Connect with us

ನಿತ್ಯ ಭವಿಷ್ಯ

ಕುಲದೇವತೆ ಆರಾಧಿಸಿ‌ ಸಂಕಷ್ಟದಿಂದ ಪಾರಾಗಿ : ಸಮಸ್ಯೆ ಪರಿಹಾರಕ್ಕೆ ಕರೆಮಾಡಿ‌ | 21-12-2019 ಶನಿವಾರ

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ : ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್ : 9964584883

ಮೇಷ ರಾಶಿ

ನಿಮ್ಮ ಐಶಾರಾಮಿತನವು ಮುಂದಿನ ಜೀವನವನ್ನು ಸಂಕಷ್ಟ ಮಾಡಬಹುದಾದ ಸಾಧ್ಯತೆ ಇದೆ ಎಚ್ಚರವಿರಲಿ. ಸಂಗಾತಿಯ ಬಯಕೆಗಳನ್ನು ನೀವು ಪ್ರಾಮಾಣಿಕವಾಗಿ ಪೂರೈಸಲಿದ್ದೀರಿ. ಈ ದಿನದ ವಾತಾವರಣ ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಪರಸ್ಪರ ಪ್ರೇಮದ ನೋಟ, ಸೆಳೆತ ಕಾಣಲಿದ್ದೀರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ವಿನಾಕಾರಣ ಮನಸ್ಸಿನಲ್ಲಿ ಅಸಮಾಧಾನ ಮೂಡಲಿದೆ. ಕೆಲವು ಕಿರಿಕಿರಿಯೆನಿಸುವ ಸಂದರ್ಭಗಳು ಒಂದರಮೇಲೊಂದರಂತೆ ನಿಮ್ಮನ್ನು ಕಾಡಬಹುದು. ಕುಲದೇವತಾ ಆರಾಧನೆಗೆ ಹೋಗುವುದರಿಂದ ನಿಮ್ಮ ಸಂಕಷ್ಟಗಳು ಬಗೆಹರಿಯಲಿದೆ. ಸ್ನೇಹಿತರ ಸಹಕಾರ ಈ ದಿನ ಅಗತ್ಯವಾಗಿ ಬೀಳಲಿದೆ. ಆರ್ಥಿಕ ವ್ಯವಹಾರದಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ ಆದರೆ ಪಡೆದಿರುವ ಸಾಲವನ್ನು ಮರುಪಾವತಿ ಮಾಡಲು ಹೆಚ್ಚಿನ ಶ್ರಮ ಅನಿವಾರ್ಯವಾಗಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಸಂಗಾತಿಯೊಡನೆ ಭಿನ್ನಾಭಿಪ್ರಾಯಗಳು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಏನೇ ಸಮಸ್ಯೆ ಇದ್ದರೂ ನೀವೇ ಬಗೆಹರಿಸಿಕೊಳ್ಳಲು ಪ್ರಯತ್ನ ಪಡುವುದು ಒಳ್ಳೆಯದು. ಪ್ರೇಮ ವಿಷಯದಲ್ಲಿ ಅಥವಾ ದಾಂಪತ್ಯದ ವಿಷಯದಲ್ಲಿ ಗೊಂದಲದ ವಾತಾವರಣ ಮೂಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ

ಮನಸ್ಸು ಚಂಚಲತೆಯಿಂದ ವರ್ತಿಸುತ್ತದೆ, ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಯೋಗ, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮ ಕನಸಿನ ಯೋಜನೆಗೆ ಹಿರಿಯರಿಂದ ವಿರೋಧ ವ್ಯಕ್ತವಾಗುವ ಸಂಭವ ಕಂಡುಬರುತ್ತದೆ. ಮಕ್ಕಳ ಬುದ್ಧಿಮಟ್ಟತೆ ಬೆಳವಣಿಗೆಯಾಗಲು ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇರಾದೆ ವ್ಯಕ್ತಪಡಿಸುತ್ತೀರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕ್ರಿಯಾತ್ಮಕ ಚಟುವಟಿಕೆಗಳಿಂದ ಹಲವಾರು ಅವಕಾಶಗಳನ್ನು ಪಡೆದುಕೊಳ್ಳುವಿರಿ. ಉತ್ತಮ ಸಂವಹನ ಪಟುತ್ವ ನಿಮ್ಮಲಿ ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸಮಾರಂಭಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೆಯೇ ಅದರ ಉಸ್ತುವಾರಿ ಸಹ ನಿಮ್ಮ ವ್ಯವಸ್ಥೆಯಿಂದಲೇ ನಡೆಯಲಿದೆ. ಕುಟುಂಬದಿಂದ ಧಾರ್ಮಿಕ ಆಚರಣೆಗೆ ಅವಕಾಶಗಳು ಸಿಗಲಿದೆ. ಯೋಜನೆಯ ವಿಸ್ತರಣೆಗಾಗಿ ಮಿತ್ರರ ನೆರವು ಪಡೆಯಲಿದ್ದೀರಿ. ಅಪರಿಚಿತರೊಡನೆ ಹೆಚ್ಚು ಕಾಲ ಕಳೆಯುವುದು ಒಳ್ಳೆಯದಲ್ಲ. ನಿಮ್ಮ ಹಳೆಯ ಸಾಲಗಳನ್ನು ತೀರಿಸುವ ಮನಸ್ಸು ಮೂಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಯೋಚನೆ ಮೂಡುತ್ತದೆ. ದಾಂಪತ್ಯದಲ್ಲಿ ಅನುರಾಗ ಬಂಧನ ಕಾಣಬಹುದಾದ ದಿನ. ಎಷ್ಟೇ ಅನುಭವವಿದ್ದರೂ ಕೆಲವೊಮ್ಮೆ ತಪ್ಪುಗಳು ನಡೆಯಬಹುದು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಗುಣ ದೊಡ್ಡದು ಎಂಬುದನ್ನು ಮರೆಯದಿರಿ. ಕುಟುಂಬಸ್ಥರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವಿಸಿ. ವಿನಾಕಾರಣ ನೀವು ವಾದ-ವಿವಾದಗಳಲ್ಲಿ ತೊಡಗಬಹುದಾದ ಸಾಧ್ಯತೆಯಿದೆ, ಆದಷ್ಟು ನಿಮ್ಮ ವ್ಯಕ್ತಿತ್ವ ಉತ್ತಮಮಟ್ಟದಾಗಿ ರೂಪಿಸಿಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ನಿರೀಕ್ಷಿತ ಆರ್ಥಿಕ ಮೂಲಗಳು ಇಂದು ವಿಳಂಬವಾಗುವ ಸಾಧ್ಯತೆ ಕಾಣಬಹುದು. ಉದ್ಯೋಗದ ಬದಲಾವಣೆಯ ಚಿಂತನೆ ಸದ್ಯಕ್ಕೆ ಮಾಡುವುದು ಬೇಡ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಹೆಚ್ಚಿನ ಹಣಕಾಸು ವ್ಯಯ ವಾಗುವ ಸಾಧ್ಯತೆ ಇದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಮಾತಿನಿಂದ ಸೌಧ ನಿರ್ಮಿಸಲು ಸಾಧ್ಯವಿಲ್ಲ ಕೃತಿ ಬಹಳ ಮುಖ್ಯವಾಗಿದ್ದು ಅದನ್ನು ಯಾವಾಗಲೂ ನೆನಪಿಡಿ. ನಿಮ್ಮ ಬೆಳವಣಿಗೆ ಏಕಾಂಗಿಯಾಗಿ ಇರುವುದಿಲ್ಲ ಇನ್ನೊಬ್ಬರ ಬೆಳವಣಿಗೆಯಲ್ಲಿ ನೀವು ಸಹ ಬೆಳೆಯಿರಿ. ನಿಮ್ಮ ಆತ್ಮೀಯರ ಕಷ್ಟಗಳನ್ನು ಕೇಳುವ ವ್ಯವಧಾನ ರೂಢಿಸಿಕೊಳ್ಳಿ ಸಾಧ್ಯವಾದರೆ ಸಹಾಯ ಮಾಡಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಹಣಕಾಸಿನ ಹರಿವು ಉತ್ತಮವಾಗಿದೆ, ಅಪಾತ್ರರಿಗೆ ದಾನ ಮಾಡುವುದು ಒಳ್ಳೆಯದಲ್ಲ. ಹೊಗಳು ಭಟ್ಟರಿಂದ ದೂರವಿರುವುದು ಲೇಸು. ಬಹುನಿರೀಕ್ಷಿತ ಯೋಜನೆಗಳು ಕೈ ಸೇರಬಹುದು ಆದಷ್ಟು ಆಲಸ್ಯತನ ವನ್ನು ತೆಗೆದು ಹಾಕಿ. ಮಡದಿಯ ಸೌಂದರ್ಯಕ್ಕೆ ನೀವು ಆಕರ್ಷಿತರಾಗುವಿರಿ ಅವರ ಮಾತುಗಳನ್ನು ನಿಮ್ಮ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮ ನಿರೀಕ್ಷೆ ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಸಹನೆ ನಿಮ್ಮ ಗೆಲುವಿನ ಮೆಟ್ಟಿಲು ಅದನ್ನು ಜಾಗರೂಕತೆಯಿಂದ ಬಳಸಿಕೊಳ್ಳಿ. ಕೋಪದ ಕೈಗೆ ಬುದ್ಧಿ ನೀಡಬೇಡಿ. ಅಪ್ರಯೋಜಕ ಕೆಲಸಗಳು ಅಥವಾ ನಿಮ್ಮಿಂದ ಆಗದ ಕೆಲಸಗಳನ್ನು ಒಪ್ಪಿಕೊಳ್ಳುವುದು ಬೇಡ. ಯಾವುದೇ ವ್ಯವಹಾರ ವಿರಲಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಇರಲಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಸಾಲ ಕೇಳುವ ಜನರನ್ನು ನಯವಾದ ಮಾತುಗಳಿಂದ ದೂರವಿಡಿ. ಹಣದ ತೋರಿಕೆ ಮುಳುವಾಗಬಹುದು ಎಚ್ಚರಿಕೆ ಇರಲಿ. ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. ಕರೆಮಾಡಿ :9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending