Connect with us

ದಿನದ ಸುದ್ದಿ

ಒಂದೇ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಹುದು : ಕೂಡಲೇ ಕರೆಮಾಡಿ

Published

on

ಶ್ರೀ ನಾರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಮನರಂಜನೆಗೆ ಅಧಿಕ ಸಮಯ ಮೀಸಲಿಡುವಿರಿ. ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಮನೆಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಆಸಕ್ತಿ ತೋರುವಿರಿ. ಹತ್ತಿರದ ಬಂಧು ಅಥವಾ ಸ್ನೇಹಿತರ ಬೇಟಿಯಾಗುವ ಅವಕಾಶಗಳು ಇಂದು ಸಿಗಲಿದೆ. ದೊಡ್ಡಮಟ್ಟದ ಯೋಜನೆಗಳು ಅಂತಿಮ ಸ್ವರೂಪ ಪಡೆದುಕೊಳ್ಳಲಿದೆ. ನಿಮ್ಮ ಆರ್ಥಿಕ ಚತುರತೆ ಹಾಗೂ ಸ್ಪರ್ಧಾಮನೋಭಾವ ಎಲ್ಲ ರಂಗದಲ್ಲೂ ಉತ್ತಮ ಗೆಲುವು ಸಂಪಾದನೆಗೆ ಸಹಕಾರಿಯಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಸಂಗಾತಿಯಿಂದ ವಿಶೇಷವಾದ ಉಡುಗೊರೆಯನ್ನು ಪಡೆಯುವ ವ್ಯವಸ್ಥೆ ಕಾಣಬಹುದು. ಈ ದಿನ ನಿಮ್ಮ ಸಮಯ ಹಾಗೂ ವಿಚಾರಗಳನ್ನು ಇತರರ ಒಳಿತಿಗಾಗಿ ಶ್ರಮಿಸುವ ಸಾಧ್ಯತೆ ಕಾಣಬಹುದು. ನಿಮಗೆ ಸಂಬಂಧವಿಲ್ಲದ ವಿಷಯಗಳಲ್ಲಿ ಆದಷ್ಟು ಮುಂದುವರಿಯುವುದು ಬೇಡ. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಾಣಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ಕೌಟುಂಬಿಕ ಅವಶ್ಯಕತೆಗಳನ್ನು ಪೂರೈಸಲು ಬದ್ಧರಾಗಿ. ಕೆಲವು ಮಾತುಗಳು ಇತರರಿಗೆ ಮುಜುಗರ ತರಿಸುವುದು ಆದಷ್ಟು ಮಾತಿನಲ್ಲಿ ಜಾಗ್ರತೆವಹಿಸಿ. ಹೂಡಿಕೆಗಳು ನಿಮ್ಮನ್ನು ದಾರಿ ತಪ್ಪಿಸಬಹುದಾಗಿದೆ ಆದಷ್ಟು ಅದರ ಬಗ್ಗೆ ಪೂರ್ವಪರ ತಿಳಿದುಕೊಳ್ಳಿ ನಿಪುಣರ ಸಹಾಯ ಪಡೆಯಿರಿ. ನಿಮ್ಮ ಕೆಲವು ಆಲೋಚನೆಗಳು ಜನಗಳ ಮೇಲೆ ಪ್ರಭಾವ ಬೀರಬಹುದಾದ ಅಂಶಗಳು ಪರಿಚಯಿಸಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಸಂಗಾತಿಯ ನೋಟ ಸುಂದರವಾದ ವದನ ನಿಮಗೆ ಆನಂದ ತರಿಸುವ ಮುಖ್ಯವಾದ ಅಂಶವಾಗಿದೆ. ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ನಿಮ್ಮ ಬಿಡುವಿಲ್ಲದ ಸಮಯದಿಂದ ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರಬಹುದು ಆದಷ್ಟು ಇದರ ಬಗ್ಗೆ ಗಮನವಹಿಸಿ. ಯೋಜನೆಯ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕೆಲವು ಜವಾಬ್ದಾರಿಗಳು ನೀವು ಪೂರೈಸಲು ಕಟಿಬದ್ಧರಾಗಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು. ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯ ಅಗತ್ಯ : ಡಾ. ವೆಂಕಟೇಶ್ ಬಾಬು

Published

on

ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು.

ಬುಧವಾರ ಶ್ರೀ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಕೋಶದ ಪ್ರೇರಣಾ ವಿಭಾಗದ ವತಿಯಿಂದ ಸ್ನಾತಕೊತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಡಿಜಿಟಲ್ ಸ್ಕಿಲ್ಸ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಂಪ್ಯೂಟರ್ ಆಧರಿತ ಉದ್ಯೋಗದ ಕೌಶಲಗಳನ್ನು ಹೊಂದಿದ್ದರೆ ಉದ್ಯೋಗಗಳು ನಮ್ಮನ್ನ ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.

ಕಾಲೇಜಿನ ಅಲ್ಮನಿ ವಿದ್ಯಾರ್ಥಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿರುವ ಶ್ರೀ ಮಧು ಜಿ.ಟಿ ರವರು ತಾನು ಈ ಕಾಲೇಜಿನಲ್ಲಿ ಕಲಿಯುವಾಗ ಇಲ್ಲದಿರುವ ಎಲ್ಲಾ ಸೌಲಭ್ಯಗಳು/ ಅವಕಾಶಗಳು ಈಗ ದೊರೆಯುತ್ತಿವೆ ವಿದ್ಯಾರ್ಥಿಗಳು ಅವುಗಳನ್ನು ಬಳಸಿಕೊಂಡು ತಮ್ಮ ಭವಿಷ್ಯ ಕಟ್ಟಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಅಮೃತೇಶ್ವರ ಬಿ.ಜಿ ಅವರು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ಸ್ಕಿಲ್ ಹಾಗೂ ಇಂಗ್ಲಿಷ್ ಸಂವಹನ ಜ್ಞಾನದ ಅವಶ್ಯಕತೆ ಇದ್ದು ಪದವಿಯೊಂದಿಗೆ ಡಿಜಿಟಲ್ ಕೌಶಲ್ಯಗಳ ಅರಿ ವನ್ನು ವಿದ್ಯಾರ್ಥಿಗಳಿಗೆ ಕಾಲೇಜಿನ ಉದ್ಯೋಗ ಕೋಶ ವೇದಿಕೆಯು ಉಚಿತವಾಗಿ ನೀಡುತ್ತಿದೆ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಲು ಕರೆ ನೀಡಿದರು.

ಡಾ. ಮಂಜುಳಾ ಟಿ ಪ್ಲೇಸ್ಮೆಂಟ್ ಸೆಲ್ ಸಂಚಾಲಕರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವರ್ತಮಾನದ ಜಗತ್ತಿಗೆ ಡಿಜಿಟಲ್ ಕೌಶಲ ವಿಶೇಷವಾಗಿ ವಿದ್ಯಾರ್ಥಿ ಗಳು ಅತಿ ತುರ್ತಾಗಿ ಕಲಿಯುವ ಅವಶ್ಯಕತೆ ಇದೆ ಎಂದರು.

ಬಿ ಸಿ ಎ/ ಸಿ ಎಸ್ ವಿಭಾಗದ ಮುಖ್ಯಸ್ಥರು ಶ್ರೀಮುರುಳಿಧರವರು, ವಾಣಿಜ್ಯಶಾಸ್ತ್ರ ವಿಭಾಗದ ಲಕ್ಷ್ಮಿ ರಂಗನಾಥ್, ಐಕ್ಯೂ ಏ ಸಿ ಸಂಚಾಲಕರಾದ ಶ್ರೀವಿಜಯಕುಮಾರ್ ಎನ್ ಸಿ ಡಾ. ಪ್ರದೀಪ್ ಕುಮಾರ್. ಡಾ. ದಾಕ್ಷಾಯಿಣಿ ಡೋಂಗ್ರೆ ಹಾಗೂ ಬೋಧಕ/ ಬೋಧಕೇತ ತರರು ಹಾಜರಿದ್ದರು.

ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆದ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಸ್ಕಿಲ್ಸ್ ಸರ್ಟಿಫಿಕೇಟ್ ಕೋರ್ಸ್ ಹಾಗೂ ವಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಉದ್ಘಾಟಿಸಲಾಯಿತು ಇಂದಿನಿಂದ ಸತತ 15 ದಿನಗಳು ಮದ್ಯಾಹ್ನ 2:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಿಜಿಟಲ್ ಸ್ಕಿಲ ಬಗ್ಗೆ ಪ್ರಾಯೋಗಿಕ ತರಗತಿಗಳು ಮತ್ತು ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಪಿಜಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಇದೇ ಸಂದರ್ಭದಲ್ಲಿ ಸೂಚಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ

Published

on

ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ ನೊಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

ನೋಂದಣಿ ಕೇಂದ್ರಗಳು

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ದಾವಣಗೆರೆ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹೊನ್ನಾಳ್ಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಜಗಳೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹರಿಹರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಚನ್ನಗಿರಿ ಇಲ್ಲಿ ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೊಂದಣಿ ಮಾಡಿಕೊಳ್ಳಲು ತಿಳಿಸಿದೆ. ನೊಂದಣಿ ಆರಂಭವಾಗಿದ್ದು 2025 ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಖರೀದಿಸಲಾಗುವುದು.

ರೈತರು ಕೃಷಿ ಇಲಾಖೆ ನೀಡಿರುವ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಫೂಟ್ ನೊಂದಣಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಸಾಧನದ ಮುಖಾಂತರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಫೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‍ಪಿಸಿಎಲ್ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕು.

ರೈತರು ತಾವು ನೀಡುವ ಎಲ್ಲಾ ದಾಖಲಾತಿಗಳಲ್ಲಿಯೂ ಒಂದೇ ಹೆಸರು ನಮೂದಾಗಿರತಕ್ಕದ್ದು, ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ನೇಮಿಸಲ್ಪಟ್ಟ ಗ್ರೇಡರ್ಸ್ ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ಧೃಢಪಟ್ಟರೆ ಮಾತ್ರ ಖರೀದಿಸಲಾಗುವುದು. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ಹಿಂದಕ್ಕೆ ತೆಗೆದುಕೊಂಡು ಹೋಗಬೇಕು.

ಪ್ರತಿ ರೈತರಿಂದ ಪ್ರತಿ ಎಕರೆಗೆ ರಾಗಿ 10.00 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ರೈತರಿಂದ ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಶೀಲ್ದಾರರು, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ), ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ -08192-296770 ಗೆ ಕರೆಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending