ನಿತ್ಯ ಭವಿಷ್ಯ
ಗುರುವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ
ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಸಹವರ್ತಿಗಳಿಂದ ನಿಮ್ಮ ಕಾರ್ಯಗಳಿಗೆ ಸಕಾಲದಲ್ಲಿ ಸಹಕಾರ ದೊರೆಯುತ್ತದೆ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ. ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ. ಹೊಗಳಿಕೆ ಮಾತುಗಳಿಗೆ ನೀವು ಗರ್ವ ಪಡೆಯುವುದು ಬೇಡ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸಣ್ಣ ಸಮಸ್ಯೆಯೆಂದು ಸುಮ್ಮನೆ ಕೂರುವುದು ತಪ್ಪಾಗುತ್ತದೆ. ಸಮಸ್ಯೆ ಉದ್ಭವವಾದರೆ ಅದರ ಪರಿಹಾರಕ್ಕೆ ಮುಂದಾಗಿ. ಹೊಸ ಹಣಕಾಸಿನ ಒಪ್ಪಂದಗಳು ಅನಾಯಾಸವಾಗಿ ನಡೆಯಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲಿದ್ದೀರಿ. ಸಂತೋಷದ ಸುದ್ದಿಯಿಂದ ನಿಮ್ಮಲ್ಲಿ ಹುಮ್ಮಸ್ಸು ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲವು ವೈಯಕ್ತಿಕ ವಿಷಯಗಳಿಂದ ಮಾನಸಿಕ ಚಿಂತೆ ಹೆಚ್ಚಾಗಬಹುದು. ಅಪರಿಚಿತರೊಡನೆ ನಿಮ್ಮ ಯೋಜನೆಗಳ ಬಗ್ಗೆ ಚರ್ಚಿಸುವುದು ಸರಿಯಲ್ಲ. ಸ್ವಂತ ಉದ್ಯೋಗದ ಕನಸು ಈಡೇರುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿರೀಕ್ಷಿತ ಆದಾಯ ಮೂಲಗಳು ಹಿನ್ನಡೆ ಕಂಡುಬರುತ್ತದೆ. ಆಕಸ್ಮಿಕವಾಗಿ ಸಿಗುವ ಸ್ನೇಹಿತರಿಂದ ಮೋಜು-ಮಸ್ತಿ ವಾತಾವರಣಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕುಟುಂಬದ ವಿಚಾರಗಳನ್ನು ಅಸಡ್ಡೆ ಮಾಡುವುದು ಒಳಿತಲ್ಲ. ಸಾಂಸಾರಿಕ ಜೀವನದಲ್ಲಿ ನಡೆಯುತ್ತಿರುವ ಸಂಘರ್ಷಗಳಿಗೆ ಆದಷ್ಟು ಬೇಗ ಪರಿಹಾರ ಹುಡುಕಿಕೊಳ್ಳಿ. ಸಹೋದರ ವರ್ಗದವರನ್ನು ವಿಶ್ವಾಸದಿಂದ ನೋಡಿಕೊಳ್ಳುವುದು ಒಳ್ಳೆಯದು. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಸೂಕ್ತ. ನಿರೀಕ್ಷಿತ ಆರ್ಥಿಕ ಒಪ್ಪಂದಗಳು ನಡೆಯಬಹುದಾದ ಸಾಧ್ಯತೆಯಿದೆ. ದೂರದ ಊರಿನ ಪ್ರಯಾಣ ಮಾಡುವ ವಿಚಾರ ನಿಮ್ಮಲ್ಲಿ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಯೋಜಿತ ಕಾರ್ಯಗಳಿಗೆ ಆದಷ್ಟು ಶ್ರಮ ಪಡಬೇಕಾಗಿದೆ. ಇನ್ನೊಬ್ಬರ ಮಾತುಗಳನ್ನು ಕೇಳುವುದು ಅಷ್ಟು ಸರಿಯಲ್ಲ, ಸ್ವಂತ ಬುದ್ಧಿ ಇರಲಿ. ಸಂದರ್ಭನುಸಾರ ಮಾತನಾಡುವುದು ಒಳ್ಳೆಯದು. ನಿಮ್ಮ ಕೆಲವು ಮಾತುಗಳು ತೀಕ್ಷ್ಣ ವಾಗಿದ್ದು ಗೊಂದಲ ಅಥವಾ ಅಪಾರ್ಥ ಮೂಡಿಸುತ್ತದೆ ಎಚ್ಚರವಿರಲಿ. ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಸಿಡುಕಿನ ವ್ಯಕ್ತಿಗಳು ನಿಮ್ಮ ವಿರುದ್ಧ ಹರಿಹಾಯಬಹುದು ನಿಮ್ಮ ಒಂದು ನಗುವಿನಿಂದ ವಾತಾವರಣವನ್ನು ತಿಳಿಗೊಳಿಸಲು ಪ್ರಯತ್ನಿಸಿ. ಪ್ರಕೃತಿಯೊಡನೆ ಕಾಲಕಳೆಯುವ ಮನಸ್ಸು ಮೂಡಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕುಲ ದೇವತಾರಾಧನೆ ನೀವು ಸಂಕಲ್ಪಗಳನ್ನು ಮಾಡುವಿರಿ. ವಿವಾಹಕ್ಕೆ ಶುಭ ಫಲಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ. ಸ್ನೇಹಿತರ ಆಗಮನದಿಂದ ನಿಮ್ಮಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಈ ದಿನ ನಿಮಗೆ ಪ್ರೇಮಾಂಕುರವಾಗುವ ಲಕ್ಷಣಗಳು ಕಂಡುಬರುತ್ತದೆ.
ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ. ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅನುಪಯುಕ್ತ ಕೆಲಸಗಳಿಂದ ದೂರವಿರಿ. ಹೇಳಿಕೆ ಮಾತುಗಳನ್ನು ಕೇಳುವುದು ಸಮಂಜಸವಲ್ಲ, ಪೂರ್ಣ ಸತ್ಯವನ್ನು ಅರಿತುಕೊಳ್ಳುವ ವಿಚಾರವಿರಲಿ. ಕೆಲಸದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ನೀವು ಈ ದಿನ ಹೆಚ್ಚಿನ ಓಡಾಟ ಮಾಡುವ ಸಾಧ್ಯತೆ ಕಂಡುಬರಲಿದೆ. ಮಧ್ಯಂತರ ವ್ಯಕ್ತಿಗಳಿಂದ ಕೆಲಸದಲ್ಲಿ ಸ್ವಲ್ಪ ಹಿನ್ನಡೆಯಾದರೂ ಸಂಜೆ ವೇಳೆಗೆ ಸರಿಹೋಗುವುದು. ಪ್ರೇಮಿಗಳಿಗೆ ಈ ದಿನ ಉತ್ತಮ ಸಂತೋಷಕರವಾದ ದಿನವಿರುತ್ತದೆ. ಸಂಗಾತಿಯು ನಿಮಗಾಗಿ ವಿಶೇಷ ಉಡುಗೊರೆ ನೀಡುವ ಸಾಧ್ಯತೆಗಳನ್ನು ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ ಕಾಣಬಹುದು. ಆದಾಯದ ಮೂಲಗಳು ನಿರೀಕ್ಷಿತವಾಗಿ ಕೈ ಹಿಡಿಯುತ್ತದೆ. ಆತುರದ ವರ್ತನೆ ವಿಫಲ ಫಲಿತಾಂಶ ನೀಡಬಹುದು ಎಚ್ಚರವಿರಲಿ. ನಿರ್ದಿಷ್ಟ ಸಮಯದ ಪರಿಪಾಲನೆ ಬಹು ಅಗತ್ಯವಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ವ್ಯವಹಾರಗಳಲ್ಲಿ ಮಾಡುತ್ತೀರಿ. ಹೂಡಿಕೆಗಳಿಂದ ಲಾಭಾಂಶಗಳು ಹೆಚ್ಚಳವಾಗಲಿದೆ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡುವ ಸಾಧ್ಯತೆ ಕಂಡುಬರುತ್ತದೆ. ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ಸಹೋದರ ವರ್ಗದಿಂದ ವ್ಯಾಜ್ಯಗಳು ಉದ್ಭವವಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243



