ದಿನದ ಸುದ್ದಿ
ಕರ್ನಾಟಕ ಜಾನಪದ ವಿವಿಯ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಗೊಟಗೋಡಿ/ಶಿಗ್ಗಾಂವಿ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರಸ್ಥಾನದ ಹಾಗೂ ಪ್ರಾದೇಶಿಕ ಜಾನಪದ ಅಧ್ಯಯನ ಕೇಂದ್ರಗಳಲ್ಲಿನ ಸ್ನಾತಕೋತ್ತರ ಪದವಿ/ ಸ್ನಾತಕೋತ್ತರ ಡಿಪ್ಲೊಮಾ/ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಎಂ.ಎ ಕೋರ್ಸಗಳಾದ ಜಾನಪದ ವಿಜ್ಞಾನ, ಜನಪದ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜನಪದ ಕಲೆ, ಕನ್ನಡ- ಜಾನಪದ, ಪ್ರವಾಸೋದ್ಯಮ, ಬುಡಕಟ್ಟು ಅಧ್ಯಯನ, ಗ್ರಾಮೀಣ- ಬುಡಕಟ್ಟು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಹಿಳಾ ಅಧ್ಯಯನ, ಇಂಗ್ಲಿಷ್ (ಜಾನಪದ ಮತ್ತು ಅನುವಾದ ಅನುಲಕ್ಷಿಸಿ) ಅರ್ಥಶಾಸ್ತ್ರ(ಗ್ರಾಮೀಣ), ಸಮಾಜಶಾಸ್ತ್ರ(ಗ್ರಾಮೀಣ) ಎಂ.ಬಿ.ಎ ಗ್ರಾಮೀಣ ಮತ್ತು ಬುಡಕಟ್ಟು ನಿರ್ವಹಣೆ, ಪ್ರವಾಸೋದ್ಯಮ ಮತ್ತು ಪ್ರವಾಸೋದ್ಯಮ ನಿರ್ವಹಣೆ, ಎಂ.ಎಸ್ಸಿ ಪಾರಂಪರಿಕ ವಿಜ್ಞಾನ ಮತ್ತು ತಂತ್ರಜ್ಞಾನ, ಎಂ.ಪಿ.ಎ ಪ್ರದರ್ಶನ ಕಲೆ, ಎಂ.ವಿ.ಎ ದೃಶ್ಯ ಕಲೆ, ಎಂ.ಎಸ್.ಡಬ್ಲ್ಯೂ ಸಮಾಜ ಕಾರ್ಯ (ಜನಪದ ಮತ್ತು ಬುಡಕಟ್ಟು ಅಭಿವೃದ್ಧಿ ಅನುಲಕ್ಷಿಸಿ) ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಯುಜಿಸಿ ಅಂಗೀಕೃತ ಯಾವುದೇ ವಿಶ್ವವಿದ್ಯಾಲಯದ ಪದವಿಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷಿಸುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿಗಳನ್ನು ಸಲ್ಲಿಸಬಹುದು. ಆದರೆ, ಫಲಿತಾಂಶ ಪ್ರಕಟಣೆಯ ನಂತರ ಅಂಕಪಟ್ಟಿಗಳನ್ನು ಕೂಡಲೇ ಇಂಟರ್‍ನೆಟ್ ಮೂಲಕ ಪಡೆದು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸರ್ಟಿಫಿಕೇಟ್/ ಡಿಪ್ಲೊಮಾ ಕೋರ್ಸ್
ಸಮರ ಕಲೆ, ಜನಪದ ಗೀತ ಸಂಪ್ರದಾಯ, ಕಸೂತಿ ಕಲೆ, ಜನಪದ ನೃತ್ಯ, ದೊಡ್ಡಾಟ, ಪ್ರವಾಸೋದ್ಯಮ, ತೊಗಲು ಗೊಂಬೆಯಾಟ, ಬಿದರಿ ಕಲೆ, ಬೀಸು ಕಂಸಾಳೆ ಮತ್ತು ಡೊಳ್ಳು ಕುಣಿತ ಸೇರಿದಂತೆ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‍ಗಳಾದ ಜನಪದ ಮಹಾಕಾವ್ಯ, ಪಾರಂಪರಿಕ ಹೈನುಗಾರಿಕೆ, ಪಾರಂಪರಿಕ ತೋಟಗಾರಿಕೆ ಹಾಗೂ ಡಿಪ್ಲೊಮಾ ಕೋರ್ಸ್‍ಗಳಾದ ಜಾನಪದ ಬಯಲಾಟ (ಮೂಡಲಪಾಯ), ಯಕ್ಷಗಾನ ಬಯಲಾಟ, ಪಾರಂಪರಿಕ ಸೌಂದರ್ಯ ಶಾಸ್ತ್ರ, ಹಚ್ಚೆ, ಪಾರಂಪರಿಕ ಸಮರ ಕಲೆ, ಯೋಗ ಕೋರ್ಸಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ, ಅರ್ಜಿ ನಮೂನೆ, ಪ್ರವೇಶ ಶುಲ್ಕ ಹಾಗೂ ಇತರ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವಿವರಣಾ ಪುಸ್ತಕದಿಂದ ಪಡೆಯಬಹುದು ಅಥವಾ ವಿಶ್ವವಿದ್ಯಾಲಯದ ವೆಬ್‍ಸೈಟ್ http://www.janapadauniversity.ac.inನ್ನು ಸಂಪರ್ಕಿಸಬಹುದಾಗಿದೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲೆಮಹದೇಶ್ವರ ಬೆಟ್ಟ, ಬೀದರ್, ಮಂಡ್ಯ ಮತ್ತು ಜೋಯಿಡಾ ಗಳಲ್ಲಿರುವ ಪ್ರಾದೇಶಿಕ ಜನಪದ ಕಲೆಗಳ ಕಲಿಕಾ ಕೇಂದ್ರಗಳಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರವೇಶ ಬಯಸುವವರು ಸಂಬಂಧಿಸಿದ ಅಧ್ಯಯನ ಕೇಂದ್ರಗಳಿಂದಲೂ ಅರ್ಜಿ ಪಡೆದು ಭರ್ತಿ ಮಾಡಿ ದೃಢೀಕರಿಸಿದ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾಲಯದ ಕಚೇರಿಗೆ ಭೇಟಿ ನೀಡಿ ವಿಚಾರಿಸಬಹುದು ಅಥವಾ ದೂ.ಸಂ: 6366266465, 9449233966, 9482810694 ನ್ನು ಸಂಪರ್ಕಿಸಬಹುದೆಂದು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ16 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

