Connect with us

ಬಹಿರಂಗ

ಕೆ.ಆರ್.ಎಸ್.ನಿರ್ಮಾಣ : ಮತ್ತಷ್ಟು ಇತಿಹಾಸ

Published

on

  • ರಘೋತ್ತಮ ಹೊ.ಬ

ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜಒಡೆಯರ್‍ರವರು.

ಬ್ರಿಟಿಷರೊಂದಿಗೆ ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್ ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!

ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು.

ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನಿರಂತರ ನೀರು ಸರಬರಾಜು ಮಾಡಲು ಶಿವನಸಮುದ್ರದ ಹತ್ತಿರ ತೋರೆಕಾಡನಹಳ್ಳಿ ಎಂಬಲ್ಲಿ ಚೆಕ್‍ಡ್ಯಾಂ ನಿರ್ಮಿಸಲು ಕೂಡ ಒಡೆಯರ್‍ರವರು ಆಲೋಚಿಸಿದರು. ಹಾಗೆಯೇ ಅದರ ನಿರ್ಮಾಣ ಕೂಡ ಆಯಿತು ಆದರೆ ಕೆಲವೇ ಅಡಿಗಳಷ್ಟಿದ್ದ ಚೆಕ್‍ಡ್ಯಾಂ ನೀರು ಏನೇನಕ್ಕು ಸಾಲುತ್ತಿರಲಿಲ್ಲ. ಕಡೆಗೆ ಚಿನ್ನದ ಗಣಿಗೆ ವಿದ್ಯುತ್ ಪೂರೈಕೆ ಮಾಡಲೇಬೇಕಾದ ಒತ್ತಡಕ್ಕೆ ಸಿಲುಕಿದ ಅವರು 1904 ರಲ್ಲಿ ಜೋಗ್ ಬಳಿ ವಿದ್ಯುತ್ ಉತ್ಪಾದನೆ ಮಾಡಲು ಅನುಮತಿ ಕೋರಿ ಅಂದಿನ ಬ್ರೀಟಿಷ್ ವೈಸ್ ರಾಯ್ ಲಾರ್ಡ ಕರ್ಜನ್‍ರವರಿಗೆ ಪತ್ರ ಕೂಡ ಬರೆದರು.

ಆದರೆ ಪರಿಸರದ ನೆಪ ಒಡ್ಡಿ ಕರ್ಜನ್ ಅದಕ್ಕೆ ಅನುಮತಿ ನೀಡಲಿಲ್ಲ. ಕಡೆಗೆ ಬೇರಾವ ದಾರಿ ಕಾಣದೆ ಒಡೆಯರ್‍ರವರು ಜೋಗ್‍ನಲ್ಲಿ ವಿದ್ಯುತ್ ಉತ್ಪತ್ತಿ ಮಾಡುವ ಆಲೋಚನೆ ಕೈಬಿಟ್ಟು ಶಿವನಸಮುದ್ರಕ್ಕೆ ನಿರಂತರ ನೀರು ಒದಗಿಸುವ ದಿಕ್ಕಿನಲಿ ಮತ್ತೆ ಆಲೋಚನೆಗಿಳಿದರು. ಈ ಸಂಧರ್ಭದಲ್ಲಿ ಅವರ ಆ ಆಲೋಚನೆಗೆ ಆಗ ಕೈ ಜೋಡಿಸಿದ್ದು ಆಗಿನ ಮೈಸೂರು ಪ್ರಾಂತ್ಯದ ಮುಖ್ಯ ಇಂಜಿನಿಯರ್ ಆಗಿದ್ದ ಮ್ಯಾಕ್ ಹಚ್‍ರವರು.

ಅಂದಹಾಗೆ ಮಹಾರಾಜರ ಆ ಆಲೋಚನೆಗೆ ಇಂಬು ಕೊಡಲೆಂಬಂತೆ 120 ವರ್ಷಗಳ ಹಿಂದೆ ಟಿಪ್ಪು ಸುಲ್ತಾನ್ ಕಾವೇರಿ ನದಿಗೆ ಅಡ್ಡಲಾಗಿ ಕನ್ನಂಬಾಡಿ ಎಂಬಲ್ಲಿ ಅಣೆಕಟ್ಟೆ ನಿರ್ಮಿಸಲು ಯೋಜನೆ ರೂಪಿಸಿ ಶಂಕು ಸ್ಥಾಪನೆಗೈದಿರುವ ಹಳೆ ಕಡತವೊಂದು ಅವರ ಕಣ್ಣಿಗೆ ಬಿತ್ತು.

