ನಿತ್ಯ ಭವಿಷ್ಯ
ಈ ರಾಶಿಯವರಿಗೆ ಬಹುದಿನದ ಆಸ್ತಿವಿವಾದ ಬಗೆಹರಿಯುವ ದಿನ : ಇಂದಿನ ಭವಿಷ್ಯ 01-11-2019 ಶುಕ್ರವಾರ
ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಿ ಆರಾಧನೆಯಿಂದ ಈ ದಿನದ ನಿಮ್ಮ ರಾಶಿ ಫಲವನ್ನು ನೋಡೋಣ. ಶ್ರೀ ಸಾಯಿ ವೈಷ್ಣವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು :: ರಾಮಚಂದ್ರ ರಾವ್
9845307809
ಮೇಷ ರಾಶಿ
ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಮುದ ನೀಡುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸಿಗುವುದು. ಸಂಗಾತಿಯೊಂದಿಗೆ ದುಡುಕಿನ ಮಾತನಾಡಿದರೆ ಕಲಹವಾದೀತು. ಎಚ್ಚರ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಷಭ ರಾಶಿ
ದಾಯಾದಿಗಳೊಂದಿಗಿನ ಆಸ್ತಿ ವಿವಾದಗಳಿಗೆ ತಾತ್ಕಾಲಿಕ ಪರಿಹಾರ ಸಿಗುವುದು. ಹಿರಿಯ ಮಾತುಗಳಿಗೆ ಮನ್ನಣೆ ನೀಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಕೋರ್ಟು, ಕಚೇರಿ ವ್ಯವಹಾರದಲ್ಲಿ ಜಯ ಸಿಗುವುದು.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಿಥುನ ರಾಶಿ
ಎಷ್ಟೋ ದಿನದ ಬಳಿಕ ಹಳೆಯ ಮಿತ್ರನೊಬ್ಬನ ಭೇಟಿ ಮನಸ್ಸಿಗೆ ಖುಷಿ ನೀಡಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾಗಲಿವೆ. ಸಂತಾನ ಹೀನ ದಂಪತಿ ದೇವರ ಮೊರೆ ಹೋಗುವರು.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕರ್ಕಟಕ ರಾಶಿ
ಹೊಸ ಕೆಲಸಗಳಿಗೆ ಕೈ ಹಾಕಲು ಇಂದು ಉತ್ತಮ ದಿನ. ಆರ್ಥಿಕವಾಗಿ ಲಾಭ ಗಳಿಸುವಿರಿ. ಸಣ್ಣ ವ್ಯಾಪಾರಿಗಳು ಕೊಂಚ ಹಿನ್ನಡೆ ಅನುಭವಿಸಿಯಾರು. ಆದರೆ ಚಿಂತ ಬೇಡ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಕಂಡುಬರಲಿದೆ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಿಂಹ ರಾಶಿ
ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ತಕ್ಕ ಮನ್ನಣೆ, ಗೌರವ ಸಿಗುವುದು. ಉತ್ತಮ ಹೆಸರು ಸಂಪಾದಿಸಲಿದ್ದೀರಿ. ವಿದ್ಯಾರ್ಥಿಗಳು ಶಿಕ್ಷಕರ ಪ್ರಶಂಸೆಗೆ ಪಾತ್ರರಾಗುವರು. ನಿರುದ್ಯೋಗಿಗಳಿಗೆ ನಿರೀಕ್ಷಿತ ಫಲ ಸಿಗುವುದ. ದೇವತಾ ಪ್ರಾರ್ಥನೆ ಮಾಡುವುದನ್ನು ಮರೆಯದಿರಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕನ್ಯಾ ರಾಶಿ
ಸಾಂಸಾರಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಒಂದು ರೀತಿಯ ಅಂತ್ಯ ಸಿಗಲಿದೆ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವುದು ಮುಖ್ಯ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡ ದೇಹಾಯಾಸವಾಗುವಂತೆ ಮಾಡುತ್ತದೆ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ತುಲಾ ರಾಶಿ
ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸಹೋದರಿಯರ ವಿವಾಹ ಪ್ರಯತ್ನದಲ್ಲಿ ಫಲ ಕಾಣುವಿರಿ. ಸ್ವ ಉದ್ಯೋಗಿಗಳು ನಿವ್ವಳ ಲಾಭ ಗಳಿಸುವರು. ಹೊಸ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಶ್ಚಿಕ ರಾಶಿ
ವೃತ್ತಿ ಸಂಬಂಧವಾಗಿ ಆಗುವ ಮನೋಕ್ಷೋಭೆಗಳನ್ನು ಮನೆಗೆ ತರಬೇಡಿ. ಮಡದಿ ಮಕ್ಕಳೊಂದಿಗೆ ಕೋಪದಿಂದ ವರ್ತಿಸಿದರೆ ಸಂಬಂಧ ಹಾಳಾದೀತು ಎಂಬುದನ್ನು ಮರೆಯದಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಧನುಸ್ಸು ರಾಶಿ
ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಆದರೆ ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ. ಅಪ್ಪ-ಮಕ್ಕಳ ನಡುವೆ ವಿರಸ ಮೂಡಬಹುದು. ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆಗೆ ಪ್ರಾಶಸ್ತ್ಯ ಕೊಡಿ. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸುವಿರಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಕರ ರಾಶಿ
ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸುವಿರಿ. ಧಾರ್ಮಿಕ ಭಾವನೆ ಹೆಚ್ಚಾಗುವುದು. ಶುಭ ಮಂಗಲ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ತಾಳ್ಮೆ ಅಗತ್ಯ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕುಂಭ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಸ‍್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ. ತಾತ್ಕಾಲಿಕ ವೃತ್ತಿಯವರಿಗೆ ಖಾಯಂ ಉದ್ಯೋಗ ಸಿಗುವುದು. ವ್ಯಾಪಾರ ವಹಿವಾಟಿನಲ್ಲಿ ಅಧಿಕ ಧನ ಲಾಭವಾಗಲಿದೆ. ಹಿತಶತ್ರುಗಳನ್ನು ದೂರವಿಡಿ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮೀನ ರಾಶಿ
ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯಾರೋ ಹೇಳುವ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮಕ್ಕಳ ವಿಚಾರದಲ್ಲಿ ಹೊಸ ನಿರ್ಧಾರ ಕೈಗೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಮುಖ್ಯ.
ಜ್ಯೋತಿಷ್ಯರು ರಾಮಚಂದ್ರ ಭಟ್
9845307809
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


