Connect with us

ದಿನದ ಸುದ್ದಿ

ನಾಳೆ ಮೋದಿ‌ಸರ್ಕಾರದ ಎರಡನೇ ಕೇಂದ್ರ ಬಜೆಟ್ ಮಂಡನೆ

Published

on

ಸುದ್ದಿದಿನ,ದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಾಳೆ 2020–21ನೇ ಹಣಕಾಸು ವರ್ಷದ ಬಜೆಟ್‌ ಮಂಡನೆ ಮಾಡಲಿದ್ದಾರೆ. ಜನಸಾಮಾನ್ಯರು, ಉದ್ಯಮಿಗಳು, ರಿಯಲ್‌ ಎಸ್ಟೇಟ್‌ ವಹಿವಾಟುದಾರರಲ್ಲಿ ಬಜೆಟ್​ ಕುತೂಹಲ ಹೆಚ್ಚಿಸಿದೆ.

ದೇಶಿ ಆರ್ಥಿಕತೆಯು 11 ವರ್ಷಗಳಲ್ಲಿಯೇ ಕನಿಷ್ಠ ಮಟ್ಟದ (ಶೇ 5) ಪ್ರಗತಿ ಸಾಧಿಸಿದೆ. ನಿರ್ಮಲಾ ಅವರು ತಮ್ಮ ಎರಡನೇ ಬಜೆಟ್‌ನಲ್ಲಿ ಯಾವ ಮಂತ್ರದಂಡ ಬಳಸಲಿದ್ದಾರೆ ಅನ್ನೋ ಕುತೂಹಲ ಇದೆ. ಆರ್ಥಿಕ ವೃದ್ಧಿ ದರ (ಜಿಡಿಪಿ), ರಫ್ತು, ಬಂಡವಾಳ ಹೂಡಿಕೆ, ಸರಕು ಮತ್ತು ಸೇವೆಗಳ ಬೇಡಿಕೆ, ವಾಹನಗಳ ಮಾರಾಟ, ಉದ್ಯೋಗ ಅವಕಾಶ ಮುಂತಾದ ವಲಯಗಳು ಕಳಪೆ ಸಾಧನೆ ಪ್ರದರ್ಶಿಸುತ್ತಿವೆ.

ಬಳಕೆ ಹೆಚ್ಚಿಸಿ ಆರ್ಥಿಕತೆಗೆ ಚೇತರಿಕೆ ನೀಡಲು ಮೂಲ ಸೌಕರ್ಯ ವಲಯದ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಬೇಕಿದೆ. ಮತ್ತೊಂದೆಡೆ ಆದಾಯ ತೆರಿಗೆಯ ಸ್ಲಾಬ್​ಗಳಲ್ಲಿ ಬದಲಾವಣೆಯನ್ನೂ ನಿರೀಕ್ಷೆ ಮಾಡಲಾಗ್ತಿದೆ. ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು 5 ಲಕ್ಷಕ್ಕೆ ಮಿತಿಗೊಳಿಸುವ ನಿರೀಕ್ಷೆಗಳು ಹೆಚ್ಚಿವೆ.

ಇದಲ್ಲದೇ ಷೇರು ಹೂಡಿಕೆ ಮೇಲಿನ ತೆರಿಗೆಗಳಲ್ಲೂ ಸಡಿಲಿಕೆ ಆಗುವ ಸಾಧ್ಯತೆಗಳಿವೆ. ಕರ್ನಾಟಕಕ್ಕೆ ಕೇಂದ್ರ ಬಜೆಟ್​ನಲ್ಲಿ ಏನೇನು ಸಿಗಬಹುದು ಅನ್ನೋ ಕುತೂಹಲ ಇದ್ದೇ ಇದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಅನುದಾನ, ರೈಲ್ವೆ ಮಾರ್ಗಗಳು, ಹೊಸ ರೈಲುಗಳು ಹೀಗೆ ನಾನಾ ನಿರೀಕ್ಷೆಗಳನ್ನು ಕರ್ನಾಟಕದ ಜನರು ಇಟ್ಟುಕೊಂಡಿದ್ದಾರೆ.

ಲೋಕ ಸಭೆಯ ಈ‌ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಾಳೆ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಿಸಿ

https://loksabha.nic.in/

ಪ್ರಮುಖ ಅಂಶಗಳು

  • ನಾಳೆ ಕೇಂದ್ರ ಸರ್ಕಾರದ ಬಜೆಟ್ 2020 ಮಂಡನೆ.
  • ಮೋದಿ ಸರ್ಕಾರದ 2ನೇ ಅವಧಿಯ ಮೊದಲ ಪೂರ್ಣಪ್ರಮಾಣದ ಬಜೆಟ್.
  • ಬಜೆಟ್ ಮಂಡನೆ ಮಾಡಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
    ನಾಳೆ ಬೆಳಗ್ಗೆ 11 ಗಂಟೆಗೆ ಮುಂಗಡ ಪತ್ರ ಓದಲು ಆರಂಭ.
  • 2ನೇ ಬಜೆಟ್ ಮಂಡನೆ ಮಾಡಲಿರುವ ನಿರ್ಮಲಾ ಸೀತಾರಾಮನ್​.
  • ಇಂದು ಕೃಷ್ಣಮೂರ್ತಿ ಸುಬ್ರಮಣಿಯನ್ ದೇಶದ ಆರ್ಥಿಕ ಸಮೀಕ್ಷೆ ಪ್ರಕಟ.
  • ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್.
  • ಕೇಂದ್ರ ಬಜೆಟ್ ಎಂದರೆ ಆಯವ್ಯಯ ಪತ್ರ ಅಥವಾ ಮುಂಗಡ ಪತ್ರ.
  • 2020 ಏಪ್ರಿಲ್ 1ರಿಂದ 2021 ಮಾರ್ಚ್ 31ರ ಅವಧಿಯವರೆಗಿನ ಬಜೆಟ್​.
  • ಸರ್ಕಾರದ ಎಲ್ಲಾ ಆದಾಯಮೂಲಗಳಿಂದ ಬರುವ ಆದಾಯಗಳ ವಿವರ.
  • 5 ಲಕ್ಷದವರೆಗೆ ಆದಾಯ ಹೊಂದಿರುವವರನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿರಿಸಲು ಚಿಂತನೆ.
  • ಬಜೆಟ್​ನಿಂದ ದೇಶದ ಕೃಷಿ ಕ್ಷೇತ್ರದಲ್ಲಿ ಹೆಚ್ಚಾದ ನಿರೀಕ್ಷೆಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending