ದಿನದ ಸುದ್ದಿ
ಯಕ್ಷಗಾನ ತರಬೇತಿ ಶಿಬಿರ ಮತ್ತು ಪ್ರದರ್ಶನ ನೀಡಲು ಅರ್ಜಿ ಆಹ್ವಾನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/12/Yakshagana-Suddidina-55.jpg&description=ಯಕ್ಷಗಾನ ತರಬೇತಿ ಶಿಬಿರ ಮತ್ತು ಪ್ರದರ್ಶನ ನೀಡಲು ಅರ್ಜಿ ಆಹ್ವಾನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/12/Yakshagana-Suddidina-55.jpg&description=ಯಕ್ಷಗಾನ ತರಬೇತಿ ಶಿಬಿರ ಮತ್ತು ಪ್ರದರ್ಶನ ನೀಡಲು ಅರ್ಜಿ ಆಹ್ವಾನ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : 2019-20ನೇ ಸಾಲಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ಶಿಬಿರಾರ್ಥಿಗಳಿಗೆ ತರಬೇತಿ ಶಿಬಿರ ಮತ್ತು ಪ್ರದರ್ಶನ ನೀಡಲು ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ಹಿರಿಯ ಪ್ರತಿಷ್ಠಿತ ಯಕ್ಷಗಾನ ಗುರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಕಾಡೆಮಿಯು ಈ ಯೋಜನೆಯಡಿ ಪ.ಜಾತಿಯ ಶಿಬಿರಾರ್ಥಿಗಳಿಗೆ 5 ತಿಂಗಳ ಯಕ್ಷಗಾನ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ ಪರಿಕರಗಳೊಂದಿಗೆ ಪ್ರದರ್ಶನ ನೀಡಲು ಉದ್ದೇಶಿಸಿದ್ದು, ಯಕ್ಷಗಾನ ಕಲಾಪ್ರಕಾರಗಳಲ್ಲಿ (ತೆಂಕುತಿಟ್ಟು/ಬಡಗುತಿಟ್ಟು ಯಕ್ಷಗಾನ, ಬಡಾಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಯಕ್ಷಗಾನ, ಗೊಂಬೆಯಾಟ ತಾಳಮದ್ದಲೆ) ತರಬೇತಿ ನೀಡಬಯಸುವ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ಹಿರಿಯ ಪ್ರತಿಷ್ಠಿತ ಯಕ್ಷಗಾನ ಗುರುಗಳು ಅರ್ಜಿ ಸಲ್ಲಿಸಬಹುದು.
ಅಕಾಡೆಮಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಅಕಾಡೆಮಿಯ ಉಪಸಮಿತಿ ಸಭೆಯಲ್ಲಿ ಗುರುಗಳ ಸಂದರ್ಶನ ಮಾಡುವುದರ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿ ನೀಡಬಯಸುವ ಯಕ್ಷಗಾನ ಕಲಾಸಂಸ್ಥೆಯವರು/ಪರಿಶಿಷ್ಟ ಜಾತಿಯ ಗುರುಗಳು ಅಥವಾ ಹೆಸರಾಂತ ಗುರುಗಳು ಶಿಬಿರಾರ್ಥಿಗಳ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, 2ನೆ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-560002 ಅಕಾಡೆಮಿಯ ಕಚೇರಿಗೆ ಕಳುಹಿಸಬಹುದು.
ಅರ್ಜಿ ಸಲ್ಲಿಸಲು 2020 ರ ಜನವರಿ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-22113146 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ಗೆ ವಾಟ್ಸ್ಆ್ಯಪ್/ ಎಸ್ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ2 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ22 hours agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ22 hours agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
-
ದಿನದ ಸುದ್ದಿ2 hours agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

