ನಿತ್ಯ ಭವಿಷ್ಯ
ಸಮಸ್ಯೆಗಳ ಪರಿಹಾರ ಮಾರ್ಗ : ಕರೆಮಾಡಿ | 03-02-2020 ಸೋಮವಾರ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9964584883
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883
ಮೇಷ ರಾಶಿ
ಕಾರ್ಯಕ್ಷೇತ್ರದಲ್ಲಿ ಕೀರ್ತಿಶಾಲಿಗಳಾಗುವಿರಿ. ಹಾಗೇ ಆತ್ಮೀಯರ ಸಲಹೆ, ಸಹಕಾರಗಳು ಮುನ್ನಡೆಗೆ ಸಾಧಕವಾಗಲಿದೆ. ಋಣ ಪರಿಹಾರದ ಚಿಂತೆ ನಿವಾರಣೆಯಾದೀತು. ಸಾಂಸಾರಿಕವಾಗಿ ಕಾಲೋಚಿತವಾದ ವರ್ತನೆ, ನಡೆನುಡಿ ನಿಮ್ಮ ಸ್ಥಾನಮಾನ, ವರ್ತನೆಯನ್ನು ವರ್ಧಿಸೀತು. ವ್ಯಾಪಾರಿ ವರ್ಗದವರಿಗೆ, ಬ್ಯಾಂಕಿಂಗ್ ಉದ್ಯಮಗಳಲ್ಲಿ ಶ್ರಮಕ್ಕೆ ತಕ್ಕುದಾದ ಆದಾಯ ಲಾಭದಾಯಕವಾಗಲಿದೆ. ಮನೆಯಲ್ಲಿ ಮಂಗಲ ಮಹೋತ್ಸವ ಸಂಭ್ರಮದ ಚಿಂತೆ ಕಾರ್ಯಗತವಾಗಲಿದೆ. ವಿದ್ಯಾರ್ಥಿಗಳ ಮನೋಕಾಮನೆ ಪೂರ್ಣವಾಗಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಷಭ ರಾಶಿ
ಕಾರ್ಯರಂಗದಲ್ಲಿ ನೀವೀಗ ತುಂಬಾ ಕ್ಲೇಶವನ್ನು ಅನುಭವಿಸಲಿದ್ದೀರಿ. ಆರೋಗ್ಯ ಹೀನತೆ ಒಂದೆಡೆಯಾದರೆ, ಎಣಿಕೆ ಎಲ್ಲಾ ವಿಫಲವಾಗಿ, ಪೌರುಷದ ಬಗ್ಗೆ ತಾತ್ಸಾರವೂ ಮೂಡೀತು. ವಿದ್ಯಾಭ್ಯಾಸದಲ್ಲಿ ಅಪಯಶಸ್ಸು, ಸಾಧನೆಗಾಗಿ ಹಿರಿಯರ ಭತ್ಸನೆ ಕೇಳಬೇಕಾದೀತು. ಉದ್ಯೋಗಿಗಳಿಗೆ ದೂರಕ್ಕೆ ವರ್ಗಾವಣೆಯ ಸುದ್ದಿ ಕೇಳಿಸಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಪರಿಶ್ರಮವು ಅಗತ್ಯವಿದೆ. ಆರ್ಥಿಕವಾಗಿ ಖರ್ಚು-ವೆಚ್ಚಗಳೇ ಅಧಿಕವಾದಾವು. ಆದರೂ ನಾನಾ ರೀತಿಯ ಧನಾಗಮನದಿಂದ ಅನುಕೂಲವಾಗುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಿಥುನ ರಾಶಿ
ಸಾರ್ಥಕತೆಯಿಂದ ಶತ್ರು ಭಯ ನಿವಾರಣೆಯಾದರೂ ಹಿತಶತ್ರುಗಳ ಬಾಧೆ ಬಿಡದು. ಆರ್ಥಿಕವಾಗಿ ಯಾರಿಗೂ ಸಾಲ ನೀಡದಿರಿ. ಆಗಾಗ ವ್ಯಯಾಧಿಕ್ಯವಾಗಿ ವ್ಯಾಪಾರಗಳಲ್ಲಿ ಹೊಸ ಹೂಡಿಕೆಯಿಂದ ಅಲ್ಪಸ್ವಲ್ಪ ಆದಾಯವನ್ನು ತಂದುಕೊಟ್ಟಿತು. ಪತ್ನಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದೀತು. ವೈಯಕ್ತಿಕವಾಗಿ ರಸಮಯ ಕ್ಷಣವಿದೆ. ನ್ಯಾಯಾಲಯದ ವಿವಾದಗಳು ಸದ್ಯಕ್ಕೆ ಮುಕ್ತಾಯಗೊಳ್ಳುವ ಲಕ್ಷಣಗಳು ತೋರಿಬರಲಾರದು. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ನಿರಾಸೆ ತಂದೀತು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕರ್ಕಾಟಕ ರಾಶಿ
ಈ ವಾರವು ಕೊಂಚ ಆಶಾದಾಯಕವಾದೀತು. ವೃತ್ತಿರಂಗದಲ್ಲಿ ತಾತ್ಕಾಲಿಕ ಸ್ಥಾನಮಾನ ದೊರೆತು ನೆಮ್ಮದಿ ತಂದೀತು. ಕ್ರೀಡಾರಂಗದಲ್ಲಿ ಕ್ರೀಡಾಕಾರರಿಗೆ ವಂಚನೆಯ ಆರೋಪ, ಪ್ರತ್ಯಾರೋಪಗಳು ತೋರಿಬಂದಾವು. ಕಳೆದುದನ್ನು ಗಳಿಸುವ ಪ್ರಯತ್ನ ಸಾಗಲಿ. ತೃಪ್ತಿ ಸಿಕ್ಕೀತು. ಮಾತೃಸೇವಾ, ಶುಶ್ರೂಷೆಗಾಗಿ ಖರ್ಚು ತರಲಿದೆ. ಆರೋಗ್ಯ ಭಾಗ್ಯ ಸುಧಾರಿಸಿದರೂ ಉದಾಸೀನತೆ ಮಾಡದಿರಿ. ಸಾಂಸಾರಿಕವಾಗಿ ಹುಸಿ ಅಪವಾದ ಚಿಂತೆ ಕಾಡೀತು. ನೂತನ ವಸ್ತುಗಳ ಖರೀದಿ, ಧನಹಾನಿ ತಂದುಕೊಡಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಿಂಹ ರಾಶಿ
ನಿರೀಕ್ಷಿತ ಸ್ಥಾನವಲ್ಲದಿದ್ದರೂ ಸ್ಥಿತಿಗೆ ಮೋಸವಿಲ್ಲ. ಸಹೋದ್ಯೋಗಿಗಳೊಂದಿಗೆ ಅನಾವಶ್ಯಕ ನಿಷ್ಠುರಕ್ಕೆ ಕಾರಣರಾಗದಿರಿ. ಕಾಳಜಿ ವಹಿಸಿರಿ. ಕೈಗಾರಿಕೆ, ಬ್ಯಾಂಕಿಂಗ್ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮುಂಭಡ್ತಿಯ ಯೋಗವಿದೆ. ಧನಭಾಗ್ಯ ವೃದ್ಧಿಯಾಗಲಿದೆ. ಶುಭಕಾರ್ಯದ ಸಮಾಲೋಚನೆಗಳು ಮನೆಯಲ್ಲಿ ನಡೆದಾವು. ನ್ಯಾಯಾಲಯದ ಕಡತಗಳ ವಿಲೇವಾರಿಯಲ್ಲಿ ವಿಳಂಬ ತೋರಿ ಬಂದರೂ ಸದ್ಯದಲ್ಲೇ ಮುಕ್ತಾಯ ಹಂತವನ್ನು ತಲುಪಲಿದೆ. ವಿದ್ಯಾರ್ಥಿಗಳು ಸಮಸ್ಯೆಗಳಿಂದ ಪಾರಾಗಿ ನೆಮ್ಮದಿ ಪಡೆಯಲಿದ್ದಾರೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕನ್ಯಾ ರಾಶಿ
ಗೃಹದಲ್ಲಿ ಗೃಹಿಣಿಯ ಬೇಡಿಕೆಗೆ ಸ್ಪಂದಿಸಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿಯು ತೋರಿಬಂದರೂ ಆಗಾಗ ಮುಜು ಗರವನ್ನು ಅನುಭವಿಸುವಂತಾದೀತು. ಹೊಸ ಹೂಡಿಕೆಗೆ ಇದು ಸಕಾಲವಲ್ಲ. ಗೆಳೆತನದಲ್ಲಿ ವಿರಸ ಮೂಡೀತು. ವ್ಯರ್ಥ ದುರಭಿಮಾನಕ್ಕೆ ಒಳಗಾಗಿ ಉನ್ನತಿಯನ್ನು ಕಳೆದುಕೊಂಡೀರಿ. ಜಾಗ್ರತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಲಾಭದಿಂದ ಕೊಂಚ ಆಸರೆ ಕಂಡೀತು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಯಶಸ್ಸು, ಸಾಧನೆ ತರಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ತುಲಾ ರಾಶಿ
ಸ್ವತಂತ್ರ ಉದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಇದ್ದರೆ ಮೂಲಧನ ಇಮ್ಮಡಿಯಾದೀತು. ಆಗಾಗ ತೋರಿಬರುವ ಕಾರ್ಯಸಾಧನೆಯ ಅಡ್ಡಿಯನ್ನು ನಿವಾರಿಸಿಕೊಳ್ಳಿರಿ. ಬೇಡಿಕೆ, ಈಡೇರಿಕೆಗಳ ತಾಕಲಾಟದಿಂದ ಕಿರಿಕಿರಿ ತಂದೀತು. ಕೌಟುಂಬಿಕವಾಗಿ ಆಕ್ಷೇಪ, ಭಿನ್ನಾಭಿಪ್ರಾಯದಿಂದ ಮನೋವ್ಯಾಕುಲ ಹೆಚ್ಚಲಿದೆ. ಹಿರಿಯರ ಸಲಹೆಗೆ ಕಿವಿಗೊಡಿರಿ. ಸಮಾಧಾನವಾಗಲಿದೆ. ಉದ್ಯೋಗಿಗಳಿಗೆ ವಾರಾಂತ್ಯದಲ್ಲಿ ಸ್ಥಾನ ಬದಲಾವಣೆ ಸೂಚನೆ ತಂದೀತು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಶ್ಚಿಕ ರಾಶಿ
ಹೊಸ ಯೋಜನೆಯ ಯೋಚನೆ ಕಾರ್ಯಗತವಾಗಲಿದೆ.ಅತಿಥಿ ಅಭ್ಯಾಗತರ ಆಗಮನದಿಂದ ಮನಸ್ಸಿಗೆ ಶಾಂತಿಯಿದೆ. ವಿವೇಚನೆಯಿಂದ ಕಾರ್ಯವೆಸಗಿರಿ. ಜಯ ನಿಮ್ಮ ಪಾಲಿಗಿದೆ. ಹಾಗೇ ಅದೃಷ್ಟ ಅನುಕೂಲವೂ ಇದೆ. ನೂತನ ಧನಾದಾಯದ ಮೂಲಕ ಧನಾಭಿವೃದ್ಧಿ ತಂದೀತು. ನೂತನ ವಸ್ತ್ರಾಭರಣ ಯಾ ನಿವೇಶನ ಖರೀದಿಯಿಂದ ಸಂತಸ ತಂದೀತು. ರಾಜಕೀಯ ರಂಗದಾಟದಲ್ಲಿ ದಾಳ ಉರುಳಿದ್ದೇ ಗೊತ್ತಾಗದು. ಸ್ವರ್ಣ, ಲೋಹ, ಗೃಹೋಪಕರಣಗಳ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಧನುಸ್ಸು ರಾಶಿ
ಆರ್ಥಿಕವಾಗಿ ಆಗಾಗ ಹಿನ್ನಡೆ ತೋರಿಬಂದು ಸಮಸ್ಯೆಗಳು ಎದುರಾಗಲಿವೆ. ದುಡುಕು ನಿರ್ಧಾರದಿಂದ ಅನಾವಶ್ಯಕ ಕಿರಿಕಿರಿಯನ್ನು ಅನುಭವಿಸಲಿದ್ದೀರಿ. ಕಾಳಜಿ ವಹಿಸಿರಿ. ಕಾಲೋಚಿತವಾದ ನಡೆ-ನುಡಿ ನಿಮ್ಮ ಗಮನದಲ್ಲಿ ಇರಿಸಿಕೊಳ್ಳಿರಿ. ಕಾರ್ಯರಂಗದಲ್ಲಿ ಅವಿರತವಾಗಿ ಚಟುವಟಿಕೆ ದೇಹಾರೋಗ್ಯದಲ್ಲಿ ಪರಿಣಾಮ ತಂದೀತು. ಉದ್ಯೋಗಿಗಳಿಗೆ ವರ್ಗಾವಣೆಯಕಹಿಸುದ್ದಿ ಆತಂಕ ತಂದೀತು. ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬಂದು ಹಿನ್ನಡೆಯನ್ನು ಪಡೆಯುವಂತಾದೀತು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಕರ ರಾಶಿ
ಆರ್ಥಿಕವಾಗಿ ನಿಮ್ಮ ಪರಿಸ್ಥಿತಿಯು ಸುಧಾರಿಸಿ ಹೋಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸಲಾಗುವುದಿಲ್ಲ. ಹಿರಿಯರ ಮಾತಿಗೆ ಬೆಲೆ ಇರಲಿ. ತಾಳ್ಮೆ, ಎಚ್ಚರಿಕೆಯಿಂದ ಹೊಸ ಕಾರ್ಯದಲ್ಲಿ ಹೆಜ್ಜೆ ಇರಿಸುವುದು ಅಗತ್ಯವಿದೆ. ಸಹೋದ್ಯೋಗಿಗಳ ದುವ್ಯವಹಾರ ಮುಂದಿನ ಅಭಿವೃದ್ಧಿಗೆ ಮಾರಕವಾದೀತು. ಎಚ್ಚರವಿರಲಿ. ಅವಿರತವಾದ ಸಂಚಾರ ದೇಹಾಯಾಸಕ್ಕೆ ಕಾರಣವಾಗಲಿದೆ. ಮನದಿನಿಯನ ಮನವರಿತು ನಡೆವ ಗೃಹಿಣಿಗೆ ಹಿಗ್ಗಿನ ಸುದ್ದಿ ಕಾದಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕುಂಭ ರಾಶಿ
ಶುಭದ ಆಶಾಕಿರಣ ತೋರಿಬರಲಿದೆ. ಆರೋಗ್ಯಭಾಗ್ಯ ವರ್ಧಿಸಲಿದೆ. ಎಚ್ಚರಿಕೆಯಿಂದ ಹೆಜ್ಜೆ ಇರಿಸಿದಲ್ಲಿ ಖರ್ಚುವೆಚ್ಚವೂ ಸಮತೋಲನದಲ್ಲಿ ಇದ್ದೀತು. ಯಾತ್ರೆ, ಪ್ರವಾಸಧರ್ಮ ಕಾರ್ಯಗಳು ನಡೆದಾವು. ಅವಿವಾಹಿತರ ನೆಂಟಸ್ತಿಕೆಯ ವಿಚಾರದಲ್ಲಿ ಮಧ್ಯವರ್ತಿಗಳ ಸಹಕಾರದ ಅಗತ್ಯವಿದೆ. ಸ್ಥಗಿತಗೊಂಡ ಕಾರ್ಯಕ್ಕೆ ಪುನಃ ಚಾಲನೆ ದೊರೆತು, ಸಂತಸ ತಂದೀತು. ವಿದ್ಯಾರ್ಥಿಗಳ ಅಭ್ಯಾಸಬಲ ಸಫಲವಾದರೂ ಆಗಾಗ ಉದಾಸೀನತೆ ಕಾಡಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮೀನ ರಾಶಿ
ಎಡರುತೊಡರುಗಳಿದ್ದರೂ ಹಂತ ಹಂತವಾಗಿ ನವಚೈತನ್ಯ ಉಂಟಾಗಲಿದೆ. ಅತಿಥಿ ಅಭ್ಯಾಗತರ ಆಗಮನ, ನೆರೆಹೊರೆಯವರಿಂದ ದ್ವೇಷ ಸಾಧನೆ, ನೂತನ ಬಾಂಧವ್ಯ ವೃದ್ಧಿ ಮುಂತಾದ ಮಿಶ್ರಫಲ ತಂದೀತು. ಕಾರ್ಯರಂಗದಲ್ಲಿ ನಿಮ್ಮ ಕಾರ್ಯವೈಖರಿ ಇತರರಿಗೆ ಅಸೂಯೆಗೆ ದಾರಿ ಮಾಡೀತು. ವಿವಿಧ ಮೂಲಗಳಿಂದ ಧನಾಗಮನವಿದ್ದು ಆದಾಯಕ್ಕೆ ಕೊರತೆ ಬಾರದು. ಸಾಮರ್ಥ್ಯದಲ್ಲಿ ವಿಶ್ವಾಸವಿಡಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9964584883

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


