ರಾಜಕೀಯ
‘ಪಕ್ಷಾಂತರ’ ಎಂಬುದು ಪ್ರಜಾಪ್ರಭುತ್ವಕ್ಕಂಟಿದ ರೋಗ : ಸಿದ್ದರಾಮಯ್ಯ ಅವರ ಸಂಪೂರ್ಣ ಭಾಷಣ, ಮಿಸ್ ಮಾಡ್ದೆ ಓದಿ
- ಇಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಿದ ಮಾತುಗಳು
ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು.
ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.
2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ. ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?
ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?
ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?
ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?
ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?
ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.
ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರಿ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ.
— Siddaramaiah (@siddaramaiah) July 23, 2019
ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?
— Siddaramaiah (@siddaramaiah) July 23, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243