Connect with us

ದಿನದ ಸುದ್ದಿ

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾತ್ರ ಇನ್ನು ಪಿಂಚಣಿ ಸೌಲಭ್ಯ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿನ ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರರು ಆಗಸ್ಟ್ ಮಾಹೆಯಿಂದ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾತ್ರ ಪಿಂಚಣಿಯನ್ನು ಪಡೆಯಬಹುದಾಗಿದೆ.

ಸರ್ಕಾರದ ಆದೇಶದನ್ವಯ 5 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಪಿಂಚಣಿ ಸೌಲಭ್ಯ ಲಭ್ಯವಿದ್ದು, ಎಸ್‍ಬಿಐ ಬ್ಯಾಂಕ್‍ನಲ್ಲಿ ಪಡೆಯಬಹುದು. ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿದವರು ಕೆನರಾ ಬ್ಯಾಂಕ್‍ನಿಂದ ಪಡೆಯಬಹುದು.

ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡದಲ್ಲಿ ಖಾತೆ ಹೊಂದಿದವರು ಬ್ಯಾಂಕ್ ಆಫ್ ಬರೋಡದಲ್ಲಿ ಪಡೆಯಬಹುದಾಗಿದೆ. ಜೊತೆಗೆ ಕಾರ್ಪೊರೇಷನ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಆಂಧ್ರ ಬ್ಯಾಂಕ್‍ಗಳಲ್ಲಿ ಪಿಂಚಣಿ ಪಡೆಯುತ್ತಿರುವವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಾತ್ರ ಪಿಂಚಣಿ ಸೌಲಭ್ಯ ಪಡೆಯಬಹುದು.

ಮೇಲ್ಕಂಡ ಬ್ಯಾಂಕ್‍ಗಳಲ್ಲಿ ಹೊರತುಪಡಿಸಿ ಉಳಿದ ಬ್ಯಾಂಕ್‍ಗಳಲ್ಲಿ ಪಿಂಚಣಿಯನ್ನು ಪಡೆಯುತ್ತಿರುವ ಪಿಂಚಣಿದಾರರು ಕೂಡಲೇ ತಮ್ಮ ಪಿಂಚಣಿಯನ್ನು ಮೇಲ್ಕಂಡ ಬ್ಯಾಂಕ್‍ಗಳಲ್ಲಿ ವರ್ಗಾಯಿಸತಕ್ಕದ್ದು. ಆಗಸ್ಟ್-20 ರಿಂದ ಮೇಲ್ಕಂಡ ಬ್ಯಾಂಕ್‍ಗಳಲ್ಲಿ ಮಾತ್ರ ಪಿಂಚಣಿಯನ್ನು ಪಾವತಿಸಲಾಗುವುದು ಎಂದು ಜಿಲ್ಲಾ ಖಜಾನೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending