Connect with us

ದಿನದ ಸುದ್ದಿ

ಆರ್ಥಿಕ ಸಬಲರು ಪಡೆದಿರುವ ಬಿಪಿಎಲ್ ಕಾರ್ಡನ್ನು ಸ್ವಯಂಪ್ರೇರಿತರಾಗಿ ಹಿಂದುರಿಗಿಸಲು ಸೂಚನೆ

Published

on

ಸುದ್ದಿದಿನ,ದಾವಣಗೆರೆ : ಆರ್ಥಿಕವಾಗಿ ಸಬಲರು ಪಡೆದಿರುವ ಬಿ.ಪಿ.ಎಲ್ ಕಾರ್ಡ್‍ಗಳನ್ನು ಸ್ವಯಂಪ್ರೇರಿತವಾಗಿ ಹಿಂತಿರುಗಿಸಲು ಇಲಾಖೆ ವತಿಯಿಂದ ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ನಿಗದಿತ ಒಂದು ತಿಂಗಳ ಅವಧಿಯೊಳಗೆ ಬಿ.ಪಿ.ಎಲ್ ಕಾರ್ಡ್‍ಗಳನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಸೂಚಿಸಿದ್ದು, ಅಂತಹವರಿಗೆ ಇಲಾಖೆಯು ಯಾವುದೇ ದಂಡ ವಿಧಿಸುವುದಿಲ್ಲ.

ಜಿಲ್ಲೆಯಲ್ಲಿ ಒಟ್ಟು 3,81,145 ಎಎವೈ/ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ. ಆದರೆ ಕೆಲವು ಕುಟುಂಬಗಳು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವವರು, ಮಕ್ಕಳು ಸರ್ಕಾರಿ/ಅರೆ ಸರ್ಕಾರಿ ಸೇವೆಗೆ ಸೇರಿ ವೇತನ ಪಡೆಯುತ್ತಿರುವವರು, ಆದಾಯ ತೆರಿಗೆ ಪಾವತಿದಾರರು, ನಗರ ಪ್ರದೇಶದಲ್ಲಿ ಸ್ವಂತ ಆರ್.ಸಿ.ಸಿ ಕಟ್ಟಡಗಳನ್ನು ಹೊಂದಿದ್ದು, ಮನೆ ಬಾಡಿಗೆ ಪಡೆಯುತ್ತಿರುವವರು ತಮ್ಮ ಪಡಿತರ ಚೀಟಿಯನ್ನು ಬಿ.ಪಿ.ಎಲ್ ಪಟ್ಟಿಯಲ್ಲೇ ಮುಂದುವರಿಸಿಕೊಂಡು ಉಚಿತವಾಗಿ ಅಕ್ಕಿಯನ್ನು ಪಡೆಯುತ್ತಿರುತ್ತಾರೆ. ಆರ್ಥಿಕವಾಗಿ ಸಬಲರು ಪಡೆದಿರುವ ಬಿ.ಪಿ.ಎಲ್ ಕಾರ್ಡ್‍ಗಳನ್ನು ಸ್ವಯಂಪ್ರೇರಿತವಾಗಿ ಹಿಂತಿರುಗಿಸಲು ಇಲಾಖೆ ವತಿಯಿಂದ ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ನಿಗಧಿತ ಒಂದು ತಿಂಗಳ ಅವಧಿಯೊಳಗೆ ಬಿ.ಪಿ.ಎಲ್ ಕಾರ್ಡ್‍ಗಳನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಸೂಚಿಸಿದೆ. ಅಂತಹವರಿಗೆ ಇಲಾಖೆಯು ಯಾವುದೇ ದಂಡ ವಿಧಿಸುವುದಿಲ್ಲ.

ಇಲಾಖೆಯಿಂದ ಅನರ್ಹ ಕಾರ್ಡ್‍ಗಳನ್ನು ಗೌಪ್ಯವಾಗಿ ಪರಿಶೀಲಿಸಿ ಪತ್ತೆ ಮಾಡುವ ಕಾರ್ಯ ಆರಂಭವಾಗಿರುತ್ತದೆ. ಪರಿಶೀಲನೆ ವೇಳೆಯಲ್ಲಿ ಅನರ್ಹರು ಬಿ.ಪಿ.ಎಲ್ ಕಾರ್ಡ್‍ಗಳನ್ನು ಪಡೆದಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ದ ಬಿ.ಪಿ.ಎಲ್ ಪಡಿತರ ಚೀಟಿ ಪಡೆದಾಗಿನಿಂದ ಇದುವರೆಗೆ ಸ್ವೀಕರಿಸಿರುವ ಪಡಿತರ ಪ್ರಮಾಣಕ್ಕೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡವನ್ನು ವಸೂಲಿ ಮಾಡಲಾಗುವುದು ಮತ್ತು ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಇದು ಕೊನೆಯ ಅವಕಾಶವಾಗಿದ್ದು, ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಪಡೆದಿರುವ ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಸ್ವಯಂಪ್ರೇರಿತವಾಗಿ ಆಹಾರ ಇಲಾಖೆಗೆ ಹಿಂತಿರುಗಿಸಲು ಸೂಚಿಸಿದೆ.

ಮಾನದಂಡಗಳನ್ವಯ ಈ ಕೆಳಕಂಡ ವರ್ಗಗಳಡಿ ಬರುವ ಕುಟುಂಬಗಳು ಬಿ.ಪಿ.ಎಲ್ ಪಡಿತರ ಚೀಟಿಯನ್ನು ಪಡೆಯಲು ಅರ್ಹರಿರುವುದಿಲ್ಲ

  • ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ದೆಗಳು ಅಥವಾ ಸರ್ಕಾರಿ ಪ್ರಾಯೋಜಿಕ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್ /ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
  • ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ 1000 ಚ.ಅಡಿ ಗಿಂತಲೂ ಹೆಚ್ಚಿನ ವಿಸ್ತೀರ್ಣದ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
  • ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ 4 ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು. ವಾರ್ಷಿಕ ಆದಾಯ (ಎಲ್ಲಾ ಮೂಲದಿಂದ) ರೂ.1,20,000/- ಗಳು ಮೇಲ್ಪಟ್ಟ ಕುಟುಂಬಗಳು.

ವಿಶೇಷ ಸೂಚನೆ

ಸಾರ್ವಜನಿಕರು ಮತ್ತು ಸ್ವಯಂ ಸೇವೆ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪಡೆದಿರುವವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ (ಆಹಾರ ಶಾಖೆ)ಗೆ ಗೌಪ್ಯವಾಗಿ ಲಿಖಿತವಾಗಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಪರಿಶೀಲಿಸಿ ಅನರ್ಹತೆ ಕಂಡು ಬಂದಲ್ಲಿ ಪಡಿತರ ಚೀಟಿಯನ್ನು ರದ್ದುಗೊಳಿಸಿ ಮಾಹಿತಿ ನೀಡಿದವರಿಗೆ ಸರ್ಕಾರದಿಂದ ಬಹುಮಾನ ಯೋಜನೆಯಡಿ ಅನರ್ಹ ಪಡಿತರ ಚೀಟಿಯೊಂದಕ್ಕೆ ರೂ.400/- ಗಳನ್ನು ನೀಡಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending