Connect with us

ಕ್ರೀಡೆ

ಜಿಮ್ನಾಸ್ಟಿಕ್ ನ ಸ್ಪ್ರಿಂಗ್ ಮ್ಯಾನ್..!

Published

on

ರಾಘವೇಂದ್ರ ಆರ್ ಅರಳಿಕಟ್ಟಿ
  • ಡಾ. ಗಿರೀಶ್ ಮೂಗ್ತಿಹಳ್ಳಿ

ಲೆ ಸಾಹಿತ್ಯ ಸಂಸ್ಕೃತಿ ಗೆ ಹೆಸರುವಾಸಿ ಆದ ಮೈಸೂರು, ಹಲವಾರು ಸಾಧಕ ರ ತವರೂರಾಗಿದೆ.
ತಾಯಿ ಚಾಮುಂಡೇಶ್ವರಿ ಯ ಆಶೀರ್ವಾದವಿರುವ ಈ ಊರಿನಲ್ಲಿ ಸಾಧಕರಿಗೇನು ಕೊರತೆ ಇಲ್ಲ.
ಅಂತಹ ಸಾಧಕರ ಪಟ್ಟಿಯಲ್ಲಿ ಸೇರಿರುವ ರಾಘವೇಂದ್ರ ಆರ್ ಅರಳಿಕಟ್ಟಿ ಎಂಬ ಪ್ರತಿಭಾನ್ವಿತನ ಪರಿಚಯ ಇಲ್ಲಿದೆ.

ಬಡ ಕುಟುಂಬ ದಲ್ಲಿ ಜನಿಸಿದ ಇವರು ತಾಯಿ ಸರಸ್ವತಿ ಅರಳಿಕಟ್ಟಿ ಯವರ ಆಶ್ರಯ ದಲ್ಲಿ ಬೆಳೆದರೂ ಇವರ ಆಸೆ ಗುರಿ ಬಡತನ ವನ್ನು ಮೀರಿದ್ದಾಗಿತ್ತು. ಬಾಲ್ಯದಿಂದ gymnastics ಕ್ರೀಡಾ ಪಟು ಆದ ಇವರು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಪದಕ ವಿಜೇತರು.

ಕಳೆದ ಸಾಲಿನಲ್ಲಿ Sports Authority of India,
National Instute of Sports
Gymnastics Coaching Diploma ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ ಮೈಸೂರಿಗೆ ಮರಳಿದ್ದಾರೆ.ತಮ್ಮ ವೃತ್ತಿ ಬದುಕನ್ನು gymnastics ತರಬೇತು ದಾರನಾಗಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.

ಈ ವರೆಗೆ ಇವರ ಕ್ರೀಡಾಕ್ಷೇತ್ರದ ಸಾಧನೆಗೆ ಬೆಂಬಲವಿತ್ತ ಇವರ ತರಬೇತುದಾರರಾದ ಅರುಣ್ ಕುಮಾರ್ ಪಾಟೀಲ್(SAI COACH ), ಸುಧೀರ್ ದೇವದಾಸ್, ಬಾಲು, ಲೋಕೇಶ್, Ashok ಮಿಶ್ರ (SAI COACH ), Lakhan sharma(SAI COACH ), ಚಂದ್ರ ಶೇಖರ್ ನಾಯ್ಡು (SAI COACH ) ಇವರುಗಳಿಂದ ತಮ್ಮನ್ನು ಇನ್ನು ಪಕ್ವಮಾಡಿಕೊಳ್ಳುತ್ತಿದ್ದಾರೆ.

ತಮ್ಮದೇ ಉತ್ತಮ ಗುಣಮಟ್ಟದ Acadamy ಯನ್ನು ಸ್ಥಾಪಿಸುವ ಮಹದಾಸೆಯನ್ನು ಹೊಂದಿರುವ ಇವರು, Karnataka Gymnastics ಕ್ರೀಡೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜೇತ ಗೊಳಿಸುವ ಹಾಗೂ ಎಲ್ಲ ವಯೋಮಾನ ದ ಆಸಕ್ತಿ ಉಳ್ಳವರ ದೈಹಿಕ ಸದೃಢತೆಯ ತರಬೇತಿ ಯನ್ನು ನೀಡಿ ಉತ್ತಮ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದ ಗುರಿ ಹೊಂದಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಾಹಿತ್ಯ ವಿದ್ಯಾರ್ಥಿಯಾದ ಇವರು ತಮ್ಮದೇ ಬರೆವಣಿಗೆ ಶೈಲಿಯನ್ನು ಕಂಡುಕೊಂಡಿದ್ದಾರೆ.

ಕೃಷಿ ಕ್ರಾಂತಿ ಪರಿಹಾರ ಸಾಹಿತ್ಯ (ಪಂಥ )’ ಎಂಬ ನಿಲುವನ್ನು ಹೊಂದಿರುವ ಇವರು, ಕೃಷಿ ಎಂಬುವುದು ಹೊಲದಲ್ಲಿ ಬೆಳೆ ಬೆಳೆಯುವದರ ಜೊತೆಗೆ, ಸಮಾಜದ ಎಲ್ಲ ಕ್ಷೇತ್ರ ದಲ್ಲಿಯೂ ಕೃಷಿ ಇದೆ. ಹಾಗಾಗಿ ಉತ್ತಮ ಸಮಾಜಕ್ಕಾಗಿ ಕೃಷಿಯಲ್ಲಿ ಕ್ರಾಂತಿ ಯಾಗಬೇಕಿದೆ. ಹಾಗಾಗಿ ನನ್ನ ವಿಚಾರ ಧಾರೆ ಅದರ ಕಡೆಗಿದೆ ಎಂದು ಹೇಳುತ್ತಾರೆ

ವರ್ಣನೆ, ವಾಸ್ತವ ಎಲ್ಲ ದಿಕ್ಕಿನಿಂದಲೂ ನೋಡುವ ಜೊತೆಗೆ ಪರಿಹರಿಸುವ ಕೃಷಿ ಕ್ರಾಂತಿ ಪರಿಹಾರ ಸಾಹಿತ್ಯಕ್ಕೆ ನಾಂದಿ ಯಾಗಲಿದೆ ಎಂದು ಸಿದ್ಧಾಂತ ಮಂಡಿಸುತ್ತಾರೆ. ಕಥೆ, ಕವನ, ನಾಟಕ, ಕ್ರೀಡೆ, ಜಾನಪದ ಗೀತೆ, ಸಿನಿಮಾ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡಿರುವ ಇವರು ತಮ್ಮ ಬರೆವಣಿಗೆಯಲ್ಲಿ “ನಗು ” ವಿನ ವಿಚಾರಕ್ಕೆ ಹೆಚ್ಚು ಒತ್ತುಕೊಡುತ್ತಾರೆ. ವರ್ಣನೆ, ಕನಸು, ವಾಸ್ತವಗಳ ಜೊತೆಯಲ್ಲಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ತಿಳಿವಳಿಕೆಗಾರನಾಗಬೇಕು ಎಂಬ ಜವಾಬ್ದಾರಿ ಲೇಖಕನದ್ದು ಆಗಿರುತ್ತದೆ ಎನ್ನುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending