Connect with us

ಲೈಫ್ ಸ್ಟೈಲ್

ಭಾನುವಾರದ ರಾಶಿಫಲ

Published

on

ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ವಿರೋಧಿ ವರ್ಗದ ಜನಗಳು ನಿಮ್ಮ ಕಾರ್ಯ ಶೈಲಿಗೆ ಮನಸೋತು ಸ್ನೇಹ ಹಸ್ತ ಚಾಚುವ ಸಾಧ್ಯತೆ ಇಂದು ಕಾಣಬಹುದು. ನಿಮ್ಮ ವ್ಯವಹಾರದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಸೂಕ್ತ ಸಮಯ ಹಾಗೂ ಹಣಕಾಸಿನ ಮೂಲವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ನಿಮ್ಮ ಬದ್ಧತೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಆರ್ಥಿಕ ಸ್ಥಿತಿ ನಿಮ್ಮ ಮನಸ್ಸಿನ ಅಭಿಲಾಷೆಯಂತೆ ಇಂದು ನಡೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ. ವಾಹನ ತೆಗೆದುಕೊಳ್ಳುವ ನಿಮ್ಮ ಹಲವು ದಿನದ ಬಯಕೆ ಈಡೇರುವ ಸಾಧ್ಯತೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ವೈವಾಹಿಕ ಜೀವನಕ್ಕೆ ಕಾತರದಿಂದ ಕಾಯುತ್ತಿರುವವರಿಗೆ ಶುಭಸುದ್ದಿ ನಿಮ್ಮ ಕಿವಿಗೆ ಬೀಳಲಿದೆ. ಕುಟುಂಬದಲ್ಲಿ ನಡೆಯುವಂಥ ಸಣ್ಣ ತಪ್ಪನ್ನು ದೊಡ್ಡದಾಗಿ ಪರಿವರ್ತನೆ ಮಾಡದೆ ಕ್ಷಮಾಗುಣವನ್ನು ಬೆಳೆಸಿಕೊಳ್ಳಿ. ಹಣಕಾಸು ಪೂರ್ಣವಾಗಿ ಬರದೆ ನಿಮ್ಮನ್ನು ಸತಾಯಿಸುತ್ತದೆ. ಯಂತ್ರೋಪಕರಣ ನಿರ್ವಹಿಸುವವರಿಗೆ ಸ್ವಲ್ಪ ಮಟ್ಟಿಗೆ ಜಾಗ್ರತೆ ವಹಿಸಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ನಿಮ್ಮ ಅಗಾಧ ಜ್ಞಾನ ಮನಗಂಡು ಅವರ ಕೆಲಸದ ಸಹಾಯಕ್ಕೆ ನಿಮ್ಮಲ್ಲಿ ಕೇಳುವವರು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದರಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆ ತೋರುವ ಸಾಧ್ಯತೆ ಇದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಗೃಹ ನಿಮಿತ್ತ ಕಾರ್ಯಗಳಲ್ಲಿ ಹೆಚ್ಚಿನ ಹಣ ಖರ್ಚು ಆಗುವ ಸಾಧ್ಯತೆ ಇದೆ. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಿಂದ ನಿಮಗೆ ಹಲವು ಅವಕಾಶಗಳು ಬರಲಿದೆ. ನಿಮ್ಮ ಆರೋಗ್ಯದಲ್ಲಿ ತುಸು ವ್ಯತ್ಯಾಸ ಕಾಣುವುದರಿಂದ ಅಂದುಕೊಂಡ ಕೆಲಸದಲ್ಲಿ ವಿಳಂಬವಾಗಬಹುದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಕಚೇರಿಯಲ್ಲಿ ಪಾಲ್ಗೊಳ್ಳಿ ಕೆಲವು ವಾದಗಳು ಮಾಡುವಾಗ ಅವಶ್ಯಕತೆ ಬೀಳಲಿದೆ. ಆಸ್ತಿ ಖರೀದಿ ಪ್ರಕ್ರಿಯೆ ಮುಂದಕ್ಕೆ ಹೋಗಲಿದೆ. ಬಾಳಸಂಗಾತಿಯ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವುದರಿಂದ ನಿಮ್ಮ ಮೇಲೆ ಬಂದಂತ ಅಪವಾದ ದೂರವಾಗುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ವ್ಯವಹಾರದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯಿಂದ ಕೆಲವರಿಗೆ ಇರಿಸುಮುರಿಸು ಆಗುವ ಸಂದರ್ಭ ಬರಬಹುದು, ಯಾವುದಕ್ಕೂ ಚಿಂತೆ ಮಾಡದೆ ಕಾರ್ಯಕ್ಷೇತ್ರಗಳಲ್ಲಿ ಮುನ್ನುಗ್ಗಿ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡಲಿದ್ದೀರಿ. ಕುಟುಂಬದೊಂದಿಗೆ ಪ್ರವಾಸದ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ಅನುಪಯುಕ್ತ ವಿಷಯಗಳಲ್ಲಿ ಕಾಲಹರಣ ಮಾಡುವುದು ಸರಿ ಕಾಣುವುದಿಲ್ಲ. ಮಕ್ಕಳ ವಿದ್ಯೆಯಲ್ಲಿ ಉನ್ನತ ಸ್ಥಾನ ಪ್ರಾಪ್ತಿಯಾಗುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ನಿಮ್ಮ ಕೆಲಸದಲ್ಲಿ ಬಡ್ತಿ ಸಿಗುವ ಅವಕಾಶವಿದೆ. ಜಮೀನು ವ್ಯಾಜ್ಯಗಳು ಪರಿಹಾರವಾಗುವ ಸ್ಥಿತಿಯಲ್ಲಿದೆ ಆದರೆ ಮಧ್ಯವರ್ತಿಗಳಿಂದ ವಿನಾಕಾರಣ ಸಮಸ್ಯೆ ಬರಬಹುದು. ಹಣಕಾಸಿನ ವಿಷಯದಲ್ಲಿ ಗೆಲುವು ನಿಮ್ಮ ಪರವಾಗಿದೆ. ಆಕಸ್ಮಿಕ ಧನಲಾಭ ಆಗುವ ಸ್ಥಿತಿ ಕಂಡು ಬರುತ್ತದೆ. ಮಕ್ಕಳು ನಿಮ್ಮ ಕೆಲಸಗಳಿಗೆ ಸಹಕಾರ ನೀಡಲಿದ್ದಾರೆ. ಕುಟುಂಬದಲ್ಲಿ ಸಂತೋಷದ ವಾತಾವರಣ ತುಂಬಿರುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ವ್ಯವಹಾರದಲ್ಲಿ ಹೊಸ ಲಾಭಗಳಿಕೆಯ ಮಾರ್ಗವನ್ನು ಕಂಡುಹಿಡಿಯುವಿರಿ. ವೈಜ್ಞಾನಿಕ ಸಂಶೋಧನೆಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಾಣಬಹುದು. ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಪ್ರೇಮಿಗಳಿಗೆ ರೋಮಾಂಚನ ಭರಿತವಾದ ದಿನವಿದು. ನಿಮ್ಮ ಮನಸ್ಸಿನಲ್ಲಿರುವ ಭಯ ಒತ್ತಡಗಳು ಈದಿನ ಪರಿಹಾರವಾಗಿ ನಗು ಮೂಡುವುದನ್ನು ಕಾಣಬಹುದಾಗಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಹೆಚ್ಚು ತಿರುಗಾಟದಿಂದ ದೈಹಿಕ ಕ್ಷಮತೆ ಕುಂದಬಹುದು ಆದಷ್ಟು ವಿಶ್ರಾಂತಿಗೆ ಪ್ರಯತ್ನಪಡಿ. ಹಣಕಾಸಿನ ವಿಷಯವಾಗಿ ವ್ಯವಹಾರಗಳು ಈ ದಿನ ವಿಳಂಬವಾಗುವ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ಅನುಕೂಲಕರ ಸ್ಥಿತಿ ನಿರ್ಮಾಣವಾಗುತ್ತದೆ. ಆಧ್ಯಾತ್ಮದತ್ತ ನಿಮ್ಮ ಮನಸ್ಸು ಮೂಡಲಿದೆ. ಭವಿಷ್ಯದ ಹಿತದೃಷ್ಟಿಯಿಂದ ಉನ್ನತವಾದ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ ಕಾಣಬಹುದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಅಗೋಚರ ಎನಿಸುವ ಕೆಲವು ಪ್ರಕ್ರಿಯೆಗಳ ಅನುಭವ ಆಗಬಹುದಾಗಿದೆ. ನಿಮ್ಮ ಕುತೂಹಲ ಅಥವಾ ಜ್ಞಾನದ ಮಟ್ಟ ಹೆಚ್ಚಾಗುವ ಸಂದರ್ಭ ಬರಲಿದೆ. ಹಳೆಯ ವಸ್ತುಗಳಲ್ಲಿ ಹೆಚ್ಚಿನ ಬಯಕೆಗಳು ಮೂಡುತ್ತದೆ. ವ್ಯವಹಾರದಲ್ಲಿ ಸಾಲ ಕೊಡುವುದು ತಪ್ಪಾಗಬಹುದು. ಕುಟುಂಬದಲ್ಲಿ ಶಾಂತಿ ಸಮಾಧಾನವನ್ನು ಸ್ಥಾಪಿಸಲು ಪ್ರಯತ್ನಪಡಿ. ಗಾಳಿ ಮಾತುಗಳನ್ನು ನಂಬುವುದು ಮೊದಲು ಬಿಡಬೇಕಾದ ವಿಷಯವಾಗಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಮಾತುಗಳ ಮೇಲೆ ಹೆಚ್ಚಿನ ನಿಗಾ ಇಡಿ. ವಾಗ್ದಾನ ನೀಡಿ ಸಿಲುಕಬೇಡಿ. ಸಾಲ ಕೊಡುವ ಪ್ರಮೇಯ ಬರಬಹುದು ಆದಷ್ಟು ಈ ದಿನ ನಿಮಗೆ ಲೇವಾದೇವಿ ಶುಭವಲ್ಲ. ನಿಮ್ಮ ವಿಶ್ವಾಸದಿಂದ ಮತ್ತು ಆತ್ಮಬಲದಿಂದ ಕಷ್ಟ ಕಾರ್ಯವನ್ನು ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೆಲಸದಲ್ಲಿ ಉತ್ತಮ ಪ್ರಶಂಸೆ ಸಂಪಾದಿಸುತ್ತೀರಿ, ಆದರೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ ಸರಿಪಡಿಸಲು ಮುಂದಾಗುವುದು ಒಳಿತು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending