Connect with us

ದಿನದ ಸುದ್ದಿ

ದಾವಣಗೆರೆಯಲ್ಲಿಂದು 13 ಕೊರೊನಾ ಪಾಸಿಟಿವ್: ಎಂಟು ತಿಂಗಳ ಮಗು ಸೇರಿ 7 ಜನ ಆಸ್ಪತ್ರೆಯಿಂದ ಬಿಡುಗಡೆ

Published

on

ಸುದ್ದಿದಿನ ,ದಾವಣಗೆರೆ : ಇಂದು ಜಿಲ್ಲೆಯಲ್ಲಿ 13 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಒಂದು ಸಾವು ಸಂಭವಿಸಿದೆ. ಹಾಗೂ 7 ಜನರು ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ರೋಗಿ ಸಂಖ್ಯೆ 4083 ರಿಂದ 4095 ರವರೆಗೆ ಒಟ್ಟು 13 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಬಹುತೇಕರು ರೋಗಿ ಸಂಖ್ಯೆ 2819 ಮತ್ತು 2415 ರ ಸಂಪರ್ಕಿತರಾಗಿದ್ದಾರೆ.

ರೋಗಿ ಸಂಖ್ಯೆ 4094 ಪುರುಷ 37 ವರ್ಷ ಹಾಗೂ ರೋಗಿ ಸಂಖ್ಯೆ 4095 ಮಹಿಳೆ 35 ವರ್ಷ ಇವರು ನಗರದ ಪಿ.ಜೆ.ಬಡಾವಣೆಯ ಖಾಸಗಿ ಕ್ಲಿನಿಕ್‍ನ ನೇತ್ರ ತಜ್ಞರಾಗಿದ್ದಾರೆ. ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಹಾಗೂ ಸೋಂಕಿನ ಪತ್ತೆ ಹಚ್ಚಲಾಗುತ್ತಿದೆ.

ಹೊಸದಾಗಿ ಸೇರ್ಪಡೆಯಾದ ಎಸ್‍ಸ್ಕ್ವೇರ್ ಅಪಾರ್ಟ್‍ಮೆಂಟ್ ಎಸ್‍ಎಸ್ ಬಡಾವಣೆ, ಕೆಟಿಜೆ ನಗರ ಪೊಲೀಸ್ ಕ್ವಾಟ್ರಸ್ ಮತ್ತು ದೇವರಾಜನಗರ ಬೇತೂರು ರಸ್ತೆ ಸೇರಿದಂತೆ ಇಂದಿನ ಪ್ರಕರಣಗಳಿಗೆ ಸಂಬಂಧಿಸಿದ ಕಂಟೈನ್‍ಮೆಂಟ್ ಏರಿಯಾವನ್ನು ಹೊಸ ಮಾರ್ಗಸೂಚಿಯಂತೆ ನಿರ್ವಹಿಸಲಾಗುವುದು.

ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಯಾವುದೇ ಐಎಲ್‍ಐ ಮತ್ತು ತೀವ್ರ ಉಸಿರಾಟದ ತೊಂದರೆಗಳಿಂದ ಬಳಲುವ ಪ್ರಕರಣಗಳು ಕಣ್ ತಪ್ಪಿ ಹೋಗದಂತೆ ಕಟ್ಟುನಿಟ್ಟಿನ ಸರ್ವೆಲೆನ್ಸ್ ಮಾಡಲಾಗುವುದು ಎಂದರು.

ಇದುವರೆಗೆ 141 ಜನರು ಗುಣಮುಖರಾಗಿದ್ದು, ಇಂದು 8 ತಿಂಗಳ ಮಗು ಕೂಡ ಗುಣಮುಖವಾಗಿ ಆಸ್ಪತೆಯಿಂದ ಬಿಡುಗಡೆ ಹೊಂದಿದ್ದು ವೈದ್ಯರು/ಆರೋಗ್ಯ ಸಿಬ್ಬಂದಿಗಳ ಶುಶ್ರೂಷೆ, ಚಿಕಿತ್ಸೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಅಭಿನಂದಿಸಿದರು.

ಏಳು ಜನ ಗುಣಮುಖ-ಬಿಡುಗಡೆ

ಇಂದು ರೋಗಿ ಸಂಖ್ಯೆ 629, 2416, 2558, 2559 (8 ತಿಂಗಳ ಮಗು), 2557, 2560, 2416 ಈ ಏಳು ಜನರು ಗುಣಮುಖರಾಗಿ ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಒಟ್ಟು 243 ಜನರು ಆಗಮಿಸಿದ್ದಾರೆ. ಇವರಲ್ಲಿ 6 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಹಾಗೂ 68 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಮಾಹಿತಿ ಇಲ್ಲದೇ ಬಂದಿರುವ 147 ಜನರನ್ನು ಪತ್ತೆ ಹಚ್ಚಲಾಗಿದ್ದು ನಿಯಮಾನುಸಾರ ಕ್ವಾರಂಟೈನ್ ಮಾಡಲಾಗಿದೆ.

ಮರಣ

ರೋಗಿ ಸಂಖ್ಯೆ 4093 83 ವರ್ಷದ ಮಹಿಳೆ ಇವರು ಮರಣ ಹೊಂದಿದ್ದು, ಇವರಿಗೆ ಕೋವಿಡ್ ಇರುವುದು ಇಂದು ವರದಿಯಾಗಿದೆ. ಈ ವೃದ್ದೆ ದೇವರಬೆಳೆಕೆರೆಯಲ್ಲಿ ಎರಡು ತಿಂಗಳು ತಮ್ಮ ಮಗನ ಮನೆಯಲ್ಲಿದ್ದು ಈ ವೇಳೆ ಅನಾರೋಗ್ಯದ ಕಾರಣ ದೇವರಬೆಳೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು, ಆಸ್ಪತ್ರೆಯವರು ಸಿ.ಜಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ ಮೇಲೆ ತಮ್ಮ ಇನ್ನೊಬ್ಬ ಮಗನ ಮನೆ ದಾವಣಗೆರೆ ನಗರದ ಬಸವರಾಜಪೇಟೆಯಯಲ್ಲಿ ಎರಡು ದಿನ ಇದ್ದು ನಂತರ ಮೇ 31 ರ ಮಧ್ಯಾಹ್ನ 3 ಗಂಟೆಗೆ ಸಿ.ಜಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11 ಕ್ಕೆ ಮರಣ ಹೊಂದಿರುತ್ತಾರೆ. ಅವರಿಗೆ ಇಂದು ಕೊವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ.

ವೈದ್ಯರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಜಾಲಿನಗರದ 80 ವರ್ಷದ ವೃದ್ದೆ ಹಾಗೂ ದೇವರಬೆಳೆಕೆರೆಯ 83 ವರ್ಷದ ವೃದ್ದೆಯ ಸಾವಿಗೆ ಸಂಬಂಧಿಸಿದಂತೆ ನಿಗದಿತ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರೋಗಿಗಳು ತಲುಪುವವರೆಗೆ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೇ ಲೋಪವೆಸಗಿರುವ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಸ್ಕ್ ಧರಿಸುವ ಅಭಿಯಾನ

ಜನನಿಭಿಡ ಪ್ರದೇಶದಲ್ಲಿ ಮಾಸ್ಕ್ ಧರಿಸುವ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದೆಂಬ ಬಗ್ಗೆ ಎಸ್‍ಪಿ ಯವರ ನೇತೃತ್ವದಲ್ಲಿ ವಿಶೇಷ ಅಭಿಯಾನವನ್ನು ಏರ್ಪಡಿಸಲಾಗುವುದು. ನಗರ ಮತ್ತು ತಾಲ್ಲೂಕು ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಎಸ್‍ಪಿ ಹನುಮಂತರಾಯ, ಎಡಿಸಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್‍ಓ ಡಾ.ರಾಘವನ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending