ನಿತ್ಯ ಭವಿಷ್ಯ
ಭಾನುವಾರದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ : ಇಂದೇ ಕರೆಮಾಡಿ
ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150
ಮೇಷ ರಾಶಿ
ಸಂಗಾತಿಯ ಪ್ರೀತಿಯ ಮಾತುಗಳಿಂದ ಕೆಲಸದ ಆಯಾಸ ಹಾಗೂ ಮಾನಸಿಕ ಕಷ್ಟಗಳನ್ನು ದೂರ ಮಾಡಿಕೊಳ್ಳುವಿರಿ. ಕೆಲವು ಹೂಡಿಕೆಗಳು ನಿಮಗೆ ಆರ್ಥಿಕ ನಷ್ಟ ಮಾಡಬಹುದು ಎಚ್ಚರದಿಂದ ಪಾಲ್ಗೊಳ್ಳಿ. ನೀವು ಅಂದುಕೊಂಡ ಕಾರ್ಯಗಳು ಇಂದು ವೈಯಕ್ತಿಕ ಸಮಸ್ಯೆಗಳಿಂದ ವಿಳಂಬವಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಇನ್ನೊಬ್ಬರ ವ್ಯವಹಾರದಲ್ಲಿ ಮಧ್ಯಸ್ಥಿಕೆ ಅಥವಾ ಜಾಮೀನು ರೀತಿಯಾದಂತಹ ಕೆಲಸಕ್ಕೆ ಕೈಹಾಕಬೇಡಿ. ಪ್ರೇಮಿಗಳ ವಿಷಯದಲ್ಲಿ ಇಂದು ಭಿನ್ನಾಭಿಪ್ರಾಯ ಬರಬಹುದಾಗಿದೆ. ನಿಮ್ಮ ಕೆಲವು ಮಾತುಗಳು ಮನಸ್ಥಾಪ ತರಿಸಬಹುದು ಎಚ್ಚರದಿಂದಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ವ್ಯಾಪಾರಸ್ಥರಿಗೆ ಶುಭದಾಯಕ ಫಲಗಳು ಕಂಡುಬರುತ್ತದೆ. ನಿಮ್ಮ ಕೆಲಸದ ವಿಷಯವಾಗಿ ಪ್ರಸಂಸೆ ಹೆಚ್ಚಾಗಲಿದೆ. ಹೊಸದಾದ ಗ್ರಾಹಕರನ್ನು ಸೆಳೆಯುವ ನಿಮ್ಮ ಕಾರ್ಯಶೈಲಿ ಉತ್ತಮವಾಗಿ ಮೂಡಿ ಬರುತ್ತದೆ. ದೀರ್ಘಾವಧಿ ಹೂಡಿಕೆಗಳು ನಿಮ್ಮ ಲಾಭಕ್ಕೆ ಉತ್ತಮ ವೇದಿಕೆ ಎಂಬುದನ್ನು ನೆನಪಿಡಿ. ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ. ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಕಚೇರಿ ಕೆಲಸಗಳಲ್ಲಿ ಉತ್ತಮ ರೀತಿಯಾದ ಫಲಿತಾಂಶ ದೊರೆಯಲಿದೆ. ಕೆಲಸದ ವಿಷಯವಾಗಿ ಸಂಭ್ರಮ ಹಾಗೂ ಮುಂಬಡ್ತಿ ಭಾಗ್ಯ ಕಾಣಬಹುದು. ನಿಮ್ಮಿಂದ ಔತಣಕೂಟವನ್ನು ಏರ್ಪಡಿಸುವ ಸಾಧ್ಯತೆ ಕಂಡುಬರುತ್ತದೆ. ಕ್ಲಿಷ್ಟಕರವಾದ ಸಮಸ್ಯೆಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಪರಿಹರಿಸುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿರೀಕ್ಷಿತ ಧನಾಗಮನ ಸಂತಸ ತರಲಿದೆ. ನೀವು ಪ್ರಕೃತಿ ಪ್ರಿಯರು ಹಾಗಾಗಿ ಪ್ರಾಕೃತಿಕ ಸೌಂದರ್ಯ ವೀಕ್ಷಣೆಯ ಅವಕಾಶ ಕೂಡಿ ಬರಲಿದೆ. ನಿಮ್ಮ ಪ್ರತಿಯೊಂದು ಬೆಳವಣಿಗೆಗೆ ಸಂಗಾತಿಯಿಂದ ಸೂಕ್ತ ಬೆಂಬಲ ದೊರೆಯಲಿದೆ. ಸ್ನೇಹ ಸಹವಾಸದಲ್ಲಿ ಎಚ್ಚರಿಕೆ ಅಗತ್ಯವಾಗಿ ಇರಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಲಾಭ ಗಳಿಸುವ ಉದ್ದೇಶದಿಂದ ನಾನಾ ರೀತಿಯ ಯೋಜನೆಗಳನ್ನು ರೂಪಿಸುವಿರಿ. ನಿಮ್ಮಲ್ಲಿ ಯೋಜನೆ ಉತ್ತಮವಾಗಿದ್ದರೂ ಅದನ್ನು ನೆರವೇರಿಸುವರು ಶಿಸ್ತು ಕಡಿಮೆಯಾಗಬಹುದು ಆದಷ್ಟು ಯಾವುದೇ ಕೆಲಸ ಮಾಡುವ ಮುನ್ನ ಶ್ರದ್ಧೆಯನ್ನು ಬೆಳೆಸಿಕೊಳ್ಳಿ. ಉದ್ಯೋಗದಲ್ಲಿನ ನಿಯಮಗಳನ್ನು ಮೀರುವ ಅಭ್ಯಾಸವನ್ನು ತೆಗೆದುಹಾಕಿ. ಕೊಟ್ಟಿರುವ ಕಾರ್ಯಗಳನ್ನು ಮೊದಲೇ ಮಾಡಲು ಸೂಕ್ತ ರೀತಿಯಾಗಿ ತಯಾರಿ ನಡೆಸುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಗಾತಿಯು ಪ್ರೀತಿಯ ಭಾವನೆಯಿಂದ ಬರುವರು ನೀವು ಕೆಲಸದ ಒತ್ತಡದಿಂದ ಕಡೆಗಣಿಸುವುದು ಅವರ ಮನಸ್ಸಿಗೆ ಬೇಸರವಾಗಬಹುದು. ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ. ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿ. ಕಟು ಮಾತುಗಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ಪ್ರತಿಯೊಂದು ಆಕಾಂಕ್ಷೆಗಳಿಗೆ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಕಾರ್ಯ ಮಾಡಿಕೊಡುವುದು ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ. ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ. ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ. ಮಕ್ಕಳು ನಿಮ್ಮ ಕೆಲಸದಲ್ಲಿ ಭಾಗಿಯಾಗಿ ಸಹಕಾರ ನೀಡಲಿದ್ದಾರೆ. ಶೈಕ್ಷಣಿಕ ಸಾಧನೆ ಉತ್ತಮವಾಗಿ ರೂಪುಗೊಳ್ಳಲಿದೆ. ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕದನಕ್ಕೆ ಪ್ರೇರೇಪಣೆ ನೀಡುವ ಜನಗಳಿಂದ ಆದಷ್ಟು ದೂರವಿದ್ದು ಬಿಡಿ. ಅನ್ಯರ ಕೆಲಸದಲ್ಲಿ ನೀವು ಪ್ರವೇಶಿಸುತ್ತಿರುವುದು ಒಳ್ಳೆಯದಲ್ಲ. ಇನ್ನೊಬ್ಬರ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಆರ್ಥಿಕ ಮತ್ತು ಭೂ ಸಂಬಂಧಿತ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಸರಿಪಡಿಸಿಕೊಳ್ಳಿ. ನಿಮ್ಮ ಕೆಲಸಕಾರ್ಯಗಳು ನಿರೀಕ್ಷಿತ ಯಶಸ್ಸು ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಮಾತುಗಳು ಮತ್ತು ವ್ಯವಹಾರದ ಶೈಲಿಯು ನೇರವಾಗಿರಲಿ. ನಿಮ್ಮಲ್ಲಿ ಮೂಡಿರುವ ಸೋಮಾರಿತನವನ್ನು ಆದಷ್ಟು ತ್ಯಜಿಸುವುದು ಸೂಕ್ತ. ಸಂಗಾತಿ ಮತ್ತು ಕುಟುಂಬದವರು ನಿಮಗೆ ಉತ್ಸಾಹ ತರಲಿದ್ದಾರೆ. ನಿರ್ದಿಷ್ಟ ಗುರಿಯನ್ನು ತಲುಪಲು ನಿಮ್ಮ ಪರಿಶ್ರಮ ಇನ್ನಷ್ಟು ಬೇಕಾಗಿದೆ. ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ3 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ2 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ7 hours agoಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
-
ದಿನದ ಸುದ್ದಿ2 days agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
-
ಅಂತರಂಗ8 hours agoದಿಮಾಗಿ ನಕ್ಸಲ್-ನಗರ ನಕ್ಸಲ್


