Connect with us

ದಿನದ ಸುದ್ದಿ

ನೇರ ಮಾರುಕಟ್ಟೆಯಿಂದ ಲಾಭ ಗಳಿಸಿದ ಸಣ್ಣ ರೈತ ದುರ್ಗಪ್ಪ ಅಂಗಡಿ

Published

on

ಸುದ್ದಿದಿನ,ಶಿವಮೊಗ್ಗ : ಲಾಕ್‍ಡೌನ್ ಪರಿಸ್ಥಿತಿ ಮಧ್ಯೆ ದೃತಿಗೆಡದೆ ತಾನು ಬೆಳೆದ ತರಕಾರಿಗಳನ್ನು ನೇರವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಿ ಶಿಕಾರಿಪುರ ತಾಲೂಕಿನ ಸಹಸ್ರವಳ್ಳಿ ಗ್ರಾಮದ ರೈತ ದುರ್ಗಪ್ಪ ಅಂಗಡಿಯವರು ಲಾಭ ಕಂಡುಕೊಂಡಿದ್ದಾರೆ.

ದುರ್ಗಪ್ಪ ಅಂಗಡಿಯವರು ಕಳೆದ ಕೆಲವು ವರ್ಷಗಳಿಂದ ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಮಾರ್ಗದರ್ಶನದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ತಮ್ಮ 2 ಎಕರೆ ಪ್ರದೇಶದಲ್ಲಿ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ಕೃಷಿ ಹೊಂಡ, ಎರೆಹುಳುಗೊಬ್ಬರ ತಯಾರಿಕೆ ಘಟಕಗಳನ್ನು ಸ್ಥಪಿಸಿಕೊಂಡಿದ್ದಾರೆ.

ತೋಟಗಾರಿಕೆ ಬೆಳೆಗಳಾದ ಬಾಳೆ ಮತ್ತು ಅಡಿಕೆಯ ಬೆಳೆಗಳ ಮಧ್ಯೆ ಅಂತರ ಬೆಳೆಯಾಗಿ ತರಕಾರಿ ಬೆಳೆಗಳಾದ ತೊಂಡೆಕಾಯಿ, ನುಗ್ಗೆಕಾಯಿ, ಸೌತೆಕಾಯಿ, ಟೊಮ್ಯಾಟೋ, ಬದನೆಕಾಯಿ ಮತ್ತು ಬೀನ್ಸ್ ತರಕಾರಿಗಳನ್ನು ಬೆಳೆಯುತ್ತಿದ್ದಾರೆ.

ಆದರೆ ಲಾಕ್‍ಡೌನ್ ಅವಧಿಯಲ್ಲಿ ತಾನು ಬೆಳೆದ ತರಕಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಕಂಗಾಲಾದ ದುರ್ಗಪ್ಪನವರಿಗೆ ತರಕಾರಿ ಕೊಯ್ಲಿಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸ್ಥಳೀಯ ಮಾರುಕಟ್ಟೆಯನ್ನು ಬಳಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿ ಧೈರ್ಯ ತುಂಬಲಾಯಿತು ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಬಿ.ಸಿ.ಹನುಮಂತಸ್ವಾಮಿ ಅವರು ತಿಳಿಸಿದ್ದಾರೆ.

ಬಳಿಕ ದುರ್ಗಪ್ಪನವರು ಪರಿಚಯಸ್ತ ಹಾಗೂ ಆರೋಗ್ಯವಂತ ಇಬ್ಬರು ಕೃಷಿ ಕಾರ್ಮಿಕರನ್ನು ನೇಮಿಸಿಕೊಂಡು ತರಕಾರಿಗಳನ್ನು ಕೊಯ್ಲು ಮಾಡಿದ್ದಾರೆ. ಅಲ್ಲದೆ, ತಾವು ತರಕಾರಿಗಳನ್ನು ಸಾಗಿಸುವ ವಾಹನ, ಗೋಣಿಚೀಲ ಮತ್ತು ಉಪಯೋಗಿಸುವ ವಸ್ತುಗಳನ್ನು ಸೋಂಕು ನಿವಾರಕ ರಾಸಾಯನಿಕಗಳಿಂದ ಶುದ್ಧಗೊಳಿಸಿಕೊಂಡು ತರಕಾರಿಗಳನ್ನು ಸಂಗ್ರಹಣೆ ಮಾಡಿಕೊಂಡಿದ್ದಾರೆ.

ದೂರದ ಗ್ರಾಮಗಳಿಗೆ ಸಾಗಾಟಕ್ಕೆ ಅವಕಾಶ ಇಲ್ಲದೆ ಇದ್ದುದ್ದರಿಂದ ತಾವೇ ಖುದ್ದು ತರಕಾರಿಗಳನ್ನು ಸ್ಥಳೀಯವಾಗಿ ಮನೆ ಮನೆಗೆ ಹೋಗಿ ತರಕಾರಿಗಳನ್ನು ಮಾರಾಟ ಮಾಡಿದ್ದಾರೆ.ನೇರ ಮಾರುಕಟ್ಟೆಯಿಂದ ಅವರ ಮುಖದಲ್ಲಿ ಮಂದಹಾಸ ಬೀರುವ ಹಾಗೆ ಮಾಡಿದೆ.

ರೈತ ಉತ್ಪಾದಕರ ಸಂಘ ಹಾಗೂ ಹಾಪ್‍ಕಾಮ್ಸ್‍ಗಳ ಮುಖಾಂತರ ಜೊತೆಗೆ ಸ್ಥಳೀಯವಾಗಿಯೇ ಮಾರುಕಟ್ಟೆ ವ್ಯವಸ್ಥೆ ಕಂಡುಕೊಂಡ ಇವರು ಹೇಳುವ ಪ್ರಕಾರ 20 ರೂ.ನಂತೆ 20 ಕ್ವಿಂಟಾಲ್ ತೊಂಡೆಕಾಯಿ, 25 ರೂ.ನಂತೆ 5 ಕ್ವಿಂಟಾಲ್ ನುಗ್ಗೆಕಾಯಿ, 20 ರೂ.ನಂತೆ 6 ಕ್ವಿಂಟಾಲ್ ಟೊಮ್ಯಾಟೊ, 30 ರೂ.ನಂತೆ 10 ಕ್ವಿಂಟಾಲ್ ಬೀನ್ಸ್ ಮಾರಾಟ ಮಾಡಿರುತ್ತಾರೆ. ಇದರಿಂದ ಒಟ್ಟು 54,500/- ರೂಪಾಯಿ ನಿವ್ವಳ ಆದಾಯ ಬಂದಿದೆ.

ಲಾಕ್‍ಡೌನ್ ಮಧ್ಯೆಯೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗದ ವ್ಯಾಪ್ತಿಯಲ್ಲಿ ಬರುವ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ ಮಾಹಿತಿ ಪಡೆದು ಮಾರಾಟ ಮಾಡಲು ಸೂಕ್ತ ಮತ್ತು ಪರ್ಯಾಯ ದಾರಿಯ ಬಗ್ಗೆ ಚಿಂತಿಸದಿದ್ದರೆ ತರಕಾರಿಗಳು ಹೊಲದಲ್ಲಿ ಕೊಳೆತು ನಾರುತ್ತಿದ್ದವು. ಈಗ ತಾನು ಹಾಕಿದ ಬಂಡವಾಳವೂ ಬಂದಿದೆ. ನಾವು ಹೊಲಕ್ಕೆ ಹಾಕಿದ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂದು ಅವರು ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending