ದಿನದ ಸುದ್ದಿ
ಸಂಚಾರಿ ಸಿಗ್ನಲ್ ವೃತ್ತಗಳಲ್ಲಿ ಬ್ಯಾನರ್ಗಳು ಮತ್ತು ಬಂಟಿಂಗ್ಸ್ ಗಳ ನಿಷೇಧ
ಸುದ್ದಿದಿನ,ದಾವಣಗೆರೆ: ನಗರದ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ದಾವಣಗೆರೆ ನಗರದ ಎಲ್ಲಾ ಪೊಲೀಸ್ ಠಾಣಾ ಸರಹದ್ದಿನಲ್ಲಿನ ಎಲ್ಲಾ ಧಾರ್ಮಿಕ ಮುಖಂಡರನ್ನು ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡುವ ಮಾಲೀಕರನ್ನು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರನ್ನು ಬರಮಾಡಿಕೊಂಡು ಈ ಸಭೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹನುಮಂತರಾಯ ಐಪಿಎಸ್ ಇವರ ಅಧ್ಯಕ್ಷತೆಯಲ್ಲಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ ರವರ ಉಪಸ್ಥಿತಿಯಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ವಿವಿಧ ಪೊಲೀಸ್ ಅಧಿಕಾರಿಗಳು ಈ ಸಭೆಗೆ ಹಾಜರಾಗಿದ್ದು ಈ ಸಭೆಯಲ್ಲಿ ಚರ್ಚಿಸಲಾಗಿ ಮುಂದಿನ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರ ಈ ಕೆಳಕಂಡಂತೆ ಇರುತ್ತದೆ.
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ ಸಿಟಿ ಯೋಜನೆಯ ಅಡಿಯಲ್ಲಿ ನಗರದ ಸುಗಮ ಸಂಚಾರಕ್ಕೆ ಅನುಗುಣವಾಗಿ ಸಿ.ಟಿ ಟಿವಿ, ಸ್ಮಾರ್ಟ ಪಾರ್ಕಿಂಗ್, ಸಂಚಾರ ಸಿಗ್ನಲ್ಗಳನ್ನು ಅಳವಡಿಸಲಾಗುತ್ತಿದ್ದು ಈ ಕಾಮಗಾರಿಗಳು ಸಂಪೂರ್ಣ ಪೂರ್ಣಗೊಳ್ಳುವ ಹಂತದಲ್ಲಿದ್ದು ನಗರದಲ್ಲಿ ವಿವಿಧ ಹಬ್ಬ-ಹರಿದಿನಗಳು, ಜನ್ಮ ದಿನಾಚರಣೆ, ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರವರುಗಳು ನಗರದ ಎಲ್ಲಾ ಟ್ರಾಫಿಕ್ ಸಿಗ್ನಲ್ ವೃತ್ತಗಳಲ್ಲಿ ದೊಡ್ಡ ಪ್ರಮಾಣದ ಬ್ಯಾನರ್ ಕಟೌಟ್ಗಳನ್ನು ಅಳವಡಿಸಲಾಗುತ್ತಿದೆ.
ಈ ಪ್ರಕ್ರಿಯೆಯು ನಗರದ ಸುಗಮ ಸಂಚಾರಕ್ಕೆ ಹಾಗೂ ಟ್ರಾಫಿಕ್ ಸಿಗ್ನಲ್ ದೀಪಗಳು ರಸ್ತೆ ಬಳಕೆದಾರರಿಗೆ ಹಾಗೂ ವಾಹನ ಸವಾರರಿಗೆ ಗೋಚರಿಸದೇ ಇರುವ ಕಾರಣ ಲಘು ಅಪಘಾತಗಳು ಹಾಗೂ ಮಾರಣಾಂತಿಕ ಅಪಘಾತಗಳು ಸಂಭವಿಸುತ್ತಿದ್ದು ಈ ಕುರಿತಂತೆ ಅನೇಕಬಾರಿ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರಿಗೆ ಮೌಖಿಕವಾಗಿ ಎಚ್ಚರಿಕೆಯನ್ನು ನೀಡಿದ್ದರೂ ಸಹ ಅದೇ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಅದೇ ರೀತಿ ಸಿ.ಟಿ ಟಿವಿ, ಅಳವಡಿಸಲಾದ ಸ್ಥಳಗಳಲ್ಲಿ ಕ್ಯಾಮೇರಾಗಳ ದೃಶ್ಯಗಳು ಕಾಣದಂತೆ ಸಿ.ಟಿ ಟಿವಿ ಕಂಬಗಳಿಗೆ ಹಾಗೂ ಕ್ಯಾಮೇರಾಗಳ ದೃಶ್ಯಗಳು ಕಾಣದಂತೆ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುತ್ತಿರುತ್ತಾರೆ.
ಮುಂದಿನ ದಿನಗಳಲ್ಲಿ ಈ ಪ್ರವೃತ್ತಿಯನ್ನು ಮುಂದುವರೆಸಿದರೆ, ಅಥವಾ ಯಾವ ಟ್ರಾಫಿಕ್ ಸಿಗ್ನಲ್ ವೃತ್ತಗಳಲ್ಲಿ ಅಥವಾ ರಸ್ತೆಗಳಲ್ಲಿ ಅಳವಡಿಸಿಲಾದ ಸೂಚನಾ ಫಲಕಗಳಿಗೆ ಬ್ಯಾನರ್ ಮತ್ತು ಬಂಟಿಂಗ್ಸ್ ಅಥವಾ ಪೂಸ್ಟರ್ಗಳನ್ನು ಅಳವಡಿಸಿ ರಸ್ತೆ ಬಳಕೆದಾರರಿಗೆ ಹಾಗೂ ವಾಹನ ಸವಾರರಿಗೆ ಗೋಚರಿಸದೇ ಲಘು ಅಥವಾ ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದಲ್ಲಿ ಅಪಘಾತ ಪ್ರಕರಣಗಳಲ್ಲಿ ಆರೋಪಿತರಾಗಿ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರನ್ನು, ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡುವ ಮಾಲೀಕರನ್ನು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡಿಸಿರುತ್ತಾರೋ ಅವರನ್ನು ಪ್ರಕರಣದಲ್ಲಿ ಸೇರಿಸಲಾಗುವುದು.
ಅದೇ ರೀತಿ ಸರ್ಕಾರಿ ಸೌಮ್ಯದ ಆಸ್ತಿಯನ್ನು ವಿರೋಪಗೊಳಿಸಿದ ಪ್ರಯುಕ್ತ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು.
ಈ ಕುರಿತಂತೆ ದಾವಣಗೆರೆ ಮಹಾನಗರ ಪಾಲಿಕೆಯವರುಗಳು ನಗರದಲ್ಲಿ ವಿವಿಧ ಹಬ್ಬ-ಹರಿದಿನಗಳು, ಜನ್ಮ ದಿನಾಚರಣೆ, ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರವರುಗಳವರಿಗೆ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಅಳವಡಿಸಲು ಅನುಮತಿಯನ್ನು ನೀಡುವ ಸಂದರ್ಭದಲ್ಲಿ ಈ ಮೇಲ್ಕಂಡ ವಿಷಯದ ನೋಟಿಸ್ ಮೇಲೆ ಸಹಿಯನ್ನು ಪಡೆದು ನಂತರ ಅನುಮತಿಯನ್ನು ನೀಡಲಾಗುವುದು.
ಇದನ್ನು ಉಲ್ಲಂಘಿಸಿದವರ ಮೇಲೆ Karnataka Open Places (Prevention of Disfigurement Act), 1981 and Karnataka Municipalities Act1964 ರಿತ್ಯ ಪ್ರಕರಣವನ್ನು ದಾಖಲಿಸಿ, ಕಾನೂನು ಕ್ರಮ ಜರುಗಿಸುತ್ತಾರೆ.
ಆದ್ದರಿಂದ ನಗರದಲ್ಲಿನ ಈ ಮೇಲ್ಕಂಡ ಯಾವುದೇ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರವರುಗಳು, ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡುವ ಮಾಲೀಕರು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರು ಈ ಕುರಿತಂತೆ ಜಾಗೃತೆಯನ್ನು ವಹಿಸಲು ಈ ಮೂಲಕ ತಿಳಿಯಪಡಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ13 hours agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ9 hours agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

