Connect with us

ದಿನದ ಸುದ್ದಿ

ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ನೆರವು ಘೋಷಿಸಬೇಕು : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಸದನದ ಒಳಗೂ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ‌ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ನಾಲ್ಕು ಕೋಟಿ ಜನರಿಗೆ 7 ಕೆಜಿ ಅಕ್ಕಿಯನ್ನ ಉಚಿತವಾಗಿ ನೀಡುತ್ತಿತ್ತು. ಬಿಜೆಪಿ ಸರ್ಕಾರ ರಚನೆ ಆದ ಮೇಲೆ ಅನ್ನಭಾಗ್ಯ ಅಕ್ಕಿ ಕಡಿಮೆ ಮಾಡಲು ಚರ್ಚೆ ನಡೆದಿದೆಎಂಬ ಮಾಹಿತಿ ಬಂದಿದೆ. ಕಡಿತ ಮಾಡಿದ ಅಕ್ಕಿ ಹಣವನ್ನ ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಈ ಯೋಜನೆಯಲ್ಲಿ ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ. ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡ್ತೇವೆ ಅನ್ನೊದು ಬಡವರ ವಿರೋಧಿ ಧೋರಣೆ ಎಂದರು.

ಅನ್ನಭಾಗ್ಯ ಅಕ್ಕಿ ಕಡಿತ ಮಾಡುವ ಯೋಚನೆ ಸರ್ಕಾರದ ಮುಂದೆ ಇದ್ದರೆ ಅದನ್ನ ಕೂಡಲೇ ಕೈ ಬಿಡಬೇಕು.ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ.

ಇಂದಿರಾ ಕ್ಯಾಂಟೀನ್ ‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸ ಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ
ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಅಂತ ಈ ಯೋಜನೆ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ‌ ಎಂದು ಹೇಳಿದರು.

ಸಿಎಂ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು.ಆದರೆ, ಇನ್ನು ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ
ಇಲ್ಲ. ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮ ನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ20 ಕಡಿಮೆ ಆಗಿದೆ.ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗಲ್ಲ ಎಂದು ಕಿಡಿಕಾರಿದರು.

ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ.ಯಡಿಯೂರಪ್ಪ ಸಿಎಂ ಆಗಿ 22 ದಿನ ಆಯ್ತು. ದನಕರುಗಳಿಗೆ ಮೇವು ಕೊಡ್ತಿಲ್ಲ, ಯುವಕರಿಗೆ ಉದ್ಯೋಗ ಸಿಗ್ತಿಲ್ಲ.‌ ಅವರು, ‌ ರೈತರಿಗೆ, ಬಡವರಿಗೆ ಸಹಾಯ ಮಾಡ್ತಿಲ್ಲ.‌ಹಾಗಿದ್ರೆ ಈ ಸರ್ಕಾರ ಯಾಕೆ ಇರಬೇಕು. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಬೇಕು‌ ಎಂದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ.‌ ಪ್ರಜಾಪ್ರಭುತ್ವ ಇದ್ಯಾ, ಇದನ್ನೆ ಪ್ರಜಾಪ್ರಭುತ್ವ ಅಂತ ಕರೆಯೋದಾ. ಅಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ.ಯಡಿಯೂರಪ್ಪ ಬಹಳ ಮಾತಾಡ್ತಾರೆ, ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುವುದಿಲ್ಲ.‌ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ.‌ ಈವರೆಗೆ ಎಷ್ಟು ನಷ್ಟ ಆಗಿದೆ ಎಂಬ ವರದಿಯನ್ನೇ ತಯಾರಿಸಿಲ್ಲ.ಪ್ರವಾಹ, ಬರಪೀಡಿತ ಪ್ರದೇಶಗಳಲ್ಲಿ ಸೋಮವಾರದಿಂದ ಪ್ರವಾಸ ಕೈಗೊಳ್ಳುತ್ತೇನೆ. ಕೂಡಲೇ ಕೇಂದ್ರ ಸರ್ಕಾರ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಕೇದ್ರಸರ್ಕಾಕ್ಕೆ ಒತ್ತಾಯಿಸಿದರು.

ಯಡಿಯೂರಪ್ಪ, ಪ್ರಧಾನ ಮಂತ್ರಿಗಳಿಗೆ ಏನಾದ್ರೂ ಹೆದರುತ್ತಾರೋ ಹೇಗೆ ? ಸರ್ವ ಪಕ್ಷ ನಿಯೋಗವನ್ನಾದ್ರು ಕರೆದುಕೊಂಡು ಹೋಗಿ ನಾವೇ ಮಾತಾಡ್ತೇವೆ. ಇಷ್ಟು ನಿರ್ಲಜ್ಜವಾದ ಸರ್ಕಾರವನ್ನ ನಾನು ನೋಡಿರಲಿಲ್ಲ.
ಇಷ್ಟೇಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನ ಕರೆಯಿರಿ ಎಂದು ಒತ್ತಾಯಿಸುತ್ತೇನೆ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ. ಪ್ರಧಾನ ಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ. 6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಆಗಿದೆ. ಒಟ್ಟಾರೆ 1ಲಕ್ಷ ಕೋಟಿ ನಷ್ಟ ಆಗಿದೆ. ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ.ಗಳ ನೆರವು ಘೋಷಿಸಬೇಕು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending