Connect with us

ದಿನದ ಸುದ್ದಿ

ಸಾಮಾಜಿಕ ಜವಾಬ್ದಾರಿ : ಮದುಮಕ್ಕಳ ಕೋವಿಡ್ ಗಿಫ್ಟ್..!

Published

on

  • ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರ

ಮುಂಬೈಯ ಉಪನಗರ ವಸೈಯ 28 ವರ್ಷದ ಎರಿಕ್ ಆಂಟನ್ ಲೋಬೋ ಮತ್ತು 27 ವರ್ಷದ ಮರ್ಲಿನ್ ಕೆಲವು ದಿನಗಳ ಹಿಂದೆ ಮದುವೆಯಾದರು.

ಮದುವೆ ಅದರಲ್ಲೂ ಕ್ರಿಶ್ಚಿಯನ್ ಮದುವೆಯೆಂದರೆ ದೊಡ್ಡ ಸಂಖ್ಯೆಯ ಬಂಧು ಬಳಗ ಸ್ನೇಹಿತರು, ದುಬಾರಿ ಉಡುಗೊರೆ, ಒಳ್ಳೆಯ ಊಟ, ಗುಂಡು ಪಾರ್ಟಿ ಸಾಮಾನ್ಯ. ಆದರೆ, ಎರಿಕ್ ಮತ್ತು ಮರ್ಲಿನ್ ಇದಕ್ಕೆಲ್ಲ ಖರ್ಚು ಖರ್ಚು ಮಾಡದೆ ಆ ಹಣವನ್ನು ಕೊರೋನಾ ಸಂತೃಸ್ತರ ಉಪಯೋಗಕ್ಕೆ ಬಳಸಿ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.

ಈ ಲಾಕ್ ಡೌನ್ ಸಮಯದಲ್ಲಿ ಮದುವೆ ಸಮಾರಂಭದಲ್ಲಿ 50 ಜನರ ಭಾಗವಹಿಸುವಿಕೆಗೆ ಸರ್ಕಾರಿ ಆದೇಶದಲ್ಲಿ ಅವಕಾಶವಿದ್ದರೂ ಎರಿಕ್ ಮತ್ತು ಮರ್ಲಿನ್ ತಮ್ಮ ಮದುವೆಗೆ ಕೇವಲ 22 ಜನರನ್ನು ಆಹ್ವಾನಿಸಿದರು. ಬಂದವರೆಲ್ಲ ಕಡ್ಡಾಯವಾಗಿ ಮುಖಕ್ಕೆ ಮಾಸ್ಕ ಹಾಕಿಕೊಂಡು ಸುರಕ್ಷಿತ ದೈಹಿಕ ಅಂತರವನ್ನು ಪಾಲಿಸಿದರು.

ಮತ್ತು, ದುಬಾರಿ ಉಡುಗೊರೆ, ಭರ್ಜರಿ ಊಟ, ವೈನಿಗೆ ವ್ಯಯ ಮಾಡದ ಹಣದಿಂದ 50 ಆಮ್ಲಜನಕ ಸಿಲಿಂಡರ್ ಮತ್ತು 50 ಹಾಸ್ಪಿಟಲ್ ಬೆಡ್ ಗಳನ್ನು ಖರೀದಿಸಿ ಜೂನ್ 20 ರಂದು ಸತ್ಫಲ ಗ್ರಾಮದ ಆಸ್ಪತ್ರೆಗೆ ಕೋವಿಡ್ ಕೇಂದ್ರಕ್ಕೆ ದಾನ ಮಾಡಿದರು. ಮದುವೆ ಸಮಾರಂಭ ಮುಗಿದ ನಂತರ ತಾವೇ ಆ ಆಸ್ಪತ್ರೆಗೆ ಭೇಟಿ ಕೊಟ್ಟು ಅವುಗಳನ್ನು ಉದ್ಘಾಟಿಸಿದರು.

ಮದುವೆಯಾಗುವ ಮೊದಲೂ ಕೂಡಾ ಎರಿಕ್ ಮತ್ತು ಮರ್ಲಿನ್ ಲಾಕ್ ಡೌನ್ ಸಂತೃಸ್ತರಿಗೆ ಆಹಾರ ತಯಾರಿಸುವುದು, ವಲಸೆ ಕಾರ್ಮಿಕರಿಗೆ ವಿಶೇಷ ಶ್ರಮಿಕ್ ರೈಲುಗಳಲ್ಲಿ ಅವರ ಊರುಗಳಿಗೆ ಹಿಂತಿರುಗಲು ಟಿಕೇಟು ಪಡೆಯಲು ಸಹಕರಿಸುವುದು ಮೊದಲಾಗಿ ಹಲವು ರೀತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending