Connect with us

ದಿನದ ಸುದ್ದಿ

ನಿಮ್ಮ‌ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು : ಇಂದೇ ಕರೆ ಮಾಡಿ

Published

on

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ, ಅವರ ಬೇಕು ಬೇಡಗಳಿಗೆ ನಿಮ್ಮಿಂದ ಸಕಾರಾತ್ಮಕ ಉತ್ತರ ವಿರಲಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಜಯ ಸಂಪಾದನೆ ಆಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವುದು ನಿಶ್ಚಿತ. ಗುರುಮುಖೇನ ಮಾರ್ಗದರ್ಶನದಿಂದ ಬಹುದೊಡ್ಡ ಯೋಜನೆಯನ್ನು ರೂಪಿಸುವಿರಿ. ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನಿಸುವುದು ಮುಖ್ಯ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಕಚೇರಿ ಕೆಲಸಗಳಲ್ಲಿ ಹಾಗೂ ನಿಮ್ಮ ಕೌಟುಂಬಿಕ ವ್ಯಾಜ್ಯಗಳು ಮಾನಸಿಕ ಚಿಂತೆ ತರಲಿದೆ. ಉದ್ಯೋಗದಲ್ಲಿ ಹೊಸ ಕೆಲಸದ ಅವಕಾಶ ಸಿಗುವುದು. ಯಶಸ್ಸಿಗೆ ಬೇಕಾಗಿರುವ ಸೌಕರ್ಯ ಹಿರಿಯರಿಂದ ಪ್ರಾಪ್ತಿಯಾಗಲಿದೆ. ಸಂಗಾತಿಯೊಡನೆ ಪ್ರೇಮದಿಂದ ಕಾಲ ಕಳೆಯುತ್ತೀರಿ. ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾದ ಮಾರ್ಗವನ್ನು ಹುಡುಕುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ನಿಮ್ಮ ಮಾತುಗಳು ಹಾಗೂ ಕೆಲಸವು ಗೆಲುವಿನ ದಾರಿ ಸೂಚಿಸುತ್ತದೆ. ಜನಗಳ ಜೊತೆಗೆ ಹೆಚ್ಚಾಗಿ ಬೆರೆಯುವಿರಿ. ಒಡನಾಡಿಗಳ ಯೋಗ ಕ್ಷೇಮ ವಿಚಾರಿಸುವ ವ್ಯವಧಾನ ತೋರಿಸುತ್ತೀರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಮುದ ನೀಡುವ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಕೆಲಸದ ಜಾಗದಲ್ಲಿ ಅನಗತ್ಯವಾಗಿ ನಿಮ್ಮ ವಿರುದ್ಧ ದೋಷಾರೋಪಗಳು ಮಾಡುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಕೆಲವರು ನಿಮ್ಮ ಹಿತ ಬಯಸುವ ಜನಗಳು ನಿಮ್ಮ ಕಷ್ಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬೇಡಿ. ಆದಷ್ಟು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ. ಕೆಲಸದಲ್ಲಿ ಹೆಚ್ಚಿನ ಅವಕಾಶಗಳು ಪ್ರಾಪ್ತಿಯಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲಸದ ಒತ್ತಡ ಹಾಗೂ ಓಡಾಟಗಳಿಂದ ಆರೋಗ್ಯದಲ್ಲಿ ಬದಲಾವಣೆಯಾಗಬಹುದು, ಆದಷ್ಟು ಎಚ್ಚರಿಕೆ ಇರಲಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಭಾವನಾ ಜೀವಿಯಾಗಿ ಕಂಡುಬರುತ್ತೀರಿ. ಕಷ್ಟದ ವಿಚಾರಗಳಿಗೆ ನೀವು ಸ್ಪಂದಿಸುವ ಮನೋಭಾವ ಎಲ್ಲರೂ ಶ್ಲಾಘಿಸಲಾದ್ದಾರೆ. ಮಕ್ಕಳ ಪ್ರಗತಿಯ ಬಗ್ಗೆ ಆದಷ್ಟು ಗಮನ ವಹಿಸಬೇಕಾಗಿದೆ. ನಿಮ್ಮಿಂದ ನಡೆಯಬೇಕಾಗಿರುವ ಶುಭಕಾರ್ಯವನ್ನು ಜ್ಞಾಪಿಸಿಕೊಳ್ಳಲಿದ್ದೀರಿ, ಇದಕ್ಕೆ ಅವಶ್ಯಕ ತಯಾರಿ ಸಹ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ಕ್ರಯವಿಕ್ರಯ ಗಳಲ್ಲಿ ಗೆಲುವಿನ ನಗೆ ಕಂಡುಬರುತ್ತದೆ. ಸಂತೋಷದ ಸಮಾರಂಭಗಳಿಗೆ ಕುಟುಂಬದೊಡನೆ ಪಾಲ್ಗೊಳ್ಳಲಿದ್ದೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಆರೋಗ್ಯದ ಸಮಸ್ಯೆ ನಿಮಗೆ ಹೆಚ್ಚು ತೊಂದರೆ ನೀಡಬಹುದಾಗಿದೆ. ಎಲ್ಲರಲ್ಲೂ ಬೆರೆಯುವ ನಿಮ್ಮ ಸ್ವಭಾವ ಆಕರ್ಷಣೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತದೆ. ಮೋಜಿನ ಮತ್ತು ಮನರಂಜನೆಗಾಗಿ ಅವಕಾಶ ಸಿಗಲಿದೆ. ಹೆಚ್ಚುವರಿ ಜ್ಞಾನ ಪಡೆಯಲು ಸಶಕ್ತರಾಗಿ, ಕೌಶಲ್ಯಗಳಲ್ಲಿ ಸಮಯವನ್ನು ವಿನಿಯೋಗಿಸುವುದು ಸೂಕ್ತ. ನಿಮ್ಮ ಮಡದಿಯು ಇಂದು ನಿಮ್ಮ ಕಣ್ಣಿಗೆ ಅತಿಸುಂದರವಾಗಿ ಕಾಣುತ್ತಾರೆ. ನಿಮ್ಮಲ್ಲಿನ ಉತ್ಸಾಹದಿಂದ ಅನುಕೂಲಕರ ಪಲಿತಾಂಶ ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಹಣಕಾಸಿನ ಸಮಸ್ಯೆಗೆ ಉತ್ತಮ ಮಾರ್ಗಗಳನ್ನು ಯೋಚಿಸುತ್ತೀರಿ ಹಾಗೂ ಕಾರ್ಯಗಳನ್ನು ರಚನಾತ್ಮಕವಾಗಿ ಮಾಡಲಿದ್ದೀರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

Published

on

ಶಕ್ತಿ ಯೋಜನೆಗೆ ಸರ್ಕಾರದ ಬೆಂಬಲ, ಸಾರಿಗೆ ನಿಗಮಗಳಿಗೆ ಬಾಕಿ ಹೊರೆ; ₹5,651 ಕೋಟಿ ಟಿಕೆಟ್‌ ಹಣ ಯಾವಾಗ?

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್‌ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್‌, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.

ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ

ಕಾಂಗ್ರೆಸ್‌ ಸರ್ಕಾರ 2023ರ ಜೂನ್‌ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.

2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್‌ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.

₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ

ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.

ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.

ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?

ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್‌ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್‌ ಖರೀದಿ, ಬಸ್‌ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.

₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ

ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್‌ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್‌ ಖರೀದಿ, ವೇತನ, ಡೀಸೆಲ್‌, ಪಿಎಫ್‌ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.

ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್‌ ಬಸ್‌ಗಳ ಜತೆಗೆ ಎಲೆಕ್ಟ್ರಿಕ್‌ ಬಸ್‌ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.

ಸಕಾಲಿಕ ಪಾವತಿಯೇ ಪರಿಹಾರವೇ?

ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

Continue Reading

ದಿನದ ಸುದ್ದಿ

ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

Published

on

ನೀರು ತುಂಬಿದರೆ ಹಬ್ಬ, ಬರಿದಾದರೆ ಆತಂಕ; ಕೃಷಿ, ಕುಡಿಯುವ ನೀರು, ವಿದ್ಯುತ್‌ ಹಾಗೂ ಪರಿಸರಕ್ಕೆ ಭದ್ರೆಯೇ ಆಧಾರ

ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್‌ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.

http://Visit : www.suddidina.com

ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.

ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್‌ ಉದ್ದ ಹಾಗೂ 59.14 ಮೀಟರ್‌ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್‌ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.

ಒಣಭೂಮಿಗೆ ಹಸಿರು ಹೊದಿಸಿದ ನೀರು

ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್‌ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸುತ್ತದೆ.

ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.

ಕುಡಿಯುವ ನೀರಿಗೂ ಭದ್ರೆಯೇ ಆಸರೆ

ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.

ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು

ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್‌ ಘನ ಮೀಟರ್‌ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್‌ ಸ್ಟೋರೇಜ್‌ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.

ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.

ಭದ್ರೆಯ ಅಂಕಿ-ಅಂಶಗಳು

  • ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
  • ಅಣೆಕಟ್ಟು ಎತ್ತರ: 59.14 ಮೀಟರ್‌
  • ಅಣೆಕಟ್ಟು ಉದ್ದ: 1,708 ಮೀಟರ್‌
  • ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
  • ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್‌
  • ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.
Continue Reading

ದಿನದ ಸುದ್ದಿ

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

Published

on

ಜಾತಿಯ ಗೋಡೆ ಒಡೆದು ಮದುವೆಯಾದ ಜೋಡಿಗೆ ಹೊಸ ಸಂಕಷ್ಟ: ಪ್ರೋತ್ಸಾಹಧನಕ್ಕೆ ಅರ್ಜಿ ಹಾಕಿದರೂ ಹಣ ಮಾತ್ರ ಮರೀಚಿಕೆ!

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.

ಹೈಲೈಟ್ಸ್: 
  • SC/ST ಪುರುಷ–ಬೇರೆ ಜಾತಿಯ ಮಹಿಳೆ ವಿವಾಹಕ್ಕೆ ₹2.50 ಲಕ್ಷ ನೆರವು
  • SC/ST ಮಹಿಳೆ–ಬೇರೆ ಜಾತಿಯ ಪುರುಷ ವಿವಾಹಕ್ಕೆ ₹3 ಲಕ್ಷ ಪ್ರೋತ್ಸಾಹಧನ
  • 2025-26ರಲ್ಲಿ 5,612 ಅರ್ಜಿಗಳ ಪೈಕಿ 3,997 ಅರ್ಜಿಗಳು ಬಾಕಿ
  • 2026-27ರಲ್ಲಿ 2,194 ಅರ್ಜಿಗಳು; 61ಕ್ಕೆ ಅನುಮೋದನೆ, ಆದರೆ ಹಣ ಪಾವತಿ ಶೂನ್ಯ
  • ಅನುದಾನ ಕೊರತೆ ಮತ್ತು ಅಪೂರ್ಣ ದಾಖಲೆಗಳಿಂದ ಯೋಜನೆ ಅನುಷ್ಠಾನಕ್ಕೆ ವಿಳಂಬ

http://Visit : www.suddidina.com

ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?

ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.

ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.

ಹೊಸ ಸಾಲಿನಲ್ಲೂ ಅದೇ ಕಥೆ

2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.

ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ

ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.

2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.

2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ

  • 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
  • ಮೊದಲ ಕಂತಿಗೆ ಅನುಮೋದನೆ: 61
  • ಪ್ರೋತ್ಸಾಹ ಧನ ಪಾವತಿ: 00
  • ಅಪೂರ್ಣ ಅರ್ಜಿಗಳು: 392
  • ತಿರಸ್ಕಾರಗೊಂಡ ಅರ್ಜಿಗಳು: 02

ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ

ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.

ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

Continue Reading

Trending