ದಿನದ ಸುದ್ದಿ
ದಾವಣಗೆರೆ | ಮಹಿಳೆಯರ ಸುರಕ್ಷತೆಗಾಗಿ 24×7 ಸಹಾಯವಾಣಿ : ಎಸ್ಪಿ ಹನುಮಂತರಾಯ
ಸುದ್ದಿದಿನ,ದಾವಣಗೆರೆ : ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019 ರ ಉದ್ಘಾಟನೆಯ ನಂತರ ಮಹಿಳಾ ಸುರಕ್ಷತೆ ಸಹಾಯವಾಣಿ ಕುರಿತು ಮಾಹಿತಿ ನೀಡಲು, ಡಿಎಆರ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಜಿಲ್ಲೆಯಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಪೊಲೀಸ್ ಇಲಾಖೆಯು ಹಲವು ಯೋಜನೆಗಳಡಿ 24×7 ಕಾರ್ಯನಿರ್ವಹಿಸಿಲಿದೆ ಎಂದು ತಿಳಿಸಿದರು.
ನಗರ ಹಾಗೂ ತಾಲ್ಲೂಕುಗಳಲ್ಲಿ ಪೊಲೀಸ್ ಗಸ್ತು ವಾಹನ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 04 ಗಂಟೆಯವೆರೆಗೆ ಸಂಚರಿಸುವುದು. ನಗರದಲ್ಲಿ 07 ಪಿಸಿಆರ್ ವಾಹನಗಳು, 14 ಚೀತಾ ವಾಹನಗಳು (ಮೋಟಾರ್ ಸೈಕಲ್) ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ 07 ಗಸ್ತುವಾಹನಗಳು ಕಾರ್ಯನಿರ್ವಹಿಸಲಿವೆ. ಈ ವಾಹನಗಳು ಜಿಪಿಎಸ್ ವ್ಯವಸ್ಥೆ ಹೊಂದಿದ್ದು, ತೊಂದರೆಯಲ್ಲಿರುವ ಮಹಿಳೆಯರನ್ನು ರಕ್ಷಿಸಲು ಅನುಕೂಲವಾಗಲಿದೆ ಎಂದರು.
ರಾತ್ರಿ ಸಮಯದಲ್ಲಿ ಮಹಿಳೆಯರು ತೊಂದರೆಯಲ್ಲಿದ್ದಾಗ, ಮನೆಗೆ ತಲುಪಲು ಸಮಸ್ಯೆಯಾದಾಗ ತಕ್ಷಣ ಜಿಲ್ಲಾ ಪೊಲೀಸ್ ಸಹಾಯವಾಣಿ ಮೊ.ನಂ: 9480803200, ಸ್ಥಿರ ದೂರವಾಣಿ 08192-253100, 08192-262699 ಹಾಗೂ ಎಮರ್ಜೆನ್ಸಿ ರಿಜಿಸ್ಟ್ರೇಷನ್ ಸಿಸ್ಟಮ್ ನಂ. 112/100 ಗೆ ಕರೆ ಮಾಡಿ ಜಿಲ್ಲಾ ಪೊಲೀಸರ ಸಹಾಯ ಪಡೆಯಬಹುದು.
ಈಗಾಗಲೇ ಜಿಲ್ಲಾ ನಿಸ್ತಂತು ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊಬೈಲ್ ನಂಬರ್‍ಗಳು, ಸ್ಥಿರ ದೂರವಾಣಿ ಸಂಖ್ಯೆಗಳೂ ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಚುರುಕಾಗಿ ಕಾರ್ಯನಿರ್ವಹಿಸಲು ಒತ್ತು ನೀಡಲಾಗುವುದು ಎಂದರು.
ಸಹಾಯವಾಣಿಗೆ ಬರುವ ಕರೆಗಳನ್ನು ಸ್ವೀಕರಿಸುವ ಕಂಟ್ರೋಲ್ ರೂಮ್ ಸಿಬ್ಬಂದಿಯವರು ತಕ್ಷಣವೇ ಆ ಮಾಹಿತಿಯನ್ನು ರಾತ್ರಿ ಕರ್ತವ್ಯದಲ್ಲಿರುವ ಪೊಲೀಸರಿಗೆ ರವಾನಿಸುತ್ತಾರೆ. ತಕ್ಷಣ ಪೊಲೀಸರು ವಾಹನದೊಂದಿಗೆ ನಿರ್ದಿಷ್ಟ ಸ್ಥಳ ತಲುಪಿ ಕಾರ್ಯ ಪ್ರವೃತ್ತರಾಗುತ್ತಾರೆ. ನಗರದಲ್ಲಿ ಗಸ್ತು ಮಾಡುವ ಪೊಲೀಸರು ನಗರದ ಯಾವುದೇ ಪ್ರದೇಶದಿಂದ ನೆರವು ಕೋರಿ ಬಂದರೂ ಕೆಲವೇ ನಿಮಿಷಗಳಲ್ಲಿ ಆ ಸ್ಥಳ ತಲುಪಿ ಸಹಾಯ ಮಾಡುವರು.
ಮಹಿಳೆಯರ ರಕ್ಷಣೆಗಾಗಿ ಪೊಲೀಸ್ ಇಲಾಖೆಯಿಂದ ಆ್ಯಪ್ ಸೌಲಭ್ಯ
ಪೊಲೀಸ್ ಇಲಾಖೆಯು ಮಹಿಳೆಯರ ರಕ್ಷಣೆಗಾಗಿ ಕೆಎಸ್‍ಪಿ ಎಂಬ ಆ್ಯಪ್ ಪರಿಚಯಿಸಿದ್ದು, ಈ ಆ್ಯಪ್‍ನ್ನು ಇನ್‍ಸ್ಟಾಲ್ ಮಾಡಿಕೊಂಡು ತ್ವರಿತ ನೆರವು ಪಡೆಯಬಹುದು. ಈ ಆ್ಯಪ್‍ನಲ್ಲಿ ನಿಮಗೆ ಹತ್ತಿರವಿರುವ ಪೊಲೀಸ್ ಠಾಣೆ ಹಾಗೂ ಅಗತ್ಯ ದೂ.ಸಂಖ್ಯೆಗಳು ಲಭ್ಯವಿರುತ್ತವೆ. ಇದರಲ್ಲಿ ಜಿಪಿಎಸ್ ಸೌಲಭ್ಯವಿದ್ದು, ನಿಮಗೆ ಸೂಕ್ತವೆನಿಸಿದ 05 ಜನರ ನಂಬರ್‍ನ್ನು ಇದರಲ್ಲಿ ಸೇವ್ ಮಾಡಿಕೊಂಡು, ನೀವು ಒಮ್ಮೆ ಕರೆ ಅಥವಾ ಮೆಸೇಜ್ ಮಾಡಿದರೆ ಆ 5 ಜನರಿಗೂ ಮಾಹಿತಿ ತಿಳಿಯುತ್ತದೆ. ಇದು ಮಹಿಳೆಯರ ರಕ್ಷಣೆಗೆ ಉತ್ತಮವಾದ ಆ್ಯಪ್ ಆಗಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಬೆಳಗಿನ ಜಾವದಲ್ಲಿ ‘ಗುಡ್ ಮಾರ್ನಿಂಗ್ ಬೀಟ್’ ಎಂಬ ತಂಡ ಅಪರಾಧ ತಡೆ ಮತ್ತು ಮಹಿಳೆಯರ ಸುರಕ್ಷತೆಗಾಗಿ ಕಾರ್ಯ ನಿರ್ವಹಿಸಲಿದೆ. ಚೈನ್ ಸ್ನಾಚಿಂಗ್ ತಡೆಯುವುದು ಇದರ ಪ್ರಮುಖ ಉದ್ದೇಶವಾಗಿದೆ. ನಗರದಲ್ಲಿ ಮಹಿಳೆಯರ ರಕ್ಷಣೆಗಾಗಿ ದುರ್ಗಪಡೆ ರಚಿಸಿದ್ದು, ಈ ಪಡೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಲಾಗಿದೆ. ಕಾಲೇಜ್, ಬಸ್‍ಸ್ಟ್ಯಾಂಡ್, ಶಾಪಿಂಗ್ ಮಾಲ್, ಚಿತ್ರಮಂದಿರಗಳು ಹಾಗೂ ಲೇಡಿಸ್ ಹಾಸ್ಟೆಲ್‍ನಂತಹ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಾರೆ.
ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಆತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯು ಈ ಎಲ್ಲಾ ಯೋಜನೆಗಳ ಮೂಲಕ ಮಹಿಳೆಯರಿಗೆ ರಕ್ಷಣೆ ಒದಗಿಸುವ ಕೆಲಸ ಮಾಡಲಿದೆ. ಈ ಎಲ್ಲಾ ಸಹಾಯವಾಣಿಗಳು 24*7 ಕಾರ್ಯನಿರ್ವಹಿಸಲಿದ್ದು, ಮಹಿಳೆಯರು ಈ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ6 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ2 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ1 day agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

