ದಿನದ ಸುದ್ದಿ
ಯಾದಗಿರಿ ಜಿಲ್ಲೆಯಲ್ಲಿ 528 ಕೊರೊನಾ ಆ್ಯಕ್ಟೀವ್ ಕೇಸ್
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/corona_virus_updates_Suddidina_news.jpg&description=ಯಾದಗಿರಿ ಜಿಲ್ಲೆಯಲ್ಲಿ 528 ಕೊರೊನಾ ಆ್ಯಕ್ಟೀವ್ ಕೇಸ್', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/corona_virus_updates_Suddidina_news.jpg&description=ಯಾದಗಿರಿ ಜಿಲ್ಲೆಯಲ್ಲಿ 528 ಕೊರೊನಾ ಆ್ಯಕ್ಟೀವ್ ಕೇಸ್', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಯಾದಗಿರಿ: ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಮಂಗಳವಾರ ಪಾಸಿಟಿವ್ ಬಂದ 61 ವರದಿಗಳು ಸೇರಿ ಜೂನ್ 9ರವರೆಗೆ ಒಟ್ಟು 642 ವರದಿ ಪಾಸಿಟಿವ್ ಬಂದಿವೆ.
ಮಂಗಳವಾರದ 661 ನೆಗೆಟಿವ್ ವರದಿ ಸೇರಿ ಈವರೆಗೆ 16,977 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 431 ಮಾದರಿಗಳು ಸೇರಿದಂತೆ 1,437 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 642 ವ್ಯಕ್ತಿಗಳ ಪೈಕಿ 113 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಉಳಿದ 528 ಪ್ರಕರಣಗಳು ಸಕ್ರಿಯವಾಗಿರುತ್ತವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,059 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,426 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 29 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 123 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪೂರ ಕೊರೊನಾ ಕೇರ್ ಸೆಂಟರ್‍ನಲ್ಲಿ 71 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್‍ನಲ್ಲಿ 80 ಮತ್ತು ಏಕಲವ್ಯ ಕೊರೊನಾ ಕೇರ್ ಸೆಂಟರ್‍ನಲ್ಲಿ 179 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 31 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‍ಗಳಲ್ಲಿ ಒಟ್ಟು 1,350 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950ಗೆ ಮಂಗಳವಾರ 5 ಕರೆಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರಲ್ಲಿ ಮನವಿ
ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ಮತ್ತು ಬೇರೆ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ನಿಗದಿತ ಕ್ವಾರಂಟೈನ್ ಕೇಂದ್ರದಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು.
ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ ವಾಟ್ಸ್‍ಆ್ಯಪ್ ಸಂಖ್ಯೆ:9449933946 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ7 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ16 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ2 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

