭೌಮತೆ ಮತ್ತು ಆತ್ಮಾಭಿಮಾನವನ್ನು ಬಲಿಗೊಟ್ಟು ಅಮೆರಿಕಾದ ಎದುರು ತಲೆಬಾಗಿಸುವುದನ್ನು ಒಪ್ಪಲು ಸಾಧ್ಯವಿಲ್ಲ : ಬಿಜೆಪಿ ಸರಕಾರಕ್ಕೆ ಎಡಪಕ್ಷಗಳ ಎಚ್ಚರಿಕೆ
ಅಮೆರಿಕಾ ಸಂಯುಕ್ತ ಸಂಸ್ಥಾನಗಳ ವಿದೇಶಾಂಗ ಕಾರ್ಯದರ್ಶಿಯ ಭಾರತ ಭೇಟಿಯ ಸಂದರ್ಭದಲ್ಲಿ ಭಾರತದ ಕೈತಿರುಚುವ ಅಮೆರಿಕಾದ ಅಜೆಂಡಾಕ್ಕೆ ಎಡಪಕ್ಷಗಳು ದೃಢ ವಿರೋಧವನ್ನು ವ್ಯಕ್ತಪಡಿಸಿವೆ. ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚುರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಎಸ್.ಸುಧಾಕರ ರೆಡ್ಡಿ, ಸಿಪಿಐ(ಎಂಎಲ್ -ಲಿಬರೇಷನ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಪ್ರಧಾನ ಕಾರ್ಯದರ್ಶಿ ದೇಬಬ್ರತ್ ಬಿಸ್ವಾಸ್ ಮತ್ತು ಆರ್ಎಸ್ಪಿ ಪ್ರಧಾನ ಕಾರ್ಯದರ್ಶಿ ಕ್ಷಿತಿ ಗೋಸ್ವಾಮಿ ಜಂಟಿ ಹೇಳಿಕೆಯೊಂದನ್ನು ಜೂನ್ 20 ರಂದು ನೀಡಿದ್ದಾರೆ.
ಅಮೆರಿಕನ್ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಜೂನ್ 25 ಮತ್ತು 26ರಂದು ಭಾರತಕ್ಕೆ ಭೇಟಿ ನೀಡುತ್ತಿರುವುದಾಗಿ ಪ್ರಕಟಿಸಿದ್ದಾರೆ. ಈ ಭೇಟಿಯ ಉದ್ದೇಶ ಭಾರತವು ತನ್ನ ಆರ್ಥಿಕ ವ್ಯವಸ್ಥೆಯನ್ನು ಇನ್ನಷ್ಟು ತೆರೆಯುವತ್ತ ತಳ್ಳುವುದು, ವ್ಯಾಪಾರ ಅಡೆ-ತಡೆಗಳನ್ನು ಕೈಬಿಡುವಂತೆ ಮಾಡುವುದು, ಮತ್ತು ಭಾರತಕ್ಕೆ ಅಮೆರಿಕನ್ ರಕ್ಷಣಾ ಸಾಧನಗಳನ್ನು ಮಾರುವುದು ಎನ್ನಲಾಗಿದೆ.
ಈ ಭೇಟಿ, ಅಮೆರಿಕಾದ ’ಸಾಮಾನ್ಯಗೊಳಿಸಿದ ಆದ್ಯತಾ ವ್ಯವಸ್ಥೆ ವ್ಯಾಪಾರ ಕಾರ್ಯಕ್ರಮ’(ಜಿಎಸ್ ಪಿ)ದ ಫಲಾನುಭವಿ ಎಂದು ಭಾರತಕ್ಕೆ ಕೊಟ್ಟಿದ್ದ ಸ್ಥಾನವನ್ನು ಕೊನೆಗೊಳಿಸಿರುವ ಹಿನ್ನೆಲೆಯಲ್ಲಿ ಬಂದಿದೆ. ಇದುವರೆಗೆ ಈ ಸ್ಥಾನಮಾನ ದಿಂದಾಗಿ ಭಾರತದ ಉತ್ಪನ್ನಗಳು ಸುಂಕ-ಮುಕ್ತವಾಗಿ ಅಮೆರಿಕಾ ಪ್ರವೇಶಿಸಲು ಅವಕಾಶವಿತ್ತು. ಈಗ ಅದು ಇಲ್ಲವಾಗಿದೆ. ಅಲ್ಲದೆ ಭಾರತವು ಇರಾನ್, ವೆನೆಝುವೆಲ ಮುಂತಾದ ದೇಶಗಳಿಂದ ತೈಲ ಖರೀದಿಸಿದರೆ ನಿರ್ಬಂಧಗಳನ್ನು ಹೇರುವುದಾಗಿಯೂ ಅಮೆರಿಕಾ ಬೆದರಿಕೆ ಹಾಕಿದೆ ಎಂಬುದನ್ನು ಎಡಪಕ್ಷಗಳು ನೆನಪಿಸಿವೆ.
ತನ್ನ ಆಣತಿಗಳಿಗೆ ಲಕ್ಷ್ಯ ಕೊಡದಿದ್ದರೆ ಹೊಸ ನಿರ್ಬಂಧಗಳನ್ನು ಹಾಕುವುದಾಗಿ ಅಮೆರಿಕನ್ ಆಡಳಿತ ಜಗತ್ತಿನಾದ್ಯಂತ ದೇಶಗಳಿಗೆ ಬೆದರಿಕೆ ಹಾಕುತ್ತಿದೆ. ಅದು ಕ್ಯೂಬ, ವೆನೆಝುವೆಲ, ಇರಾನ್ ಮತ್ತು ನಿಕರಗುವ ದೇಶಗಳಲ್ಲಿ ಆಡಳಿತಗಳನ್ನು ಬದಲಿಸುವುದಕ್ಕಾಗಿ ಅವುಗಳ ಕುತ್ತಿಗೆ ಹಿಸುಕುವ ಪ್ರಯತ್ನ ನಡೆಸುತ್ತಿದೆ. ಈಗ ನಡೆಯುತ್ತಿರುವ ವ್ಯಾಪಾರ ಸಮರ ಈಗಾಗಲೇ ತತ್ತರಿಸುತ್ತಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯನ್ನು ಮತ್ತೊಂದು ಹಿಂಜರಿತದತ್ತ ತಳ್ಳುವ ಬೆದರಿಕೆಯನ್ನು ಒಡ್ಡಿದೆ. ಭಾರತವು ಅಮೆರಿಕಾದ ಧೋರಣೆಗಳಿಗೆ ತನ್ನನ್ನು ಒಳಗಾಗಿಸಿಕೊಳ್ಳಬೇಕು, ಇರಾನ್ ಮತ್ತು ವೆನೆಝುವೆಲದಿಂದ ತೈಲ ಖರೀದಿಸುವುದನ್ನು ಮತ್ತು ರಷ್ಯಾದಿಂದ ಎಸ್-400 ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಅದು ನಿರ್ಬಂಧಿಸುತ್ತಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಅಮೆರಿಕಾ ಈ ರೀತಿ ಕೈತಿರುಚುತ್ತಿರುವುದನ್ನು ಪ್ರತಿರೋಧಿಸುವ ಬದಲು ಅದರ ಒತ್ತಡಗಳಿಗೆ ಕುಸಿಯುತ್ತಿದೆ. ನಮ್ಮ ಸಾರ್ವಭೌಮತೆ ಮತ್ತು ಆತ್ಮಾಭಿಮಾನವನ್ನು ಬಲಿಗೊಟ್ಟು ಅಮೆರಿಕಾದ ಎದುರು ತಲೆಬಾಗಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿರುವ ಎಡಪಕ್ಷಗಳು, ಬಿಜೆಪಿ ಸರಕಾರ ಭಾರತದ ಹಿತಾಸಕ್ತಿಗಳನ್ನು ಅಮೆರಿಕಾಕ್ಕೆ ಒಪ್ಪಿಸಿ ಬಿಡುತ್ತಿರುವುದನ್ನು ವಿರೋಧಿಸಬೇಕು ಮತ್ತು ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು ಪಟ್ಟಾಗಿ ಭದ್ರಪಡಿಸಿಕೊಳ್ಳುವ ಒಂದು ಸ್ವತಂತ್ರ ಧೋರಣೆಯನ್ನು ಅನುಸರಿಸಬೇಕು ಎಂದು ದೃಢವಾಗಿ ಆಗ್ರಹಿಸಬೇಕು ಎಂದು ಭಾರತದ ಜನತೆಯನ್ನು ಕೇಳಿಕೊಂಡಿವೆ.
ಕೃಪೆ : ಜನಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

