ಭಾವ ಭೈರಾಗಿ
ಸಂಜೆ ಐದರ ಮಳೆ : ಕವಿಯ ಕಿರು ಪರಿಚಯ
- ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ ಜಿಲ್ಲೆ
ಕನ್ನಡಾಂಬೆಯ ಸಂಪ್ರೀತಿಯ ಮೇರು ವ್ಯಕ್ತಿತ್ವದ ಕವಿ,ತಾಯ ನಿತ್ಯೋತ್ಸವ ಕಟ್ಟಿದ ಸಾಹಿತಿ,ನವ್ಯಕಾವ್ಯ ಚಳುವಳಿಯ ಹರಿಕಾರ,73ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷ,ಹಲವು ಬಹು ಪ್ರಶಸ್ತಿಗಳ ಮುಡಿಗೇರಿಸಿಕೊಂಡ ಧೀಮಂತ,ಸಾರೆ ಜಹಾಸೇ ಕನ್ನಡಕ್ಕೆ ಭಾಷಾಂತರಿಸಿದ ಭಾಷಾಭಿಮಾನಿ,ಶಿಶು ಸಾಹಿತ್ಯದಲ್ಲು ಚಾಪು ಮೂಡಿಸಿದ ಚಾಣಕ್ಷ, ಕನ್ನಡ ತನವನ್ನು ಎತ್ತಿ ಹಿಡಿದ ಪ್ರಗತಿಪರ ಚಿಂತನೆಯ ಸರದಾರ, ನಮ್ಮ ಹೆಮ್ಮೆಯ ನಿತ್ಯೋತ್ಸವಕವಿ ಕೆ.ಎಸ್.ನಿಸಾರ್ ಅಹ್ಮದ್.
ಮನೆಯ ಮಾತೃಭಾಷೆ ಉರ್ದು ಆದರೂ ಅವರೊಬ್ಬ ಅಪ್ಪಟ ಕನ್ನಡಿಗ. ನಾವಿಂದು ನಮ್ಮ ಹೆಮ್ಮೆಯ ಸಭ್ಯ , ಭಾವೈಕ್ಯ, ಕನ್ನಡದ ನಿತ್ಯೋತ್ಸವದ ನಮ್ಮೆಲ್ಲರ ಪ್ರೀತಿ – ಸ್ನೇಹದ ಕವಿ ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್ ಅವರು, ಅವರ ಕುರಿತು ಬರೆಯುವ ಸಣ್ಣ ಪ್ರಯತ್ನ ಮಾಡಲಾಗಿದೆ.
ಪ್ರೊ. ಕೆ.ಎಸ್.ನಿಸಾರ್ ಅಹಮದ್ ರವರು ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಷೇಕ್ ಹೈದರ್ ಮತ್ತು ಹಮೀದಾ ಬೇಗಂ ದಂಪತಿಗಳ ಮಗನಾಗಿ ಫೆಬ್ರುವರಿ 5 ,1936ರಲ್ಲಿ ಜನಿಸಿದರು. ಇವರ ತಂದೆ ಸರಕಾರಿ ನೌಕರಿಯಲ್ಲಿದ್ದ ಕಾರಣದಿಂದ ಕನ್ನಡ, ಇಂಗ್ಲಿಷ್, ಸಂಸ್ಕೃತ ಬಲ್ಲ ಸುಸಂಸ್ಕೃತರಾಗಿದ್ದರು ಹಾಗಾಗಿ ನಿಸಾರರಿಗೂ ಅದೇ ವ್ಯಕ್ತಿತ್ವ ರಕ್ತಗತವಾಗಿತ್ತು. ಅವರ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಾದ ದೇವನಹಳ್ಳಿಯಲ್ಲಿ ಮುಗಿಸಿ ಪ್ರೌಢಶಾಲೆಯನ್ನು ಹೊಸಕೋಟೆಯಲ್ಲಿ ಮುಗಿಸಿದ ನಂತರ ಕಾಲೇಜಿಗೆ ಬೆಂಗಳೂರಿನ ಸೆಂಟ್ರಲ್ ಕಾಲೇಜು ಸೇರಿ 1959ರಷ್ಟರಲ್ಲಿ ಭೂಗರ್ಭ (ಭೊವಿಜ್ಞಾನ) ಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದಿರುತ್ತಾರೆ ಮತ್ತು ಅದೇ ವಿಷಯದಲ್ಲಿ ಅಂದರೆ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಸಹ ಪಡೆಯುತ್ತಾರೆ.
ತದನಂತರ ಕಾಯಕ ವೃತ್ತಿಯನ್ನು ಭೂವಿಜ್ಞಾನಿಯಾಗಿ ಕಲಬುರ್ಗಿಯಲ್ಲಿ ಕೆಲಸ ಮಾಡಲು ಆರಂಭಿಸಿದರಾದರೂ, ಆ ಕೆಲಸದಲ್ಲಿ ಹೆಚ್ಚು ಆತ್ಮತೃಪ್ತಿ ದೊರೆಯದ ಕಾರಣ ಮತ್ತೆ ಹೆಚ್ಚಿನ ಅಭ್ಯಾಸ ಮಾಡಬೇಕೆಂದು ನಿಶ್ಚಯಿಸಿ ಎಂ.ಎಸ್. ಸಿ. ಸೇರಿ ಎಂ.ಎಸ್ಸಿ ಪಡೆಯುತ್ತಾರೆ,ಪಡೆದ ನಂತರ ಅವರು ಓದಿದ ಕಾಲೇಜು ಒಳಗೊಂಡಂತೆ, ಬೆಂಗಳೂರು ಚಿತ್ರದುರ್ಗ, ಶಿವಮೊಗ್ಗ, ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗುವ ಮೂಲಕ ಯಶಸ್ವಿಯಾಗಿ ಸೇವೆ ಸಲ್ಲಿಸಿ 1994ರಲ್ಲಿ ನಿವೃತ್ತರಾಗುತ್ತಾರೆ.
ಸಾಹಿತ್ಯದ ಗೀಳು
ನಿಸಾರ್ ಅಹಮದ್ ರವರ ಸುದೈವವೂ
ಎನೋ, ಅವರು ಓದಿರುವ ಕಾಲೇಜಿನಲ್ಲಿ ಎಲ್. ಗುಂಡಪ್ಪ, ಎಂ.ವಿ. ಸೀತಾರಾಮಯ್ಯ, ಜಿ.ಪಿ. ರಾಜರತ್ನಂ, ವಿ.ಸೀತಾರಾಮಯ್ಯ ಅವರಂತಹ ಮಹಾನ್ ಕನ್ನಡ ಸಾಹಿತ ಅಮರ ಪ್ರೇಮದ ಗುರುಗಳಾಗಿದ್ದರು(ಗುರುಗಳು ಪಡೆದಿದ್ದರು) ಈ ಕಾರಣಗಳಿಂದ ನಿಸಾರರಲ್ಲಿ ಕನ್ನಡ ಸಾಹಿತ್ಯಾಸಕ್ತಿ (ಸಾಹಿತ್ಯಾಬಿರುಚಿ) ಬೆಳೆಯಲು ಕಾರಣಿಭೊತರಾಗುವ ಮೂಲಕ ಪ್ರೋತ್ಸಾಹಕರಾಗುತ್ತಾರೆ. ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ 10ನೇ ವಯಸ್ಸಿನಲ್ಲೇ
ಪ್ರಕಟವಾಗಿ, ಜಲಪಾತ’ದ ಬಗ್ಗೆ ಅವರು ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಪ್ರಕಟಣೆ ಯಾಗುವ ಮೂಲಕ ಇಡೀ ಕರ್ನಾಟಕದಲ್ಲಿ ಇವರ ಹೆಸರು ಮನೆ ಮಾತಾಗಿತ್ತು ಎನ್ನುವುದು ನಾವ್ಯಾರು ಮರೆಯಬಾರದು. ಅಂದಿನಿಂದಲೇ ಅವರು ಕನ್ನಡ ಭಾಷಾ ಪ್ರೇಮದ ಬಗೆ ಅಪಾರವಾದ ಪ್ರೀತಿಯನ್ನು ಹೊಂದಿದರು.
