Connect with us

ದಿನದ ಸುದ್ದಿ

ಕೊರೋನಾದಿಂದ ಮೃತಪಟ್ಟವರ ಉಚಿತ ಶವಸಂಸ್ಕಾರ ಮಾಡೋ ‘ ಮರ್ಸಿ‌ಏಂಜಲ್ಸ್’..!

Published

on

ಸುದ್ದಿದಿನ,ಬೆಂಗಳೂರು: ಹಳೇ ಗೆಳೆಯರ ತಂಡವೊಂದು ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರವನ್ನ ಉಚಿತವಾಗಿ ನೆರವೇರಿಸಲು ಮುಂದಾಗಿದ್ದಾರೆ. ಐಟಿಬಿಟಿ, ಶಿಕ್ಷಣ, ಕೈಗಾರಿಕೆ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಗೆಳೆಯರ ಬಳಗವು ಮರ್ಸಿ ಏಂಜಲ್ಸ್ ಎಂಬ ಹೆಸರಿನ ತಂಡವನ್ನ ಕಟ್ಟಿಕೊಂಡಿ 300ಕ್ಕೂ ಹೆಚ್ಚು ಸೋಂಕಿತರ ಶವಸಂಸ್ಕಾರ ನೆರವೇರಿಸಿದ್ದಾರೆ.

ಕೊವಿಡ್ ಭಯದ ಹಿನ್ನೆಲೆಯಲ್ಲಿ ಮೃತ ಸೋಂಕಿತರ ಶವಸಂಸ್ಕಾರಕ್ಕೂ ಸಂಬಂಧಿಕರು ಬರಲು ಹಿಂದೆಮುಂದೆ ಯೋಚಿಸುವ ಸ್ಥಿತಿ ಎದುರಾಗಿದೆ. ಇಂಥ ಸಂದರ್ಭದಲ್ಲಿ ಈ ಸ್ನೇಹಿತರ ತಂಡವು ಆಸ್ಪತ್ರೆ, ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಮಾಹಿತಿ ಪಡೆದು ಅಂತ್ಯ ಸಂಸ್ಕಾರ ನೆರವೇರಿಸುತ್ತಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಸೋಂಕಿತರ  ಅಂತ್ಯ ಸಂಸ್ಕಾರ ನೆರವೇರಿಸುತ್ತಿರುವ ಗೆಳೆಯರು ಕೋವಿಡ್ ಪ್ರೋಟೋಕಾಲ್ ಪ್ರಕಾರ ಎಲ್ಲಾ ಮುನ್ಬಚ್ಚರಿಕಾ ಕ್ರಮ ಹಾಗೂ ತಜ್ಙರ ಮಾರ್ಗದರ್ಶನದಲ್ಲೇ ಅಂತ್ಯಕ್ರಿಯೆ ನಡೆಸುತ್ತಿದ್ದಾರೆ. ಇದಲ್ಲದೆ, ಶವ ಸಂಸ್ಕಾರದ ವೆಚ್ಚವನ್ನೂ ಇವರೇ ಭರಿಸುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ

Published

on

ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ ನೊಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

ನೋಂದಣಿ ಕೇಂದ್ರಗಳು

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ದಾವಣಗೆರೆ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹೊನ್ನಾಳ್ಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಜಗಳೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹರಿಹರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಚನ್ನಗಿರಿ ಇಲ್ಲಿ ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೊಂದಣಿ ಮಾಡಿಕೊಳ್ಳಲು ತಿಳಿಸಿದೆ. ನೊಂದಣಿ ಆರಂಭವಾಗಿದ್ದು 2025 ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಖರೀದಿಸಲಾಗುವುದು.

ರೈತರು ಕೃಷಿ ಇಲಾಖೆ ನೀಡಿರುವ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಫೂಟ್ ನೊಂದಣಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಸಾಧನದ ಮುಖಾಂತರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಫೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‍ಪಿಸಿಎಲ್ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕು.

ರೈತರು ತಾವು ನೀಡುವ ಎಲ್ಲಾ ದಾಖಲಾತಿಗಳಲ್ಲಿಯೂ ಒಂದೇ ಹೆಸರು ನಮೂದಾಗಿರತಕ್ಕದ್ದು, ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ನೇಮಿಸಲ್ಪಟ್ಟ ಗ್ರೇಡರ್ಸ್ ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ಧೃಢಪಟ್ಟರೆ ಮಾತ್ರ ಖರೀದಿಸಲಾಗುವುದು. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ಹಿಂದಕ್ಕೆ ತೆಗೆದುಕೊಂಡು ಹೋಗಬೇಕು.

ಪ್ರತಿ ರೈತರಿಂದ ಪ್ರತಿ ಎಕರೆಗೆ ರಾಗಿ 10.00 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ರೈತರಿಂದ ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಶೀಲ್ದಾರರು, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ), ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ -08192-296770 ಗೆ ಕರೆಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು, ಲೇಖಕರು, ವಾಗ್ಮಿಗಳು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

ವೈಚಾರಿಕ ಹಾಗೂ ಸಾಂಸ್ಕೃತಿಕ ಚಿಂತಕ, ಜನಪರ ಹೋರಾಟಗಾರ ಪ್ರೊ.ಎ.ಬಿ.ರಾಮಚಂದ್ರಪ್ಪನವರು 3 ದಶಕಗಳಿಗೂ ಹೆಚ್ಚಿನ ಕಾಲ ಪದವಿ ಕಾಲೇಜು ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. “ಸ್ವಾತಂತ್ರ್ಯೋತ್ತರ ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್ ಚಿಂತನೆಗಳು” ವಿಷಯದಲ್ಲಿ ಸಂಶೋಧನಾ ಮಹಾಪ್ರಬಂಧ ಮಂಡನೆ ಮಾಡಿ ಪಿಎಚ್‌ಡಿ ಪದವಿ ಹೊಂದಿದ್ದಾರೆ. ಈವರೆಗೆ ಅವರ 19 ಕೃತಿಗಳು ಪ್ರಕಟಗೊಂಡಿವೆ. ಪ್ರಸ್ತುತ ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದಾರೆ.

ಶನಿವಾರ ಕುವೆಂಪು ಕನ್ನಡ ಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಮ್ಮೇಳನದ ಕುರಿತಾಗಿ ಕೂಲಂಕಷವಾಗಿ ಚರ್ಚೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಭಾಗವಹಿಸಿದ ಬಹುತೇಕ ಕಾರ್ಯಕಾರಿ ಸಮಿತಿ ಸದಸ್ಯರು ಪ್ರೊ.ಎ.ಬಿ.ರಾಮಚಂದ್ರಪ್ಪನವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲು ಒಲವು ತೋರಿದ್ದರಿಂದ ಸರ್ವಾಧ್ಯಕ್ಷತೆಯ ಆಯ್ಕೆ ಸುಗಮವಾಗಿ ನಡೆಯಿತು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

ಜಗಳೂರಿನ ಶಾಸಕ ಚಿಮ್ಮನಕಟ್ಟಿ ಬಿ.ದೇವೇಂದ್ರಪ್ಪ ಅವರು ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ‌. ಹಾಗಾಗಿ ಜನವರಿ 11 ಮತ್ತು 12 ರಂದು ಅರ್ಥಪೂರ್ಣವಾಗಿ ಸಮ್ಮೇಳನ ನಡೆಸುವುದಾಗಿ ಬಿ.ವಾಮದೇವಪ್ಪ ತಿಳಿಸಿದರು.

ಇದೇ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಚುನಾಯಿತರಾದ ಹಾಗೂ ಜಿಲ್ಲಾ ಕಸಾಪ ಪದ ನಿಮಿತ್ತ ಸದಸ್ಯ ವೀರೇಶ್ ಎಸ್ ಒಡೇನಪುರ ಆವರನ್ನು ಜಿಲ್ಲಾ ಕಸಾಪ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿಗಳಾದ ಸಿ.ಜಿ.ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ದಾವಣಗೆರೆ ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಜಗಳೂರು ತಾಲೂಕು ಅಧ್ಯಕ್ಷೆ ಕೆ.ಸುಜಾತಮ್ಮ, ಹರಿಹರ ತಾಲೂಕು ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ, ಚನ್ನಗಿರಿ ತಾಲೂಕು ಅಧ್ಯಕ್ಷ ಎಲ್‌.ಜಿ.ಮಧುಕುಮಾರ್, ಹೊನ್ನಾಳಿ ತಾಲೂಕು ಅಧ್ಯಕ್ಷ ಜಿ.ಮುರಿಗೆಪ್ಪಗೌಡ, ನ್ಯಾಮತಿ ತಾಲೂಕು ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್ ಎಸ್ ಒಡೇನಪುರ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಸೋಮೇಶ್ವರ ಕೆ.ಎಂ.ಸುರೇಶ್, ಪ್ರಸಾದ್ ಬಂಗೇರ, ಎಸ್.ಎಂ.ಮಲ್ಲಮ್ಮ, ಬಿ.ಎಂ.ಭೈರವೇಶ್ವರ, ಸಿ.ಕೆ.ರುದ್ರಾಕ್ಷಿ ಬಾಯಿ, ಹೆಚ್.ಕೆ.ಸತ್ಯಭಾಮ ಮಂಜುನಾಥ್, ಎ.ರಿಯಾಜ್ ಅಹಮದ್, ಎಂ.ಎ.ಸುದರ್ಶನ್, ಕೆ.ಪಿ‌.ಮರಿಯಾಚಾರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending