ದಿನದ ಸುದ್ದಿ
ಸಹಪಾಟಿಯನ್ನೇ ‘ಗ್ಯಾಂಗ್ ರೇಪ್’ ಮಾಡಿದ ಪುತ್ತೂರು ಕಾಲೇಜಿನ ವಿದ್ಯಾರ್ಥಿಗಳು ಅರೆಸ್ಟ್
ಸುದ್ದಿದಿನ,ಮಂಗಳೂರು : ಸಹಪಾಠಿ ವಿದ್ಯಾರ್ಥಿನಿಯನ್ನೇ ಗ್ಯಾಂಗ್ ರೇಪ್ ಮಾಡಿದ ಆರೋಪದಡಿ ಪುತ್ತೂರು ವಿವೇಕಾನಂದ ಕಾಲೇಜಿನ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಗುರುನಂದನ್ ಬಿನ್ ರಾಧಾ ಕೃಷ್ಣ 19 ವರ್ಷ,ಗಾಣದಮೂಲೆ ಮನೆ,ಬಜತ್ತೂರು ಗ್ರಾಮ ಪುತ್ತೂರು ತಾಲೂಕು, ಪ್ರಜ್ವಲ್ ಬಿನ್ ನಾಗೇಶ್ ನಾಯ್ಕ 19 ವರ್ಷ ರಾಜಶ್ರೀ ಕೃಪ,ಪೆರ್ನೆ ಗ್ರಾಮ ಬಂಟ್ವಾಳ, ಕಿಶನ್ ಬಿನ್ ಸದಾಶಿವ 19 ವರ್ಷ ಕಡಂಬು ಮನೆ ಪೆರ್ನೆ ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು, ಸುನಿಲ್ ಬಿನ್ ಕಾಂತಪ್ಪ ಗೌಡ 19 ವರ್ಷ ಪಿಲಿಗುಂಡ ಮನೆ ಆರ್ಯಾಪು ಗ್ರಾಮ ಪುತ್ತೂರು ತಾಲ್ಲೂಕು, ಪ್ರಖ್ಯಾತ್ ಬಿನ್ ಸುಬ್ಬಣ್ಣ ಶೆಟ್ಟಿ 19 ವರ್ಷ ಬಲ್ಯ ಮನೆ ಬರಿಮಾರು ಗ್ರಾಮ ಬಂಟ್ವಾಳ ತಾಲ್ಲೂಕು ಎಂದು ಗುರುತಿಸಲಾಗಿದೆ.
ಏನಿದು ಘಟನೆ?
ದಕ್ಷಿಣ ಕನ್ನಡ ಜಿಲ್ಲೆಯ ಮತ್ತೊಂದು ಘನಘೋರ ಅಪರಾಧದ ಮೂಲಕ ಸುದ್ದಿಯಲ್ಲಿದೆ. ಜಿಲ್ಲೆಯ ಮುತ್ತಿನ ನಗರಿ ಅಂತ ಕರೆಸಿಕೊಳ್ಳೊ ಪುತ್ತೂರು ತಾಲೂಕಿನಲ್ಲಿ ಕಾಲೇಜು ವಿದ್ಯಾರ್ಥಿಗಳೇ ಪಾತಕೀಕೃತ್ಯ ನಡೆಸಿದ್ದಾರೆ. ಪುತ್ತೂರಿನ ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಹಪಾಠಿಯನ್ನೇ ಕಾಡಿನಲ್ಲಿ ಅತ್ಯಾಚಾರ ಮಾಡಿದ್ದು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಮಾಡಿದ್ದಾರೆ.
ಈ ಪ್ರಕರಣ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದು, ಕಾಲೇಜು ಮುಗಿಸಿ ವಿದ್ಯಾರ್ಥಿಗಳು ಪ್ಲಾನ್ ಮಾಡಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪುತ್ತೂರು ಬಸ್ ಸ್ಟ್ಯಾಂಡ್ ಬಳಿ ನಿಂತಿದ್ದಾಗ ಕಾರ್ ನಲ್ಲಿ ಬಂದ ವಿದ್ಯಾರ್ಥಿಗಳು ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಪುತ್ತೂರು ಸಮೀಪದ ಕಾಡಿನಲ್ಲಿ ನಾಲ್ವರೂ ಅತ್ಯಾಚಾರ
ಮಾಡಿದ್ದು, ತಂಡದಲ್ಲಿದ್ದ ಒರ್ವ ಘಟನೆಯನ್ನು ವಿಡಿಯೋ ಮಾಡಿದ್ದ. ಈ ನಡುವೆ ಕಾಲೇಜು ಚುನಾವಣಾ ಸಂಧರ್ಭದಲ್ಲಿ ಈ ವಿದ್ಯಾರ್ಥಿಗಳ ನಡುವೆ ಮನಸ್ತಾಪ ಮೂಡಿಬಂದಿದ್ದು, ದ್ವೇಷದಿಂದ ಓರ್ವ ವಿದ್ಯಾರ್ಥಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ ಎನ್ನಲಾಗಿದೆ.
ವಿಡಿಯೋ ಬಹಿರಂಗಗೊಳ್ಳುತ್ತಿದ್ದಂತೆಯೇ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ ಸುಮೊಟೋ ಕೇಸ್ ದಾಖಲಿಸಿ ತನಿಖೆಗೆ ಸೂಚಿಸಿದ್ದರು. ಆದರೆ ಬಳಿಕ ವಿದ್ಯಾರ್ಥಿನಿ ದೂರು ನೀಡಿದ್ದಳು. ಇನ್ನು ಕಾಲೇಜಿನ ಐವರು ವಿದ್ಯಾರ್ಥಿಗಳನ್ನ ಡಿಬಾರ್ ಮಾಡಲಾಗಿದೆ. ಕಾಲೇಜಿನ ಆಡಳಿತ ಮಂಡಳಿ ತುರ್ತು ಸಭೆ ನಡೆಸಿ ಐವರು ವಿದ್ಯಾರ್ಥಿಗಳನ್ನ ಡಿಬಾರ್ ಮಾಡಿದೆ. ಈ ನಡುವೆ ಘಟನೆ ಸಂಬಂಧ ಅತ್ಯಾಚಾರ ಎಸಗಿರುವ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡದಂತೆ ಎಸ್ಪಿ ಎಚ್ಚರಿಕೆ ನೀಡಿದ್ದಾರೆ.. ವಿಡಿಯೋ ಫಾರ್ವರ್ಡ್ ಮಾಡಿದ್ರೆ,ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ರೆ ಅರೆಸ್ಟ್ ಮಾಡೋದಾಗಿ ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
ವರದಿ ಕೃಪೆ : ಝೂಮ್ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