ಹೀಗಾಗಿ ಸಾಹಿತ್ಯದ ಗೀಳನ್ನು ಅವರ ಹೃನ್ಮನದ ಅಂತರಂಗದಲ್ಲಿ ಹಚ್ಚಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಇತಿಹಾಸದ ಪುಟಗಳಲ್ಲಿ ನಾವೆಲ್ಲರೂ ಕಾಣಬಹುದಾಗಿದೆ ಬಂಧುಗಳೆ. ಹಾಗಾಗಿ ಧಾರ್ಮಿಕ ಆಚರಣೆಯಲ್ಲಿ ಅವರು ಇಸ್ಲಾಂ ಆನುಯಾಯಿಯಾದರೂ ಅವರು ಬರೆದ ಅನೇಕ ಕವನಗಳು ಎಲ್ಲಾ ಧಾರ್ಮಿಕಾಭಿಮಾನಿಗಳು ಖುಷಿಯಿಂದ ಸ್ವೀಕರಿಸುವ ಮೂಲಕ ಹಾಡುತ್ತಿದ್ದರು.
ಇಂತಹ ಹಾಡನ್ನು ಒಬ್ಬ ಮುಸ್ಲಿಂ ಕವಿ ಬರೆದಿದ್ದಾರೆ ಎಂದು ಊಹಿಸಲೂ ಅಸಾಧ್ಯವಾಗುವಷ್ಟರ ಮಟ್ಟಿಗಿನ ಭಾವೈಕ್ಯ ಕವಿ ಇವರಾಗಿದರು ಎಂಬುವುದೇ ಹೆಮ್ಮೆ. ಇದೇ ನಿಸಾರರು ಬೆಂಗಳೂರಿನ ರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಸೇರಿ ಇನ್ನಿತರ ಧರ್ಮಗಳ
ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಉಪನ್ಯಾಸ ನೀಡುವ ಮೂಲಕ ಅವರೊಬ್ಬ ಪ್ರಗತಿಪರ ಚಿಂತಕರಾಗಿ,ಸರ್ವ ಧರ್ಮಗಳ ಪ್ರೀತಿಯ
ಸಮಾತವಾದಿಯಾಗಿ ನಮ್ಮೆಗೆಲ್ಲರಿಗೂ ಎದ್ದು ಕಾಣುತ್ತಿದ್ದರು. ಕಳೆದ ಐದು ದಶಕಗಳಲ್ಲಿ ಸುಮಾರು 25 ಅಧಿಕ ಕೃತಿಗಳನ್ನು ರಚಿಸಿದ್ದಾರೆ.
ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಅತ್ಯಂತ ಜನಪ್ರಿಯ ಕವನ ಸಂಕಲನಗಳಾಗಿವೆ.ನೆನದವರ ಮನದಲ್ಲಿ, ನಾನೆಂಬ ಪರಕೀಯ, ಅನಾಮಿಕ ಆಂಗ್ಲರು, ಸುಮಹೂರ್ತ, ಸಂಜೆ ಐದರ ಮಳೆ, ಸ್ವಯಂ ಸೇವೆಯ ಗಿಳಿಗಳು ಮುಂತಾದ ಕವನ ಸಂಕಲನಗಳೆಂದರೇ, ಅಚ್ಚುಮೆಚ್ಚು, ಇದು ಬರಿ ಬೆಡಗಲ್ಲೊ ಅಣ್ಣ, ಷೇಕ್ಸ್ ಪಿಯರ್ ಮುಂತಾದ ಗದ್ಯವನ್ನೂ ರಚಿಸುವ ಜೊತೆಯಲ್ಲಿ ಒಥೆಲ್ಲೊ ಮತ್ತು ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
ಇನ್ನು ಕನ್ನಡದ ಪ್ರಪ್ರಥಮ ಧ್ವನಿಸುರಳಿಯಾದ ನಿತ್ಯೋತ್ಸವ ಕವಿತೆಗಳ ಬಗ್ಗೆ ಹೇಳುತ್ತಾ ಹೋದರೆ ಇಡೀ ದಿನವೇ ಬೇಕಾಗಬಹುದೇನೋ? ಹಾಗಾಗಿ ಅದರಲ್ಲೂ ಜೋಗದ ಸಿರಿಬೆಳಕಿನಲ್ಲಿ ಹಾಡನ್ನು ಹಾಡಿಕೊಂಡಾಗಲೆಲ್ಲಾ ಮೈ ರೋಮಾಂಚನಗೊಳ್ಳುತ್ತದೆ ಎನ್ನುವುದಂತು ಸತ್ಯ. ಮಲೆನಾಡಿನ, ಸಹ್ಯಾದ್ರಿಯ ತಪ್ಪಲಲ್ಲಿರುವ ಜೋಗದ ಜಲಪಾತ ಮತ್ತು ಅವರ ಸುತ್ತಮುತ್ತಲಿನ ಪರಿಸರವನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುವಾಗ, ಅವರೊಳಗಿರುವ ಪರಿಸರ ಪ್ರೇಮಿಯ ಅನಾವರಣವಾಗಿತ್ತದೆ ಎಂದರೆ ತಪ್ಪಾಗಲಾರದು.ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಸಾರಸ್ವತಃ ಲೋಕಕ್ಕೆ ಅಮೂಲ್ಯ ಕೊಡುಗೆಗೆಳು ನೀಡಿದ್ದಾರೆ.
ಅವರ ಗೌರವ ಕವನ ಸಂಕಲನಗಳು
- ಮನಸು ಗಾಂಧಿ ಬಜಾರು (1960), ನೆನೆದವರ ಮನದಲ್ಲಿ (1964), ಸುಮಹೂರ್ತ (1967), ಸಂಜೆ ಐದರ ಮಳೆ (1970), ನಾನೆಂಬ ಪರಕೀಯ (1974), ಆಯ್ದ ಕವಿತೆಗಳು (1974), ನಿತ್ಯೋತ್ಸವ (1976), ಸ್ವಯಂ ಸೇವೆಯ ಗಿಳಿಗಳು (1977), ಅನಾಮಿಕ ಆಂಗ್ಲರು (1982), ಬಹಿರಂತರ (1990), ಸಮಗ್ರ ಕವಿತೆಗಳು (1991), ನವೋಲ್ಲಾಸ (1994), ಆಕಾಶಕ್ಕೆ ಸರಹದ್ದುಗಳಿಲ್ಲ (1998), ಅರವತ್ತೈದರ ಐಸಿರಿ (2001), ಸಮಗ್ರ ಭಾವಗೀತೆಗಳು (2001, ಪ್ರಾತಿನಿಧಿಕ ಕವನಗಳು (2002) ಇವರ ಕವನ ಸಂಕಲನಗಳಾಗಿವೆ.
ಅವರ ಗೌರವ ಗದ್ಯ ಸಾಹಿತ್ಯ ಕೃತಿಗಳು
ಅಚ್ಚುಮೆಚ್ಚು, ಇದು ಬರಿ ಬೆಡಗಲ್ಲೊ ಅಣ್ಣ ಷೇಕ್ಸ್ ಪಿಯರ್ನನ ಒಥೆಲ್ಲೊದ ಕನ್ನಡಾನುವಾದ, ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್ ಕೃತಿಯ ಕನ್ನಡಾನುವಾದ. ಅಮ್ಮ ಆಚಾರ ಮತ್ತು ನಾನು – ಇವುಗಳು ನಿಸಾರ್ ಅಹಮದ್ ರವರ ಗದ್ಯ ಕೃತಿಗಳಾಗಿವೆ.
ಸರಳ ಶಿಸ್ತಿನ ಕವಿ
ಕೆ.ಎಸ್. ನಿಸಾರ್ ಅಹಮದ್
ಅವರು ಸೇವೆಯಿಂದ ನಿವೃತ್ತರಾಗಿದ್ದರೂ ಶಿಸ್ತಿನ ಸಿಪಾಯಿಯಂತೆ ಸದಾ ಕಾಲವೂ ಸೂಟೂಬೂಟುಧಾರಿಯಾಗಿಯೇ ನಮಗೆ ಕಾಣುತ್ತಿದ್ದರು. ಅವರ ಅಚ್ಚು ಮೆಚ್ಚಿನ ಗಾಂಧೀಬಜಾರಿನ, ವಿಧ್ಯಾರ್ಥಿ ಭವನ ಅಥವಾ ಡಿವಿಜಿ ರಸ್ತೆಯಲ್ಲಿ ಯಾವುದೇ ಹಮ್ಮು ಬಿಮ್ಮಿಲ್ಲದೆ ನಿಗರ್ವಿಯಾಗಿ ಸಾಧಾರಣ ನಾಗರೀಕರ ಹಾಗೆಯೇ ಅವರನ್ನು ನೋಡಬಹುದಾಗಿತ್ತು ಸ್ನೇಹಿತರೆ.
ಯಾವುದೇ ಸಭೆ ಸಮಾರಂಭಗಳಿಗೆ, ಪುಸ್ತಕ ಬಿಡುಗಡೆಯ ಸಮಾರಂಭಗಳಿಗೆ ಅವರನ್ನು ಆಹ್ವಾನಿಸಿದರೆ, ಅವರು ಬಿಡುವಾಗಿದ್ದಲ್ಲಿ ಖಂಡಿತವಾಗಿಯೂ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಬಂದು ಸಭಿಕರೊಂದಿಗೆ ಅವರ ಅನುಭವಗಳನ್ನು ಹಂಚಿಕೊಳ್ಳುವ ಒಬ್ಬ ಸರಳ ಸಜ್ಜನಿಕೆಯ ಕವಿಯಾಗಿ ನಮ್ಮೆಗೆಲ್ಲರಿಗೂ ಮಾರ್ಗದರ್ಶನ ಮಾಡುತ್ತಿದ್ದರು.ಕನ್ನಡದ ನೆಲ, ಜಲವನ್ನು ಕಣ್ಣಿಗೆ ಕಟ್ಟುವಂತೆ ಕವನಗಳ ಮೂಲಕ ಮೂಡಿಸಿ, ಕನ್ನಡ ಪ್ರೇಮವನ್ನು ಉದ್ದೀಪನಗೊಳಿಸಿದ ಕನ್ನಡಿಗರ ಪ್ರೀತಿಯ ಕವಿ ನಿಸಾರ್ ಅಹಮ್ಮದ್. ಜೋಗದ ಸಿರಿ ಬೆಳಕಿನಲ್ಲಿ ಹಾಡಿನ ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು. ಆವರೊಬ್ಬ ನಮ್ಮ ಹೆಮ್ಮೆಯ ಕನ್ನಡದ ಮೇಧಾವಿ ಅಪ್ರತಿಮ ಸಾಹಿತಿ .
ಇವರ ಬಹುಮುಖ ಪ್ರತಿಭೆಯ ವ್ಯಕ್ತಿತ್ವಕ್ಕೆ ಸಂದ ಗೌರವ ಪ್ರಶಸ್ತಿ ಪುರಸ್ಕಾರಗಳು
- 1981 ರ ರಾಜ್ಯೋತ್ಸವ ಪ್ರಶಸ್ತಿ, 2003 ರ ನಾಡೋಜ ಪ್ರಶಸ್ತಿ,2006 ರ ಮಾಸ್ತಿ ಪ್ರಶಸ್ತಿ,2006 ರ ಅರಸು ಪ್ರಶಸ್ತಿ, 2006 ಡಿಸೆಂಬರಿನಲ್ಲಿ ಶಿವಮೊಗ್ಗದಲ್ಲಿ ನಡೆದ, 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 2008 ಪದ್ಮಶ್ರೀ ಪ್ರಶಸ್ತಿಯ ಹೊರತಾಗಿಯೂ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗೊರೂರು ಪ್ರಶಸ್ತಿ, ಅನಕೃ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಪಂಪ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಭಕ್ತಿಯ ನಮನಗಳು
ಕನ್ನಡ ಸಾರಸ್ವತ ಲೋಕದ ಕೊಂಡಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಕೆ.ಎಸ್.ನಿಸಾರ್ ಅಹ್ಮದ ತಮ್ಮ ಬದುಕಿನ ಪಯಣ ಮುಗಿಸಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ.ಈ ಸಾವು ಕನ್ನಡಿಗರ,ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.ನಿತ್ಯೋತ್ಸವ ಕವಿಗೆ ನಮ್ಮ ಭಕ್ತಿಯ ಭಾವಪೂರ್ಣ ಶೃದ್ಧಾಂಜಲಿಯ ನಮನಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ16 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ


