ಲೈಫ್ ಸ್ಟೈಲ್
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ | ಏನಿದು MDMA ಡ್ರಗ್ ಮಾತ್ರೆ..? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ : ಮಿಸ್ ಮಾಡ್ದೆ ಓದಿ
- ವೈಶಾಲಿ ದುರ್ಗಪ್ಪ
ಡ್ರಗ್ಸ್ ಮಾಫಿಯಾ ಜಗತ್ತಿಗೆ ಹೊಸದೇನಲ್ಲ. ಇದುವರೆಗೂ ಈ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ತಡೆದುಹಾಕಲು ಪೊಲೀಸ್ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ಎಂಬ ಯಕ್ಷ ಪ್ರಶ್ನೆ ಕಾಡುತ್ತದೆ. ಡ್ರಗ್ಸ್ ಬಗ್ಗೆ ಆಗೊಮ್ಮೆ- ಈಗೊಮ್ಮೆ ಪತ್ರಿಕೆಯ ಯಾವುದೋ ಮೂಲೆಯಲ್ಲಿ ಸಣ್ಣ ಸುದ್ದಿಯಾಗಿ, ಸಿನೆಮಾಗಳ ಒಂದಷ್ಟು ದೃಶ್ಯಗಳಲ್ಲಿ ನೋಡಿದ ನೆನಪು ಬರುತ್ತದೆ.
ಪ್ರಸ್ತುತ ನ್ಯೂಸ್ ಚಾನೆಲ್ ಗಳ ಟಿ ಆರ್ ಪಿ ಕೇಂದ್ರಿತ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಸುದ್ದಿ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ವಿಚಾರಣೆ ಒಳಗಾದ ಕೆಲವು ನಟನಟಿಯರಿಂದ MDMA ಎಂಬ ಡ್ರಗ್ ಮಾತ್ರೆಯನ್ನು ಸೇವಿಸಿದ್ದರ ಬಗ್ಗೆ ಮಾಹಿತಿ ದೊರೆತಿದೆ.
ಹಾಗಾದರೆ ಏನಿದು MDMA .? ಇದನ್ನು ಸೇವಿಸಿದರೆ ದೇಹ ಮತ್ತು ಮನಸಿನ ಮೇಲಾಗುವ ದುಷ್ಪರಿಣಾಮಗಳೇನು..?ಎಂಬುದರ ಬಗ್ಗೆ ಸರ್ಕಾರದ ‘National Institute on Drug Abuse‘ ವೆಬ್ಸೈಟ್ ನಲ್ಲಿ ಪ್ರಕಟವಾಗಿರುವ ಬರಹವನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ‘ವೈಶಾಲಿ ದುರ್ಗಪ್ಪ’ ಅವರು ತಂದಿದ್ದಾರೆ. ಈ ಬರಹ MDMA ಬಗ್ಗೆ ಹಲವು ಮಾಹಿತಿಯನ್ನು ನೀಡುತ್ತದೆ. ಈ ಬರಹ ಓದಿ ಪ್ರತಿಕ್ರಿಯಿಸಿ.
ಎಂಡಿಎಂಎ ಎಂದರೇನು..?
3,4-ಮಿಥೈಲಿನ್ ಡೈ ಆಕ್ಸಿ – ಹೆಪ್ಟಾಮೈನ್ (3,4-methylenedioxy-methamphetamine(MDMA)
ಇದು ವ್ಯಕ್ತಿ ಒಬ್ಬನ ಬಾಹ್ಯ ಪ್ರಪಂಚದ ಬಗ್ಗೆ ತನಗಿರುವ ಗ್ರಹಿಕೆ ಹಾಗೂ ಮನಸ್ಥಿತಿಯನ್ನು ಬದಲಾಯಿಸುವಂತಹ ಒಂದು ಸಂಶ್ಲೇಷಿತ (ಸಿಂಥೆಟಿಕ್) ಡ್ರಗ್ ಆಗಿದೆ. ಇದು ರಾಸಾಯನಿಕವಾಗಿ ಉತ್ತೇಜಕ ಹಾಗೂ ಭ್ರಾಮಕಗಳಿಗೆ ಹೋಲುತ್ತದೆ. ಈ ಡ್ರಗ್ ಅನ್ನು ಸೇವಿಸಿದ ವ್ಯಕ್ತಿಯಲ್ಲಿ ದೇಹಕ್ಕೆ ಇದ್ದಕ್ಕಿದ್ದಂತೆ ಶಕ್ತಿ ದೊರೆಯುವುದು, ಅತೃಪ್ತ ಮಾನಸಿಕ ಸಂತೋಷ ಹೊಂದುವುದು. ಭಾವನಾತ್ಮಕವಾಗಿ ಬೆಚ್ಚಗಿನ ಅನುಭವ ಹೊಂದಿ ತನಗರಿವಿಲ್ಲದ ಯಾವುದೋ ಲೋಕದಲ್ಲಿ ವಿಹರಿಸುವಂತಹ ಭಾವನೆಯಲ್ಲಿ ತೇಲುವರು.
ರಾಸಾಯನಿಕ Molecular ಪದವನ್ನು ಸಂಕ್ಷಿಪ್ತಗೊಳಿಸಿ. Molly ಎಂಬ ಹೆಸರಿನಿಂದ MDMA ಡ್ರಗ್ ಅನ್ನು ಯುವಜನರಲ್ಲಿ ಪ್ರಚಲಿತ ಗೊಳಿಸಿದ್ದಾರೆ. ಮೊದಲೆಲ್ಲಾ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗಳಲ್ಲಿ ದೊರೆಯುತ್ತಿದ್ದ ಡ್ರಗ್ ಇಂದು ಕಾಲೇಜು ಅಂಗಳದವರೆಗೂ ಕಾಲಿಟ್ಚಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.
ವ್ಯಸನಿಗಳು ಡ್ರಗ್ ಅನ್ನು ಹೆಚ್ಚಾಗಿ ಮಾತ್ರೆ ಅಥವಾ ಕ್ಯಾಪ್ಸುಲ್ ರೂಪದಲ್ಲಿ ಸೇವನೆ ಮಾಡುವರು. ಕೆಲವರು ಇದನ್ನು ದ್ರವ ರೂಪದಲ್ಲಿ ಸೇವಿಸಿದರೆ, ಹೆಚ್ಚಿನವರು ಡ್ರಗ್ ಪುಡಿಯನ್ನು ಉಸಿರುಗಟ್ಟಿ ಒಳಸೇದುವ ಮೂಲಕ ಸೇವಿಸುವರು. ಸ್ಫಟಿಕ ರೂಪದ ಪುಡಿಯನ್ನು ಹೆಚ್ಚಾಗಿ ಕ್ಯಾಪ್ಸುಲ್ ರೂಪದಲ್ಲಿ ಮಾರಾಟ ಮಾಡುವುದು ಪ್ರಚಲಿತದಲ್ಲಿದೆ. ಇಷ್ಟೇ ಅಲ್ಲದೆ Molly ಡ್ರಗ್ ಅನ್ನು ಆಲ್ಕೋಹಾಲ್ ಅಥವಾ ಗಾಂಜಾದೊಟ್ಟಿಗೆ ಸೇರಿಸಿ ತೆಗೆದುಕೊಳ್ಳುವುದು ಸಹ ಕೆಲವರಲ್ಲಿ ರೂಢಿಯಲ್ಲಿದೆ.
MDMA ಡ್ರಗ್ ನ ವ್ಯವಸಿಗಳಲ್ಲಿ ಮೆದುಳಿನ ಮೇಲೆ ಪರಿಣಾಮ ಬೀರಿ, ಬಾಹ್ಯ ನಡವಳಿಕೆಗಳಲ್ಲಿ ಬದಲಾವಣೆಯನ್ನು ತರುವಲ್ಲಿ ಮೂರು ರಾಸಾಯನಿಕಗಳು ಮುಖ್ಯ ಪಾತ್ರ ವಹಿಸುತ್ತದೆ. ಅವುಗಳೆಂದರೆ,
1.ಡೋಪಮೈನ್ (Dopamine)
ಈ ರಾಸಾಯನಿಕವು ದೇಹಕ್ಕೆ ಹೆಚ್ಚು ಶಕ್ತಿಯನ್ನು ಒದಗಿಸಿ, ವ್ಯಕ್ತಿಯ ನಡವಳಿಕೆಯನ್ನು ಇದ್ದಕ್ಕಿದ್ದಂತೆ ಬದಲಾಯಿಸುವುದು.
2.ಸೆರಟೋನಿನ್ (Serotonin)
ವ್ಯಕ್ತಿಯಲ್ಲಿ ಮನಸ್ಥಿತಿಯ ಬದಲಾಯಿಸುವುದು, ಹಸನಾಗಿಸುವುದು ಅಥವಾ ನಿದ್ರೆ ಬರಿಸುವುದು ಈ ರಾಸಾಯನಿಕದ ಕೆಲಸವಾಗಿದೆ. ಹಾಗೂ ಅವರಲ್ಲಿ ಲೈಂಗಿಕ ಆಸಕ್ತಿ ಹೆಚ್ಚಿಸುವಂತಹ ಹಾರ್ಮೋನುಗಳನ್ನು ಸ್ರವಿಸುವಲ್ಲಿ ಪಾತ್ರ ವಹಿಸುತ್ತದೆ. ಸೆರಟೋನಿನ್ ಹೆಚ್ಚು ಉತ್ಪಾದನೆ ಆಗುವುದರಿಂದ ಭಾವಾತಿರೇಕ ಉಂಟಾಗುವುದು, ಜೊತೆಯಲ್ಲಿರುವವರ ಮೇಲೆ ಎಂದೂ ಕಾಣದ ಪ್ರೀತಿ ಉಂಟಾಗುವುದು, ಎಲ್ಲೋ ಹೇಳಿದಂತಹ ಅನುಭವವೂ ಆಗುವುದುಂಟು.
3.ನೊರ್ಪೈನ್ಫ್ರಿನ್ (Norepinephrine)
ರಕ್ತದೊತ್ತಡ ಹಾಗೂ ಹೃದಯ ಬಡಿತ ಹೆಚ್ಚಾಗುವುದು, ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆ ಇರುವಂತಹವರಿಗೆ ಈ ರಾಸಾಯನಿಕದ ಪ್ರಮಾಣ ದೇಹದಲ್ಲಿ ಹೆಚ್ಚಾದಲ್ಲಿ ಮಾರಣಾಂತಿಕವೂ ಆಗಬಹುದು.
ಇದರೊಟ್ಟಿಗೆ, ವಾಕರಿಕೆ ಬರುವುದು, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು, ತಮಗರಿವಿಲ್ಲದೆ ಹಲ್ಲು ಕಡಿಯುವುದು, ಕಣ್ಣು ಮಂಜಾದಂತಾಗುವುದು, ಬೆವರುವುದು, ಚಳಿ ಯಾಗುವಂತಹ ಆರೋಗ್ಯ ಸಂಬಂಧಿ ಪರಿಣಾಮಗಳನ್ನು ಅನುಭವಿಸುವರು.
MDMA ಡ್ರಗ್ ಗನ್ನು ಒಮ್ಮೆ ಸೇವಿಸಿದರೆ, ಅದರ ಪರಿಣಾಮ ಕನಿಷ್ಠ ಮೂರರಿಂದ ಆರು ಗಂಟೆಗಳವರೆಗೆ ಇರಬಹುದು. ಮೊದಲ ಡೋಸ್ ನ ಪರಿಣಾಮ ಕಡಿಮೆಯಾಗುತ್ತಾ ಹೋದಂತೆ ಕೆಲವೊಬ್ಬರು ಮತ್ತೊಂದು ಡೋಸ್ ನ ಮೊರೆ ಹೋಗುವರು.ಡೋಸ್ ಕಡಿಮೆ ಆದರೂ ಸಹ, ಕೆಲವು ವಾರಗಳವರೆಗೆ, ವ್ಯಕ್ತಿಯಲ್ಲಿ ದೈಹಿಕವಾಗಿ ಕಿರಿಕಿರಿ ಅನುಭವಿಸುವುದು, ಆಕ್ರಮಣಕಾರಿ ನಡವಳಿಕೆ, ಖಿನ್ನತೆಗೆ ಒಳಗಾದ ಭಾವ, ನಿದ್ರಾಹೀನತೆ, ಆತಂಕ, ನೆನಪಿನ ಶಕ್ತಿಯ ಕೊರತೆ, ಹಸಿವಾಗದೆ ಇರುವಂತಹ ಅನುಭವ, ಲೈಂಗಿಕತೆಯಲ್ಲಿ ಉತ್ಸಾಹದ ಕೊರತೆಯಂತಹ ಪರಿಣಾಮಗಳನ್ನು ಎದುರಿಸಬೇಕಾಗಬಹುದು.
‘MDMA’ ಡ್ರಗ್ ನ ವೈದ್ಯಕೀಯ ಪ್ರಾಮುಖ್ಯತೆ
1970 ರಲ್ಲಿ ಮೊದಲ ಬಾರಿಗೆ MDMA ಡ್ರಗ್ ಅನ್ನು ಮನೋವೈದ್ಯಕೀಯ ಚಿಕಿತ್ಸೆಯಲ್ಲಿ ಬಳಸಲಾಯಿತು.(ಟಾಪ್ ತೆರಫಿ ಅಂತಹ ಮಾನಸಿಕ ಚಿಕಿತ್ಸೆಗಳಲ್ಲಿ) ಆದರೆ ವ್ಯಸನಿಗಳು/ಸಂಶೋಧಕರನ್ನು ಉಪಯೋಗಿಸಿಕೊಂಡು ವೈದ್ಯಕೀಯ ಪ್ರಯೋಗವನ್ನು ನಡೆಸಿದಂತಹ ಆಧಾರಗಳಿಲ್ಲ ಅಥವಾ ಯು.ಎಸ್ ನ ಫುಡ್ ಅಂಡ್ ಅಡ್ಮಿನಿಸ್ಟ್ರೇಷನ್ ನಿಂದ ಮಾನ್ಯತೆಯು ಸಿಕ್ಕಿಲ್ಲ.
ಆದರೆ, 1985 ರಲ್ಲಿ ಯು. ಎಸ್ ನ ಡ್ರಗ್ ಎನ್ಫೋರಸ್ಮೆಂಟ್ ಅಡ್ಮಿನಿಸ್ಟ್ರೇಷನ್ MDMA ಅನ್ನು ವೈದ್ಯಕೀಯ ಚಿಕಿತ್ಸೆಯಲ್ಲಿ ಕಾನೂನುಬಾಹಿರ ಎಂದು ಆದೇಶಿಸಿತು. ಆದರೆ, ಕೆಲವು ಸಂಶೋಧಕರ ಪ್ರಕಾರ, ನಿಯಂತ್ರಿತ ಪರಿಸ್ಥಿತಿಗಳಲ್ಲಿ, ಮನೋ ವೈದ್ಯಕೀಯ ಚಿಕಿತ್ಸೆಗಳಲ್ಲಿ ಬಳಸಬಹುದು ಎಂಬ ವಾದವನ್ನು ಮುಂದಿಟ್ಟು ಡಿಸೇಸ್ ಇತ್ತೀಚಿನ ಬೆಳವಣಿಗೆಯಲ್ಲಿ ಪೋಸ್ಟ್ ಟ್ರೆಮಾಟಿಕ್ ಸ್ಟ್ರೆಸ್( PTSD) ಚಿಕಿತ್ಸೆಯಲ್ಲಿ MDMA ಯನ್ನು ಬಳಸಿ ಪ್ರಗತಿಯನ್ನು ಸಾಧಿಸಿ ಯಶಸ್ವಿಯಾಗಿ ಹೊಸ ಆಯಾಮವನ್ನು ತೆರೆದಿದ್ದಾರೆ.
‘MDMA’ ಸೇವನೆಯಿಂದ ಆರೋಗ್ಯದ ಮೇಲಾಗುವಪರಿಣಾಮಗಳು
ಅತಿಯಾದ ಸೇವನೆಯಿಂದಾಗಿ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗುವುದು, ದೇಹದ ಉಷ್ಣತೆಯು ಹೆಚ್ಚಾಗುವುದು, ಇದು ಯಕೃತ್ತು ಹಾಗೂ ಮೂತ್ರಪಿಂಡಗಳ ಕಾರ್ಯದಲ್ಲಿ ಅಡೆತಡೆಯನ್ನು ಉಂಟುಮಾಡಬಹುದು. ಕೆಲವೊಮ್ಮೆ ಅಸ್ವಾಭಾವಿಕ ಲೈಂಗಿಕ ಸಂಪರ್ಕ ಹೊಂದುವುದರಿಂದ, ಲೈಂಗಿಕ ಪ್ರಸರಣ ರೋಗ( STD) ಗಳಾದ ಗೊನೋರಿಯ,AID/HIV ಹಾಗೂ ಹೆಪಟೈಟಿಸ್ ನಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿದೆ.
MDMA ಡ್ರಗ್ ಒಂದು ವ್ಯಸನವೇ..?
ಸಂಶೋಧನೆಗಳ ಪ್ರಕಾರ ಇದು ವ್ಯಸನವೇ ಎಂಬುದು ಖಚಿತವಾಗಿಲ್ಲ. ಅಲ್ಲದೇ, ಇದು ಕೋಕೋ ನಷ್ಟು ಗೀಳಲ್ಲವೆಂಬುದು ಸಂಶೋಧಕರ ವಾದವಾಗಿದೆ. ಆದರೆ, ಕೆಲವು ವ್ಯಸನಿಗಳು ಆಯಾಸ ಖಿನ್ನತೆಗೆ ಒಳಗಾಗುವುದು, ಹಸಿವಿಲ್ಲದಿರುವುದು, ಏಕಾಗ್ರತೆಯಲ್ಲಿ ಕೊರತೆಯನ್ನು ಅನುಭವಿಸುವಂತಹ ಲಕ್ಷಣಗಳನ್ನು ತೋರುವುದು ಉಂಟು.
ವ್ಯಸನಿಗಳಿಗೆ ಬಳಸಬಹುದಾದ ಚಿಕಿತ್ಸೆ
ಇಂತಹದ್ದೇ ಚಿಕಿತ್ಸೆಯನ್ನು ಬಳಸಿ MDMAಡ್ರಗ್ ನಾ ಚಟದಿಂದ ವ್ಯಕ್ತಿಯೊಬ್ಬನನ್ನು ವ್ಯಸನಮುಕ್ತ ಗಳಿಸಬಹುದು ಎಂದು ಹೇಳುವಂತಹ ಯಾವುದೇ ಖಂಡಿತವಾದ ಚಿಕಿತ್ಸೆಯು ವೈದ್ಯಕೀಯ ಕ್ಷೇತ್ರದಲ್ಲಿಲ್ಲ. ಆದರೆ, ‘Behavioral
Therapy’ /ನಡವಳಿಗೆ ಚಿಕಿತ್ಸೆಯು ಪರಿಣಾಮಕಾರಿ ಆಗಬಲ್ಲದು ಎಂಬ ನಂಬಿಕೆಗಳಿವೆ. ಅದು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಎಂಬ ನಿಟ್ಟಿನಲ್ಲಿ ಸಂಶೋಧನೆಗಳು ಇನ್ನಷ್ಟೇ ನಡೆಯಬೇಕಿದೆ.
ಮೂಲ ಬರಹದ ಲಿಂಕ್ ಇಲ್ಲಿದೆ, ಕ್ಲಿಕ್ ಮಾಡಿ ಓದಿ
https://www.drugabuse.gov/publications/drugfacts/mdma-ecstasymolly
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್ ಸ್ಟಾರ್ ಯಶ್; ‘ಟಾಕ್ಸಿಕ್’ ಗೆಲುವಿಗಾಗಿ ವಿಶೇಷ ಪೂಜೆ
ಚೆನ್ನೈ ಪ್ರೀ-ರಿಲೀಸ್ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್; ಕೆಜಿಎಫ್-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ
- ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್!
- ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ
ಸುದ್ದಿದಿನ,ಮಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 26ರಂದು ಚಿತ್ರ ತೆರೆಗೆ ಬರಲಿದ್ದು, ಬಿಡುಗಡೆಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಿನ್ನೆ ಚೆನ್ನೈನಲ್ಲಿ ನಡೆದ ‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಕಾರ್ಯಕ್ರಮ ಮುಗಿದ ಬಳಿಕ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.
http://Visit : www.suddidina.com
ರಿಲೀಸ್‌ಗೂ ಮುನ್ನ ದೇವರ ದರ್ಶನದ ಸಂಪ್ರದಾಯ
ಸಿನಿಮಾ ಬಿಡುಗಡೆಗೂ ಮುನ್ನ ದೇವಸ್ಥಾನಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯುವುದು ಯಶ್ ಅವರಲ್ಲಿ ಹಿಂದಿನಿಂದಲೂ ಕಂಡುಬರುವ ಸಂಪ್ರದಾಯ. ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯ ಮುನ್ನವೂ ಯಶ್ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದೀಗ ‘ಟಾಕ್ಸಿಕ್’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೂಲಕ ತಮ್ಮ ಆ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.
ಯಶ್ ಸೂರ್ಯ ದೇವಸ್ಥಾನಕ್ಕೂ ಭೇಟಿ ನೀಡಿ ಹರಕೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯೂ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೂ ಮುನ್ನ ಯಶ್ ಅವರ ದೇವಸ್ಥಾನ ಭೇಟಿ ಅಭಿಮಾನಿಗಳ ಗಮನ ಸೆಳೆದಿದೆ.
ಟಾಕ್ಸಿಕ್ ಮೇಲೆ ಭಾರಿ ನಿರೀಕ್ಷೆ
ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಆಕ್ಷನ್ ಥ್ರಿಲ್ಲರ್ ಆಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೂ ಚಿತ್ರ ಡಬ್ ಆಗಿದೆ.
ಯಶ್ ಪ್ರಮುಖ ಪಾತ್ರದಲ್ಲಿರುವ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ನಯನತಾರಾ ಸೇರಿದಂತೆ ಬಹುಭಾಷಾ ತಾರೆಯರ ದೊಡ್ಡ ಬಳಗವೇ ಇದೆ. ಹೀಗಾಗಿ ಕನ್ನಡ ಮಾತ್ರವಲ್ಲದೆ ದಕ್ಷಿಣ ಹಾಗೂ ಉತ್ತರ ಭಾರತದ ಮಾರುಕಟ್ಟೆಗಳಲ್ಲೂ ಚಿತ್ರದ ಮೇಲೆ ಭಾರಿ ನಿರೀಕ್ಷೆ ಮೂಡಿದೆ.
ಬೆಂಗಳೂರಿನಲ್ಲಿ ಟಿಕೆಟ್ ದರಕ್ಕೆ ಶಾಕ್!
‘ಟಾಕ್ಸಿಕ್’ ಅಡ್ವಾನ್ಸ್ ಬುಕ್ಕಿಂಗ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಕೆಲವು ಪ್ರೀಮಿಯಂ ಥಿಯೇಟರ್‌ಗಳಲ್ಲಿ ಟಿಕೆಟ್ ದರ ₹3,600ರ ಗಡಿ ತಲುಪಿರುವುದು ಗಮನ ಸೆಳೆದಿದೆ. ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ರೆಕ್ಲೈನರ್ ಟಿಕೆಟ್‌ಗಳು ₹700ರಿಂದ ₹1,600ರವರೆಗೆ ಲಭ್ಯವಿದ್ದರೆ, ಕೆಲವು ಪ್ರೀಮಿಯಂ ಸ್ಕ್ರೀನ್‌ಗಳಲ್ಲಿ ದರ ಇನ್ನಷ್ಟು ಹೆಚ್ಚಾಗಿದೆ.
ಸಾಕ್ನಿಲ್ಕ್ ವರದಿಯ ಪ್ರಕಾರ, ಅಡ್ವಾನ್ಸ್ ಬುಕ್ಕಿಂಗ್ ಆರಂಭವಾದ ಎರಡು ದಿನಗಳಲ್ಲಿ ‘ಟಾಕ್ಸಿಕ್’ ಸುಮಾರು ₹18.73 ಕೋಟಿ ಮುಂಗಡ ಬುಕ್ಕಿಂಗ್ ದಾಖಲಿಸಿದೆ ಎನ್ನಲಾಗಿದೆ. ಟಿಕೆಟ್ ದರ ಏರಿಕೆಯ ನಡುವೆಯೂ ಬುಕ್ಕಿಂಗ್ ವೇಗ ಕುಂದಿಲ್ಲ.
ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್ ಸ್ಟಾರ್ ಯಶ್; ‘ಟಾಕ್ಸಿಕ್’ ಗೆಲುವಿಗಾಗಿ ವಿಶೇಷ ಪೂಜೆ
ನಾಳೆ ತೆರೆಗೆ ‘ಟಾಕ್ಸಿಕ್’
ಯಶ್ ಮತ್ತು ಗೀತು ಮೋಹನ್‌ದಾಸ್ ಕಥೆ ಬರೆದಿರುವ ಈ ಚಿತ್ರವು ಭಿನ್ನ ಕಥಾಹಂದರ ಹಾಗೂ ಭರ್ಜರಿ ಆಕ್ಷನ್ ಮೂಲಕ ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆ ಮೂಡಿಸಿದೆ. ಈಗ ಧರ್ಮಸ್ಥಳದ ಸನ್ನಿಧಿಯಲ್ಲಿ ಯಶ್ ಪಡೆದ ಆಶೀರ್ವಾದದ ಬೆನ್ನಲ್ಲೇ, ನಾಳೆ ‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನಲ್ಲಿ ಹೇಗೆ ಸದ್ದು ಮಾಡಲಿದೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

ದಿನದ ಸುದ್ದಿ
ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
- ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ 100% ಶುಲ್ಕ?
- ಶೇ.2ಕ್ಕೆ ಇಳಿದ ಶುಲ್ಕದ ಬಳಿಕ ಅರ್ಜಿ ಹೆಚ್ಚಾದರೂ, ತಾಂತ್ರಿಕ ಸಮಸ್ಯೆಯಿಂದ ಜನರಿಗೆ ಸಂಕಷ್ಟ
- 7.50 ಲಕ್ಷ ಬಿ-ಖಾತೆ ಆಸ್ತಿಗಳ ಪೈಕಿ ಕೇವಲ 90 ಸಾವಿರ ಅರ್ಜಿಗಳು, 20 ಸಾವಿರಕ್ಕಷ್ಟೇ ಎ-ಖಾತೆ ಭಾಗ್ಯ
ಸುದ್ದಿದಿನ,ಬೆಂಗಳೂರು: ‘ಮನೆ ನಮ್ಮದು, ಖಾತೆಯೂ ನಮ್ಮ ಹಕ್ಕು’ ಎಂಬ ನಿರೀಕ್ಷೆಯೊಂದಿಗೆ ಎ-ಖಾತೆ ಪಡೆಯಲು ಮುಂದಾದ ಬೆಂಗಳೂರಿನ ಸಾವಿರಾರು ಆಸ್ತಿ ಮಾಲೀಕರಿಗೆ ಇದೀಗ ನಿರಾಸೆ ಎದುರಾಗಿದೆ. ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯ ಭಾಗವಾಗಿ ಆರಂಭಿಸಿದ್ದ ‘ನನ್ನ ಖಾತಾ ನನ್ನ ಹಕ್ಕು’ ಕಾರ್ಯಕ್ರಮದ ಗಡುವು ಮುಕ್ತಾಯಗೊಂಡಿದ್ದು, ಯೋಜನೆಯ ಅನುಷ್ಠಾನದಲ್ಲಿ ಎದುರಾದ ತಾಂತ್ರಿಕ ಸಮಸ್ಯೆ ಹಾಗೂ ಅಧಿಕಾರಿಗಳ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು ನಗರದಲ್ಲಿ ಸುಮಾರು 7.50 ಲಕ್ಷ ಬಿ-ಖಾತೆ ಆಸ್ತಿಗಳಿವೆ ಎನ್ನಲಾಗಿದ್ದು, ಈ ಪೈಕಿ ಕೇವಲ 90 ಸಾವಿರ ಆಸ್ತಿ ಮಾಲೀಕರು ಮಾತ್ರ ಎ-ಖಾತೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ಸಲ್ಲಿಸಿದವರಿಗೂ ತಕ್ಷಣ ಪರಿಹಾರ ಸಿಗಲಿಲ್ಲ. ಅಧಿಕಾರಿಗಳ ಪ್ರಕ್ರಿಯೆ ವಿಳಂಬದಿಂದಾಗಿ ಇದುವರೆಗೆ ಕೇವಲ 20 ಸಾವಿರ ಆಸ್ತಿಗಳಿಗೆ ಮಾತ್ರ ಎ-ಖಾತೆ ಮಂಜೂರಾಗಿದೆ. ಇನ್ನೂ 60 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ.
ಶುಲ್ಕ ಕಡಿತದ ಬಳಿಕ ಹೆಚ್ಚಿದ ನಿರೀಕ್ಷೆ
ಆರಂಭದಲ್ಲಿ ಎ-ಖಾತೆ ಪಡೆಯಲು ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು ಶುಲ್ಕ ವಿಧಿಸಲು ಸರ್ಕಾರ ನಿರ್ಧರಿಸಿತ್ತು. ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶುಲ್ಕವನ್ನು ಶೇ.2ಕ್ಕೆ ಇಳಿಸಲಾಯಿತು. ಶುಲ್ಕ ಕಡಿಮೆಯಾದ ಬಳಿಕ ಎ-ಖಾತೆ ಪಡೆಯುವ ಆಸಕ್ತಿಯೂ ಹೆಚ್ಚಾಯಿತು. ಆದರೆ, ಇದೇ ಸಂದರ್ಭದಲ್ಲಿ ಮತ್ತೊಂದು ಸಮಸ್ಯೆ ಎದುರಾಯಿತು. ಅರ್ಜಿ ಸಲ್ಲಿಸಲು ಬಳಸುತ್ತಿದ್ದ ಜಿಬಿಎ ವೆಬ್‌ಸೈಟ್‌ನಲ್ಲಿ ಸರ್ವರ್ ಡೌನ್, ತಾಂತ್ರಿಕ ದೋಷ ಮತ್ತು ಮೂಲಸೌಕರ್ಯ ಕೊರತೆ ಕಾಣಿಸಿಕೊಂಡಿದ್ದರಿಂದ ಅನೇಕ ಆಸ್ತಿ ಮಾಲೀಕರು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಪರದಾಡಿದರು. ಅರ್ಜಿ ಸಲ್ಲಿಸಿದವರಲ್ಲೂ ಹಲವರ ಅರ್ಜಿಗಳು ಅಧಿಕಾರಿಗಳ ಪರಿಶೀಲನೆಗಾಗಿ ಬಾಕಿ ಉಳಿದಿವೆ.
ಗಡುವು ಮುಗಿದ ಬಳಿಕ ಶುಲ್ಕದ ಹೊರೆ?
ಈಗ ‘ನನ್ನ ಖಾತಾ ನನ್ನ ಹಕ್ಕು’ ಯೋಜನೆಯ ಗಡುವು ಮುಕ್ತಾಯಗೊಂಡಿರುವುದರಿಂದ, ಮುಂದಿನ ದಿನಗಳಲ್ಲಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳುವವರು ಪೂರ್ಣ ಪ್ರಮಾಣದ ಶೇ.100 ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಈಗಾಗಲೇ ಅರ್ಜಿ ಸಲ್ಲಿಸಿ ಅಧಿಕಾರಿಗಳ ಅನುಮೋದನೆಗಾಗಿ ಕಾಯುತ್ತಿರುವ 60 ಸಾವಿರಕ್ಕೂ ಹೆಚ್ಚು ಆಸ್ತಿ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ. “ಶುಲ್ಕ ವಸೂಲಿಗೆ ಸರ್ಕಾರ ತೋರಿದ ವೇಗವನ್ನು, ಜನರಿಗೆ ತಾಂತ್ರಿಕ ನೆರವು ನೀಡುವಲ್ಲಿ ತೋರಲಿಲ್ಲ” ಎಂಬ ಆಕ್ರೋಶವೂ ಕೇಳಿಬರುತ್ತಿದೆ.
ಈಗ ಎಲ್ಲರ ಕಣ್ಣು ಸರ್ಕಾರದತ್ತ ನೆಟ್ಟಿದೆ. ಗಡುವು ವಿಸ್ತರಣೆಯಾಗುತ್ತದೆಯೇ? ಬಾಕಿ ಅರ್ಜಿಗಳಿಗೆ ವಿಶೇಷ ಅವಕಾಶ ಸಿಗುತ್ತದೆಯೇ? ಅಥವಾ ಸಾವಿರಾರು ಜನರು ಶೇ.100 ಶುಲ್ಕದ ಹೊರೆ ಹೊರುವಂತಾಗುತ್ತದೆಯೇ? ಎಂಬ ಪ್ರಶ್ನೆಗಳಿಗೆ ಸರ್ಕಾರದ ಮುಂದಿನ ನಿರ್ಧಾರವೇ ಉತ್ತರ ನೀಡಬೇಕಿದೆ.

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ19 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ20 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ16 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ16 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ16 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ








