Connect with us

ಲೋಕಾರೂಢಿ

ಕಾಶ್ಮೀರದ ಪ್ರಕೃತಿ ತಾಣಗಳು ನಾಶವಾದರೆ..!?

Published

on

ಸ್ನೇಹಿತರೆ,

ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನಗಳನ್ನು ಕೊಡುವ ಆರ್ಟಿಕಲ್ ತ್ರೀ ಸವೆಂಟಿ ಇನ್ ಮುಂದೆ ಕಾಶ್ಮೀರಕ್ಕೆ ಅಪ್ಲಯ್ ಆಗುವುದಿಲ್ಲ. ಈಗ ಯಾರು ಬೇಕಾದರೂ ಯಾವಾಗ ಬೇಕಾದರೂಹೋಗಬಹುದು,ನೆಲೆಸಬಹುದು ,ಆಸ್ತಿ ಖರೀದಿ ಮಾಡಬಹುದು ನಿಮ್ಮದಾಗಿಸಿಕೊಳ್ಳಬಹುದು. ಆದರೆ ಇದೆಲ್ಲರ ಮಧ್ಯ ನಮಿಗೆ ಹೊಳೆಯುವುದು ಕಾಶ್ಮೀರದ ಸುಂದರ ಪ್ರಕೃತಿ ಹಾಗೂ ಕೆಲವೇ ವರ್ಷಗಳಲ್ಲಿ ಅದು ಇನ್ನು ಯಾವ ಪರಿ ಹಾಳಾಗಬಹುದು ಎಂಬ ಆತಂಕ!

‘ನಮಸ್ತೆ ಶಾರದಾದೇವಿ
ಕಾಶ್ಮೀರ ಪುರ ವಾಸಿನಿ’ ಶ್ಲೋಕ ಕೇಳಿದ್ದೀವಿ ಸಾಕಷ್ಟು ಬಾರಿ. ಹೇಳಿ ಕೊಂಡಿದ್ದೇವೆ ಕೂಡ. ಕಾಶ್ಮೀರ ವ್ಯಾಕರಣಶಾಸ್ತ್ರದ ಊರು, ಕಾಶ್ಮೀರ ತಾಯಿ ಶಾರದೆಯ ನೆಲೆ ಕಾಶ್ಮೀರ ಭೂಲೋಕ ಸ್ವರ್ಗ ಅಲ್ಲಿನ ಹಿಮಾಚ್ಛಾದಿತ ಪರ್ವತ ಶ್ರೇಣಿಗಳು ಹಸಿರು ಹೊದ್ದು ಗಗನ ಚುಂಬಿಸುವ ಭಾರಿ ವೃಕ್ಷಗಳ ಕಾಡು ಬೆಟ್ಟಗಳಲ್ಲಿ ಬಾಸ್ಮತಿ ಅಕ್ಕಿ ಬೆಳೆಯುವ ಫಲವತ್ತಾದ ನೆಲ ಇದೆ ಹಾಗೆ ಏನೂ ಬೆಳೆಯಲಾಗದ ಬರಡುಭೂಮಿ ಕೂಡ ಇದೆ .
ಕಾಶ್ಮೀರದಲ್ಲಿ ಏನಿಲ್ಲ? ಅಲ್ಲಿ ಸುಂದರ ಆಪಲ್ ತೋಟಗಳಿವೆ, ಬಾಸುಮತಿ ಅಕ್ಕಿ ಬೆಳೆಯುವ ನೆಲೆಯಿದೆ

ಮೊದಲನೇದಾಗಿ ನಾವು ಲಡಾಖನ ವಿಷಯಕ್ಕೆ ಬರುವುದಾದರೆ , ಹಿಮಾಲಯದ ಕಣಿವೆಯಲ್ಲಿನ ಕೋಲ್ಡ್ ಡೆಸರ್ಟ್! ವಿಶ್ವದ ಅತ್ಯಂತ ಪ್ರಮುಖ ಹಾಗು ಅತ್ಯಂತ ಅದ್ಭುತ ಟ್ರೆಕಿಂಗ್ ಪಾಯಿಂಟ್ಗಳ್ಲಲಿ ಒಂದು ಅದರಲ್ಲೂ ನೀವು ಬೈಕ್ ಅಡ್ವೆಂಚರ್ ಬಗ್ಗೆ ಆಸಕ್ತಿ ಹೊಂದಿದ್ದರೆ ನಿಮಗೆ ಇಲ್ಲಿ ಸಿಗೋ ಥ್ರಿಲ್ಲಿಂಗ್ ಎಕ್ಸ್ಪೀರಿಯೆನ್ಸ್ ಬೇರೆಯಲ್ಲೂ ಸಿಗುವುದಿಲ್ಲ.
ಇಲ್ಲಿನ ಐಸ್ ಡೆಸರ್ಟ್ ನಡುವೆ ಒಂಟೆಗಳ ಮೇಲೆ ಕೂತು ಪ್ರಕೃತಿಯನ್ನ ಸವಿಯೋದಿದೆಯಲ್ಲಾ, ಅದು ನಿಜಕ್ಕೂ ಅದ್ಭುತವಾದ ಅನುಭವ.

ಇನ್ನು ಕಾಶ್ಮೀರದ ಕಣಿವೆ, ಅದನ್ನೊಂದು ಭೂಲೋಕದ ಸ್ವರ್ಗ ಅಂತಾನೇ ವರ್ಣಿಸುತ್ತಾರೆ. ನೀವು ಮಾರ್ತಾಂಡ ಸೂರ್ಯ ದೇವಾಲಯದ ಅವಶೇಷಗಳನ್ನುಕಣ್ಣುತುಂಬಾ ನೋಡಬಹುದು. ಇದು ಕೋನಾರ್ಕ್ ಸೂರ್ಯ ದೇವಾಲಯಕ್ಕಿಂತ ಹಳೆಯ ದೇವಾಲಯ.
ಇನ್ನು ದಾಲ್ ಲೇಕ್, ಮುಘಲ್ ಗಾರ್ಡನ್, ಪೆಹಲ್ಗಮ್,ಸೋನಾಮರ್ಗ್, ಅಂತ ಕರೆಸಿಕೊಳ್ಳುವ ಶಾಲಿಮಾರ್ ತೋಟಗಳು ಸದಾಕಾಲ ಜನರನ್ನ ಆಕರ್ಷಿಸುತ್ತವೆ. ಇನ್ನು ಅಮರನಾಥನ ದೇವಾಲಯ ಇಲ್ಲೇ ಇದೆ. ಕೇಸರಿ ಬೆಳೆಯುವ ವಿಶ್ವದ 3 ರಾಜ್ಯಗಳ ಪೈಕಿ ಈ ಕಾಶ್ಮೀರ ಕೂಡ ಒಂದು.

ಇನ್ನು ಕಾಶ್ಮೀರದ ಸ್ವಲ್ಪ ಕೆಳಕೆ ಬಂದರೆ ಜಮ್ಮು ಇದೆ. ಇಲ್ಲಿ ಮಾತ ವೈಶ್ನೋದೇವಿಯ ದೇವಾಲಯವಿದೆ. ಪ್ರತಿವರ್ಷ ಸುಮಾರು ೧ ಕೋಟಿ ಭಕ್ತರು ಮಾತ ವೈಷ್ಣದೇವಿಯ ದರ್ಶನಕ್ಕಾಗಿ ಬರುತ್ತಾರೆ. ಇಂಥ ಜಮ್ಮು ಕಾಶ್ಮೀರ ಲಡಾಖ್ ಪ್ರದೇಶಕ್ಕೆ ಇನ್ನು ಯಾರು ಬೇಕಾದರೂ ಹೋಗಿ ನೆಲೆ ನಿಲ್ಲಬಹುದು, ವ್ಯಾಪಾರ ಮಾಡಬಹುದು, ಬದುಕು ಕಟ್ಟಿಕೊಳ್ಳಬಹುದು. ಆದರೆ ಗೆಳೆಯರೇ, ಒಂದು ಸರಿ ಯೋಚನೆ ಮಾಡಿ! ಅಲ್ಲಿ ಕಡಿಮೆ ಬೆಲೆಗೆ ಭೂಮಿ ಸಿಗುತ್ತೆ, ಬಾಸುಮತಿ ಅಕ್ಕಿ ಬೆಳೆತಿವಿ ಅಂತ ನಮ್ಮ ಆಂಧ್ರದ ರೈತರೇನಾದ್ರೂ ಅಲ್ಲಿಗೆ ಹೋಗಿ ಬಿಟ್ಟರೆ, ಐದೇ-ಐದು ವರ್ಷಗಳಲ್ಲಿ ಅಲ್ಲಿನ ನೆಲಕ್ಕೆ ಕೆಮಿಕಲ್ ಅನ್ನುಹಾಕಿ ಆ ಫಲವತ್ತಾದ ಭೂಮಿಯನ್ನ ಬರಡು ಮಾಡಿ ಬಿಡುತ್ತಾರೆ. ಭಾರತದ ಉದ್ಯಮಿಗಳು ಅಲ್ಲಿನ ಭೂಮಿಯನ್ನ ಖರೀದಿಸಿ ಅಲ್ಲಿ ಇಂಡಸ್ಟ್ರಿ ಅನ್ನು ತೆರೆದು ಅಲ್ಲಿನ ಪರಿಸರದ ಮೇಲೆ ಅತ್ಯಾಚಾರ ನೆಡೆಯುತ್ತದೆ. ಇವತ್ತು ಹಿಮಾಚಲ್ ಪ್ರದೇಶ ಮತ್ತು ಗಂಗಾ ಕಿನಾರೆಯಲ್ಲಿ ಆಗಿರುವಂತೆ ಕಾಶ್ಮೀರದ ಪ್ರಕೃತಿ ತಾಣಗಳು ಕೂಡ ಮನುಷ್ಯರಿಂದ ನಾಶ ವಾದರೆ ಅದರ ಗತಿ ಏನು? ಅಲ್ಲಿಗೆ ಜನ ಹೋಗಿ ನೆಲಿಸಬೇಕು ಆದರೆ ಅದು ಅಲ್ಲಿನ ಜನರ ಮತ್ತು ಪ್ರಕೃತಿಯನ್ನು ದುರ್ಬಲಗೊಳಿಸ ಬಾರದು. ಹಾಗೆ ಪ್ರಕೃತಿಯನ್ನ ನಾಶ ಕೂಡ ಮಾಡಬಾರದು.

ಅಲ್ಲಿಗೆ ಹೋಗುವ ಜನ ಅಲ್ಲಿನ ಪರಿಸರವನ್ನು ಗೌರವಿಸದೆ ಇದ್ದರೆ, ಈಗಿನ ಸ್ವರ್ಗದಂತ ಕಾಶ್ಮೀರ ಕೆಲವೇ ವರ್ಷಗಳಲ್ಲಿ ನಾಶಮಾಡಿದಂತೆ ಆಗುತ್ತದೆ. ಆದರೆ ಮೊದಲು ಕಾಶ್ಮೀರವನ್ನು ನಾವು ನಮ್ಮದಾಗಿಸಬೇಕಾಗಿದೆ, ಅಲ್ಲಿನ ಜನರಿಗೆ ಕೆಲಸ ಕೊಟ್ಟು ಮುಕ್ತಗೊಳಿಸಬೇಕಿದೆ. ಆದರೂ ಸರ್ಕಾರ ಕಾಶ್ಮೀರದ ಪ್ರಕೃತಿಯನ್ನು ಉಳಿಸುವ ಬಗ್ಗೆ ಕೂಡಾ ಯೋಚನೆ ಮಾಡಬೇಕು.

ಮನನ್
ಪ್ರಥಮ ಪಿ.ಯು.ಸಿ.
ಸರ್ ಎಂ.ವಿ. ಕಾಲೇಜು
ದಾವಣಗೆರೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 hours ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ6 hours ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ6 hours ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ7 hours ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ8 hours ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ8 hours ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ9 hours ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ ‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ
ದಿನದ ಸುದ್ದಿ9 hours ago

ತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

ಮಳೆ ಕೈಕೊಟ್ಟಿತು, ತುಂಗಭದ್ರಾ ಹರಿವು ಕುಸಿಯಿತು: ಹರಿಹರದ ‘ಜಲಸಿರಿ’ಗೆ ನೀರಿನ ಬಿಕ್ಕಟ್ಟಿನ ಬಿಸಿ ಜಾಕ್‌ವೆಲ್ ಬಳಿ ತಾತ್ಕಾಲಿಕ ಕಲ್ಲಿನ ತಡೆಗೋಡೆ ನಿರ್ಮಾಣ ಮಳೆ ಮತ್ತಷ್ಟು ತಡವಾದರೆ ಸಂಪೂರ್ಣ...

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ ! ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ದಿನದ ಸುದ್ದಿ10 hours ago

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್....

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಿನದ ಸುದ್ದಿ10 hours ago

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ...

Trending