ಸಿನಿ ಸುದ್ದಿ
ಕಾಲಿವುಡ್ ನಟರಿಗೆ ಕೋಟಿ ಕೋಟಿ ಸಂಭಾವನೆ? ಯಾರಿಗೆ ಎಷ್ಟು ಅಂತಾ ಗೊತ್ತ?
ಸುದ್ದಿದಿನ ಡೆಸ್ಕ್: ಬಾಲುವುಡ್ ನಂತೆ ಕಾಲಿವುಡ್ ನಟರೂ ಅತ್ಯಧಿಕ ಮೊತ್ತದ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಬಜೆಟ್ ನ ಅರ್ಧದಷ್ಟು ಆಗುತ್ತದೆ. ಇದು ನಿರ್ಮಾಪಕರಿಗೆ ದೊಡ್ಡ ತಲೆಬೀಸಿಯಾಗಿ ಪರಿಣಮಿಸಿದೆ. ಸಂಭಾವನೆ ಪರಿಷ್ಕರಣೆ ಮಾಡಿಕೊಳ್ಳುವಂತೆ ಆಗ್ರಹಿಸಿ ಕಾಲಿವುಡ್ ನಿರ್ಮಾಪಕರು 48 ದಿನ ತಮಿಳುನಾಡು ಚಿತ್ರ ನಿರ್ಮಾಪಕರ ಮಂಡಳಿ ಪ್ರತಿಭಟನೆ ನಡೆಸಿದೆ.
ನೂರು ಕೋಟಿ ಮೊತ್ತದ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುವ ತೆಲುಗು ನಟ 15ಕೋಟಿ ಸಂಭಾವನೆ ಕೇಳುತ್ತಾನೆ. ತೆಲುಗು ಚಿತ್ರರಂಗದ ಹಿರೋಗಳು ರಿಜನಬಲ್ ಸಂಭಾವನೆ ಪಡೆಯುತ್ತಾರೆ. ಆದರೆ, ಕಾಲಿವುಡ್ ನಲ್ಲಿ ನೂರು ಕೋಟಿ ಬಂಡವಾಳದ ಸಿನಿಮಾದಲ್ಲಿ ನಟಿಸಲು 50ಕೋಟಿ ವರೆಗೂ ಸಂಭಾವನೆ ಬೇಡಿಕೆ ಇಡುತ್ತಾರೆ. ಕಳೆದ ಎರಡು ವರ್ಷಗಳಿಂದ ಕಾಲಿವುಡ್ ನಿರ್ಮಾಪಕರಿಗೆ ಕಷ್ಟದ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಟಾಪ್ ನಟರ ಏರಿಸಬಾರದು ಎಂದು ಅನೇಕ ನಿರ್ಮಾಪಕರು ಒತ್ತಾಯಿಸಿದ್ದರು.
ಚಲನಚಿತ್ರ ಮಂಡಳಿಯು ಟಿಕೆಟ್ ಕಂಪ್ಯೂಟರೈಜ್ ಮಾಡಿರುವುದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್ ಪಾರದರ್ಶಕವಾಗಿದೆ. ಚಿತ್ರ ಗಳಿಕೆ ಆಧರಿಸಿ ನಟ ತನ್ನ ಸಂಭಾವನೆ ಹೆಚ್ಚಿಸಿಕೊಳ್ಳುತ್ತಾನೆ. ಆದರೆ ಇದು ನಿರ್ಮಾಪಕನಿಗೆ ಸಮಸ್ಯೆ ಆಗಿ ಪರಿಣಮಿಸಲಿದೆ.
ಇಲ್ಲಿದೆ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ
ರಜನಿಕಾಂತ್
ಏಷ್ಯಾದಲ್ಲಿ ಜಾಕಿ ಚಾನ್ ಹೊರತುಪಡಿಸಿದರೆ ರಜನಿಕಾಂತ್ ಅತ್ಯಧಿಕ ಸಂಭಾವನೆ ಪಡೆಯುವ ನಟ.
70 ದಶಕದಿಂದ ಇಂದಿನವರೆಗೂ ರಜನಿಕಾಂತ್ ಕಾಲಿವುಡ್ ಆಳುತ್ತಿದ್ದಾರೆ. 2007ರಲ್ಲಿ ತೆರೆಕಂಡ ಶಿವಾಜಿ ಚಿತ್ರದಲ್ಲಿ ನಟಿಸಿದ್ದಕ್ಕೆ 55ಕೋಟಿ ರೂ. ಪಡೆದರೆ ಕಬಾಲಿ ಚಿತ್ರಕ್ಕೆ 80ಕೋಟಿ ರೂ.ಗೆ ತಮ್ಮ ಸಂಭಾವನೆ ಏರಿಸಿಕೊಂಡಿದ್ದಾರೆ. ಬಹುತೇಕ ಎಲ್ಲಾ ಚಿತ್ರಗಳಿಗೆ 60ಕೋಟಿ ಪಡೆದಿದ್ದಾರೆ.
ಕಮಲ್ ಹಾಸನ್
ಕಮಲ್ ಹಾಸನ್ ಚಿತ್ರ ನಿರ್ಮಾಪಕರಿಗೆ ಆರ್ಥಿಕ ಹೊರೆ ಉಂಟು ಮಾಡದ, ರಿಜನಬಲ್ ಸಂಭಾವನೆ ಪಡೆಯುವ ಜನಪ್ರಿಯ ನಟ. ಕಮಲ್ ಹಾಸನ್ ಒಂದು ಚಿತ್ರಕ್ಕೆ 15ರಿಂದ 30 ಸಂಭಾವನೆ ಪಡೆಯುತ್ತಾರೆ. ಆದರೆ, ಬೇರೆ ಕೆಲಸ ವಹಿಸಿಕೊಂಡರೆ ಅದಕ್ಕೆ ಹೆಚ್ಚುವರಿ ವೇತನ ಪಡೆಯುತ್ತಾರೆ.
ದಳಪತಿ ವಿಜಯ್
ದಳಪತಿ ವಿಜಯ್ ಸದ್ಯ ಯುವ ನಟರಲ್ಲಿ ಹೆಚ್ಚು ಸಂಭಾವನೆ ಪಡೆಯುವ ನಟ. ಹತ್ತಿರ ಹತ್ತಿರ ರಜನಿಕಾಂತ್ ಅಷ್ಟೆ ವೇತನ ಗಳಿಸುತ್ತಾರೆ. ಚಿಂಬುದೇವನ್ ಅವರ ಫ್ಯಾಂಟಸಿ ಅಡ್ವೆಂಚರ್ ಸಿನಿಮಾ *ಪುಲಿ* ಸಿನಿಮಾಗೆ 30ಕೋಟಿ ಪಡೆದಿದ್ದಾರೆ.
130 ಕೋಟಿ ಬಜೆಟ್ ಸಿನಿಮಾ *ಮಾರ್ಷಲ್* ನಲ್ಲಿ ತಮ್ಮ ಸಂಬಳ ಹೆಚ್ಚಿಸಿಕೊಂಡಿದ್ದಾರೆ.
ಅಜಿತ್
ಅಜಿತ್ ನಟನೆಯ ವಿವೇಕಂ ಚಿತ್ರವು ಭಾರಿ ಮೊತ್ತ ಹಣ ಬಾಜಿಕೊಂಡಿತು. ಇದು ಸಿನಿಮಾ ಕರೀಯರ್ ನಲ್ಲಿ ಹೆಚ್ಚು ಮೊತ್ತ ಗಳಿಸಿದ ಚಿತ್ರ. ಇವರು ಸಾಮಾನ್ಯವಾಗಿ 25ರಿಂದ 40 ಕೋಟಿ ಸಂಭಾವನೆ ಪಡೆಯುತ್ತಾರೆ. ಮುಂದೆ ತಮ್ಮ ವೇತನ ಹೆಚ್ಚಿಸಿಕೊಳ್ಳಬಹುದು.
ಸೂರ್ಯ
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹೆಚ್ವು ಅಭಿಮಾನಿಗಳನ್ನು ಹೊಂದಿರುವ ನಟ ಸೂರ್ಯ. ಸೂರ್ಯ ನಟಿಸಿದ ಸಿನಿಮಾಗಳು ಬೇರೆ ಡಬ್ ಆದರೂ ದೊಡ್ಡ ಲಾಭ ತಂದುಕೊಡುತ್ತವೆ. ಹಾಗಾಗಿ, ಸೂರ್ಯ ತಮಿಳು ಸಿನಿಮಾಗೆ 18ರಿಂದ 25 ಕೋಟಿ ಪಡೆದರೆ, ಡಬ್ ಸಿನೆಮಾಗಳಿಗೆ 10ಕೋಟಿ ಗಳಿಸುತ್ತಾರೆ.
ವಿಕ್ರಂ
ಪಾತ್ರಕ್ಕೆ ಜೀವ ತುಂಬುವಂತೆ ಪಕ್ವ ನಟನೆಯ ಹೀರೋ ವಿಕ್ರಂ. ಚಿತ್ರ ಪಾತ್ರ ನ್ಯಾಯ ಒದಗಿಸಲು ವಿಕ್ರಂ ತಮ್ಮ ದೇಹ ತೂಕವನ್ನು 20ಕೆಜಿ ಇಳಿಸಿಕೊಂಡಿದ್ದರು. ಸಾಮಾನ್ಯವಾಗಿ ವಿಕ್ರಂ 15ರಿಂದ 20 ಕೋಟಿ ರೂ. ಗಳಿಸುತ್ತಾರೆ.
ಧನುಷ್
ಧನುಷ್ ಅವರ ಸಿನಿಮಾ ಪಯಣ ಯುವ ಪ್ರತಿಭೆಗಳಿಗೆ ಪ್ರೇರಣೆ. ಹೀರೋ ಆಗಿ ಕಾಣಿಸಿಕೊಳ್ಳುವ ಲೂಕ್ ಆಗಲಿ, ಪರ್ಸನಾಲಿಟಿ ಇಲ್ಲ. ಅವರ ಕಾಯಕ ಶ್ರದ್ಧೆ ತಮ್ಮ ಮೈನಸ್ ಪಾಯಿಂಟ್ ನ್ನು ಮೀರಿ ನಿಂತು ಹಾಲಿವುಡ್ ಹೀರೋ ಆಗಿದ್ದಾರೆ.
ಧನುಷ್ ಕೂಡ ಒಬ್ಬ ಪ್ರಡ್ಯುಜರ್ ಆಗಿದ್ದು, ಒಂದು ಸಿನಿಮಾಕ್ಕೆ 20ಕೋಟಿ ಸಂಭಾವನೆ ಗಳಿಸುತ್ತಾರೆ. ಪ್ರಡಕ್ಷನ್ ಕಂಪನಿಗೆ ತಕ್ಕಂತೆ ವೇತನ ಹೆಚ್ಚಿಸಿಕೊಳ್ಳುತ್ತಾರೆ, ಕಡಿಮೆಯೂ ಮಾಡಿಕೊಳ್ಳುತ್ತಾರೆ.
ಸಿಂಬು ಅಕ ಎಸ್.ಟಿ.ಆರ್.
ಧನುಷ್ ಅವರಂತೆ ಬಹುಮುಖ ಪ್ರತಿಭಾ ನಟ *ಸಿಂಬು ಅಕ ಎಸ್.ಟಿ.ಆರ್*. *ಮನ್ಮಥನ್*, *ವಲ್ಲವನ್* ಚಿತ್ರಗಳು ಅವರ ಪ್ರತಿಭೆಗೆ ಸಾಕ್ಷಿಯಾಗಿವೆ. ಆದರೆ, ಸೆಟ್‌ಗಳಲ್ಲಿ ಅವರ ಅನ್ ಪ್ರೊಫೆಷನಲ್ ಬಿಹೆವಿಯರ್ ಬಗ್ಗೆ ಫಿಲ್ಮ್ ಮೇಕರ್ ಗಳಲ್ಲಿ ಅಸಮಾಧಾನವಿದೆ. ಆದರೂ, ಅವರ ಫ್ಯಾನ್ಸ್ ಮಾತ್ರ ಪ್ರೋತ್ಸಾಹಿಸುತ್ತಾರೆ. ಇವರು ಒಂದು ಸಿನಿಮಾಗೆ 10ಕೋಟಿ ವೇತನ ತೆಗೆಕೊಳ್ಳುತ್ತಾರೆ.

ಅಂಕಣ
ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.
ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.
ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.
ನಾಯಕ ನಟನಾಗಿ ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.
ಇನ್ನು 2022ರಲ್ಲಿ ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪರಿಶ್ರಮ ಮತ್ತು ಫಿಟ್ನೆಸ್
ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.
ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್
ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ
ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.
ಬಂಜಾರ ಹವೇಲಿಯ ಹರಿಕಾರ
ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.
ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.
ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ7 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ2 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..


