ದಿನದ ಸುದ್ದಿ
ದಾವಣಗೆರೆ | ಹೋಟೆಲ್ ಹಾಗೂ ಲಾಡ್ಜ್ ಮಾಲೀಕರಿಗೆ ಅಭಿನಂದನೆ : ಗಂಭೀರ ಪರಿಸ್ಥಿತಿಯಲ್ಲಿ ಕೈ ಜೋಡಿಸಲು ಡಿಸಿ ಮನವಿ
ಸುದ್ದಿದಿನ,ದಾವಣಗೆರೆ : ಕೊರೊನಾ ಸೋಂಕು ನಿಯಂತ್ರಣ ಸಂದರ್ಭದಲ್ಲಿ ಜಿಲ್ಲೆಯ ಹೋಟೆಲ್ ಮಾಲೀಕರು ತುಂಬಾ ಸಹಕಾರ ನೀಡಿದ್ದೀರ. ನೀವುಗಳು ಮಾನವೀಯತೆ ಮೆರೆಯುವುದರ ಮೂಲಕ ನಮ್ಮೊಂದಿಗೆ ಕೈಜೋಡಿಸಿದ್ದೀರಿ. ಇದಕ್ಕಾಗಿ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸಲು ಇಷ್ಟಪಡುತ್ತೇನೆ. ಆದರೆ ಕೆಲವು ಕಡೆ ನಿರೀಕ್ಷಿತ ಮಟ್ಟದಲ್ಲಿ ಸಹಕಾರ ದೊರೆಯುತ್ತಿಲ್ಲ. ನೀವೆಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಹೋಟೆಲ್ ಹಾಗೂ ಲಾಡ್ಜ್ ಮಾಲೀಕರಿಗಾಗಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲ್ಲಿಯವರೆಗೆ ಸಹಕಾರ ನೀಡಿದ್ದೀರಿ. ಇನ್ನೂ ಮುಂದೆಯೂ ಸಹ ಹೆಚ್ಚಿನ ರೀತಿಯ ಸಹಕಾರ ನೀಡಬೇಕು. ನಿಮಗೆ ಬೇಕಾದ ಎಲ್ಲಾ ವ್ಯವಸ್ಥೆ ನಾವು ಮಾಡುತ್ತೇವೆ. ಜಿಲ್ಲಾಡಳಿತ ನಿಮಗೆ ಸಹಕರಿಸುತ್ತದೆ. ಇನ್ನು ಮುಂದಿನ 14 ದಿನಗಳು ಬಹಳಷ್ಟು ಗಂಭೀರವಾಗಿರುವುದರಿಂದ ನೀವೆಲ್ಲರೂ ಕೈಜೋಡಿಸಬೇಕು ಎಂದರು.
ಲಾಡ್ಜ್ ಹಾಗೂ ಹೋಟೆಲ್‍ಗಳಲ್ಲಿ ನೀರಿನ ವ್ಯವಸ್ಥೆ, ವಿದ್ಯುತ್ ಸೇರಿದಂತೆ ಯಾವುದೇ ರೀತಿಯ ತೊಂದರೆ ಆದರೆ ಕೂಡಲೇ ಸರಿ ಮಾಡಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ನಮ್ಮ ಸಹಾಯ ತೆಗೆದುಕೊಳ್ಳಿ. ಪ್ರಧಾನ ಮಂತ್ರಿ ಮೋದಿ ಅವರ ಕರೆಯಂತೆ ಇಂತಹ ಪರಿಸ್ಥಿತಿಯಲ್ಲಿ ನೀವೆಲ್ಲರೂ ಭಾಗಿಯಾಗುವುದರ ಮೂಲಕ ಇಡೀ ದೇಶವೇ ನಿಮಗೆ ಋಣಿಯಾಗಿರುತ್ತದೆ ಎಂದು ಪ್ರಶಂಸಿದರು.
ಕೊರೊನಾ ಸೋಂಕು ನಿಯಂತ್ರಣ ಒಂದು ಯುದ್ಧವಾಗಿದೆ. ಇಂತಹ ತುರ್ತು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ತಮ್ಮ ಕುಟುಂಬ ಮರೆತು, ವೈಯಕ್ತಿಕ ಜೀವನ ಪಣಕ್ಕಿಟ್ಟು ಕೆಲಸ ಮಾಡುತ್ತಿದೆ. ಇನ್ನೇನು ಎಲ್ಲಾ ಮುಗಿತು. 28 ದಿನದಿಂದ ಒಂದು ಪಾಸಿಟಿವ್ ಕೇಸ್ ಇಲ್ಲ ಎಂದು ಗ್ರೀನ್ ಜೋನ್ ಘೋಷಣೆ ಮಾಡಲಾಯಿತು.
ಅಷ್ಟರಲ್ಲಿ ಮರು ದಿನವೇ ಕೊರೊನಾ ಪಾಸಿಟಿವ್ 2 ಪ್ರಕರಣಗಳು ಕಂಡುಬಂದವು. ಆ 2 ಪ್ರಕರಣಕ್ಕೆ ಸಂಬಂಧಪಟ್ಟವರ 21 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇನ್ನೂ ಸುಮಾರು 290 ಸ್ಯಾಂಪಲ್‍ಗಳ ವರದಿ ಬಾಕಿ ಇದ್ದು, ವರದಿಗಾಗಿ ಎದುರು ನೋಡಲಾಗುತ್ತಿದೆ. ಜೊತೆಗೆ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಪಟ್ಟವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಹೋಟೆಲ್ ಸಂಘದ ಅಧ್ಯಕ್ಷರಾದ ಅಣಬೇರು ನಾಗರಾಜ ಮಾತನಾಡಿ, ಜಿಲ್ಲಾಡಳಿತ ನಮಗಾಗಿ ನಮ್ಮ ಉಳಿವಿಗಾಗಿ ಹಗಲು ರಾತ್ರಿಯಿಡಿ ಕಷ್ಟಪಟ್ಟು ಕೆಲಸ ಮಾಡುತ್ತಿದೆ. ಇದಕ್ಕಾಗಿ ಹೋಟೆಲ್ ಸಂಘದ ಹಾಗೂ ಜಿಲ್ಲೆಯ ನಾಗರಿಕರ ಪರವಾಗಿ ಧನ್ಯವಾದ ತಿಳಿಸಲು ಇಷ್ಟಪಡುತ್ತೇನೆ ಎಂದರು.
ಸದಾ ನಿಮ್ಮ ಜೊತೆ ಒಗ್ಗಟ್ಟಾಗಿ ಇರುತ್ತೇವೆ. ನಿಮ್ಮ ಕೆಲಸಕ್ಕೆ ಕೈ ಜೋಡಿಸುತ್ತೇವೆ. ಆದರೆ ಲಾಡ್ಜ್ ಹಾಗೂ ಹೋಟೆಲ್‍ಗಳಲ್ಲಿ ಕೆಲಸಗಾರರಿಲ್ಲ. ಹಾಗಾಗಿ ತರಬೇತಿ ಹೊಂದಿದ್ದವರನ್ನು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕು. ಅವರಿಗೆ ನಮ್ಮ ಸಂಪೂರ್ಣ ಸಹಕಾರ ನೀಡುತ್ತೇವೆ. ಜೊತೆಗೆ ಲಾಡ್ಜ್ ಹಾಗೂ ಹೋಟೆಲ್‍ಗಳಿಗೆ ತೆರಳಲು ಮಾಲೀಕರಿಗೆ ಪಾಸ್ ವ್ಯವಸ್ಥೆ ಮಾಡಿಸಬೇಕು ಎಂದರು.
- “ಕೊರೊನಾ ಹಾಗೂ ಎಸಿ ಒಂದಕ್ಕೊಂದು ಹೊಂದಾಣಿಕೆಯಾಗುವುದಿಲ್ಲ. ಪರಸ್ಪರ ತದ್ವಿರುದ್ದ. ಹಾಗಾಗಿ ಎಸಿ ಇರುವ ರೂಮ್‍ಗಳು ಸದ್ಯಕ್ಕೆ ಬೇಡ. ರೂಮ್‍ಗಳನ್ನು ಬಳಸುವ ಸಂದರ್ಭ ಬಂದರೆ ಎಸಿ ಕಡಿತಗೊಳಿಸಿ ರೂಮ್ ಬಳಕೆ ಮಾಡಿಕೊಳ್ಳಲಾಗುವುದು.”
|ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ
ಸುದ್ದಿಗೋಷ್ಠಿಯಲ್ಲಿ ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ನಜ್ಮಾ, ಜಿಲ್ಲಾ ಹೋಟೆಲ್ ಸಂಘದ ಪದಾಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ4 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