ಈ ನಿಟ್ಟಿನಲ್ಲಿ ಶಿವನಸಮುದ್ರದ ವಿದ್ಯುತ್ ಕೇಂದ್ರಕ್ಕೆ ತಕ್ಷಣ ಮತ್ತು ಶಾಶ್ವತ ಪರಿಹಾರವಾಗಿ, ನಿರಂತರ ನೀರು ಒದಗಿಸಲು ಇದೇ ತಕ್ಕ ಯೋಜನೆ ಎಂದು ಪರಿಗಣಿಸಿದ ಅವರು ಟಿಪ್ಪು ಸುಲ್ತಾನನ ಕನಸಿನ ಯೋಜನೆಗೆ ಮರು ಜೀವ ನೀಡಲು ತಮ್ಮ ಇಂಜಿನಿಯರ್ಗಳ ತಂಡಕ್ಕೆ ಸೂಚಿಸಿದರು. ಅಂದಹಾಗೆ ಅಣೆಕಟ್ಟು ಕಟ್ಟಲು ಒಡೆಯರ್‍ರವರು ಸೂಚನೆ ನೀಡಿದ(1906) ಇಂಜಿನಿಯರ್‍ಗಳ ಆ ತಂಡದಲ್ಲಿ ವಿಶ್ವೇಶ್ವರಯ್ಯನವರಿರಲಿಲ್ಲ! ಅಥವಾ ಮೈಸೂರು ಸಂಸ್ಥಾನಕ್ಕೆ ವಿಶ್ವೇಶ್ವರಯ್ಯನವರ ಆಗಮನ ಇನ್ನು ಆಗೇ ಇರಲಿಲ್ಲ!

ಇರಲಿ, ಕನ್ನಂಬಾಡಿಯಲ್ಲಿ ಅಣೆಕಟ್ಟೆಯನ್ನೇನೊ ಕಟ್ಟಲು ಮಹಾರಾಜರು ನಿರ್ಧರಿಸಿದರು. ಆದರೆ ಬ್ರಿಟಿಷ್ ರೆಸಿಡೆಂಟರಿಂದ ಅವರಿಗೆ ಸಿಕ್ಕಿದ್ದು ಕೇವಲ 70 ಅಡಿ ಎತ್ತರ ಕಟ್ಟಲು ಹಾಗೂ 60ಅಡಿ ನೀರು ಸಂಗ್ರಹಿಸಲು ಮಾತ್ರ. ಈ ನಿಟ್ಟಿನಲಿ ಬ್ರೀಟಿಷರ ನಿಲುವನ್ನು ಮಹಾರಾಜರು ಸುತಾರಾಂ ತಿರಸ್ಕರಿಸಿದರು.

ಈ ನಡುವೆ ಬ್ರೀಟಿಷರು ಮತ್ತೊಂದು ಕಂಡೀಷನ್ ಹಾಕಿದರು. ಅದೇನೆಂದರೆ ಕೆ.ಆರ್.ಎಸ್ ನೀರನ್ನು ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಸಬೇಕು, ಹಾಗೆಯೇ ಹಾಗೆ ಉತ್ಪತ್ತಿಯಾದ ವಿದ್ಯುತ್ತಿನಲ್ಲಿ ಚಿನ್ನದಗಣಿಗೆ ಸಾಗಿಸಿ ಉಳಿದ ವಿದ್ಯುತ್ತನ್ನು ತಮ್ಮ ನೇರ ಆಳ್ವಿಕೆಗೆ ಒಳಪಟ್ಟಿದ್ದ ಮದ್ರಾಸ್ ಮತ್ತು ಕೊಯಮತ್ತೂರಿಗೆ ಒದಗಿಸಬೇಕು ಎಂಬುದೇ ಆ ಕಂಡೀಷನ್. ಆದರೆ ಈ ಕಂಡೀಷನ್‍ಗೆ ಸಹ ಒಡೆಯರ್ ಜಗ್ಗಲಿಲ್ಲ. ಬದಲಿಗೆ ಕೃಷಿಗೆ ವಿದ್ಯುತ್ ಮತ್ತು ನೀರು ಒದಗಿಸುವ ತಮ್ಮ ನಿಲುವಿಗೆ ಅವರು ಕಟಿಬದ್ಧರಾದರು.

ಅಂತಿಮವಾಗಿ ಮಹಾರಾಜರ ಈ ನಿಲುವಿಗೆ ಬ್ರಿಟೀಷರು ತಲೆಬಾಗಿ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ಸಮ್ಮತಿಸಿದರು. 90ಅಡಿ ಎತ್ತರ ಮತ್ತು 80ಅಡಿ ನೀರು ಸಂಗ್ರಹಿಸಲು ಮತ್ತು ಮುಂದೆ ವಿಸ್ತರಿಸಬಹುದಾದ ಅವಕಾಶ ನೀಡಿ ಒಪ್ಪಿಗೆ ನೀಡಿದರು. ಈ ಸಂಧರ್ಭದಲ್ಲಿ ಬ್ರಿಟಿಷ್ ರೆಸಿಡೆಂಟರಿಂದ ಒಪ್ಪಿಗೆ ಸಿಕ್ಕಿದ್ದೆ ತಡ ಮುಖ್ಯ ಇಂಜಿನಿಯರ್ ಮ್ಯಾಕ್ ಹಚ್ ಮತ್ತವರ ತಂಡ ಜಲಾಶಯದ ನಿರ್ಮಾಣಕ್ಕೆ ಕಾರ್ಯೋನ್ಮುಖವಾಯಿತು. ಅಂದಹಾಗೆ ಜಲಾಶಯ ನಿರ್ಮಾಣದ ಪ್ರಾಥಮಿಕ ತಯಾರಿ ನಡೆದ ಈ ಸಂಧರ್ಭದಲ್ಲಿಯೂ ಕೂಡ ವಿಶ್ವೇಶ್ವರಯ್ಯನವರಿರಲಿಲ್ಲ!

ಇನ್ನು ಅದು 1908ರ ಅಂತ್ಯದ ಸಮಯ. ಮುಖ್ಯ ಇಂಜಿನಿಯರ್ ಮ್ಯಾಕ್ ಹಚ್ ಸೇವೆಯಿಂದ ನಿವೃತ್ತರಾದರು. ಸ್ವಾಭಾವಿಕವಾಗಿ ತೆರವುಗೊಂಡ ಆ ಸ್ಥಾನಕ್ಕೆ ಕ್ಯಾಪ್ಟನ್ ಡೇವಿಸ್‍ರವರು ಮುಖ್ಯ ಇಂಜಿನಿಯರಾಗಿ ನೇಮಕಗೊಂಡರು ಹಾಗೆಯೆ ಕನ್ನಂಬಾಡಿ ಬಳಿ ನದಿಗೆ ಅಡ್ಡಲಾಗಿ ಮರಳು ಮೂಟೆಗಳನ್ನಿಟ್ಟು ಅದರ ಪಾತ್ರವನ್ನು ಬದಲಿಸುª ಹಚ್‍ರವರ ಕಾಮಗಾರಿಯನ್ನು ಡೇವಿಸ್‍ರವರು ಮುಂದುವರೆಸಿದರು.

ದುರಂತವೆದಂರೆ 1909ರ ಮೇ-ಜೂನ್ ಮುಂಗಾರಿನ ತಿಂಗಳು. ನದಿಯ ಪ್ರವಾಹ ಉಕ್ಕಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಮರಳು ಮೂಟೆಗಳೆಲ್ಲವು ಪ್ರವಾಹಕ್ಕೆ ಕೊಚ್ಚಿ ಹೋದವು. ಇದನ್ನು ತಡೆಯುವ ನಿಟ್ಟಿನಲ್ಲಿ ರಾತ್ರೋರಾತ್ರಿ ತೆಪ್ಪಗಳೊಂದಿಗೆ ಕಾರ್ಮಿಕರ ಜೊತೆ ಕಾರ್ಯಾಚರಣೆಗೆ ಇಳಿದ ಕ್ಯಾ.ಡೇವಿಸ್ ತನ್ನ ಸಹಪಾಠಿ ಕಾರ್ಮಿಕನೋರ್ವನನ್ನು ಉಳಿಸಲು ಹೋಗಿ ನದಿಯ ಪ್ರವಾಹದಲ್ಲಿ ಕೋಚ್ಚಿಹೋದ. ಘಟನೆಯಲ್ಲಿ ಕ್ಯಾ.ಡೇವಿಸ್ ಹಠಾತ್ ಸಾವಿಗೀಡಾದ. ಈ ಕಾರಣದಿಂದಾಗಿ ಮೈಸೂರು ಸಂಸ್ಥಾನದ ಮುಖ್ಯ ಇಂಜಿನಿಯರ್ ಹುದ್ದೆ ಖಾಲಿಬಿದ್ದಿತು.

ಇದೇ ಸಂಧರ್ಭದಲ್ಲಿ ಮೈಸೂರು ಸಂಸ್ಥಾನದಲ್ಲಿ ಒಳಗೊಳಗೆ ಮತ್ತೊಂದು ಹೋರಾಟ ಪ್ರಾರಂಭವಾಗಿತ್ತು. ಅದು ಮೈಸೂರು ಮೈಸೂರಿಗರಿಗೆ ಎಂಬ ಹೋರಾಟ. ಅಂದರೆ ಮೈಸೂರು ಪ್ರಾಂತ್ಯದಲ್ಲಿದ್ದ ಮದ್ರಾಸಿ ಅಧಿಕಾರಿಗಳನ್ನು ಓಡಿಸುವ ಹೋರಾಟವದು. ಈ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದಂತೆ ಇದನ್ನು ಶಮನಮಾಡುವ ನಿಟ್ಟಿನಲಿ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರು ಚಿಂತನೆಗಿಳಿದರು ಹಾಗೆಯೇ ಅದೇ ಸಮಯದಲ್ಲಿ ಖಾಲಿಯಾದ ಮುಖ್ಯ ಇಂಜಿನಿಯರ್ ಹುದ್ದೆಗೆ ಬೇರೋಬ್ಬರನ್ನು ನೇಮಿಸಬೇಕಾದ ಅನಿವಾರ್ಯತೆ ಕೂಡ ಅವರಿಗೆ ಎದುರಾಯಿತು.

ಇಂಜಿನಿಯರ್ ನೇಮಕ ಮತ್ತು ಮೈಸೂರು ಮೈಸೂರಿಗರಿಗೆ ಎಂಬ ಎರಡೂ ಬೇಡಿಕೆಯ ಹಿನ್ನೆಲೆಯಲ್ಲಿ ಮಹಾರಾಜರು ದೂರದ ಮುಂಬಯಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರು ಸಂಸ್ಥಾನದವರೆ ಆದ ವಿಶ್ವೇಶ್ವರಯ್ಯರವರನ್ನು ಮುಖ್ಯ ಇಂಜಿನಿಯರ ಹುದ್ದೆಗೆ ನೇಮಿಸಿಕೊಂಡರು. ಈ ನಿಟ್ಟಿನಲಿ ಮಹಾರಾಜರ ಆದೇಶದ ಮೇರೆಗೆ 1909ರ ಅಂತ್ಯದಲ್ಲಿ ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದುಕೊಂಡರು!

ಅಂದಹಾಗೆ ಅವರು ಹಾಗೆ ಸಂಸ್ಥಾನಕ್ಕೆ ಸೇವೆಗೆ ಪ್ರವೇಶಪಡೆಯುತ್ತಿದ್ದಂತೆ ಇಂಜಿನಿಯರರಾದ ಅವರ ಹೆಗಲ ಮೇಲೆ ಸಂಸ್ಥಾನದ ಎಲ್ಲ ನಿರ್ಮಾಣದ ಕಾಮಗಾರಿಗಳ ಹೊರೆಯು ಬಿತ್ತು. ಹಾಗೆಯೆ ಕೆ.ಆರ್.ಎಸ್ ನಿರ್ಮಾಣ ಕಾಮಗಾರಿ ಕೂಡ. ಯಾಕೆಂದರೆ ಮೊದಲೇ ತಿಳಿಸಿದ ಹಾಗೆ ಅದಾಗಲೆ ಜಲಾಶಯ ನಿರ್ಮಾಣದ ಪ್ರಾಥಮಿಕ ಕಾರ್ಯಗಳು ಜಾರಿಯಲ್ಲಿತ್ತು. ಈ ನಿಟ್ಟಿನಲಿ ಇದಕ್ಕೆ ಸಾಕ್ಷಿ ಬೇಕೆನ್ನುವವರು ಸ್ವತಃ ವಿಶ್ವೇಶ್ವರಯ್ಯನವರೆ ತಮ್ಮ ಆತ್ಮಕಥೆ “ನನ್ನ ವೃತ್ತಿ ಜೀವನದ ನೆನಪುಗಳು “ ಕೃತಿಯಲ್ಲಿ ನಾನು ಬರುವುದಕ್ಕೆ ಮೊದಲೆ ಶ್ರೀರಂಗಪಟ್ಟಣದಿಂದ 10 ಮೈಲು ದೂರದಲ್ಲಿ ಕಾವೇರಿ ನದಿಯ ಪಶ್ಚಿಮ ದಂಡೆ ಮೇಲೆ ಕನ್ನಂಬಾಡಿ ಎಂಬಲ್ಲಿ ಅಣೆಕಟ್ಟೆ ನಿರ್ಮಾಣದ ಕಾಮಗಾರಿ ನೆಡೆದಿತ್ತು. ಎಂದು ಬರೆದಿರುವುದನ್ನು ಗಮನಿಸಬಹುದು.

ಆ ಮೂಲಕ ಪ್ರಾಮಾಣಿಕವಾಗಿ ಸ್ವತಃ ಸರ್.ಎಂ.ವಿ.ರವರೆ ಜಲಾಶಯದ ನಿರ್ಮಾಣದ ಕಾಮಗಾರಿ ತನ್ನ ಆಗಮನಕ್ಕೂ ಮೊದಲೇ ಪ್ರಾರಂಭಗೊಂಡಿತ್ತೆಂಬುದನ್ನು ಸೂಚಿಸಿದ್ದಾರೆ. ಒಟ್ಟಾರೆ ಈ ನಿಟ್ಟಿನಲಿ ಹೇಳುವುದಾದರೆ ಕೆ.ಆರ್.ಎಸ್ ವಿಶ್ವೇಶ್ವರಯ್ಯನವರ ಕನಸಿನ ಕೂಸಂತು ಅಲ್ಲ. ಟಿಪ್ಪು ಕನಸಿದ್ದನ್ನು ನಾಲ್ವಡಿರವರು ಕಾರ್ಯರೂಪಕ್ಕೆ ತಂದ ಸಂದರ್ಭದಲ್ಲಿ ಮಧ್ಯ ಇಂಜಿನಿಯರರಾಗಿ ನೇಮಕಗೊಂಡು ಅವರು ಕೆಲಸ ಮುಂದುವರೆಸಿದ್ದಾರೆ ಅಷ್ಟೆ!

ಈ ನಿಟ್ಟಿನಲ್ಲಿ ಇಂಜಿನಿಯರ್ ಕ್ಯಾ.ಡೇವಿಸ್ ಏನಾದರು ಸಾಯದಿದ್ದರೆ ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಬರುತ್ತಿರಲೇ ಇರಲಿಲ್ಲ. ಹಾಗೆಯೇ ಕೆ.ಆರ್.ಎಸ್ ನಿರ್ಮಾಣದ ಶ್ರೇಯಸ್ಸು ಅವರ ಹೆಸರಿಗೆ ಹೈಜಾಕ್ ಆಗುವುದು ಕೂಡ ನೆಡೆಯುತ್ತಿರಲಿಲ್ಲ. ಕ್ಯಾ.ಡೇವಿಸ್ ಸದ್ದಿಲ್ಲದೆ ಸಂಬಳಪಡೆದು ಕಾಮಗಾರಿ ಮುಗಿಸುತ್ತಿದ್ದ!

ಇರಲಿ, ಈ ನಡುವೆ ಮಹಾರಾಜರ ವಿಶ್ವಾಸ ಸಂಪಾದಿಸಿದ ವಿಶ್ವೇಶ್ವರಯ್ಯನವರು ಮೈಸೂರು ಮೈಸೂರಿಗರಿಗೆ ಎಂಬ ತತ್ವದ ಅಡಿಯಲ್ಲಿ ದಿವಾನ ಹುದ್ದೆಗೂ ಕೂಡ ನೇಮಿಸಲ್ಪಟ್ಟರು. ಅಂದಹಾಗೆ ಆಗ ತೆರವಾದÀ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಿಸಲ್ಪಟ್ಟವರು ಯಾರು? ಯಾರು ಯಾಕೆ ಅವರ ಹೆಸರು ಹೇಳುವುದಿಲ್ಲ? ಕೆ.ಆರ್.ಎಸ್ ಇತಿಹಾಸದ ದ್ವಂದ್ವವೆಂದರೆ ಇದೇ!

ಇರಲಿ, 1911ರಲ್ಲಿ ನದಿ ಪ್ರವಾಹ ಬದಲಿಸುವ ಕಾರ್ಯ ಮುಗಿದು ಜಲಾಶಯದ ಕಟ್ಟಡ ಕಾಮಗಾರಿ ಪ್ರಾರಂಭ ವಾಯಿತು. ಈನಿಟ್ಟಿನಲ್ಲಿ 2ಕೋಟಿ 70ಲಕ್ಷ ಬಜೆಟ್ಟಿನ ಈ ಯೋಜನೆ ಹಣದ ಕೊರತೆಯನ್ನೆದುರಿಸಿತು. ಯಾಕೆಂದರೆ ಮೈಸೂರು ರಾಜ್ಯದ ಅಂದಿನ ಒಟ್ಟು ಬಜೆಟ್ಟೆ 2ಕೋಟಿ 30ಲಕ್ಷ. ಹೀಗಿರುವಾಗ ಜಲಾಶಯಕ್ಕಾಗಿ 2ಕೋಟಿ 70ಲಕ್ಷ ತರುವುದು?

ಅಂದಹಾಗೆ ಈ ಸಂಧರ್ಭದಲ್ಲಿ ಧೃತಿಗೆಡದ ಮಹಾರಾಜ ನಾಲ್ವಡಿಯವರು ತಮ್ಮ ತಾಯಿ ಮತ್ತು ತಮ್ಮ ಧರ್ಮಪತ್ನಿಯವರಿಗೆ ಸೇರಿದ 4 ಮೂಟೆ ವಜ್ರಾಭರಣಗಳನ್ನು ಮುಂಬೈ ಚಿನಿವಾರ ಪೇಟೆಯಲ್ಲಿ ಮಾರಾಟ ಮಾಡಿ ಹಣ ಒದಗಿಸಿದರು. ಅಂದಹಾಗೆ ಅಣೆಕಟ್ಟು ನಿರ್ಮಾಣಕ್ಕೆ ಮಹಾರಾಜರು ಒದಗಿಸಿದ ಆ 2ಕೋಟಿ 70ಲಕ್ಷ ರೂಗಳಲ್ಲಿ ಮುಖ್ಯ ಇಂಜಿನಿಯರ್ ವಿಶ್ವೇಶ್ವರಯ್ಯನವರ ಸಂಬಳವೂ ಕೂಡ ಸೇರಿತ್ತು!

ಇರಲಿ, ಮೊದಲೆ ಹೇಳಿದಹಾಗೆ ವಿಶ್ವೇಶ್ವರಯ್ಯನವರು ದಿವಾನರಾದ ನಂತರ ಬೇರೊಬ್ಬರು ಮುಖ್ಯ ಇಂಜಿನಿಯರರಾಗಿ ನೇಮಕಗೊಂಡರು. ಬಳಿಕ ಆ ಹೊಸ ಇಂಜಿನಿಯರ್ ಕೆ.ಆರ್. ಎಸ್ ನಿರ್ಮಾಣದ ಕಾಮಗಾರಿ ಮುಂದುವರೆಸಿದರು. ಅಂದಹಾಗೆ ಜಲಾಶಯದಲ್ಲಿ ಈಗಲೂ ಕೆ.ಆರ್.ಎಸ್. ನಿರ್ಮಾಣದಲ್ಲಿ ಕಾರ್ಯನಿರ್ವಹಿಸಿದ 50ಕ್ಕೂ ಹೆಚ್ಚು ಇಂಜಿನಿಯರ್‍ಗಳ ಹೆಸರನ್ನೊಳಗೊಂಡ ನಾಮಫಲಕವಿದೆ. ಅದರಲ್ಲಿ ವಿಶ್ವೇಶ್ವರಯ್ಯ ಒಬ್ಬರಷ್ಟೆ. ಬರೀ ವಿಶ್ವೇರಯ್ಯರವರೊಬ್ಬರೇ ಅಲ್ಲ!

ಅಂದಹಾಗೆ ಕೆಆರ್‍ಎಸ್‍ನ ಕಾಮಗಾರಿ ಹೀಗೆ ಮುಂದುವರಿದಿರಬೇಕಾದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವುದನ್ನು ವಿರೋಧಿಸುವ ನಿಟ್ಟಿನಲ್ಲಿ ವಿಶ್ವೇಶ್ವರಯ್ಯನವರು ಮಹಾರಾಜರ ಜೊತೆ ವಿಶ್ವಾಸಕೆಡಿಸಿಕೊಂಡರು. ಯಾಕೆಂದರೆ ಮೀಸಲಾತಿ ನೀಡುವುದರಿಂದ ಪ್ರತಿಭೆಗಳಿಗೆ ಮೊಸವಾಗುತ್ತದೆ ಎಂಬ ತಮ್ಮನಿಲುವಿಗೆ ಅಂಟಿಕೊಂಡ ವಿಶ್ವೇಶ್ವರಯ್ಯನವರು ಒಬಿಸಿ ಮೀಸಲಾತಿಗೆ ಕಟಿಬದ್ಧರಾದ ಮಹಾರಾಜರ ಕೆಂಗಣ್ಣಿಗೆ ಗುರಿಯಾದರು. ತತ್ಪರಿಣಾಮವಾಗಿ ಅವರು ದಿವಾನ ಹುದ್ದೆಗೆ ರಾಜೀನಾಮೆ ಕೊಡಬೇಕಾಗಿ ಬಂತು ಮತ್ತು ಆಗ ಇಸವಿ 1918!

ಹೌದು, ಕೆ.ಆರ್.ಎಸ್. ಕಟ್ಟಡ ಕಾಮಗಾರಿ ಪ್ರಾರಂಭ ವಾದದ್ದು 1911ರಲ್ಲಿ, ಮತ್ತೆ ಅದು ಹಾಗೆಯೇ ಮುಂದುವರೆದಿತ್ತು. ಪ್ರಶ್ನೆಯೇನೆಂದರೆ 1918ರಲ್ಲಿ ಸರ್.ಎಂ.ವಿ.ರವರು ರಾಜೀನಾಮೆ ಇತ್ತಾಕ್ಷಣ ಕಾಮಗಾರಿ ನಿಂತು ಹೋಯಿತೆ ಎಂಬುದು? ಖಂಡಿತ ಇಲ್ಲ! ಯಾಕೆಂದರೆ ಅದರ ನಿಜವಾದ ನಿರ್ಮಾತೃ ನಾಲ್ವಡಿಕೃಷ್ಣರಾಜ ಒಡೆಯರ್‍ರವರು ಅದಕ್ಕಾಗಿ ಉಸಿರು ಹಿಡಿದುಕೊಂಡು ಇದ್ದರಲ್ಲ!

ಈ ಸಂಧರ್ಭದಲಿ ಮತ್ತೊಂದು ಆಕ್ಷೇಪಣೆ ಅದೇನೆಂದರೆ ಕೆ.ಆರ್.ಎಸ್ ನಿರ್ಮಾಣವೇ ವಿಶ್ವೇಶ್ವರಯ್ಯನ್ನವರ ಧ್ಯೇಯವಾಗಿದ್ದರೆ ಅವರು ರಾಜೀನಾಮೆ ನೀಡಬಾರದಿತ್ತು! ಕೆ.ಆರ್.ಎಸ್ ಕಟ್ಟಿಯೇ ನಾನು ಹೋಗುವುದು ಎಂದು ಅವರು ಹೇಳಬೇಕಿತ್ತು! ಊಹ್ಞೂಂ, ಅದ್ಯಾವುದೂ ನಡೆದಿಲ್ಲ! ವಿಶ್ವೇಶ್ವರಯ್ಯನವರು ರಾಜೀನಾಮೆ ಇತ್ತು ಹೋದರು ಜಲಾಶಯದ ಕಾಮಗಾರಿ ಅದರ ಪಾಡಿಗೆ ಅದು ನಡೆದಿತ್ತು!

ಈ ನಿಟ್ಟಿನಲಿ ವಿಶ್ವೇಶ್ವರಯ್ಯನವರ ರಾಜೀನಾಮೆಯ ನಂತರ ಅವರು ನಂತರದ ದಿವಾನರುಗಳಿಗೆ ಸಹಾಯಕರಾದದ್ದಾಗಲಿ ಸಲಹೆಗಾರರಾದದ್ದಾಗಲಿ ಎಂಥದ್ದು ಇಲ್ಲ! ಕಡೆ ಪಕ್ಷ ಅಲ್ಲಿ ಗಾರೆ ಕೆಲಸ ಮಾಡುತ್ತಿದ್ದವರಿಗೆ ಮೇಸ್ತ್ರಿಯಾಗಿಯಾದರೂ ಅವರಿದ್ದರೆ? ಉಹ್ಞೂಂ, ಅದೂ ಇಲ್ಲ! ಹಾಗಿದ್ದರೆ ಅದರ ನಿರ್ಮಾಣದ ಶ್ರೇಯಸ್ಸು ಅವರಿಗ್ಹೇಗೆ ಸಂದಿತು ಎಂಬುದು? ಯಾಕೆಂದರೆ ಅವರು ರಾಜೀನಾಮೆ ನೀಡಿದ 14 ವರ್ಷಗಳ ನಂತರ ಅಂದರೆ 1932 ರಲ್ಲಿ ಕಾಮಗಾರಿ ಮುಗಿದದ್ದು. ಅಂದಹಾಗೆ ಅಗಲೂ ಕೂಡ ನಾಲ್ವಡಿಯವರು ರಾಜರಾಗಿ ಮುಂದುವರಿದಿದ್ದರು ಮತ್ತು ತಾವು ಪ್ರಾರಂಭಿಸಿದ ಯೋಜನೆಯನ್ನು ತಾವೇ ತಮ್ಮ ಕೈಯಾರ ಉದ್ಘಾಟಿಸಿದರು.

ದುರಂತವೆಂದರೆ ಅದರ ಶ್ರೇಯಸ್ಸು ಅವರಿಗೆ ಸಲ್ಲಲಿಲ್ಲ! ಅವರ ಕೈ ಕೆಳಗೆ ವೇತನಕ್ಕಾಗಿ ದುಡಿದವರೊಬ್ಬರಿಗೆ ಅದು ಸಂದಿತು! ಸತ್ಯ ಹೀಗಿರುವಾಗ, ಇತಿಹಾಸದಲ್ಲಿ ನಾಲ್ವಡಿಯವರಿಗೆ ಘಟಿಸಿರುವ ಇಂತಹ ಘೋರತೆಗೆ ಯಾರು ಹೊಣೆ? ನಮ್ಮ ಕಣ್ಣೆದುರೇ ಒಬ್ಬ ಶ್ರೇಷ್ಠ ರಾಜನಿಗೆ ಅವನ ಸಾಧನೆಯ ಶ್ರೇಷ್ಠತೆ ಧಕ್ಕಲಿಲ್ಲವೆಂದರೆ? ಹಾಗಿದ್ದರೆ ತನ್ನ ತನು ಮನ ಧನವನ್ನೆಲ್ಲ ಧಾರೆ ಎರೆದು ಆತ ಮಾಡಿದ ತ್ಯಾಗಕ್ಕೆ ಬೆಲೆಯಾದರೂ ಎಲ್ಲಿದೆ? ನಾಲ್ವಡಿಯವರಿಗೆ ಯಾರು ಇಂಥ ದ್ರೋಹ ಎಸಗಿದ್ದು? ವಿಶ್ವೇಶ್ವರಯ್ಯನವರಂತು ಖಂಡಿತ ಅಲ್ಲ. ಕಪೋಲಕಲ್ಪಿತ ಕಥೆ ಕಟ್ಟಿದ ಅವರ ಅನುಯಾಯಿಗಳು. ಹಾಗೆ ಬಂಗಾರ ಮನುಷ್ಯ ಚಿತ್ರದಲ್ಲಿ “ಕಾವೇರಿಯನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮಪಡದಿದ್ದರೆ..” ಎಂಬ ಅಂತಹದ್ದೊಂದು ಆಘಾತಕಾರಿ ಸಾಹಿತ್ಯ ಬರೆಸಿದ ಆ ನಿರ್ಮಾಪಕ ಹಾಗು ಬರೆದ ಆ ಕವಿ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

Trending