Connect with us

ದಿನದ ಸುದ್ದಿ

ನಾಡಿನ ಖ್ಯಾತ ವಿಚಾರವಾದಿ ಎ.ಕೆ. ಸುಬ್ಬಯ್ಯ ನಿಧನ : ಗಣ್ಯರ ಸಂತಾಪ

Published

on

ಸುದ್ದಿದಿನ,ಬೆಂಗಳೂರು: ನಾಡಿನ ಖ್ಯಾತ ವಿಚಾರವಾದಿ, ವಕೀಲ ಮತ್ತು ಹಿರಿಯ ರಾಜಕಾರಣಿ ಎ.ಕೆ.ಸುಬ್ಬಯ್ಯ ಕಾಲವಶರಾಗಿದ್ದಾರೆ. ಎ.ಕೆ.ಸುಬ್ಬಯ್ಯ ಅವರಿಗೆ 86 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ನಿಧನರಾಗಿದ್ದಾರೆ.

ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಬೆಳ್ಳೂರಿನಲ್ಲಿ ಅಜ್ಜಿಕುಟೀರ ಕಾರ್ಯಪ್ಪ ಮತ್ತು ಸೀತಮ್ಮ ದಂಪತಿ ಪುತ್ರನಾಗಿ 1936ರ ಆಗಸ್ಟ್ 8ರಂದು ಇವರು ಜನಿಸಿದ್ದರು. 1980ರಲ್ಲಿ ಕರ್ನಾಟಕ ಬಿಜೆಪಿಯ ಮೊದಲ ಅಧ್ಯಕ್ಷರಾಗಿ ಇವರು ಆಯ್ಕೆಯಾಗಿದ್ದರು. ಆದರೆ, ಕಾಲಾನಂತರದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ತತ್ವ, ಸಿದ್ಧಾಂತಗಳಿಂದ ಸಂಪೂರ್ಣ ವಿಮುಖವಾಗಿ, ಅದಕ್ಕೆ ತದ್ವಿರುದ್ಧವಾದ ವಿಚಾರವನ್ನು ನಾಡಿನಲ್ಲಿ ಹರಡಲು ಯತ್ನಿಸಿದ್ದರು.
ಅವರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಒಡನಾಡಿಯಾಗಿದ್ದರು. ಅಲ್ಲದೇ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸುಮಾರ್ 19 ತಿಂಗಳ ಕಾಲ ಸೆರೆವಾಸ ಅನುಭವಿಸಿದ್ದರು.
ನೇರ ನಡೆ, ನುಡಿ, ಪ್ರಖರ ಚಿಂತನೆ, ನಿರರ್ಗಳ ಭಾಷಣಗಳಿಂದ ಅವರು ಪ್ರಸಿದ್ಧರಾಗಿದ್ದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬದವರ ಆಸ್ತಿ ಕುರಿತು ಅವರು ನೀಡಿದ್ದ ಹೇಳಿಕೆ “ಆಲೂಗೆಡ್ಡೆ ಬೆಳೆದು ಅವರ ಆಸ್ತಿಯ ಪ್ರಮಾಣದಲ್ಲಿ ಏರಿಕೆಯಾಯಿತೇ?” ತುಂಬಾ ಪ್ರಸಿದ್ಧವಾಗಿದೆ.

ಇವರ ಸಾವಿನ ಟ್ವೀಟರ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಂಬನಿ ಮೀಡಿದಿದ್ದಾರೆ. ನೇರ, ದಿಟ್ಟ ಮಾತುಗಳಿಂದ ಸಮಕಾಲೀನ ವಿದ್ಯಮಾನಗಳಿಗೆ ನಿರ್ಭೀತಿಯಿಂದ ಪ್ರತಿಕ್ರಿಯಿಸುತ್ತಾ ನಮ್ಮ ಆತ್ಮಸಾಕ್ಷಿಯಂತಿದ್ದ ಹಿರಿಯ ಹೋರಾಟಗಾರ ಎ.ಕೆ.ಸುಬ್ಬಯ್ಯ ಸಾವಿನಿಂದ ವೈಯಕ್ತಿಕವಾಗಿ ನಾನು ಒಬ್ಬ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನಾಡು ಮಾರ್ಗದರ್ಶಕನನ್ನು ಕಳೆದುಕೊಂಡು ಬಡವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಅವರು ಹೇಳಿದ್ದಾರೆ.

ಕೆ.ಎಲ್.ಅಶೋಕ್, ಹರ್ಷಕುಮಾರ್ ಕುಗ್ವೆ, ಬಿ.ಎಂ.ಬಷೀರ್, ದಿನೇಶ್ ಅಮಿನ್ ಮಟ್ಟು ಹೀಗೆ ಹಲವು ವಿಚಾರವಾದಿಗಳು ಸಂತಾಪ ಮಿಡಿದಿದ್ದಾರೆ.

 

ದಿನದ ಸುದ್ದಿ

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

Published

on

ಜಾತಿಯ ಗೋಡೆ ಒಡೆದು ಮದುವೆಯಾದ ಜೋಡಿಗೆ ಹೊಸ ಸಂಕಷ್ಟ: ಪ್ರೋತ್ಸಾಹಧನಕ್ಕೆ ಅರ್ಜಿ ಹಾಕಿದರೂ ಹಣ ಮಾತ್ರ ಮರೀಚಿಕೆ!

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.

ಹೈಲೈಟ್ಸ್: 
  • SC/ST ಪುರುಷ–ಬೇರೆ ಜಾತಿಯ ಮಹಿಳೆ ವಿವಾಹಕ್ಕೆ ₹2.50 ಲಕ್ಷ ನೆರವು
  • SC/ST ಮಹಿಳೆ–ಬೇರೆ ಜಾತಿಯ ಪುರುಷ ವಿವಾಹಕ್ಕೆ ₹3 ಲಕ್ಷ ಪ್ರೋತ್ಸಾಹಧನ
  • 2025-26ರಲ್ಲಿ 5,612 ಅರ್ಜಿಗಳ ಪೈಕಿ 3,997 ಅರ್ಜಿಗಳು ಬಾಕಿ
  • 2026-27ರಲ್ಲಿ 2,194 ಅರ್ಜಿಗಳು; 61ಕ್ಕೆ ಅನುಮೋದನೆ, ಆದರೆ ಹಣ ಪಾವತಿ ಶೂನ್ಯ
  • ಅನುದಾನ ಕೊರತೆ ಮತ್ತು ಅಪೂರ್ಣ ದಾಖಲೆಗಳಿಂದ ಯೋಜನೆ ಅನುಷ್ಠಾನಕ್ಕೆ ವಿಳಂಬ

http://Visit : www.suddidina.com

ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?

ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.

ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.

ಹೊಸ ಸಾಲಿನಲ್ಲೂ ಅದೇ ಕಥೆ

2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.

ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ

ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.

2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.

2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ

  • 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
  • ಮೊದಲ ಕಂತಿಗೆ ಅನುಮೋದನೆ: 61
  • ಪ್ರೋತ್ಸಾಹ ಧನ ಪಾವತಿ: 00
  • ಅಪೂರ್ಣ ಅರ್ಜಿಗಳು: 392
  • ತಿರಸ್ಕಾರಗೊಂಡ ಅರ್ಜಿಗಳು: 02

ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ

ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.

ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

Continue Reading

ದಿನದ ಸುದ್ದಿ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

Published

on

KEA Recruitment 2026: ಪದವಿ, ಪಿಯುಸಿ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ; 4,744 ಹುದ್ದೆಗಳಿಗೆ ಈ ತಿಂಗಳಲ್ಲೇ ಅಧಿಸೂಚನೆ, ನವೆಂಬರ್-ಡಿಸೆಂಬರ್‌ನಲ್ಲಿ ಪರೀಕ್ಷೆ!

ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ ಒಟ್ಟು 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲೇ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆದಿದೆ. ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸುವ ಸಾಧ್ಯತೆಯೂ ಇದ್ದು, ಅಭ್ಯರ್ಥಿಗಳು ಈಗಿನಿಂದಲೇ ಅಧ್ಯಯನ ಆರಂಭಿಸುವುದು ಸೂಕ್ತವಾಗಿದೆ.

ಹೈಲೈಟ್ಸ್: 4,744 ಹುದ್ದೆಗಳಿಗೆ ನೇಮಕಾತಿ
  • KEAಯಿಂದ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಸಿದ್ಧತೆ
  • ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು – 2,421
  • ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು – 2,062
  • ತಾಂತ್ರಿಕ ಹುದ್ದೆಗಳು – 261; ಇನ್ನಷ್ಟು ಹುದ್ದೆಗಳು ಸೇರುವ ಸಾಧ್ಯತೆ
  • ಈ ತಿಂಗಳು ಅಧಿಸೂಚನೆ; ನವೆಂಬರ್-ಡಿಸೆಂಬರ್‌ನಲ್ಲಿ ಲಿಖಿತ ಪರೀಕ್ಷೆಗೆ ಸಿದ್ಧತೆ

http://Visit : www.suddidina.com

ಪದವಿ ಮಟ್ಟದಲ್ಲಿ 2,421 ಹುದ್ದೆಗಳು

ಈ ಬೃಹತ್ ನೇಮಕಾತಿಯಲ್ಲಿ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಇದ್ದು, ವಿವಿಧ ಸರಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಪದವಿ ಪೂರ್ಣಗೊಳಿಸಿರುವ ಉದ್ಯೋಗಾಕಾಂಕ್ಷಿಗಳು ಯಾವ ಇಲಾಖೆಯಲ್ಲಿ ಯಾವ ಹುದ್ದೆಗಳು ಲಭ್ಯವಿರಲಿವೆ, ಹುದ್ದೆವಾರು ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಸೇರಿದಂತೆ ಅಧಿಸೂಚನೆಯಲ್ಲಿ ಪ್ರಕಟವಾಗುವ ಸಂಪೂರ್ಣ ವಿವರಗಳನ್ನು ಗಮನಿಸಬೇಕು.

ಪಿಯುಸಿ ಅಭ್ಯರ್ಥಿಗಳಿಗೂ ಅವಕಾಶ

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರಿಗೂ ಈ ನೇಮಕಾತಿಯಲ್ಲಿ ಉತ್ತಮ ಅವಕಾಶವಿದೆ. ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ಹೀಗಾಗಿ ಪದವಿ ಮಾತ್ರವಲ್ಲದೆ ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳೂ ಈ ನೇಮಕಾತಿಯ ಮೇಲೆ ಕಣ್ಣಿಟ್ಟಿದ್ದಾರೆ.

ಪಿಯುಸಿ ಹಂತದ ಹುದ್ದೆಗಳಿಗೆ ಅರ್ಹರಾಗಿರುವವರು ಅಧಿಸೂಚನೆ ಪ್ರಕಟವಾದ ನಂತರ ತಮ್ಮ ವಿದ್ಯಾರ್ಹತೆಗೆ ಹೊಂದುವ ಹುದ್ದೆಗಳನ್ನು ಗುರುತಿಸಿ ಅರ್ಜಿ ಸಲ್ಲಿಸಬಹುದು.

ತಾಂತ್ರಿಕ ಹುದ್ದೆಗಳಿಗೂ ಅವಕಾಶ

ತಾಂತ್ರಿಕ ವಿಭಾಗದಲ್ಲಿಯೂ 261 ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆದಿದೆ. ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಹುದ್ದೆಗಳನ್ನು ಪರಿಶೀಲಿಸಬೇಕಾಗಿದೆ.

ಒಟ್ಟು 4,744 ಹುದ್ದೆಗಳ ಪೈಕಿ 2,421 ಪದವಿ ಮಟ್ಟದ ತಾಂತ್ರಿಕೇತರ, 2,062 ಪಿಯುಸಿ ಮಟ್ಟದ ತಾಂತ್ರಿಕೇತರ ಹಾಗೂ 261 ತಾಂತ್ರಿಕ ಹುದ್ದೆಗಳು ಸೇರಿವೆ. ಈ ಮೂಲಕ ವಿವಿಧ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಸಿಗಲಿದೆ.

ಇನ್ನಷ್ಟು ಹುದ್ದೆಗಳು ಸೇರುವ ಸಾಧ್ಯತೆ

ಪ್ರಸ್ತುತ ಪ್ರಕಟಿಸಿರುವ ಹುದ್ದೆಗಳ ಸಂಖ್ಯೆಯೇ ಅಂತಿಮವಾಗಿಲ್ಲ ಎಂಬುದು ಗಮನಾರ್ಹ. ನಂತರದ ದಿನಗಳಲ್ಲಿ ಇನ್ನಷ್ಟು ಹೊಸ ಇಲಾಖೆಗಳು ಮತ್ತು ಹುದ್ದೆಗಳು ನೇಮಕಾತಿ ಪಟ್ಟಿಗೆ ಸೇರುವ ಸಾಧ್ಯತೆ ಇದೆ. ಹೀಗಾಗಿ ಅಭ್ಯರ್ಥಿಗಳು ಕೇವಲ ಈಗಿರುವ ಹುದ್ದೆಗಳನ್ನಷ್ಟೇ ಗಮನಿಸದೆ, ಅಧಿಕೃತ ಅಧಿಸೂಚನೆ ಹೊರಬರುವವರೆಗೆ KEA ಪ್ರಕಟಣೆಗಳನ್ನು ನಿರಂತರವಾಗಿ ಪರಿಶೀಲಿಸಬೇಕು.

ಪರೀಕ್ಷೆಗೆ ಈಗಿನಿಂದಲೇ ತಯಾರಿ

ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ ಲಿಖಿತ ಪರೀಕ್ಷೆ ನಡೆಸಲು ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ತಯಾರಿಗೆ ಸಮಯ ಸೀಮಿತವಾಗಿರಲಿದೆ. ನೇಮಕಾತಿಯ ಪಠ್ಯಕ್ರಮದ ವಿವರಗಳನ್ನೂ ಮುಂಚಿತವಾಗಿ ಪರಿಶೀಲಿಸಿ, ವಿಷಯವಾರು ಅಧ್ಯಯನ ಆರಂಭಿಸುವುದು ಉತ್ತಮ.

ಅಂತಿಮವಾಗಿ, ಹುದ್ದೆಗಳ ಸಂಖ್ಯೆ, ಇಲಾಖೆಗಳ ವಿವರ, ವಿದ್ಯಾರ್ಹತೆ, ಪರೀಕ್ಷಾ ವಿಧಾನ, ಪಠ್ಯಕ್ರಮ, ವಯೋಮಿತಿ ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕ ಸೇರಿದಂತೆ ಪೂರ್ಣ ಹಾಗೂ ಅಧಿಕೃತ ಮಾಹಿತಿಯನ್ನು ಅಧಿಸೂಚನೆ ಪ್ರಕಟವಾದ ಬಳಿಕವೇ ಖಚಿತಪಡಿಸಿಕೊಳ್ಳಬೇಕು. ಅಭ್ಯರ್ಥಿಗಳು ಪ್ರಕಟಣೆಯ ಲಿಂಕ್ ಪರಿಶೀಲಿಸಿ, ತಮ್ಮ ಅರ್ಹತೆಗೆ ಹೊಂದುವ ಹುದ್ದೆಗಳ ವಿವರಗಳನ್ನು ತಿಳಿದುಕೊಂಡು ಸಿದ್ಧತೆ ಆರಂಭಿಸಬಹುದು.

Continue Reading

ದಿನದ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

Published

on

ಮೇಲ್ಭದ್ರ ನೀರಿಗಾಗಿ ದಾವಣಗೆರೆ ಬಂದ್‌: ಗುಟ್ಕಾ–ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ, ನಗರದಲ್ಲಿ ಪ್ರತಿಭಟನೆ ಕಾವು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.

http://Visit : www.suddidina.com

davangere-bandh-upper-bhadra-water-release-gutka-pan-masala-ban-protest-renukacharya

ಗುಟ್ಕಾ, ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ

ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್‌ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.

https://x.com/ians_india/status/2094602342230528256

ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ

ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.

ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?

ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.

ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್‌ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.

ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್‌ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್‌ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

Continue Reading
Advertisement

Title

ದಿನದ ಸುದ್ದಿ4 minutes ago

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ...

ನಿತ್ಯ ಭವಿಷ್ಯ14 minutes ago

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ...

ದಿನದ ಸುದ್ದಿ19 hours ago

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ...

ದಿನದ ಸುದ್ದಿ19 hours ago

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ....

ದಿನದ ಸುದ್ದಿ21 hours ago

ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ....

ಕ್ರೀಡೆ21 hours ago

ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ

ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ....

ದಿನದ ಸುದ್ದಿ22 hours ago

ಮೈಸೂರು ದಸರಾದಲ್ಲಿ ಕಂಬಳದ ಕಳೆ: ಕೋಣಗಳ ಓಟಕ್ಕೆ ಭರದ ಸಿದ್ಧತೆ, ಪರಿಸರ ವಿವಾದವೂ ತೀವ್ರ

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ವೈವಿಧ್ಯಕ್ಕೆ ಈ ಬಾರಿ ಕರಾವಳಿಯ ಕಂಬಳ ಮತ್ತೊಂದು ಆಯಾಮ ನೀಡಲಿದೆ. ಸಾತಗಳ್ಳಿಯ 25 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು...

ದಿನದ ಸುದ್ದಿ22 hours ago

September 1 Rules Change: ಸೆ.1ರಿಂದ ಬದಲಾದ 6 ಪ್ರಮುಖ ನಿಯಮಗಳು; ವಿಮಾನ ಪ್ರಯಾಣದಿಂದ ತೆರಿಗೆ, LPG, ಗೋಲ್ಡ್‌ ಬಾಂಡ್‌ವರೆಗೆ ಹೊಸ ರೂಲ್ಸ್!

ಸುದ್ದಿದಿನ,ಹೊಸದಿಲ್ಲಿ: ಪ್ರತಿ ತಿಂಗಳ ಆರಂಭದಲ್ಲಿ ಹಣಕಾಸು, ಬ್ಯಾಂಕಿಂಗ್‌, ತೆರಿಗೆ ಮತ್ತು ಗ್ರಾಹಕ ಸೇವೆಗಳಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳು ಜಾರಿಗೆ ಬರುತ್ತವೆ. ಅದರಂತೆ 2026ರ ಸೆಪ್ಟೆಂಬರ್‌ 1ರಿಂದಲೂ ಹಲವು...

ದಿನದ ಸುದ್ದಿ22 hours ago

Gold Silver Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರದಲ್ಲಿ ₹5,000 ಕುಸಿತ, ಬೆಂಗಳೂರಿನ ಇಂದಿನ ದರ ಎಷ್ಟು?

ಸುದ್ದಿದಿನ,ಬೆಂಗಳೂರು: ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಹೆಚ್ಚು ಒಲವು ತೋರಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಸೆಪ್ಟೆಂಬರ್‌ 1, 2026ರ ಮಂಗಳವಾರದಂದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ...

ನಿತ್ಯ ಭವಿಷ್ಯ22 hours ago

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ,...

Trending