Connect with us

ಲೈಫ್ ಸ್ಟೈಲ್

ಬುಧವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ

Published

on

ಶ್ರೀ ಮಹಾ ವಿಷ್ಣು ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಇಂದು ವಿಶೇಷ ಖಾದ್ಯ ಆಹಾರ ಸೇವನೆ ಕಾಣಬಹುದು. ಹೊಸ ವಿಷಯಗಳನ್ನು ಕಲಿಕೆಗೆ ನೀವು ಇಷ್ಟಪಡುವಿರಿ. ಸಂಗಾತಿಯೊಂದಿಗೆ ಸಂಜೆಯ ವಾತಾವರಣ ಸುಂದರವಾಗಿ ಕಳೆಯಲು ಪ್ರಯತ್ನಿಸುತ್ತೀರಿ. ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಾಣಬಹುದಾಗಿದೆ. ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವುದನ್ನು ಕಾಣಬಹುದು. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಬಹುದು ಆದಷ್ಟು ಅಂತಹವರನ್ನು ದೂರದಲ್ಲಿಡುವುದು ಲೇಸು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಕುಟುಂಬದಲ್ಲಿ ಮಕ್ಕಳ ಕೆಲವು ನಡೆಯು ನಿಮ್ಮ ಮನದಲ್ಲಿ ಬೇಸರ ತರಿಸಬಹುದು. ಹಿರಿಯರ ಬೇಡಿಕೆಗಳು ಹೆಚ್ಚುತ್ತಾ ಹೋಗಲಿದೆ, ಇದರಿಂದ ನಿಮ್ಮ ಜೇಬು ಬರಿದಾಗುವ ಸ್ಥಿತಿ ಬರಬಹುದು. ಆದಷ್ಟು ದುಡಿಮೆಗೆ ಒತ್ತುನೀಡಿ. ಹಣಕಾಸಿನಲ್ಲಿ ಉಳಿತಾಯ ಮಾಡಿ. ಮೋಜು ಮಾಡುವ ಜೊತೆಗಾರರೊಂದಿಗೆ ಹೆಚ್ಚಿನ ಭಾಂಧವ್ಯ ಬೇಡ. ಜೀವನದ ಕ ಪ್ರಗತಿಯ ಕ್ಷಣವಿದು ಈಗಿನ ಸಮಯದ ಸಾಧನೆ ನಿಮ್ಮ ಜೀವನದ ಮಹತ್ವದ ತಿರುವು ಎಂಬುದನ್ನು ಮರೆಯದಿರಿ. ಪ್ರೇಮ ನಿವೇದನೆಯ ಪ್ರಸ್ತಾಪವನ್ನು ನೀವು ಮಾಡಲು ಇಚ್ಛಿಸುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಆದಾಯಗಳಿಕೆಯು ಸ್ಥಿರವಾಗಿದ್ದು ನಿಮ್ಮ ಆರ್ಥಿಕ ಯೋಜನೆಯನ್ನು ವಿಕಸನ ಮಾಡಲು ಪ್ರಯತ್ನ ಮಾಡುವ ಸಾಧ್ಯತೆ ಕಂಡು ಬರಲಿದೆ. ಕುಟುಂಬದ ಹಿರಿಯರು ನಿಮ್ಮ ಪ್ರತಿಯೊಂದು ಅವಶ್ಯಕತೆಗಳಿಗೆ ಉತ್ತಮ ಸ್ಪಂದನೆ ನೀಡುತ್ತಾರೆ ಚಿಂತೆ ಮಾಡುವ ಅಗತ್ಯವಿಲ್ಲ. ಕೆಲವರ ಬಳಿ ವಿತಂಡವಾದವನ್ನು ಮಾಡುತ್ತಾ ನಿಮ್ಮ ವರ್ಚಸ್ಸನ್ನು ಕಳೆದುಕೊಳ್ಳಬೇಡಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ದೈವ ದೇಗುಲಗಳ ದರ್ಶನದ ಭಾಗ್ಯ ನಿಮ್ಮದಾಗಲಿದೆ. ಕುಟುಂಬದಲ್ಲಿ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುವ ವಿಚಾರಗೋಷ್ಠಿ ನಡೆಯಲಿದೆ. ವ್ಯಾಪಾರಸ್ಥರಿಗೆ ಧನಲಾಭ ಯೋಗವಿದೆ. ಆಭರಣ ಖರೀದಿಗೆ ಮನಸ್ಸು ಮಾಡುವಿರಿ. ಸಂಗಾತಿಯ ಸನಿಹವನು ಇಂದು ಹೆಚ್ಚಾಗಿ ಬಯಸುವಿರಿ. ನಿಮ್ಮ ಮೊಂಡುವಾದಗಳನ್ನು ಸ್ನೇಹಿತರ ಮುಂದೆ ಪ್ರಸ್ತಾಪಿಸುವುದು ಬೇಡ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಕೆಲಸದಲ್ಲಿ ಸ್ಥಾನಭ್ರಷ್ಟರಾಗುವ ಸಾಧ್ಯತೆ ಕಂಡು ಬರಲಿದೆ. ಸಹವರ್ತಿಗಳು ನಿಮ್ಮ ವಿಷಯದಲ್ಲಿ ಹೆಚ್ಚಾಗಿ ಕಿರಿಕಿರಿ ಮಾಡಲಿದ್ದಾರೆ. ಹಿರಿಯರ ಮಾತುಗಳನ್ನು ಕೇಳಿ ಬದುಕಿನ ಹೆಜ್ಜೆ ಇಡಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ವ್ಯಾಪಾರದ ವ್ಯವಹಾರದಲ್ಲಿ ಉತ್ತಮವಾದ ಲಾಭ ಹಾಗೂ ಹೊಸ ಸಾಧನೆ ನಿಮ್ಮಿಂದ ಆಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಪ್ರವಾಸದ ಯೋಜನೆ ಹಾಕಿಕೊಳ್ಳುವ ಸಾಧ್ಯತೆ ಇದೆ. ಪ್ರೇಮಿಗಳಿಗೆ ಉತ್ತಮ ದಿನವಿದು. ಹಣಗಳಿಕೆಯ ವಿಷಯದಲ್ಲಿ ಸ್ಥಿರವಾದ ಕಾರ್ಯಕ್ರಮಗಳನ್ನು ಮಾಡಿಕೊಳ್ಳುವಿರಿ. ನಿಮ್ಮ ಕೆಲಸವನ್ನು ಹೆಚ್ಚಿನ ವಿಕಸನ ಮಾಡಲು ಪ್ರಯತ್ನಿಸುವ ಸಾಧ್ಯತೆ ಇದೆ. ಕುಟುಂಬದಿಂದ ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ. ಯಾರ ಜೊತೆಗೂ ಹೆಚ್ಚು ವಾದವಿವಾದವನ್ನು ಬೆಳೆಸಬೇಡಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ನಿಮ್ಮ ಪ್ರೀತಿ ಪಾತ್ರರಿಗಾಗಿ ನೀವು ಹೆಚ್ಚಾಗಿ ಬೇಕಾಗಿರುವುದನ್ನು ಕೊಡುವ ಮನಸ್ಸಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವಿರಿ. ಕೌಟುಂಬಿಕ ವಿಷಯದಲ್ಲಿ ಪತ್ನಿಯೊಡನೆ ಭಿನ್ನಾಭಿಪ್ರಾಯ ಬರಬಹುದು ಆದಷ್ಟು ತಾಳ್ಮೆವಹಿಸಿ. ಮಾನಸಿಕ ಖಿನ್ನತೆ ಭಾವನೆಯನ್ನು ತೆಗೆದುಹಾಕಿ. ಆರ್ಥಿಕವಾಗಿ ಸದೃಢರಾಗಲು ಪ್ರಯತ್ನಿಸಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending