ನಿತ್ಯ ಭವಿಷ್ಯ
ಶನಿವಾರದ ಭವಿಷ್ಯ ವಾಣಿ
ಶ್ರೀ ಆಂಜನೇಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:9945410150
ಮೇಷ ರಾಶಿ
ಆಕಸ್ಮಿಕವಾಗಿ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಅಧಿಕ ಕಾಲ ಕಳೆಯುವುದು ಬೇಡ. ನಿಮ್ಮಲ್ಲಿ ಮೂಡುವ ಆಲೋಚನೆಗಳನ್ನು ಬದಲಾವಣೆಗೆ ಆಗಲಿದೆ. ಹುದ್ದೆಗಳಲ್ಲಿ ವೈಮನಸ್ಸು ಸೃಷ್ಟಿಯಾಗಲಿದೆ. ಜಂಟಿ ವ್ಯವಹಾರಗಳು ಅನುಮಾನಸ್ಪದವಾಗಿ ಕಾಣಬಹುದು. ಹಿರಿಯರ ವಿಚಾರಗಳನ್ನು ಕಾರ್ಯಗತಕ್ಕೆ ತನ್ನಿ. ತಪ್ಪಾಗದಂತೆ ಕೆಲಸ ನಿರ್ವಹಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಬೇರೆಯವರ ಯೋಜನೆಯಲ್ಲಿ ನೀವು ಮಧ್ಯಂತರವಾಗಿ ಪಾಲ್ಗೊಳ್ಳುವುದು ಬೇಡ. ಕೆಲವರು ಸುಖಾಸುಮ್ಮನೆ ನಿಮ್ಮನ್ನು ಪ್ರೇರೇಪಿಸಿ ಕದನ ಕಲಹಕ್ಕೆ ಬಿಡಬಹುದು ಎಚ್ಚರವಿರಲಿ. ಮಾತುಕೊಟ್ಟು ನಡೆಸದೆ ಕೂರಬೇಡಿ ಇದು ನಿಮಗೆ ಅವಮಾನ ವಾಗಬಹುದು. ಮಾನಸಿಕವಾಗಿ ಸದೃಢರಾಗಿ. ಕುಟುಂಬದೊಡನೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಬೇಕಿದೆ. ನಿಮ್ಮಲ್ಲಿ ಮೂಡವ ಭಯವನ್ನು ತೆಗೆದುಹಾಕಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ವೈಯಕ್ತಿಕ ಸಮಸ್ಯೆಗಳ ಸರಮಾಲೆಗಳನ್ನು ಅನುಭವಿಸುವಿರಿ. ಸುಖಾಸುಮ್ಮನೆ ಮಾನಸಿಕ ಖಿನ್ನತೆ ತರಿಸಿಕೊಳ್ಳುವುದು ಬೇಡ, ಧೃಡ ನಿರ್ಣಯಗಳನ್ನು ತೆಗೆದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ. ಸದ್ಯದ ಪರಿಸ್ಥಿತಿಯಲ್ಲಿ ನವೀನ ಯೋಜನೆಗಳು ತೆಗೆದುಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರಗಳನ್ನು ಆದಷ್ಟು ಜಾಗ್ರತೆಯಿಂದ ಮಾಡಿ. ಸಂಗಾತಿಯ ನೆರವು ಅವಶ್ಯಕವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ ಮುನ್ನಡೆಯಿರಿ. ಕುಟುಂಬದ ಜಂಜಾಟಗಳಿಂದ ಒತ್ತಡಗಳು ಹೆಚ್ಚಾಗಬಹುದು. ಈ ದಿನ ಕ್ರಿಯಾಶೀಲತೆ ಚಟುವಟಿಕೆಗಳಲ್ಲಿ ತೊಡಗಿಕೊಂಡು ಚೈತನ್ಯ ಬೆಳೆಸಿಕೊಳ್ಳಿ. ಮಕ್ಕಳಿಂದ ಕೆಲವು ಸಮಸ್ಯೆಗಳು ಪರಿಹಾರವಾಗಲಿದೆ. ಆರ್ಥಿಕವಾಗಿ ಮುಂದುವರಿಯುವ ಸಾಧ್ಯತೆ ಕಾಣಬಹುದು. ಶೈಕ್ಷಣಿಕ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಡೆಯುವ ದಾರಿಗಳಲ್ಲಿ ಎಡವುದು ಸಹಜ ಗುರಿ ತಲುಪುವ ತನಕ ವಿಶ್ರಮಿಸ ಬೇಡಿ. ಹೂಡಿಕೆಗಳಲ್ಲಿ ನಿಪುಣರ ಸಹಾಯ ಪಡೆಯಿರಿ. ಗೆಲುವಿನ ಲೆಕ್ಕಾಚಾರ ನಿಖರವಾಗಿದೆ, ಚಿಂತೆ ಮಾಡುವುದು ಬೇಡ. ಮಾತುಗಳು ಆದಷ್ಟು ಸೂಕ್ಷ್ಮ ವಾಗಿರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲಸವನ್ನು ಪಡೆಯುವ ಮುನ್ನ ಅದು ನಿಮ್ಮಿಂದ ಸಾಧ್ಯವೇ ಎಂಬುದನ್ನು ಅರಿತುಕೊಳ್ಳಿ. ಉತ್ತಮ ವಾದಗಳು ಉತ್ಕೃಷ್ಟತೆಯ ಪ್ರತಿಬಿಂಬ ವಾಗಬಹುದು. ವಿದೇಶ ಪ್ರವಾಸದ ಚಿಂತನೆ ಸಾಕಾರಗೊಳ್ಳಲಿದೆ. ಕುಟುಂಬದಿಂದ ಆರ್ಥಿಕ ನೆರವು ಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮ ಕನಸಿನ ಯೋಜನೆಗೆ ಹಿರಿಯರಿಂದ ವಿರೋಧ ವ್ಯಕ್ತವಾಗುವ ಸಂಭವ ಕಂಡುಬರುತ್ತದೆ. ಮಕ್ಕಳ ಬುದ್ಧಿಮಟ್ಟತೆ ಬೆಳವಣಿಗೆಯಾಗಲು ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇರಾದೆ ವ್ಯಕ್ತಪಡಿಸುತ್ತೀರಿ. ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಿಂದ ಹಲವಾರು ಅವಕಾಶಗಳನ್ನು ಪಡೆದುಕೊಳ್ಳುವಿರಿ. ಉತ್ತಮ ಸಂವಹನ ಪಟುತ್ವ ನಿಮ್ಮಲಿ ಕಾಣಬಹುದು. ಸಮಾರಂಭಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೆಯೇ ಅದರ ಉಸ್ತುವಾರಿ ಸಹ ನಿಮ್ಮ ವ್ಯವಸ್ಥೆಯಿಂದಲೇ ನಡೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕುಟುಂಬದಿಂದ ಧಾರ್ಮಿಕ ಆಚರಣೆಗೆ ಅವಕಾಶಗಳು ಸಿಗಲಿದೆ. ಯೋಜನೆಯ ವಿಸ್ತರಣೆಗಾಗಿ ಮಿತ್ರರ ನೆರವು ಪಡೆಯಲಿದ್ದೀರಿ. ಅಪರಿಚಿತರೊಡನೆ ಹೆಚ್ಚು ಕಾಲ ಕಳೆಯುವುದು ಒಳ್ಳೆಯದಲ್ಲ. ನಿಮ್ಮ ಹಳೆಯ ಸಾಲಗಳನ್ನು ತೀರಿಸುವ ಮನಸ್ಸು ಮೂಡಲಿದೆ. ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಯೋಚನೆ ಮೂಡುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ದಾಂಪತ್ಯದಲ್ಲಿ ಅನುರಾಗ ಬಂಧನ ಕಾಣಬಹುದಾದ ದಿನ. ಎಷ್ಟೇ ಅನುಭವವಿದ್ದರೂ ಕೆಲವೊಮ್ಮೆ ತಪ್ಪುಗಳು ನಡೆಯಬಹುದು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಗುಣ ದೊಡ್ಡದು ಎಂಬುದನ್ನು ಮರೆಯದಿರಿ. ಕುಟುಂಬಸ್ಥರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವಿನಾಕಾರಣ ನೀವು ವಾದ-ವಿವಾದಗಳಲ್ಲಿ ತೊಡಗಬಹುದಾದ ಸಾಧ್ಯತೆಯಿದೆ, ಆದಷ್ಟು ನಿಮ್ಮ ವ್ಯಕ್ತಿತ್ವ ಉತ್ತಮಮಟ್ಟದಾಗಿ ರೂಪಿಸಿಕೊಳ್ಳಿ. ನಿರೀಕ್ಷಿತ ಆರ್ಥಿಕ ಮೂಲಗಳು ಇಂದು ವಿಳಂಬವಾಗುವ ಸಾಧ್ಯತೆ ಕಾಣಬಹುದು. ಉದ್ಯೋಗದ ಬದಲಾವಣೆಯ ಚಿಂತನೆ ಸದ್ಯಕ್ಕೆ ಮಾಡುವುದು ಬೇಡ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಹೆಚ್ಚಿನ ಹಣಕಾಸು ವ್ಯಯ ವಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಮಾತಿನಿಂದ ಸೌಧ ನಿರ್ಮಿಸಲು ಸಾಧ್ಯವಿಲ್ಲ ಕೃತಿ ಬಹಳ ಮುಖ್ಯವಾಗಿದ್ದು ಅದನ್ನು ಯಾವಾಗಲೂ ನೆನಪಿಡಿ. ನಿಮ್ಮ ಬೆಳವಣಿಗೆ ಏಕಾಂಗಿಯಾಗಿ ಇರುವುದಿಲ್ಲ ಇನ್ನೊಬ್ಬರ ಬೆಳವಣಿಗೆಯಲ್ಲಿ ನೀವು ಸಹ ಬೆಳೆಯಿರಿ. ನಿಮ್ಮ ಆತ್ಮೀಯರ ಕಷ್ಟಗಳನ್ನು ಕೇಳುವ ವ್ಯವಧಾನ ರೂಢಿಸಿಕೊಳ್ಳಿ ಸಾಧ್ಯವಾದರೆ ಸಹಾಯ ಮಾಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.9945410150

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ5 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


