ನಿತ್ಯ ಭವಿಷ್ಯ
ಸೂರ್ಯ ಗ್ರಹಣ ಯಾಕೆ ಆಗುತ್ತದೆ..? ಯಾವ ರಾಶಿಗಳಿಗೆ ಒಳ್ಳೆಯ ಫಲ ಇದೇ ಗೊತ್ತಾ..?
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್ : 996458488
ಡಿಸೆಂಬರ್ 26ರಂದು ಸಂಭವಿಸಲಿರುವ ಸೂರ್ಯಗ್ರಹಣ ಅಪರೂಪದ ಸೂರ್ಯಗ್ರಹಣವಾಗಿದೆ ಇದು ಮಾರ್ಗಶಿರ ಅಮಾವಾಸ್ಯೆಯ ಗುರುವಾರದಂದು ಸಂಭವಿಸಲಿದ್ದು ಭಾರತದ ದಕ್ಷಿಣ ಕಂಕಣ ಸೂರ್ಯಗ್ರಹಣ ಗೋಚರಿಸಿದರೆ ಭಾರತದ ಉಳಿದ ಭಾಗದಲ್ಲಿ ಖಂಡಗ್ರಾಸವಾಗಿರುವುದು. ಇನ್ನು ಕೊಡಗಿನ ಕುಟ್ಟದಲ್ಲಿ ಸಂಪೂರ್ಣ ಸುರ್ಯಗ್ರಹಣ ಗೋಚರಿಸಿರುವುದರಿಂದ ಅಲ್ಲಿ ಸೂರ್ಯಗ್ರಹಣ ನೋಡಲು ಸಕಲ ವ್ಯವಸ್ಥೆ ಮಾಡಲಾಗುತ್ತಿದೆ.
ಸೂರ್ಯಗ್ರಹಣ ಏಕಾಗುತ್ತದೆ?
ಸೂರ್ಯ ಹಾಗೂ ಭೂಮಿಯ ನಡುವೆ ಚಂದ್ರ ಬಂದಾಗ, ಚಂದ್ರನ ನೆರಳು ಭೂಮಿಯ ಮೇಲೆ ಬಿದ್ದು ಸೂರ್ಯನು ಮರೆಯಾಗುವುದನ್ನು ಸೂರ್ಯಗ್ರಹಣ ಎಂದು ಕರೆಯುತ್ತಾರೆ. ಸೂರ್ಯನು ಸಂಪೂರ್ಣವಾಗಿ ಅಗೋಚರವಾಗಿದ್ದರೆ ಖಗ್ರಾಸ ಸೂರ್ಯಗ್ರಹಣವೆಂದು, ಸೂರ್ಯನ ಅರ್ಧದಷ್ಟು ಗೋಚರವಾಗಿದ್ದರೆ ಖಂಡಗ್ರಾಸ ಸೂರ್ಯಗ್ರಹಣ ಎಂದು, ಚಂದ್ರ ಮರೆ ಮಾಡಿದರೂ ಕೂಡ ಸೂರ್ಯನ ಅಂಚುಗಳು ಸುತ್ತಲೂ ಉಂಗುರಾಕಾರದಲ್ಲಿ ಗೋಚರಿಸಿದರೆ ಕಂಕಣ ಸೂರ್ಯಗ್ರಹಣ ಎಂದು ಕರೆಯುತ್ತಾರೆ.
ದಕ್ಷಿಣ ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಗೋಚರಿಸಲಿದೆ
ವರ್ಷಾಂತ್ಯದಲ್ಲಿ ಅಮಾವಾಸ್ಯೆಯೆಂದು ಗೋಚರಿಸಲಿರುವ ಸುರ್ಯಗ್ರಹಣದ ಗ್ರಹಣ ಪರ್ವ ಹಾಗೂ ಈ ಸೂರ್ಯಗ್ರಹಣ ಯಾವ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ಪಂಚಾಂಗದ ಆಧಾರದಲ್ಲಿ ಹೇಳಲಾಗಿದೆ ನೋಡಿ:
ಗ್ರಹಣ ಪರ್ವ (ಗ್ರಹಣ ಶುರುವಾಗಿ ಮೋಕ್ಷದವರಗಿನ ಕಾಲಾವಧಿ)
ಗ್ರಹಣದ ಆರಂಭ: ಬೆಳಗ್ಗೆ 8.8ರಿಂದ ಪ್ರಾರಂಭವಾಗುತ್ತದೆ
ಪೂರ್ಣ ಪ್ರಮಾಣದ ಸೂರ್ಯಗ್ರಹಣ 9.31
ಗ್ರಹಣದ ಅಂತ್ಯ: ಬೆಳಗ್ಗೆ 11.8ಕ್ಕೆ
ಪರ್ವ ಎಂದರೆ ಪುಣ್ಯಕಾಲ ಎಂದರ್ಥ. ಈ ಸಮಯದಲ್ಲಿ ದೇವರನ್ನು ಸ್ಮರಿಸುವುದರಿಂದ ಅನೇಕ ಆಧ್ಯಾತ್ಮಿಕ ಲಾಭಗಳಾಗುತ್ತವೆ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ದೇವರ ಧ್ಯಾನ ಮಾಡುವುದು ಒಳ್ಳೆಯದು.
ಆಹಾರ ಸೇವನೆ, ನೀರು ಕುಡಿಯುವುದು, ಮೂತ್ರ, ಮಲ ವಿಸರ್ಜನೆಗೆ ಹೋಗುವುದು, ಹೆಣ್ಣು-ಗಂಡು ಕೂಡುವುದು ಮಾಡಬಾರದು. ಗ್ರಹಣದ ನಂತರ ಆಹಾರವನ್ನು ಮಾಡಿ ಸೇವಿಸಬೇಕು.
ಅದರ ಮೊದಲು ಮಾಡಿಟ್ಟ ಆಹಾರವನ್ನು ತಿನ್ನಬಾರದು, ಈ ಸಮಯದಲ್ಲಿ ವಾತಾವರಣ ಕೂಡ ಕಲುಷಿತವಾಗುವುದರಿಂದ ಗ್ರಹಣಕ್ಕೆ ಮುನ್ನ ಮಾಡಿಟ್ಟ ಆಹಾರ ಸೇವನೆ ಮಾಡಿದರೆ ಅನಾರೋಗ್ಯ ಉಂಟಾಗುತ್ತದೆ.
ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ?
26 ಡಿಸೆಂಬರ್ 2019 ರಂದು ಸಂಭವಿಸಲಿರುವ ಷಷ್ಠಿ ಗ್ರಹ ಕೂಟ ಸೂರ್ಯ ಗ್ರಹಣ ದಿಂದ ಯಾವ ಯಾವ ರಾಶಿಯವರಿಗೆ ಶುಭ ಅಶುಭ ಫಲಗಳು ಲಭಿಸಲಿದೆ ಹಾಗೂ ಗ್ರಹಣದ ಸಮಯದಲ್ಲಿ ಪಾಲಿಸಬೇಕಾದ ನಿಯಮಗಳು ಏನು ಈ ಎಲ್ಲಾ ಮಾಹಿತಿಯನ್ನು ನೋಡೋಣ ಬನ್ನಿ.
ವಿಕಾರಿ ನಾಮ ಸಂವತ್ಸರ ಉತ್ತರಾಯಣ ಹೇಮಂತ ಋತು ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನ ಸೂರ್ಯಗ್ರಹಣ ಧನಸ್ಸು ರಾಶಿಯ ಮೂಲ ನಕ್ಷತ್ರದಲ್ಲಿ ಸಂಭವಿಸಲಿದೆ. ಈ ಸೂರ್ಯಗ್ರಹಣ ಕೆಲ ರಾಶಿಗಳಿಗೆ ಶುಭ ತಂದರೆ, ಮತ್ತೆ ಕೆಲ ರಾಶಿಗೆ ಅಷ್ಟು ಒಳ್ಳೆಯದಲ್ಲ, ಇನ್ನು ಕೆಲ ರಾಶಿಗಳಿಗೆ ಮಿಶ್ರಫಲ ನೀಡುವುದು. ಯಾವ ರಾಶಿಗೆ ಅಶುಭ ಉಂಟು ಮಾಡುತ್ತದೆಯೋ ಆ ರಾಶಿಯವರು ಸೂರ್ಯಗ್ರಹಣ ನೋಡಬಾರದು. ಅವರು ದೇವರ ಪ್ರಾರ್ಥನೆಯಲ್ಲಿ ಕಾಲ ಕಳೆದರೆ ಒಳ್ಳೆಯದೆಂದು ಜ್ಯೋತಿಷ್ಯಶಾಸ್ತ್ರ ಹೇಳಿದೆ.
ಯಾವ ರಾಶಿಗೆ ಒಳ್ಳೆಯದು
ಕಟಕ ರಾಶಿ, ತುಲಾ ರಾಶಿ, ಮೀನಾ ರಾಶಿ ಮತ್ತು ಕುಂಭ ರಾಶಿ ಈ ರಾಶಿಗಳಿಗೆ ಹೆಚ್ಚಿನ ಶುಭ ಫಲಗಳು ಬೀರಲಿದೆ ಗ್ರಹಣದ ಪರ್ವ ಕಾಲದಲ್ಲಿ ಈ ನಾಲ್ಕು ರಾಶಿಯವರು ತಪ್ಪದೆ ಸೂರ್ಯ ಗ್ರಹಣದ ಶಾಂತಿ ಮಂತ್ರ ಜಪಿಸಿ ಹೆಚ್ಚಿನ ಶುಭ ಫಲ ಲಭಿಸುವುದು.
ಯಾವ ರಾಶಿಗೆ ಮಿಶ್ರಫಲ
ಮೇಷ ರಾಶಿ, ಮಿಥುನ ರಾಶಿ, ಸಿಂಹ ರಾಶಿ ಮತ್ತು ವೃಶ್ಚಿಕ ರಾಶಿ ಈ ರಾಶಿಗಳಿಗೆ ಮಧ್ಯಮ ಅಂದರೆ ಸಮ್ಮಿಶ್ರ ಫಲಗಳು ಲಭಿಸುವುದು ಗ್ರಹಣದ ಪರ್ವ ಕಾಲದಲ್ಲಿ ಇವರು ಸಹಾ ಶಾಂತಿ ಮಂತ್ರವನ್ನು ಜಪಮಾಡಬೇಕು. ಫಲ ತಾಂಬೂಲ ದಕ್ಷಿಣ ಸಹಿತ ಗೋಧಿಯನ್ನು ಪೂಜ್ಯರಿಗೆ ದಾನ ಮಾಡಬೇಕು ಹೀಗೆ ಮಾಡಿದರೆ ದೋಷ ನಿವಾರಣೆ ಆಗುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ8 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


