ದಿನದ ಸುದ್ದಿ
ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? : ಸಿದ್ದರಾಮಯ್ಯ ಕಿಡಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/01/Siddaramaiah-suddidina-009.jpg&description=ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? : ಸಿದ್ದರಾಮಯ್ಯ ಕಿಡಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/01/Siddaramaiah-suddidina-009.jpg&description=ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? : ಸಿದ್ದರಾಮಯ್ಯ ಕಿಡಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಪ್ರಶ್ನಿಸಿದರು.
ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ.
ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದರು.
“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ.
ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ ಸಾಮಾನ್ಯ, ಐಷಾರಾಮಿ ಎರಡೂ ಇರುತ್ತವೆ.
ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.
ಕಾರ್ಮಿಕ ಸಚಿವರು ಮೊದಲು ಆ ಲೆಕ್ಕ ಕೊಡಲಿ ಎಂದು ಒತ್ತಾಯಿಸಿದರು.
ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ.
ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ ಪಾಠ ಹೇಳ್ತಾರೆ. ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ನುಡಿದರು.
ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಬಿಜೆಪಿಗರಿಗೆ ಟಾಂಗ್ ನೀಡಿದರು.
ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ ಅದು ಬದುಕಿನ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ, ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಲೇವಡಿ ಮಾಡಿದರು.
ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ, ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?
ನಮ್ಮ ಆರೋಪದಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುತ್ತದೆ ಎಂದು ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿಕೊಟ್ಟಿರಿ? ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ? ಎಂದು ಕೆಂಡಾಮಂಡಲವಾದರು.
ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿಗಳೇ ಗದರಿಸಿ ಕಳಿಸಿರಬಹುದು. ಅವರ ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
ಸುದ್ದಿದಿನ,ದಾವಣಗೆರೆ:ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇಗುಲಗಳಲ್ಲಿ ನಿಧಿ ಶೋಧಿಸಲು ಯತ್ನಿಸಿದ ಆರು ಜನರ ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ ಆಚಾರಿ (48), ಮಂಜುನಾಥ (51), ಪ್ರಕಾಶ (42), ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದ ರಾಮನಾಥ ಪೈ (52), ಸಾಗರ ತಾಲ್ಲೂಕಿನ ಬ್ಯಾಕೋಡು ಗ್ರಾಮದ ಶ್ರೀಕಾಂತ ಭಟ್ (51) ಬಂಧಿತರು.
ಆರೋಪಿಗಳು ಏ. 22ರಂದು ರಾತ್ರಿ ಕಾಡಜ್ಜಿ ಗ್ರಾಮದ ಚೌಡಮ್ಮ ದೇಗುಲದಲ್ಲಿ ನಿಧಿ ಶೋಧ ಮಾಡಿದ್ದರು. ಏ.29ರಂದು ರಾತ್ರಿ ಪೇಟೆ ದುರುಗಮ್ಮ ದೇಗುಲದ ಬಳಿ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದರು. ದುಷ್ಟ ಶಕ್ತಿ ಪೂಜೆ, ಹೋಮ– ಹವನ ಮಾಡಿ ಗರ್ಭಗುಡಿಯಲ್ಲಿ ನಿಧಿ ತೆಗೆಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


