Connect with us

ದಿನದ ಸುದ್ದಿ

ದಾವಣಗೆರೆ | ಗುಣಮಟ್ಟದ ಸರ್ವೇ ಆಗಬೇಕು, ಕೊರೊನಾವನ್ನು ಜಿಲ್ಲೆಯಿಂದ ಹಿಮ್ಮೆಟ್ಟಿಸಬೇಕು : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ :ಅತಿ ಹೆಚ್ಚು ಪ್ರಕರಣ ಕಂಡು ಬಂದಿರುವ ಮತ್ತು ಇನ್ನೂ ಎರಡು ಮೂರು ಪ್ರಕರಣ ದಾಖಲಾಗುತ್ತಿರುವ ಜಾಲಿನಗರದಲ್ಲಿ ಇನ್ನೂ ಪರಿಣಾಮಕಾರಿಯಾಗಿ ಸರ್ವೇ ಮಾಡಲೆಂದು ರೆಡ್‍ಕ್ರಾಸ್ ಸ್ವಯಂ ಸೇವಕರನ್ನೂ ಒಳಗೊಂಡಂತೆ ಆಶಾ, ವೈದ್ಯರ ತಂಡ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮುಖ್ಯವಾಗಿ ಕೆಮ್ಮು ಶೀತ (ಐಎಲ್‍ಐ) ಮತ್ತು ತೀವ್ರ ಉಸಿರಾಟದ ತೊಂದರೆ(ಎಸ್‍ಎಆರ್‍ಐ) ಪ್ರಕಣಗಳಿಗೆ ಒತ್ತು ನೀಡಿ, ಇಂತಹ ಒಂದೂ ಪ್ರಕರಣ ಕಣ್‍ತಪ್ಪಿ ಹೋಗದಂತೆ ಅವರನ್ನು ಸರ್ವೇ ಮಾಡಿ ಪರೀಕ್ಷೆಗೆ ಒಳಪಡಿಸುವ ಕೆಲಸ ಮಾಡಲಾಗುವುದು. ಒಟ್ಟಾರೆ ಗುಣಮಟ್ಟದ ಸರ್ವೇ ಆಗಬೇಕು. ಈ ಮೂಲಕ ಕೊರೊನಾವನ್ನು ಜಿಲ್ಲೆಯಿಂದ ಹಿಮ್ಮೆಟ್ಟಿಸಬೇಕೆಂದರು.

ಪ್ರತಿ ಕಂಟೈನ್‍ಮೆಂಟ್ ಝೋನ್‍ನ ಅದರಲ್ಲೂ ಮುಖ್ಯವಾಗಿ ಜಾಲಿನಗರದಲ್ಲಿ ಇನ್ಸಿಡೆಂಟ್ ಕಮಾಂಡರ್‍ಗಳು ಮೈಕ್ ಘೋಷಣೆ ಕೂಗುವ ಮೂಲಕ ಜಾಗೃತಿ ಮೂಡಿಸಬೇಕು. ಕ್ವಾರಂಟೈನ್ ಮಾಡುತ್ತಾರೆ, ಚಿಕಿತ್ಸೆ ಹೇಗಿರುತ್ತೋ ಎಂಬೆಲ್ಲ ಭಯ ಬಿಟ್ಟು ಆಸ್ಪತ್ರೆಗೆ ತೋರಿಸಿಕೊಳ್ಳುವಂತೆ ಮನವೊಲಿಸಬೇಕು ಎಂದರು.

ಎಡಿಸಿಯವರು ಪ್ರತಿನಿತ್ಯ ಮೆಡಿಕಲ್ ಶಾಪ್, ತಾಲ್ಲೂಕುಗಳಿಂದ ಕೆಮ್ಮು ಶೀತ ಜ್ವರಕ್ಕೆಂದು ಮೆಡಿಕಲ್ ಶಾಪ್‍ಗಳಲ್ಲಿ ಮಾತ್ರೆ ತೆಗೆದುಕೊಳ್ಳುತ್ತಿರುವವರ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಈ ಮಾಹಿತಿಯನ್ನು ಎಡಿಸಿಯವರು ಇನ್ಸಿಡೆಂಟ್ ಕಮಾಂಡರ್‍ಗೆ ಕಳುಹಿಸಬೇಕು. ಇನ್ಸಿಡೆಂಟ್ ಕಮಾಂಡರ್ ಈ ಮಾಹಿತಿಯನ್ನು ಆಯಾ ಏರಿಯಾ ವೈದ್ಯಕೀಯ ಅಧಿಕಾರಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಿ ಇವರ ಸ್ವಾಬ್ ಪರೀಕ್ಷೆ ಆಗುವಂತೆ ಕ್ರಮ ವಹಿಸಬೇಕೆಂದರು.

ಎಲ್ಲ ಪ್ರಾದೇಶಿಕ ವೈದ್ಯಕೀಯ ಅಧಿಕಾರಿಗಳು ಕ್ಷೇತ್ರದಲ್ಲಿ ನಿರಂತರವಾಗಿ ಭೇಟಿ ನೀಡಬೇಕು. ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಇವರ ಮೇಲುಸ್ತುವಾರಿ ನೋಡಿಕೊಳ್ಳಬೇಕು. ಮೊದಲನೆಯದಾಗಿ ಎಲ್ಲ ದುರ್ಬಲ ವರ್ಗದವರ ಸರ್ವೇ ಜೊತೆಗೆ ಕೋವಿಡ್ ಪರೀಕ್ಷೆ ಆಗಬೇಕು.

ನಂತರದ ಹಂತದಲ್ಲಿ ಕಂಟೈನ್‍ಮೆಂಟ್ ಝೋನ್‍ನ ಎಲ್ಲ ವ್ಯಕ್ತಿಗಳ ಕೋವಿಡ್ ಪರೀಕ್ಷೆ ಆಗಬೇಕು. ತದನಂತರ ಬಫರ್ ಝೋನ್‍ನಲ್ಲಿ ನಿರಂತರವಾಗಿ ಜ್ವರ ಸರ್ವೇ ಕಾರ್ಯ ನಡೆಯಬೇಕು. ಡಿಹೆಚ್‍ಓ ರವರು ತಾಲ್ಲೂಕು ಕೇಂದ್ರಗಳಲ್ಲಿ ಆರಂಭಿಸಲಾಗಿರುವ ಸ್ವಾಬ್ ಸಂಗ್ರಹ ಕೇಂದ್ರಗಳಿಗೆ ಗುರಿ ನೀಡಬೇಕು.

ಈಗ ಹೊಸ ಮಾರ್ಗಸೂಚಿಯಂತೆ ರೋಗಲಕ್ಷಣಗಳಿಲ್ಲದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು 7 ದಿನ ಮನೆಯಲ್ಲೇ ಕ್ವಾರಂಟೈನ್ ಮಾಡಿ ಏರಿಯಾ ವೈದ್ಯಕೀಯ ಅಧಿಕಾರಿ ನಿಗಾ ವಹಿಸಬೇಕು. ಹೈರಿಸ್ಕ್ ಮತ್ತು ಇತರೆ ಕಾಯಿಲೆಯುಳ್ಳ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ 7 ದಿನ ಕ್ವಾರಂಟೈನ್ ಮಾಡಬೇಕು.

ಎಲ್ಲ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕಿತರನ್ನು ಟ್ರೇಸ್ ಮಾಡುವ ಜವಾಬ್ದಾರಿಯಿಂದ ಹಿಡಿದು ಅಗತ್ಯವಿದ್ದಲ್ಲಿ ಅವರಿಗೆ ಆಸ್ಪತ್ರೆಗೆ ವರ್ಗಾಯಿಸುವವರೆಗೆ ಏರಿಯಾ ಮೆಡಿಕಲ್ ಆಫೀಸರ್ ಮತ್ತು ತಾಲ್ಲೂಕು ಮೆಡಿಕಲ್ ಆಫೀಸರ್ ಜವಾಬ್ದಾರಿ ಇರುತ್ತದೆ.

ಜಿಲ್ಲೆಯಲ್ಲಿ ಅಲ್ಲಿ ಇಲ್ಲಿ ಕಾಣಿಸಿಕೊಳ್ಳುತ್ತಿರುವ ಕೆಲವು ಪ್ರಕರಣಗಳು ನಿಲ್ಲಬೇಕು. ಕೋವಿಡ್ ಮುಕ್ತ ಜಿಲ್ಲೆಯಾಗಿಸುವಲ್ಲಿ ಎಲ್ಲರ ಜವಾಬ್ದಾರಿ ಇದ್ದು ಎಲ್ಲರೂ ತಮ್ಮ ಸರ್ವ ಪ್ರಯತ್ನದಿಂದ, ಮುತುವರ್ಜಿಯಿಂದ ಕೆಲಸ ಮಾಡಬೇಕೆಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending