Connect with us

ದಿನದ ಸುದ್ದಿ

ಇದೊಂದು ‘’ಅಡ್ಡಕಸುಬಿ’’ ಬಜೆಟ್‌ : ಸಿದ್ದರಾಮಯ್ಯ ಟೀಕೆ

Published

on

ಸುದ್ದಿದಿನ,ಬೆಂಗಳೂರು : ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಕಾರ್ಯ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘’ಅಡ್ಡಕಸುಬಿ’’ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಗಣಿತವೂ ಇಲ್ಲ, ವೃತ್ತಿಪರತೆಯೂ ಇಲ್ಲ. ಎಲ್ಲವೂ ಅಸ್ಪಷ್ಟ, ಗೊಂದಲಮಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುರುವಾರ ಮುಖ್ಯ ಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ಉದ್ದೇಶಿಸಿ ಪ್ರತಿಕ್ರಿಯೆ ನೀಡಿದ ಅವರು, 2013ರ ನನ್ನ ಮೊದಲ ಬಜೆಟ್ ಹಾಗೂ 2018ರ ಕೊನೆಯ ಬಜೆಟ್‌ ಗಾತ್ರದ ನಡುವಿನ ವ್ಯತ್ಯಾಸ ರೂ.1.16.000 ಕೋಟಿ. ಈ ಬಾರಿಯ ಬಜೆಟ್ ಗಾತ್ರ ಹಿಂದಿನ ಬಜೆಟ್‌ಗಿಂತ ಕೇವಲ ರೂ.4.000 ಕೋಟಿ ಹೆಚ್ಚಿದೆ ಅಂದರೆ 1.5% ಹೆಚ್ಚಾಗಿದೆ ಅಷ್ಟೆ. ಹೀಗಾದಾಗ ಎಲ್ಲಾ ವಲಯಗಳ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ನೀಡಲು ಸಾಧ್ಯವಿಲ್ಲ. 14ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ರಾಜ್ಯಕ್ಕೆ 4.71% ಅನುದಾನ ಹಂಚಿಕೆಯಾಗಿತ್ತು. ಇತ್ತೀಚೆಗೆ ಮಂಡಿಸಲಾದ 15ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ಹಂಚಿಕೆ ಪಾಲು 3.64%ಗೆ ಇಳಿಕೆಯಾಗಿದೆ. ಇದರಿಂದ ರೂ.11,215 ಕೋಟಿ ನಷ್ಟವಾಗಿದೆ. ಯಡಿಯೂರಪ್ಪ ಅವರು ಎಲ್ಲದಕ್ಕೂ ಬಜೆಟ್ ಮೂಲಕ ಉತ್ತರಿಸುತ್ತೇನೆ ಅಂತಿದ್ರು, ಈಗೇನು ಹೇಳ್ತಾರೆ? ಎಂದು ಪ್ರಶ್ನಿಸಿದರು.

ಮಹದಾಯಿ ಯೋಜನೆಗೆ ರೂ.500 ಕೋಟಿ, ಎತ್ತಿನಹೊಳೆ ಯೋಜನೆಗೆ ರೂ.1,500 ಕೋಟಿ, ತುಂಗಭದ್ರಾ ಜಲಾಶಯದ ಹೂಳೆತ್ತಲು ರೂ.20 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್‍ನಲ್ಲಿ ಹೇಳಲಾಗಿದೆ. ರಾಜ್ಯದ ಎರಡು ಜೀವನದಿಗಳಾದ ಕೃಷ್ಣ ಮೇಲ್ದಂಡೆ ಮತ್ತು ಕಾವೇರಿ ನದಿ ಯೋಜನೆಗಳ ಅನುದಾನದ ಬಗ್ಗೆ ಬಜೆಟ್‍ನಲ್ಲಿ ಯಾವ ಉಲ್ಲೇಖವು ಇಲ್ಲ. ಪ್ರಸಕ್ತ ಬಜೆಟ್‌ನಲ್ಲಿ ರೈತರ ಸಾಲಮನ್ನಾದ ಬಗ್ಗೆ ಒಂದಕ್ಷರವೂ ಮಾಹಿತಿ ಇಲ್ಲ. ಹಿಂದಿನ ಸಮ್ಮಿಶ್ರ ಸರ್ಕಾರ ಹಂತ ಹಂತವಾಗಿ ಸಾಲ ಮನ್ನಾ ಮಾಡುವ ಘೋಷಣೆ ಮಾಡಿತ್ತು, ಅದರ ಬಗ್ಗೆ ಕನಿಷ್ಠ ಮಾಹಿತಿಯನ್ನಾದರೂ ನೀಡಬೇಕಲ್ಲವೇ? 2018ರ ಬಜೆಟ್‌ನಲ್ಲಿ ನಾನು ಕೃಷಿ, ತೋಟಗಾರಿಕೆ, ನೀರಾವರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಒಟ್ಟು ರೂ.38,073 ಕೋಟಿ ಅನುದಾನ ಮೀಸಲಿಟ್ಟಿದ್ದೆ. ಪ್ರಸಕ್ತ ಬಜೆಟ್‌ನಲ್ಲಿ ಇದನ್ನು ರೂ.32,259 ಕೋಟಿಗೆ ಇಳಿಕೆ ಮಾಡಲಾಗಿದೆ. ಹಾಗಿದ್ದರೆ, ಇದು ಹೇಗೆ ರೈತಪರ ಬಜೆಟ್ ಆಗಲು ಸಾಧ್ಯ? ಎಂದರು.

ಶಿಕ್ಷಣ ಕ್ಷೇತ್ರಕ್ಕೆ 2018-19ರಲ್ಲಿ ರೂ.26,864 ಕೋಟಿ ಮೀಸಲಿರಿಸಿದ್ದೆ. ಅಂದರೆ ಒಟ್ಟಾರೆ ಬಜೆಟ್‍ನ ಶೇ.12 ಪಾಲು ಇತ್ತು. ಈ ಬಾರಿ ರೂ.29,768 ಕೋಟಿ ಮೀಸಲಿಡಲಾಗಿದೆ. ಅಂದರೆ ಶೇ.11 ಮಾತ್ರ. ಹಿಂದಿಗಿಂತ ಶೇ.1 ರಷ್ಟು ಕಡಿಮೆ ಮಾಡಲಾಗಿದೆ. ಈ ಅನುದಾನ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣಬೇಕೆ ಹೊರತು ಕಡಿಮೆಯಾಗಬಾರದು. ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಕಳೆದ ಬಾರಿ ರೂ.30,150 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ರೂ.26,131 ಕೋಟಿ ನೀಡಲಾಗಿದೆ. ಸುಮಾರು ರೂ.4000 ಕೋಟಿ ಅನುದಾನ ಕಡಿಮೆಯಾಗಿದೆ. ಬಜೆಟ್ ಗಾತ್ರ ಹೆಚ್ಚಾದಂತೆ ಈ ಅನುದಾನದ ಗಾತ್ರ ಕೂಡ ಹೆಚ್ಚಾಗಬೇಕು. ಇದು ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂಬುದನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

‘ಸಬ್ ಕ ಸಾಥ್, ಸಬ್ ಕ ವಿಕಾಸ್’ ಎನ್ನುವ ಬಿಜೆಪಿ ನಾಯಕರು ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. 5 ಅಲ್ಪಸಂಖ್ಯಾತ ವಸತಿ ಶಾಲೆಗಳ ಅಭಿವೃದ್ಧಿಪಡಿಸುವ ಯೋಜನೆ ಹೊರತುಪಡಿಸಿದರೆ ಈ ಸಮುದಾಯದ ಅಭಿವೃದ್ಧಿಗೆ ಬೇರೆಲ್ಲೂ ನಯಾಪೈಸೆ ಅನುದಾನ ನೀಡುವ ಕುರಿತು ಬಜೆಟ್‌ನಲ್ಲಿ ತಿಳಿಸಿಲ್ಲ. ಬಿಜೆಪಿ ಸರ್ಕಾರದ ‘ಕಲ್ಯಾಣ ಕರ್ನಾಟಕ’ ಎಂಬುದು ಬರೀ ಘೋಷಣೆಗಷ್ಟೇ ಸೀಮಿತವಾಗಿದೆ. ನಮ್ಮ ಸರ್ಕಾರದ ಕಡೆಯ ಎರಡು ಬಜೆಟ್‌ನಲ್ಲಿ ಈ ಭಾಗದ ಅಭಿವೃದ್ಧಿಗೆ ತಲಾ ರೂ.1,500 ಕೋಟಿ ಅನುದಾನ ನೀಡಿದ್ದೆ, ಈ ಬಾರಿಯೂ ಅಷ್ಟೇ ಅನುದಾನವನ್ನು ಮೀಸಲಿಡಲಾಗಿದೆ. ಹೆಸರು ಬದಲಾಯಿಸಿದ ಮಾತ್ರಕ್ಕೆ ಈ ಭಾಗದ ಕಲ್ಯಾಣವಾಗುತ್ತದೆಯೇ? ಎಂದು ಹೇಳಿದರು.

ರೂ.18,000 ಕೋಟಿ ವೆಚ್ಚದ ಉಪನಗರ ರೈಲು ಯೋಜನೆಗೆ ರಾಜ್ಯವು ಕೇವಲ ರೂ.500 ಕೋಟಿ ಅನುದಾನ ಮೀಸಲಿರಿಸಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೂ.1 ಕೋಟಿ ಅನುದಾನ ಮೀಸಲಿಟ್ಟಿದೆ. ಇಷ್ಟು ಕಡಿಮೆ ಅನುದಾನದಲ್ಲಿ ಈ ಯೋಜನೆ ಆರಂಭವಾಗುವ ಸಾಧ್ಯತೆಗಳೇ ಇಲ್ಲ. ಹೀಗಾದರೆ ನಗರದ ಸಂಚಾರ ದಟ್ಟಣೆ ನಿವಾರಿಸುವುದು ಹೇಗೆ? 2018-19ರಲ್ಲೇ ನಾನು ನಗರೋತ್ಥಾನ ಯೋಜನೆಯಡಿ ರೂ.10,000 ಕೋಟಿಗಳನ್ನು ಬೆಂಗಳೂರು ನಗರವೊಂದಕ್ಕೆ ನೀಡಿದ್ದೆ. ಈ ಬಾರಿ ರೂ.8,772 ಕೋಟಿಗಳನ್ನು ಮೀಸಲಿರಿಸಲಾಗಿದೆ. ಯಡಿಯೂರಪ್ಪ ಅವರು 6 ತಿಂಗಳಲ್ಲಿ ಬೆಂಗಳೂರು ಚಿತ್ರಣ ಬದಲಿಸುತ್ತೀನಿ ಅಂದಿದ್ರು. ಅಧಿಕಾರಕ್ಕೆ ಬಂದು 7 ತಿಂಗಳಾಯ್ತು, ನಗರದ ಚಿತ್ರಣ ಬದಲಾಗಿದೆಯೇ? ಎಂದು ನುಡಿದರು.

ಮೊನ್ನೆತಾನೆ ಶೇ.10 ರಷ್ಟು ಬಸ್ ದರವನ್ನು ಹೆಚ್ಚಿಸಲಾಗಿತ್ತು. ಏಪ್ರಿಲ್-2020 ರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.1.60, ಡಿಸೇಲ್ ಬೆಲೆ ರೂ.1.59 ರಷ್ಟು ಹೊಸ ತೆರಿಗೆ ಪ್ರಕಾರ ಏರಿಕೆಯಾಗಲಿದೆ. ಇದರ ಜೊತೆಗೆ ಸ್ಲೀಪರ್ ಕೋಚ್ ಬಸ್ ಹಾಗೂ ಮಿನಿ ಬಸ್‌ಗಳ ಮೇಲೆ ಹೊಸದಾಗಿ ಹೆಚ್ಚುವರಿ ತೆರಿಗೆ ವಿಧಿಸಲು ಹೊರಟಿದ್ದಾರೆ. ವಿತ್ತೀಯ ಜವಾಬ್ದಾರಿ ನೀತಿಯಲ್ಲೇ ಸಾಲ ಪಡೆಯಲು ಅವಕಾಶಗಳಿದ್ದರೂ ನಮ್ಮ ಸರ್ಕಾರವಿದ್ದಾಗ ಸಾಲ ಮಾಡಿ ಹೋಳಿಗೆ ತಿನ್ನುತ್ತೀರಿ ಎಂದು ಬಿಜೆಪಿಯವರು ಹಂಗಿಸುತ್ತಿದ್ದರು. ಈಗ ಅವರೇ ರೂ.52,000 ಕೋಟಿ ಸಾಲ ಮಾಡಲು ಹೊರಟಿದ್ದಾರೆ. ಇದೊಂದು ರೀತಿ ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬಂತೆ ಆಯಿತಲ್ಲವೇ? ಎಂದು ಟೀಕಿಸಿದರು.

ರಾಜ್ಯದ 44 ಇಲಾಖೆಗಳನ್ನು ಆರು ವಲಯಗಳಲ್ಲಿ ವಿಂಗಡಿಸಿ ಇಲಾಖಾವಾರು ಯೋಜನೆ ಮತ್ತು ಅನುದಾನಗಳನ್ನು ಪ್ರತ್ಯೇಕವಾಗಿ ನಮೂದಿಸದೆ ತೆರಿಗೆದಾರರ ದಾರಿ ತಪ್ಪಿಸುವ ಹುನ್ನಾರವನ್ನು ಬಜೆಟ್‌ನಲ್ಲಿ ಕಾಣಬಹುದು. ತಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಇಂತಹದ್ದೊಂದು ಕುತಂತ್ರವನ್ನು ಮಾಡಿದ ಹಾಗೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಕೆಯನ್ನು ಗಂಭೀರವಾಗಿ ಸ್ವೀಕರಿಸದೆ ಕಾಟಾಚಾರಕ್ಕೆ ಮಾಡಿ ಮುಗಿಸಿದಂತಿದೆ. ಈ ಬಜೆಟ್‌ನ ಇನ್ನಷ್ಟು ಹುಳುಕುಗಳನ್ನು ಒಂದೊಂದಾಗಿ ಮುಂದಿನ ದಿನಗಳಲ್ಲಿ ಜನತೆಯ ಮುಂದೆ ಬಿಚ್ಚಿಡುತ್ತೇನೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending