ದಿನದ ಸುದ್ದಿ
ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್
ಸುದ್ದಿದಿನ,ದಾವಣಗೆರೆ: ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತು ಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.
ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಡೀ ಜಗತ್ತನ್ನು ಕಣ್ಣಿಗೆ ಕಾಣದೊಂದು ವೈರಾಣು ನಡುಗಿಸುತ್ತಿದೆ. ವಿಶ್ವದಲ್ಲಿ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಕೊರೊನಾ ನಿಯಂತ್ರಣ ಮಾಡುತ್ತಾ ಇದೆ. ದೇಶದಲ್ಲಿ ಸುಮಾರು 60 ಸಾವಿರ ಪಾಸಿಟಿವ್ ಪ್ರಕರಣಗಳಿದ್ದು, ನಮ್ಮ ರಾಜ್ಯ 13 ನೇ ಸ್ಥಾನದಲ್ಲಿ ಇದೆ.
ಮಾನ್ಯ ಮುಖ್ಯಮಂತ್ರಿಗಳು ಆರಂಭದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತಿದೆ. ಜೀವ ಉಳಿಸುವ ಜೊತೆಗೆ ಜನಜೀವನ ಸುಧಾರಣೆ ಎರಡೂ ಕೆಲಸಗಳನ್ನು ಸಮತೋಲನದಿಂದ ಸರಿದೂಗಿಸಬೇಕಿದೆ. ಕೊರೊನಾ ಕೂಡ ಇರುತ್ತದೆ. ಆದರೆ ನಾವು ಅದರಿಂದ ದೂರ ಇರಬೇಕು.
ನಾಲ್ಕು ಟಿ
ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‍ಮೆಂಟ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಕೈಯಲ್ಲಿಲ್ಲ ಬದಲಾಗಿ ಎಲ್ಲ ಜನತೆ ಸಹಕಾರ ಅತ್ಯಗತ್ಯವಾಗಿದೆ ಎಂದರು.
ಕೊರೊನಾ ಸಾಮಾಜಿಕ ಕಳಂಕ ಅಲ್ಲ,ಅನಗತ್ಯ ಆತಂಕ ಬೇಡ
ಕೊರೊನಾ ರೋಗಕ್ಕೆ ನಿಖರವಾದ ಚಿಕಿತ್ಸೆ ಇಲ್ಲ. ಎಷ್ಟೋ ಅಂತೆ-ಕಂತೆಗಳು ಆಗಿ ಹೋಗಿವೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿದಿನ ಹೊಸ ಮಾರ್ಗಸೂಚಿಗಳನ್ನು ನೀಡುವ ಮೂಲಕ ಕೊರೊನಾ ನಿಯಂತ್ರಣದಲ್ಲಿ ಶ್ರಮ ವಹಿಸುತ್ತಿದೆ.
ಕೊರೊನಾ ಸಾಮಾಜಿಕ ಕಳಂಕ ಅಲ್ಲ. ಯಾರಿಗೆ ಬೇಕಾದರೂ ಬರಬಹುದು. ಸೋಂಕಿನ ಬಗ್ಗೆ ಭಯ ಬೇಡ. ಯಾವ ವೈರಾಣುವೂ ಜನರನ್ನು ಸೋಲಿಸಿಲ್ಲ. ಬದಲಾಗಿ ಜನರು ವೈರಾಣುವನ್ನು ಸೋಲಿಸಿದ್ದಾರೆ. ಕೊರೊನಾವನ್ನೂ ಸೋಲಿಸಲು ಸ್ವಲ್ಪ ಸಮಯ ಬೇಕು. ಆದ ಕಾರಣ ಜನರು ಅಂತರ ಕಾಯ್ದುಕೊಳ್ಳುವ ಮೂಲಕ, ಸ್ವಚ್ಚತೆ, ಮಾಸ್ಕ್ ಧರಿಸುವ ಮೂಲಕ ಹಾಗೂ ಸರ್ಕಾರದ ನಿಯಮ, ಸೂಚನೆಗಳನ್ನು ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲು ಸಹಕರಿಸಬೇಕು.
ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯ ತುಂಬಬೇಕು
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಬಂದ ಪ್ರಕರಣಗಳ ಪೈಕಿ ಈಗಾಗಲೇ ಶೇ.50 ಗುಣಮುಖರಾಗಿದ್ದಾರೆ. ಶೇ 80 ರಷ್ಟು ಜನರು ಚಿಕಿತ್ಸೆ ಇಲ್ಲದೆಯೇ ಗುಣಮುಖರಾಗುತ್ತಾರೆ. ಮರಣ ಪ್ರಮಾಣ ಶೇ.3.1 ರಷ್ಟಿದ್ದು, ಅದರಲ್ಲೂ ಹೃದಯ ತೊಂದರೆ, ಕ್ಯಾನ್ಸರ್, ಡಯಾಬಿಟಿಕ್ ಇತರೆ ತೊಂದರೆಯಿಂದ ಬಳಲುವವರು ಮರಣಕ್ಕೆ ತುತ್ತಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಜನರಲ್ಲಿ ಭಯ ಬೇಡ. ಆದರೆ ಅಂತರ ಕಾಯ್ದುಕೊಂಡು, ಸ್ವಚ್ಚತೆ ಕಾಪಾಡಿಕೊಂಡು ನಿಯಮಗಳನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯವನ್ನು ತುಂಬಬೇಕೆಂದರು.
ಆರೋಗ್ಯಸೇತು ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಜಿಲ್ಲೆಯ ಎಲ್ಲ ಜನತೆ ಆರೋಗ್ಯಸೇತು ಆ್ಯಪ್ ನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಈ ಆಪ್ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು. ಈ ಆ್ಯಪ್‍ನ ಸಹಾಯದಿಂದ ತಾವು ಸೋಂಕಿತರಿಂದ ಎಷ್ಟು ಅಂತರದಲ್ಲಿದ್ದೀರಿ ಎಂದು ತಿಳಿಯುತ್ತದೆ. ಹಾಗೂ ಸೋಂಕಿತರು ಹತ್ತಿರ ಬಂದರೆ ಸೂಚನೆ ನೀಡುತ್ತದೆಯಾದ್ದರಿಂದ ಎಲ್ಲರೂ ಈ ಆಪ್‍ನ್ನು ಡೌನ್‍ಲೋಡ್ ಮಾಡಿ ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
5 ಹೊಸ ಪ್ರಕರಣ
ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 5 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಆದರೆ ಯಾವುದೂ ಹೊಸ ಪ್ರಕರಣ ಅಲ್ಲ. ಹಿಂದಿನ ಪಾಸಿಟಿವ್ ಪ್ರಕರಣದ ಸಂಪರ್ಕ ಇರುವವರಾಗಿದ್ದಾರೆ ಎಂದರು.
ಸಿ ಜಿ ಆಸ್ಪತ್ರೆ ಕೋವಿಡ್ ಆಸ್ಪತ್ರೆ
ಜಿಲ್ಲೆಯ ಚಿಗಟೇರಿ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿದ್ದು 300 ಹಾಸಿಗೆಗಳ ವ್ಯವಸ್ಥೆ ಇದೆ. ಇತರೆ ಆರೋಗ್ಯದ ಸಮಸ್ಯೆಗಳಿಗೆ ಬಾಪೂಜಿ, ಎಸ್‍ಎಸ್ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಖಾಸಗಿ ಆಸ್ಪತ್ರೆಗಳು ಈ ವೇಳೆ ತೆರೆದು ಚಿಕಿತ್ಸೆ ನೀಡದಿದ್ದಲ್ಲಿ ಅವರ ಪರವಾನನಿ ರದ್ದುಪಡಿಸಲಾಗುವುದು ಎಂದರು.
ಮೇ 17 ರವರೆಗೆ 60 ವರ್ಷ ಮೇಲ್ಪಟ್ಟವರು, 10 ವರ್ಷದೊಳಗಿನ ಮಕ್ಕಳು ಹೊರ ಹೋಗಬಾರದು. ಹಾಗೂ ನಗರದ ಕೆಲ ಬಡಾವಣೆಗಳ ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಇರಿಸಿರುವ ಬಗ್ಗೆ ಭಯ ಬೇಡ. ಇದರಿಂದ ನಿವಾಸಿಗಳಿಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದರು.
ಅನೇಕರು ಕೊರೊನಾ ಹಿನ್ನೆಲೆಯ ಮಾನಸಿಕ ಖಿನ್ನತೆಯಂತರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೆ 104 ಸಹಾಯವಾಣಿಗೆ ಕರೆ ಮಾಡಿದಲ್ಲಿ ಆಪ್ತ ಸಮಾಲೋಚನೆ ವ್ಯವಸ್ಥೆ ಮಾಡಲಾಗಿದೆ. ಆಪ್ತಮಿತ್ರ ಮತ್ತು ಟೆಲಿ ಐಸಿಯು ವ್ಯವಸ್ಥೆಯನ್ನೂ ರಾಜ್ಯ ಮಟ್ಟದಲ್ಲಿ ಪರಿಣಿತ ತಜ್ಞರಿಂದ ಮಾಡಲಾಗಿದ್ದು, ಸರ್ಕಾರ ಕೊರೊನಾ ನಿಗ್ರಹ ಮತ್ತು ಜನರ ಜೀವ ಉಳಿಸಲು ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಆನರೂ ಸಹಕರಿಸಬೇಕು. ಶುಚಿತ್ವ, ಅಂತರ, ಮಾಸ್ಕ್ ಬಳಸಬೇಕು. ಎಲ್ಲರಿಗೂ ಎನ್ 95, ಸರ್ಜಿಕಲ್ ಮಾಸ್ಕ್ ಬೇಡ. ಹತ್ತಿಯ ಮರು ಬಳಸಬಹುದಾದ ಮಾಸ್ಕ್ ಧರಿಸಬಹುದು ಎಂದರು.
ವೈದ್ಯರು ಮತ್ತು ಹೌಸ್‍ಸರ್ಜನ್‍ಗಳ ಸೇವೆ ದೊಡ್ಡದಾಗಿದ್ದು, ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿರುವ ಹೌಸ್‍ಸರ್ಜನ್ ಮತ್ತು ಪಿಜಿ ವಿದ್ಯಾರ್ಥಿಗಳಿಗೆ 18 ತಿಂಗಳಿಂದ ಶಿಷ್ಯ ಭತ್ಯೆ ಬಂದಿಲ್ಲವೆಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಭತ್ಯೆ ಪಾವತಿಯಾದ ಬಗ್ಗೆ ಆಡಿಟ್ ಆಕ್ಷೇಪಣೆ ಹಿನ್ನೆಲೆ ಭತ್ಯೆ ನಿಲ್ಲಿಸಲಾಗಿದೆ. ಈ ಬಗ್ಗೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ, ಹರಿಹರ ಶಾಸಕರಾದ ರಾಮಪ್ಪ, ವಿಧಾನಪರಿಷತ್ ಶಾಸಕ ನಾರಾಯಣಸ್ವಾಮಿ ಮಾತನಾಡಿದರು. ಶಾಸಕ ಪ್ರೊ.ಲಿಂಗಣ್ಣ, ಜಿ ಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಆಯುಕ್ತ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

