Connect with us

ದಿನದ ಸುದ್ದಿ

ದಾವಣಗೆರೆ | ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಎಸ್‍ಬಿಐ ಮೊಬೈಲ್ ಎಟಿಎಂ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿರುವ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣದ ಅಗತ್ಯವುಳ್ಳವರ ಸಹಾಯಕ್ಕಾಗಿ ಬುಧವಾರ ಪಿ.ಬಿ. ಮುಖ್ಯ ರಸ್ತೆಯಲ್ಲಿರುವ ಎಸ್‍ಬಿಐ ಶಾಖೆಯ ವತಿಯಿಂದ ವ್ಯವಸ್ಥೆ ಮಾಡಲಾಗಿರುವ ಮೊಬೈಲ್ ಎಟಿಎಂ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿ ಮಾಹಂತೇಶ ಬೀಳಗಿ ಚಾಲನೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಮಾಹಾಮಾರಿ ಪರಿಣಾಮದಿಂದಾಗಿ ಸೀಲ್‍ಡೌನ್ ಪ್ರದೇಶಗಳಲ್ಲಿ ದೈನಂದಿನ ಹಣಕಾಸಿನ ವ್ಯವಹಾರಕ್ಕೆ ತೊಂದರೆ ಆಗಬಾರದು ಎಂದು ಕಂಟೈನ್‍ಮೆಂಟ್ ಝೋನ್‍ಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಸೇವೆ ಒದಗಿಸಲಾಗಿದೆ. ಇದರ ಸದುಪಯೋಗವನ್ನು ಅಗತ್ಯವುಳ್ಳವರು ಪಡೆದುಕೊಳ್ಳಬೇಕು. ಮೊಬೈಲ್ ಎಟಿಎಂ ಬ್ಯಾಂಕ್‍ಗೆ ಬಹಳಷ್ಟು ಬೇಡಿಕೆ ಇಟ್ಟಿದ್ದೆವು. ಇದೀಗ ಸೇವೆ ಒದಗಿದ್ದು, ಕಂಟೈನ್‍ಮೆಂಟ್ ಝೋನ್‍ಗಳÀಲ್ಲಿನ ಜನರಿಗೆ ಸಹಾಯವಾಗಲಿದೆ. ಇದರ ಮೂಲಕ ಜಿಲ್ಲೆಯ ಇತಿಹಾಸದಲ್ಲಿ ಈ ಸೇವೆ ಹೆಸರಾಗಲಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶುಭ ಹಾರೈಸಿದರು.

ಕೆಟಿಜೆ ನಗರದ ಕಂಟೈನ್‍ಮೆಂಟ್ ಜೋನ್‍ನಲ್ಲಿ ಕಳೆದ 28 ದಿನಗಳಿಂದ ಒಂದೂ ಪ್ರಕರಣ ದಾಖಲಾಗದ ಹಿನ್ನೆಲೆ ನಿಯಮಾನುಸಾರ ಡಿನೋಟಿಫೈ ಮಾಡಲಾಗಿದೆ. ಪ್ರಕರಣದ ಸಂಪರ್ಕದ ಕೊಂಡಿಗಳನ್ನು ಬೇರ್ಪಡಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಿಲ್ಲೆಯಲ್ಲಿ ಅಲ್ಲೊಂದು ಇಲ್ಲೊಂದು ಪ್ರಕರಣ ಕಂಡುಬರುತ್ತಿದೆ. ಜಿಲ್ಲಾ ಸರ್ವೇಕ್ಷಣಾ ತಂಡವು ಉತ್ತಮವಾಗಿ ಕೆಲಸ ಮಾಡುತ್ತಿದೆ. ಕೊರೊನಾ ನಿಯಂತ್ರಿಸಲು ಇನ್ನೂ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದರು.

ಅತೀ ಹೆಚ್ಚು ಕೇಸ್‍ಗಳು ಜಾಲಿನಗರ ಹಾಗೂ ಬಾಷಾ ನಗರಕ್ಕೆ ಸಂಬಂಧಿಸಿವೆ. ರೋಗಿ ಸಂಖ್ಯೆ-533 ಮತ್ತು 556 ಇವರಿಗೆ ಸಂಬಂಧಪಟ್ಟ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು 300 ರಿಂದ 400 ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಅವರಿಗೆ ಸಂಬಂಧಪಟ್ಟ ದ್ವಿತೀಯ ಸಂಪರ್ಕದವರಿಗೆ ಕೊರೊನಾ ಪ್ರಕರಣ ಕಂಡು ಬರುತ್ತಿದೆ. ಅದು ಬಿಟ್ಟರೆ ಅಲ್ಲೊಂದು ಇಲ್ಲೊಂದು ಕೇಸ್ ಪತ್ತೆಯಾಗುತ್ತಿವೆ ಎಂದರು.

ಇದೀಗ ಜಿಲ್ಲೆಯಲ್ಲಿ ಕೊರೊನಾಗೆ ಸಂಬಂಧಪಟ್ಟಂತೆ ಪರಿಸ್ಥಿತಿ ಸುಧಾರಿಸಿದೆ. ಆದಷ್ಟು ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದ್ದು, ಅವರೆಲ್ಲರಿಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಉತ್ತಮವಾದ ಆಹಾರ ಹಾಗೂ ಆಯುಷ್ ಇಲಾಖೆಯ ಉತ್ಪನ್ನಗಳನ್ನು ನೀಡಲಾಗುತ್ತಿದೆ. ಇಂದು ಸಹ ಸುಮಾರು 13 ಜನರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಹಾಗೂ ಎಸ್‍ಬಿಐ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending