Connect with us

ದಿನದ ಸುದ್ದಿ

ದಾವಣಗೆರೆಯಲ್ಲಿ ಒಟ್ಟು 658 ಕೊರೋನಾ ಪ್ರಕರಣಗಳು, 22 ಸಾವು

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಗುರುವಾರ 25 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಂಪೂರ್ಣರಾಗಿ ಗುಣಮುಖರಾದ 11 ಜನರನ್ನು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ.

ರೋಗಿ ಸಂಖ್ಯೆ- 49071 61 ವರ್ಷದ ಪುರುಷ ಇವರು ತೀವ್ರ ಉಸಿರಾಟದ ತೊಂದರೆ (ಸಾರಿ ಕೇಸ್) ಹಿನ್ನೆಲೆ ಹೊಂದಿದ್ದಾರೆ. ರೋಗಿ ಸಂಖ್ಯೆಗಳಾದ- 47680 19 ವರ್ಷದ ಯುವಕ, 47689 35 ವರ್ಷದ ಮಹಿಳೆ, 47691 63 ವರ್ಷದ ವೃದ್ಧ, 47692 40 ವರ್ಷದ ಪುರುಷ, 47693 56 ವರ್ಷದ ಪುರುಷ, 47696 56 ವರ್ಷದ ಮಹಿಳೆ, 47698 40 ವರ್ಷದ ಪುರುಷ, 47699 35 ವರ್ಷದ ಪುರುಷ, 47701 65 ವರ್ಷದ ವೃದ್ಧ, 47703 54 ವರ್ಷದ ಪುರುಷ ಇವರೆಲ್ಲರೂ ಐಎಲ್‍ಐ ಕೇಸ್ ಹಿನ್ನೆಲೆ ಹೊಂದಿದ್ದಾರೆ.

ರೋಗಿ ಸಂಖ್ಯೆ- 47697 26 ವರ್ಷದ ಪುರುಷ ಇವರು ಅಂತರ ಜಿಲ್ಲಾ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ರೋಗಿ ಸಂಖ್ಯೆಗಳಾದ-47681 24 ವರ್ಷದ ಯುವತಿ, 47682 22 ವರ್ಷದÀ ಯುವತಿ, 47683 25 ವರ್ಷದ ಮಹಿಳೆ, 47684 41 ವರ್ಷದ ಪುರುಷ, 47685 67 ವರ್ಷದ ವೃದ್ಧ, 47695 28 ವರ್ಷದ ಮಹಿಳೆ, 47702 60 ವರ್ಷದ ವೃದ್ಧ ಇವರೆಲ್ಲರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ರೋಗಿ ಸಂಖ್ಯೆ-47686 29 ವರ್ಷದ ಪುರುಷ ಇವರು ರೋಗಿ ಸಂಖ್ಯೆ-36764 ರ ಸಂಪರ್ಕ. ರೋಗಿ ಸಂಖ್ಯೆಗಳಾದ-47687 52 ವರ್ಷದ ಮಹಿಳೆ, 47688 56 ವರ್ಷದÀ ಪುರುಷ ಇವರಿಬ್ಬರೂ ರೋಗಿ ಸಂಖ್ಯೆ- 36602 ರ ಸಂಪರ್ಕಿತರು. ರೋಗಿ ಸಂಖ್ಯೆಗಳಾದ- 47690 22 ವರ್ಷದ ಯುವಕ, 47694 65 ವರ್ಷದ ವೃದ್ಧ ಇವರಿಬ್ಬರೂ ರೋಗಿ ಸಂಖ್ಯೆ- 41671 ರ ಸಂಪರ್ಕ. ರೋಗಿ ಸಂಖ್ಯೆ-47700 64 ವರ್ಷದ ವೃದ್ಧ ಇವರು ರೋಗಿ ಸಂಖ್ಯೆ- 35366 ರ ಸಂಪರ್ಕಿತರು.

ಗುರುವಾರ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಸಂಪೂರ್ಣರಾಗಿ ಗುಣಮುಖರಾದ ರೋಗಿ ಸಂಖ್ಯೆಗಳಾದ-35934, 35938, 35947, 35955, 35971, 35972, 39245, 41671, 44661, 44712, ಮತ್ತು 44623 ಇವರು ಬಿಡುಗಡೆ ಹೊಂದಿದ್ದಾರೆ.

ಒಟ್ಟು 658 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 494 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ. 22 ಸಾವು ಸಂಭವಿಸಿದ್ದು ಪ್ರಸ್ತುತ 142 ಸಕ್ರಿಯ ಪ್ರಕರಣಗಳು ಇವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಏಪ್ರಿಲ್-ಮೇ ನಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ದಾಖಲು : ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡು ಬಂದಲ್ಲಿ, ಅಂತಹ ಪೋಷಕರ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಪರಿಶೀಲನಾ ಸಭೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲ್ಯವಿವಾಹ ಒಂದು ಸಾಮಾಜಿಕ ಪಿಡೂಗಾಗಿದ್ದು, ಇದನ್ನು ತಡೆಗಟ್ಟಲು ವ್ಯಾಪಕವಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳಿಂದ ಬರುವ ಜುಲೈ ತಿಂಗಳಲ್ಲಿ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಅಭಿಯಾನದ ರೀತಿ ಆಯೋಜಿಸಲು ಸೂಚಿಸಿದರು.

ಕಾರ್ಮಿಕರ ಮಕ್ಕಳು, ತಾಂಡಾಗಳಲ್ಲಿ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಕುಟುಂಬಗಳಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ವರದಿಯಾಗುತ್ತಿರುವುದರಿಂದ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ಕೂಲಿ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿ, ಬಾಲ್ಯವಿವಾಹ ನಡೆಯದೆ ಇರುವ ಮತ್ತು ಹದಿಹರೆಯದ ಬಾಲಕಿಯರು, ಗರ್ಭಿಣಿ ಆಗದೆ ಇರುವಂತಹ ಪ್ರಕರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ. ಕರೆಣ್ಣವರ್ ಮಾತನಾಡಿ ಮಕ್ಕಳ ಬಾಲ್ಯ ವಿವಾಹದಿಂದಾಗುವ ಪರಿಣಾಮಗಳ ಬಗ್ಗೆ ತಿಳಿಸಬೇಕು. ಬಾಲ್ಯ ವಿವಾಹ ಮಾಡುವುದರಿಂದ ಉಂಟಾಗುವ ಕಾನೂನಾತ್ಮಕ ತೊಡಕುಗಳ ಬಗ್ಗೆ ಪೋಷಕರಲ್ಲಿ ಮನವರಿಕೆ ಮಾಡಿಕೊಡಬೇಕೆಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಮಾತನಾಡಿ ಪ್ರಸಕ್ತ ಸಾಲಿನಲ್ಲಿ 2024 ರ ಏಪ್ರಿಲ್, ಮೇ ತಿಂಗಳಲ್ಲಿ ಒಟ್ಟು 26 ದೂರುಗಳು ಬಂದಿದ್ದು, ಅವುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆದು 2 ಪ್ರಕರಣಗಳಲ್ಲಿ ಕೋರ್ಟ್‍ನಿಂದ ತಡೆಯಾಜ್ಞೆ ಪಡೆಯಲಾಗಿದೆ. 1 ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಬಾಲ ನ್ಯಾಯ ಮಂಡಳಿಯಲ್ಲಿ ಹಿಂದಿನ 54, ಹೊಸದಾಗಿ 20 ಸೇರಿ 74, ಇದರಲ್ಲಿ 11 ಖುಲಾಸೆಯಾಗಿವೆ. ಪೋಕ್ಸೊದಡಿ 10 ಪ್ರಕರಣಗಳಿದ್ದು 2 ಖುಲಾಸೆಯಾಗಿ 8 ಬಾಕಿ ಇವೆ. ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ 61 ಹಾಗೂ ಬಾಲಕರ ಬಾಲ ಮಂದಿರದಲ್ಲಿ 32 ಮಕ್ಕಳಿದ್ದಾರೆ. ಇದರಲ್ಲಿ ಅನಾಥ ಮಕ್ಕಳು, ಏಕಪೋಷಕ ಮಕ್ಕಳು, ಇಬ್ಬರು ಪೋಷಕರಿರುವ ಮಕ್ಕಳು ಇದ್ದಾರೆ ಎಂದು ತಿಳಿಸಿದರು.

ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9989346243

Continue Reading

ದಿನದ ಸುದ್ದಿ

ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ.29 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳು : ರಾಜಗೊಂಡನಹಳ್ಳಿ , ಬೇತೂರು, ಕೊಂಡಜ್ಜಿ, ಹೆಬ್ಬಾಳು , ಕಬ್ಬಳ, ಉಕ್ಕಡಗಾತ್ರಿ, ಹಳೆಬಾತಿ, ಪಾಂಡೋಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿಕೋಡು, ವಡೆಯರಹತ್ತೂರು, ಓಬನ್ನನಹಳ್ಳಿ(ನರಗನಹಳ್ಳಿ), ದೊಡ್ಡಬ್ಬಿಹೆರೆ, ಅಣಜಿ, ಗುಡಾಳು ಇಲ್ಲಿ ಖಾಲಿ ಇರುತ್ತವೆ.

ಆಸಕ್ತ ಆಭ್ಯರ್ಥಿಗಳು ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ವೆಬ್‍ಸೈಟ್ davanagere.nic.in ಮೂಲಕ ಅರ್ಜಿ ಸಲ್ಲಿಸಿ ನಂತರ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ವಿಭಾಗದ ಕೊಠಡಿ ಸಂ.25 ಗೆ ಜುಲೈ 20 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 08192-226655 ಗೆ ಕರೆ ಮಾಡುವುದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪುಸ್ತಕ ಬಹುಮಾನ ; ಜಾನಪದ ಕೃತಿಗಳ ಆಹ್ವಾನ

Published

on

ಸುದ್ದಿದಿನಡೆಸ್ಕ್ : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಹಾಗೂ 2023ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಪ್ರಥಮ ಆವೃತ್ತಿಯಲ್ಲ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುತ್ತಿದ್ದು, ಕೃತಿಗಳನ್ನು ಆಹ್ವಾನಿಸಿದೆ.

ಆಸಕ್ತ ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜುಲೈ 20 ರೊಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯನ್ನು ಖುದ್ದಾಗಿ ಅಥವಾ ಅಥವಾ ದೂ.ಸಂ.: 080-22215509 ನ್ನು ಸಂಪರ್ಕಿಸುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending