ದಿನದ ಸುದ್ದಿ
ದಾವಣಗೆರೆ ವಿವಿ 7ನೇ ವಾರ್ಷಿಕ ಘಟಿಕೋತ್ಸವ :56 ಪಿಹೆಚ್‍ಡಿ-62 ಚಿನ್ನದ ಪದಕ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/10/Davangere_university_convocation_Suddidina.jpg&description=ದಾವಣಗೆರೆ ವಿವಿ 7ನೇ ವಾರ್ಷಿಕ ಘಟಿಕೋತ್ಸವ :56 ಪಿಹೆಚ್‍ಡಿ-62 ಚಿನ್ನದ ಪದಕ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/10/Davangere_university_convocation_Suddidina.jpg&description=ದಾವಣಗೆರೆ ವಿವಿ 7ನೇ ವಾರ್ಷಿಕ ಘಟಿಕೋತ್ಸವ :56 ಪಿಹೆಚ್‍ಡಿ-62 ಚಿನ್ನದ ಪದಕ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ 7ನೇ ವಾರ್ಷಿಕ ಘಟಿಕೋತ್ಸವ ಬುಧವಾರ ಇಲ್ಲಿನ ವಿವಿ ಕ್ಯಾಂಪಸ್‍ನ ಶಿವಗೊಂಗೋತ್ರಿ ಆವರಣದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ವಯ ಸರಳವಾಗಿ ನಡೆಯಿತು.
ಸಮಾರಂಭದಲ್ಲಿ 56 ಜನರಿಗೆ ಪಿಹೆಚ್‍ಡಿ ಪ್ರದಾನ ಮಾಡಲಾಯಿತು. 62 ಚಿನ್ನದ ಪದಕ ನೀಡಲಾಯಿತು. 8441 ವಿದ್ಯಾರ್ಥಿಗಳು ಸ್ನಾತಕ ಪದವಿ ಹಾಗೂ 1592 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದರು.
ಗೌರವ ಡಾಕ್ಟರೇಟ್
ಈ ಬಾರಿ ದಾವಣಗೆರೆ ವಿಶ್ವವಿದ್ಯಾನಿಲಯ ವತಿಯಿಂದ ಒಬ್ಬರಿಗೆ ಮಾತ್ರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು ಕಲಬುರ್ಗಿಯ ಶರಣಬಸವೇಶ್ವರ ಅಪ್ಪ ಶೈಕ್ಷಣಿಕ ಸಂಸ್ಥೆಗಳ ಅಧ್ಯಕ್ಷರಾಗಿರುವ ಮಾತೋಶ್ರೀ ದಾಕ್ಷಾಯಿಣಿ ಅಪ್ಪ ಅವರಿಗೆ ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. 30 ವರ್ಷದ ಸಾಮಾಜಿಕ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಯಿತು.
ವರ್ಚುವಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವದ ಮುಖ್ಯ ಭಾಷಣ ನೆರವೇರಿಸಿದ ವಿಕ್ರಮ್ ಸಾರಾಭಾಯಿ ಪ್ರೊಫೆಸರ್ ಹಾಗೂ ಇಸ್ರೋದ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್. ಕಿರಣ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ಕೇವಲ ಕಾಲೇಜು ಶಿಕ್ಷಣಕ್ಕೆ ಸೀಮಿತವಾಗಬಾರದು. ಕಲಿಕೆ ಎಂದಿಗೂ ಅಂತ್ಯವಾಗಿವುದಿಲ್ಲ. ಬದಲಾಗಿ ಅದೊಂದು ನಿರಂತರ ಪ್ರಕ್ರಿಯೆಯಾಗಿದ್ದು, ನಿರಂತರ ಕಲಿಕೆÀ ಸ್ಪರ್ಧಾತ್ಮಕ ಹಾಗೂ ವೇಗವಾಗಿ ಬದಲಾಗುವ ಪರಿಸ್ಥಿತಿಯಲ್ಲಿ ಮುನ್ನಡೆ ಸಾಧಿಸಲು ಸಹಕರಿಸುತ್ತದೆ ಎಂದು ಹೇಳಿದರು.
ಪ್ರತಿಭಾ ಕುಲವನ್ನು ರೂಪಿಸುವಲ್ಲಿ ಶೈಕ್ಷಣಿಕ ವಲಯದ ಪಾತ್ರ ತುಂಬಾ ದೊಡ್ಡದಿದೆ. ಇದರಿಂದಾಗಿ ದೇಶ ಎಲ್ಲಾ ವಲಯಗಳಲ್ಲಿ ಬೆಳೆಯಲು, ಸ್ಪರ್ಧಿಸಲು ಹಾಗೂ ಯಶಸ್ಸು ಗಳಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಳೆಯ ದಾರಿಯಲ್ಲಿ ಹೆಜ್ಜೆ ಹಾಕದೇ,ತಮ್ಮದೇ ಆದ ಹೊಸ ಪಥದಲ್ಲಿ ವೇಗವಾಗಿ ರೂಪಿಸಿಕೊಳ್ಳಬೇಕು. ಆ ಮೂಲಕ ತಂತ್ರಜ್ಞಾನವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನ ಮಹತ್ವಪೂರ್ಣವಾಗಿ ನೆರವಾಗಿದ್ದು, ಕೇವಲ ಆರೋಗ್ಯವಷ್ಟೇ ಅಲ್ಲದೆ, ದೈನಂದಿನ ಜೀವನಕ್ಕೂ ತಂತ್ರಜ್ಞಾನ ನೆರವಾಗಿರುವುದು ವಿಶೇಷವಾಗಿದೆ. ಕೊರೊನಾ ಹರಡುತ್ತಿರುವಂತೆಯೇ ತಂತ್ರಜ್ಞಾನ ಪರಿಹಾರಗಳು ಸೋಂಕು ನಿಗಾ ಹಾಗೂ ನಿಯಂತ್ರಣಕ್ಕೆ ನೆರವಾಗಿದೆ. ಇದರಿಂದಾಗಿ ಆರೋಗ್ಯ ವ್ಯವಸ್ಥೆ ಮೇಲಿನ ಹೊರೆ ಹಾಗೂ ಆರೋಗ್ಯ ವೃತ್ತಿಪರರ ಕಾರ್ಯ ನಿರ್ವಹಣೆಯ ಭಾರ ಕಡಿಮೆಯಾಗಿರುವುದು ವಿಶೇಷ ಎಂದು ಬಣ್ಣಿಸಿದರು.
ದೈಹಿಕ ಅಂತರ ಕಾಯ್ದುಕೊಳ್ಳಬೇಕಾದ ಈ ಸಂದರ್ಭದಲ್ಲಿ ವರ್ಚುಯಲ್ ಪ್ಲಾಟ್‍ಫಾರಂಗಳು, ವಿಡಿಯೋ ಕಾನ್ಫರೆನ್ಸ್ ಹಾಗೂ ಡಿಜಿಟಲ್ ನಿಗಾ ಅತ್ಯುಪಯುಕ್ತವಾಗಿವೆ. ವಿಶ್ವದೆಲ್ಲೆಡೆ ರೋಗಿಗಳಿಗೆ ದೂರದಿಂದಲೇ ಆರೋಗ್ಯ ಸೇವೆ ನೀಡುವುದು ಹೆಚ್ಚಾಗುತ್ತಿದೆ. ಟೆಲಿಮೆಡಿಸಿನ್ ದೂರದಲ್ಲಿರುವ ರೋಗಿಗಳ ನಿರ್ವಹಣೆ ಹಾಗೂ ಅವರ ಜೊತೆಗಿನ ಸಂವಾದಕ್ಕೆ ವೈದ್ಯರಿಗೆ ಸಹಾಯ ಮಾಡುತ್ತಿವೆ ಎಂದು ತಿಳಿಸಿದರು.
ಮೊಬೈಲ್ ಪಾವತಿ ತಂತ್ರಾಂಶಗಳು ಹಾಗೂ ಸಾಮಾಜಿಕ ಮಾಧ್ಯಮಗಳು ಕ್ಷಿಪ್ರವಾಗಿ ಜನರಿಂದ ಮಾಹಿತಿ ಪಡೆದುಕೊಳ್ಳುವ ಮೂಲಕ ಸಂವಹನಕ್ಕೆ ನೆರವಾಗುತ್ತಿವೆ. ವಿಮಾನ ನಿಲ್ದಾಣ ಹಾಗೂ ಇತರ ಪ್ರದೇಶಗಳಲ್ಲಿ ಅಳವಡಿಸಲಾಗುವ ಥರ್ಮಲ್ ಇಮೇಜಿಂಗ್ ಕ್ಯಾಮೆರಾಗಳಿಂದಾಗಿ ಜ್ವರದಿಂದ ಬಳಲುತ್ತಿರುವವರ ತ್ವರಿತ ಪತ್ತೆ ಸಾಧ್ಯವಾಗಿದೆ ಎಂದು ವಿವರಿಸಿದರು.
ಭಾರತದ ಬಾಹ್ಯಾಕಾಶ ಯೋಜನೆ ಆರಂಭದ ದಿನದಿಂದಲೂ ಉಪಗ್ರಹ ಸಂವಹನ, ಪ್ರಸಾರ, ಭೂ ಸರ್ವೇಕ್ಷಣೆ, ಬಾಹ್ಯಾಕಾಶ ವಿಜ್ಞಾನ ಅಧ್ಯಯನ, ಬಾಹ್ಯಾಕಾಶ ಸಾರಿಗೆ ವ್ಯವಸ್ಥೆಗಳು ಹಾಗೂ ಸಂಬಂಧಿತ ಯೋಜನೆಗಳು ವಿಶಿಷ್ಟತೆಗಳನ್ನು ರೂಢಿಸಿಕೊಂಡಿದೆ. ಭಾರತವು ಬಾಹ್ಯಾಕಾಶ ತಂತ್ರಜ್ಞಾನವನ್ನು ವಿಕೋಪ ನಿರ್ವಹಣೆ, ಬೆಸ್ತರಿಗೆ ನೆರವು ನೀಡುವಂತಹ ಜನ ಸಾಮಾನ್ಯರಿಗೆ ಉಪಯುಕ್ತ ಕ್ರಮಗಳಿಗೆ ಬಳಸುತ್ತಾ ಬಂದಿದೆ ಎಂದು ತಿಳಿಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ದಾವಣಗೆರೆ ವಿವಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ, ಕೋವಿಡ್ ನಿಯಂತ್ರಣ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಸುರಕ್ಷತೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮಾರಂಭವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದ ಅವರು, ಕಾರ್ಯಕ್ರಮದಲ್ಲಿ ಸ್ವರ್ಣ ಪದಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
2018-19 ನೇ ಸಾಲಿನಲ್ಲಿ ಸ್ನಾತಕ ಪದವಿಯಲ್ಲಿ ಶೇ. 56.55 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ. 82.87 ರಷ್ಟು ಫಲಿತಾಂಶ ಬಂದಿದೆ. ದಾವಣಗೆರೆ ವಿವಿ ಸ್ಥಾಪನೆ ನಂತರ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಾಗಿದೆ. ಕರ್ನಾಟಕದ ಕಿರಿಯ ವಿಶ್ವವಿದ್ಯಾನಿಲಯಗಳಲ್ಲಿ ದಾವಣಗೆರೆ ವಿವಿ ಕೂಡ ಒಂದಾಗಿದ್ದು, ಒಟ್ಟು 251 ಎಕರೆ ಪ್ರದೇಶದಲ್ಲಿ ಹಸಿರು ವಾತಾವರಣದಲ್ಲಿರುವುದು ವಿಶೇಷವಾಗಿದೆ. ಹಾಗೂ ಇದು ಅಸ್ತಿತ್ವಕ್ಕೆ ಬಂದ ಪ್ರಥಮ ದಶಕದಲ್ಲಿಯೇ ಅಭಿವೃದ್ಧಿ ಪಥದತ್ತ ಸಾಗುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.
ವಿಜ್ಞಾನ, ಕಲಾ ಹಾಗೂ ವಾಣಿಜ್ಯ ನಿಕಾಯಗಳಡಿಯಲ್ಲಿ ಹಲವಾರು ಕೋರ್ಸ್ ಚಾಯ್ಸ್ ಬೆಸ್ಟ್ ಕ್ರೆಡಿಟ್ ಸಿಸ್ಟ್‍ಂ ಅಡಿ ಶಿಕ್ಷಣ ನೀಡಲಾಗುತ್ತಿದೆ. ಎಲ್ಲಾ ಕೋರ್ಸ್‍ಗಳಿಗೂ ಸಿಬಿಸಿಎಸ್ ಪರಿಚಯಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ನ್ಯಾಯ ಒದಗಿಸುವ ದಿಸೆಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದ್ದು, ಪ್ರತಿಯೊಂದು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
56 ಜನರಿಗೆ ಪಿಹೆಚ್‍ಡಿ ಪ್ರದಾನ
03 ಮಹಿಳಾ ಹಾಗೂ 02 ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 05 ಜನ ಮಾಸ್ಟರ್ ಆಫ್ ಫಿಲಾಸಫಿ (ಎಂ.ಫಿಲ್) ಮತ್ತು 11 ಮಹಿಳಾ ಹಾಗೂ 45 ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 56 ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿ.ಎಚ್.ಡಿ) ಪದವಿ ಪ್ರದಾನ ಮಾಡಲಾಯಿತು.
ಕನ್ನಡ ವಿಭಾಗದ ವಿನಯವತಿಗೆ 4 ಚಿನ್ನದ ಪದಕ
ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು ಸ್ವರ್ಣ ಪದಕಗಳ ಗಳಿಕೆಯಲ್ಲೂ ಪಾರಮ್ಯ ಮೆರೆದಿರುವುದು ವಿಶೇಷ. ಒಟ್ಟು 33 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿನಿಯರು ಚಿನ್ನದ ಪದಕ ಗಳಿಸಿದ್ದಾರೆ. ದಾವಣಗೆರೆ ವಿವಿಯ ಸ್ನಾತಕೋತ್ತರ ಕನ್ನಡ ವಿಭಾಗದ ವಿನಯವತಿ ಕೆ.ಬಿ. ವಿದ್ಯಾರ್ಥಿನಿ ಅತೀ ಹೆಚ್ಚು ಅಂಕ ಪಡೆದು 4 ಸ್ವರ್ಣ ಪದಕಗಳನ್ನು ಪಡೆದರು.
62 ಚಿನ್ನದ ಪದಕ
2018-19 ನೇ ಸಾಲಿನಲ್ಲಿ 62 ಚಿನ್ನದ ಪದಕಗಳನ್ನು ನೀಡಲಾಗುತ್ತಿದ್ದು, ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಒಟ್ಟು 27 ಮಹಿಳಾ ವಿದ್ಯಾರ್ಥಿಗಳು ಹಾಗೂ 6 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 33 ವಿದ್ಯಾರ್ಥಿಗಳು 62 ಚಿನ್ನದ ಪದಕಗಳನ್ನು ಹಂಚಿಕೊಂಡರು.
10,033 ವಿದ್ಯಾರ್ಥಿಗಳಿಗೆ ಪದವಿ
ಸ್ನಾತಕ ಹಾಗೂ ಸ್ನಾತಕೋತ್ತರ ಸೇರಿದಂತೆ ಒಟ್ಟು 10,033 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಬಿಎ, ಬಿಕಾಂ, ಬಿಬಿಎಂ ಸೇರಿದಂತೆ ವಿವಿಧ ಪದವಿ ವ್ಯಾಸಂಗದಲ್ಲಿ 2018-19 ನೇ ಸಾಲಿನಲ್ಲಿ 5408 ಮಹಿಳೆ, 3033-ಪುರುಷ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8441 ವಿದ್ಯಾರ್ಥಿಗಳು ಸ್ನಾತಕ ಪದವಿ ಪಡೆದರು. ಎಂಎ, ಎಂಕಾಂ, ಎಂಎಸ್‍ಸಿ ಸೇರಿದಂತೆ ವಿವಿಧ ಸ್ನಾತಕೋತ್ತರ ಪದವಿ ವ್ಯಾಸಂಗದಲ್ಲಿ 1073 ಮಹಿಳೆ, 519 ಪುರುಷ ವಿದ್ಯಾರ್ಥಿಗಳು ಸೇರಿದಂತೆ 1592 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದರು.
ದಾವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರ ಅನುಪಸ್ಥಿತಿಯಲ್ಲಿ ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್.ಎಸ್.ಅನಿತಾ ಮತ್ತು ಹಣಕಾಸು ಅಧಿಕಾರಿ ಪ್ರೊ.ಗೋಪಾಲ ಎಂ. ಅಡವಿರಾವ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಡಾ. ರಾಮನಾಥ್, ವಿಜಯಲಕ್ಷ್ಮಿ, ಇನಾಯತ್ ಉಲ್ಲಾ, ಡಾ.ವಿ.ಕುಮಾರ್, ಕಲಾ ನಿಕಾಯದ ಡೀನ್ ಪ್ರೊ.ಕೆ.ಬಿ.ರಂಗಪ್ಪ, ವಾಣಿಜ್ಯ ನಿಕಾಯದ ಡೀನ್ ಪ್ರೊ.ಲಕ್ಷ್ಮಣ, ಶಿಕ್ಷಣ ನಿಕಾಯದ ಡೀನ್ ಡಾ.ವೆಂಕಟೇಶ್, ವಿಜ್ಞಾನ ನಿಕಾಯದ ಡೀನ್ ವಡ್ಲಪುಡಿ ಕುಮಾರ್ ಹಾಗೂ ವಿವಿಯ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಪೋಷಕರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
ಸುದ್ದಿದಿನ,ದಾವಣಗೆರೆ:ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇಗುಲಗಳಲ್ಲಿ ನಿಧಿ ಶೋಧಿಸಲು ಯತ್ನಿಸಿದ ಆರು ಜನರ ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ ಆಚಾರಿ (48), ಮಂಜುನಾಥ (51), ಪ್ರಕಾಶ (42), ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದ ರಾಮನಾಥ ಪೈ (52), ಸಾಗರ ತಾಲ್ಲೂಕಿನ ಬ್ಯಾಕೋಡು ಗ್ರಾಮದ ಶ್ರೀಕಾಂತ ಭಟ್ (51) ಬಂಧಿತರು.
ಆರೋಪಿಗಳು ಏ. 22ರಂದು ರಾತ್ರಿ ಕಾಡಜ್ಜಿ ಗ್ರಾಮದ ಚೌಡಮ್ಮ ದೇಗುಲದಲ್ಲಿ ನಿಧಿ ಶೋಧ ಮಾಡಿದ್ದರು. ಏ.29ರಂದು ರಾತ್ರಿ ಪೇಟೆ ದುರುಗಮ್ಮ ದೇಗುಲದ ಬಳಿ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದರು. ದುಷ್ಟ ಶಕ್ತಿ ಪೂಜೆ, ಹೋಮ– ಹವನ ಮಾಡಿ ಗರ್ಭಗುಡಿಯಲ್ಲಿ ನಿಧಿ ತೆಗೆಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


