ದಿನದ ಸುದ್ದಿ
ಜ್ಯೂನಿಯರ್ ರಾಜ್ ಕುಮಾರ್ ಎಂದೇ ಪ್ರಸಿದ್ಧರಾದ ಕೊಡಗಿನ ಜಯಕುಮಾರ್ ನಿಧನ
ಸುದ್ದಿದಿನ, ದಾವಣಗೆರೆ : ರಂಗಭೂಮಿ, ಸಿನಿಮಾ, ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್ (72 ವರ್ಷ) ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ. ದಾವಣಗೆರೆ ಸಮೀಪ ಕೊಡಗನೂರು ಅವರ ಜನ್ಮಸ್ಥಳ. ವೃತ್ತಿರಂಗಭೂಮಿ ಜೊತೆ ಅವರದು ಸುಮಾರು ನಾಲ್ಕೂವರೆ ದಶಕಗಳ ಒಡನಾಟ. ಕನ್ನಡ ವೃತ್ತಿರಂಗಭೂಮಿಯಲ್ಲಿ ಅವರು ಜ್ಯೂನಿಯರ್ ರಾಜಕುಮಾರ್ ಎಂದೇ ಹೆಸರಾದವರು.
ಗುಬ್ಬಿ ಕಂಪನಿ, ಕೆಬಿಆರ್ ಕಂಪನಿ, ಕುಮಾರೇಶ್ವರ ನಾಟಕ ಸಂಘ, ಶ್ರೀ ಶೈಲ ಮಲ್ಲಿಕಾರ್ಜುನ ನಾಟ್ಯ ಸಂಘ, ಕರ್ನಾಟಕ ಕಲಾ ವೈಭವ ಸಂಘ, ಸಂಗಮೇಶ್ವರ ನಾಟಕ ಸಂಘಗಳ ಹಲವಾರು ನಾಟಕಗಳಲ್ಲಿ ಜಯಕುಮಾರ್ ಅಭಿನಯಿಸಿದ್ದಾರೆ.
ಪೊಲೀಸನ ಮಗಳು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾತ್ಮೆ, ಮದಕರಿನಾಯಕ, ಮುದುಕನ ಮದುವೆ, ಟಿಪ್ಪು ಸುಲ್ತಾನ, ಗೋಮುಖ ವ್ಯಾಘ್ರ, ರಾಷ್ಟ್ರವೀರ ಎಚ್ಚಮ್ಮನಾಯಕ ಅವರಿಗೆ ಜನಪ್ರಿಯತೆ ತಂದುಕೊಟ್ಟ ನಾಟಕಗಳು. ರಂಗಭೂಮಿಯ ಹೆಸರಾಂತ ನಿರ್ದೇಶಕರಾದ ಪಿ.ಬಿ.ದುತ್ತರಗಿ, ಆರ್.ಡಿ.ಕಾಮತ್ ಅವರ ನಾಟಕಗಳಲ್ಲಿ ನಟಿಸಿದ್ದಾರೆ.
ಮುಸುರಿ ಕೃಷ್ಣಮೂರ್ತಿ, ಸುಂದರ ಕೃಷ್ಣ ಅರಸ್, ಜಿ.ವಿ.ಚನ್ನಬಸಪ್ಪ, ಎಚ್.ಟಿ.ಅರಸ್, ಉಮಾಶ್ರೀ, ದಿನೇಶ್, ಉದಯಕುಮಾರ್, ಸುಧೀರ್, ಓಬಳೇಶ್ವರ್ ಸೇರಿದಂತೆ ವೃತ್ತಿರಂಗಭೂಮಿಯ ಹೆಸರಾಂತ ಕಲಾವಿದರೊಂದಿಗೆ ಅಭಿನಯಿಸಿದ್ದಾರೆ.
ತಾಯಿಗೊಬ್ಬ ಕರ್ಣ, ಸತ್ಯನಾರಾಯಣ ಪೂಜಾಫಲ, ಸಾಂಗ್ಲಿಯಾನ-3, ಜನುಮದ ಜೋಡಿ, ಕಿಟ್ಟಿ, ಜಾಕಿ, ರಾಜ, ತಾಯಿ, ಶಬರಿ, ಮರಣದಂಡನೆ ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಂಕ್ರಾಂತಿ, ಮಹಾಮಾಯೆ, ಅಪ್ಪ, ಕೆಳದಿ ಚನ್ನಮ್ಮ, ಭಾಗೀರಥಿ, ಶ್ರೀ ರಾಘವೇಂದ್ರ ವೈಭವ, ಪಾ.ಪ.ಪಾಂಡು, ಶ್ರೀ ಕಲಾಭೈರವ ಮಹಾತ್ಮೆ ಸೇರಿದಂತೆ 20ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸುವರ್ಣ ಅಕಾಡೆಮಿ ಪ್ರಶಸ್ತಿ, ವರದಪ್ಪ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.
(ಮಾಧ್ಯಮದವರು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- 9606684489, 9743683835)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


