ದಿನದ ಸುದ್ದಿ
ಅಮೆಜಾನ್ ಪ್ರೈಮ್ ವೀಡಿಯೊ ಭೀಮಸೇನ ನಳಮಹಾರಾಜಾ ಕನ್ನಡ ಫಿಲ್ಮ್ ನ ಟ್ರೈಲರನ್ನು ಅನಾವರಣಗೊಳಿಸುತ್ತಿದೆ.

ಸುದ್ದಿದಿನ ದಾವಣಗೆರೆ: ಮೊದಲನೇ ಸ್ಟ್ರೀಮ್ ಭೀಮಸೇನ ನಳಮಹಾರಾಜಾ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಮಾತ್ರ.
ಕಾರ್ತಿಕ್ ಸರಗೂರ್ ನಿರ್ದೇಶನದ ಈ ಫ್ಯಾಮಿಲಿ ಎಂಟರ್ಟೈನರ್ನಲ್ಲಿ ನಟರಾದ ಅರವಿಂದ್ ಅಯ್ಯರ್, ಆರೋಹಿ ನಾರಾಯಣ್, ಪ್ರಿಯಾಂಕಾ ತಿಮ್ಮೇಶ್, ಅಚ್ಯುತ್ ಕುಮಾರ್ ಮತ್ತು ಆದ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಭಾರತದಲ್ಲಿ ಮತ್ತು 200 ಕ್ಕೂ ಹೆಚ್ಚು ದೇಶಗಳು ಮತ್ತು ಪ್ರಾಂತ್ಯಗಳಲ್ಲಿನ ಪ್ರಧಾನ ಸದಸ್ಯರು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಅಕ್ಟೋಬರ್ 29ರಿಂದ ಕನ್ನಡ ಫ್ಯಾಮಿಲಿ ಎಂಟರ್ಟೈನರ್ ಭೀಮಸೇನ ನಳಮಹಾರಾಜಾ ನೋಡಬಹುದು.
ಅಮೆಜಾನ್ ಪ್ರೈಮ್ ಇತ್ತೀಚಿನ ಮತ್ತು ವಿಶೇಷ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು, ಸ್ಟ್ಯಾಂಡ್-ಅಪ್ ಕಾಮಿಡಿ, ಅಮೆಜಾನ್ ಒರಿಜಿನಲ್ಸ್, ಅಮೆಜಾನ್ ಪ್ರೈಮ್ ಮ್ಯೂಸಿಕ್ ಮೂಲಕ ಜಾಹೀರಾತು-ಮುಕ್ತ ಸಂಗೀತ ಕೇಳುವುದು, ಭಾರತದ ಅತಿದೊಡ್ಡ ಉತ್ಪನ್ನಗಳ ಉಚಿತ ವೇಗವಾದ ವಿತರಣೆ, ಉನ್ನತ ವ್ಯವಹಾರಗಳಿಗೆ ಆರಂಭಿಕ ಪ್ರವೇಶದೊಂದಿಗೆ ನಂಬಲಾಗದ ಮೌಲ್ಯವನ್ನು ನೀಡುತ್ತದೆ. ಪ್ರೈಮ್ ರೀಡಿಂಗ್ನೊಂದಿಗೆ ಅನಿಯಮಿತ ಓದುವಿಕೆ ಮತ್ತು ಪ್ರೈಮ್ ಗೇಮಿಂಗ್ನೊಂದಿಗೆ ಮೊಬೈಲ್ ಗೇಮಿಂಗ್ ಕಂಟೆಂಟ್, ಎಲ್ಲವೂ ತಿಂಗಳಿಗೆ 129.ರೂಗಳಿಗೆ ಲಭ್ಯವಿದೆ.
ಮುಂಬೈ, ಭಾರತ, 19 ಅಕ್ಟೋಬರ್ 2020 – ಡ್ಯಾನಿಶ್ ಸೈಟ್‌ನ ಫ್ರೆಂಚ್ ಬಿರಿಯಾನಿಯ ಯಶಸ್ವಿ ವರ್ಲ್ಡ್ ಪ್ರೀಮಿಯರ್ ಪ್ರದರ್ಶನದ ನಂತರ, ಅಮೆಜಾನ್ ಪ್ರೈಮ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗುವ ಉತ್ಸವದ ಸಾಲಿನ ಭಾಗವಾಗಿ ಮತ್ತೊಂದು ಮನರಂಜನೆಯ ಕನ್ನಡ ನಾಟಕ ಭೀಮಸೇನ ನಳಮಹಾರಾಜರ ನೇರ-ಸೇವೆಯ ವರ್ಲ್ಡ್ ಪ್ರೀಮಿಯರ್ ಪ್ರದರ್ಶನವನ್ನು ಪ್ರಕಟಿಸಿತು. ಸ್ಟ್ರೀಮಿಂಗ್ ಸೇವೆ ಇಂದು ಚಿತ್ರದ ಕುತೂಹಲಕಾರಿ ಟ್ರೇಲರ್ ಅನ್ನು ಅನಾವರಣಗೊಳಿಸಿತು, ಕುಟುಂಬ ನಾಟಕ ಮತ್ತು ಆಹಾರದ ಮನರಂಜನೆಯ ಸವಾರಿಯಲ್ಲಿ ನಮ್ಮನ್ನು ಕರೆದೊಯ್ಯುತ್ತದೆ. ಕಾರ್ತಿಕ್ ಸರಗೂರ್ ನಿರ್ದೇಶನದ ಈ ಲಘು ಹೃದಯದ ಶೀರ್ಷಿಕೆಯನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ, ರಕ್ಷಿತ್ ಶೆಟ್ಟಿ, ಹೇಮಂತ್ ಎಂ ರಾವ್ ನಿರ್ಮಿಸಿದ್ದಾರೆ ಮತ್ತು ಅರವಿಂದ್ ಅಯ್ಯರ್, ಆರೋಹಿ ನಾರಾಯಣ್, ಪ್ರಿಯಾಂಕಾ ತಿಮ್ಮೆಶ್, ಮತ್ತು ಅಚ್ಯುತ್ ಕುಮಾರ್ ಮುಖ್ಯ ಪಾತ್ರಗಳಲ್ಲಿದ್ದಾರೆ. ಭಾರತದಲ್ಲಿ ಮತ್ತು 200 ದೇಶಗಳು ಹಾಗು ಪ್ರಾಂತ್ಯಗಳಲ್ಲಿನ ಪ್ರೈಮ್ ಸದಸ್ಯರು 2020 ರ ಅಕ್ಟೋಬರ್ 29 ರಿಂದ ಭೀಮಸೇನ ನಲಮಹರಾಜವಿನ ವರ್ಲ್ಡ್ ಪ್ರೀಮಿಯರ್ ಪ್ರದರ್ಶನವನ್ನು ಸ್ಟ್ರೀಮ್ ಮಾಡಬಹುದು.
“ಭೀಮಸೇನ ನಳಮಹಾರಾಜಾ ಜೀವನದ ಆರು ಸುಂದರ ಹಂತಗಳನ್ನು ಅಥವಾ ಆರು ರಸಗಳನ್ನು ಕೇಂದ್ರೀಕರಿಸುತ್ತದೆ : ಸಿಹಿ, ಹುಳಿ, ಉಪ್ಪು, ಕಹಿ, ಕಟುವಾದ ಮತ್ತು ಸಂಕೋಚ, ಇವೆಲ್ಲವನ್ನು ಮನಬಂದಂತೆ ನೇಯ್ದಿ ಜೀವನವನ್ನು ರೂಪಿಸಲ್ಪಟ್ಟಿದೆ” ಎಂದು ನಿರ್ದೇಶಕ ಕಾರ್ತಿಕ್ ಸರಗೂರ್ ಹೇಳಿದರು “ಹೃದಯವನ್ನು ಬೆಚ್ಚಗಾಗಿಸುವ ಈ ನಾಟಕದಲ್ಲಿ, ಆಹಾರದೊಂದಿಗೆ ಬೆರೆತ ನೆನಪುಗಳನ್ನು ಶೋಧಿಸುತ್ತಾ ಕುಟುಂಬದ ವಿಭಿನ್ನ ಭಾವನೆಗಳನ್ನು ಅನ್ವೇಷಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಪ್ರಸಿದ್ಧ ನುಡಿಮಾತಿನಂತೆ – ಫ್ಯಾಮಿಲಿ ಥಟ್ ಈಟ್ಸ್ ಟುಗೆದರ್, ಸ್ಟೇಸ್ ಟುಗೆದರ್, ಆಹಾರವು ಜನರನ್ನು ಒಂದುಗೂಡಿಸುತ್ತದೆ ಎಂದು ಹೇಳಲಾಗುತ್ತದೆ ಮತ್ತು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಗ್ಲೋಬಲ್ ಪ್ರೇಕ್ಷಕರಿಗಾಗಿ ಈ ರುಚಿಕರವಾದ ಕಥೆಯನ್ನು ತರಲು ನಾವು ಸಂತೋಷಪಡುತ್ತೇವೆ. ”
ಅಡುಗೆ ಮಾಡುವುದು ನನ್ನಗೆ ತುಂಬಾ ಇಷ್ಟಾ ಮತ್ತು ಭೀಮಸೇನ ನಳಮಹಾರಾಜಾ ಚಿತ್ರದಲ್ಲಿ, ಸಾಂಪ್ರದಾಯಿಕ ಅಡುಗೆಯನ್ನು ಅನುಭವಿಸಲು ಮತ್ತು ಅನ್ವೇಷಿಸಲು ಹಾಗು ಅದರ ಹಿಂದಿನ ಇತಿಹಾಸವನ್ನು ತಿಲಿಯಲು ಅವಕಾಶ ಸಿಕ್ಕಿದ್ದು ನನಗೆ ತುಂಬಾ ಖುಷಿಕೊಟ್ಟಿದೆ. ” ಎಂದು ನಟ ಅರವಿಂದ್ ಅಯ್ಯರ್ ಹೇಳಿದರು “ಈ ಚಿತ್ರವು ಕುಟುಂಬ, ಸಂಬಂಧಗಳು ಮತ್ತು ಆಹಾರ ಹೇಗೆ ಒಂದು ಕುಟುಂಬವನ್ನು ಒಟ್ಟಿಗೆ ಸೇರಿಸುತ್ತದೆ ಎಂಬುದರ ಬಗೆ ಚಿತ್ರೀಕರಿಸಲಾಗಿದೆ. ಕುಟುಂಬದ ಮೌಲ್ಯಗಳನ್ನು ಪ್ರೇಕ್ಷಕರಿಗೆ ತೋರಿಸುವುದಲ್ಲದೆ, ಈ ಚಿತ್ರ ವೀಕ್ಷಕರಿಗೆ ಭಾರತದ ಬೇಕರಿಯ ಇತಿಹಾಸವನ್ನು ತೋರಿಸುತ್ತಾ ಒಂದು ಕುತೂಹಲಕಾರಿ ವೀಕ್ಷಣೆಯನ್ನಾಗಿ ಮಾಡುತ್ತದೆ. ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಭೀಮಸೇನ ನಳಮಹಾರಾಜಾ ವರ್ಲ್ಡ್ ಪ್ರೀಮಿಯರ್ ಅನ್ನು ಎಲ್ಲಾ ವಯಸ್ಸಿನವರು ಹಾಗು ಗಡಿಯುದ್ದಕ್ಕೂ, ಸ್ಟ್ರೀಮ್ ಮಾಡಲು ಮತ್ತು ಸರಿಯಾದ ಸಂದೇಶವನ್ನು ಆನಂದಿಸಲು ಸಾಧ್ಯವಾಗುತ್ತದೆ ಎಂದು ನನಗೆ ಖುಷಿಯಾಗಿದೆ. ”
ಸುದ್ದಿ ದಿನ ವಾಟ್ಸಪ್. 8073105526

ದಿನದ ಸುದ್ದಿ
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಟ್ಯಾಂಕರ್ ನೀರನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದು, ಈ ಬಗ್ಗೆ ಜಿಲ್ಲಾ ಅಂರ್ತಜಲ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರಸ್ವತಿ ನಗರ ‘ಸಿ’ ಬ್ಲಾಕ್ನ ಎಲ್ಲಾ ನಿವಾಸಿಗಳು ಒತ್ತಾಯಿಸಿದ್ದಾರೆ.
ಸರಸ್ವತಿ ನಗರ ಬ್ಲಾಕ್ನ ನಿವಾಸಿ ತಮ್ಮ ಮನೆಯ ಬೋರ್ ವೆಲ್ ನಿಂದ ಒಂದೇ ಸಮನೆ ಸತತವಾಗಿ 4-5 ವರ್ಷಗಳಿಂದ ಸರತಿ ಸಾಲಿನಲ್ಲಿ ಟ್ಯಾಂಕರ್ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಬಾರಿ ವಾಣಿಜ್ಯ ಉದ್ದೇಶಕ್ಕಾಗಿ ತಮ್ಮ ಪ್ರಾಧಿಕಾರದ ಅನುಮತಿ ಪಡೆಯದೆ ನೀರಿನ ಮಾರಾಟ ಮಾಡುತ್ತಿರುತ್ತಾರೆ. ಈ ವಿಷಯವಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಬೋರ್ ವೆಲ್ ಗಳಲ್ಲಿ ಕಛೇರಿಯ ಹಿರಿಯ ಭೂ ವಿಜ್ಞಾನಿಗಳು ಹಲವು ಬಾರಿ ನೋಟಿಸ್ ನೀಡಿದ್ದರೂ, ಅದನ್ನು ಲೆಕ್ಕಿಸದೆ ದಿನೇದಿನೇ ಹೆಚ್ಚುಹೆಚ್ಚು, ಟ್ಯಾಂಕರ್ ನೀರನ್ನು ಮಾರಾಟ ಮಾಡುತ್ತಿದ್ದಾರೆ.
ಈ ಕುರಿತು ಕಾಲೋನಿಯ ನಿವಾಸಿಗಳು ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಜತೆಗೂಡಿ ಚಂದ್ರಶೇಖರಪ್ಪ ಅವರಲ್ಲಿ ಹಲವು ಬಾರಿ ವಿನಂತಿಸಿದರೂ, ಲೆಕ್ಕಿಸದೆ ತಮ್ಮ ನೀರಿನ ಮಾರಾಟದ ಅರ್ಭಟವನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಕಾಲೋನಿಯ ವಸತಿ ಪ್ರದೇಶದಿಂದ ಕೈಗಾರಿಕಾ ಪ್ರದೇಶವಾಗಿ ಮಾರ್ಪಟ್ಟಿದ್ದು, ಇಲ್ಲಿನ ಮಕ್ಕಳು ವೃದ್ಧರು ರಸ್ತೆಗಳಲ್ಲಿ ಓಡಾಡುವುದು ತುಂಬಾ ಕಷ್ಟವಾಗಿರುತ್ತದೆ, ಇದಲ್ಲದೇ ನಮ್ಮ ಕಾಲೋನಿಯ ಬೋರ್ ವೆಲ್ ಗಳಲ್ಲಿ ನೀರಿನ ಮಟ್ಟ ದಿನೇ-ದಿನೇ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಲಿದೆ ಎಂದು ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ ದಾವಣಗೆರೆಯ ಬಹಳ ಕಾಲೋನಿಗಳಲ್ಲಿ ಮನೆ ಬೋರ್ ವೆಲ್ ಗಳಿಂದ ನೀರಿನ ಮಾರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಆಯಾ ಕಾಲೋನಿಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಾಧಿಕಾರದ ಅನುಮತಿ ಪಡೆಯದೆ ವಾಣಿಜ್ಯ ಉದ್ದೇಶಕ್ಕಾಗಿ ನೀರು ಮಾರಾಟ ಮಾಡುತ್ತಿರುವ ಚಂದ್ರಶೇಖರಪ್ಪರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಬೇಕೆಂದು ಸರಸ್ವತಿ ನಗರ ‘ಸಿ’ ಬ್ಲಾಕಿನ ಎಲ್ಲಾ ನಿವಾಸಿಗಳು ಮನವಿ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆಯಾಗುತ್ತಿದ್ದಂತೆ, ಸಭೆ ಕರೆದು ತಕರಾರು ಪರಿಹರಿಸುವುದಾಗಿ, ತಿಳಿಸಿದರು.
ರಾಜ್ಯ ಸರ್ಕಾರ, ಪಂಚ ಖಾತ್ರಿ ಯೋಜನೆಗಳ ಅನುಷ್ಠಾನಕ್ಕಾಗಿ, ಸಮಿತಿ ರಚಿಸಿ, ರಾಜ್ಯದ ತೆರಿಗೆದಾರರ ಹಣವನ್ನು, ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಶಾಸಕರು, ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ, ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೇಲ್ವಿಚಾರಣಾ ಸಮಿತಿ ರದ್ದು ಪಡಿಸುವಂತೆ, ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ದೂರು ನೀಡಿದರು.
ಖಾತ್ರಿ ಯೋಜನೆಗಳ ಅನುಷ್ಟಾನಕ್ಕೆ ರಚಿಸಲಾಗಿರುವ, ಕಾಂಗ್ರೆಸ್ ಕಾರ್ಯಕರ್ತರ ಸಮಿತಿಗಳನ್ನು ರದ್ದು ಪಡಿಸಿ, ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ, ಪ್ರತಿಪಕ್ಷ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಸದಸ್ಯರು ವಿಧಾನಸಭೆಯಲ್ಲಿ ಧರಣಿ ಮುಂದುವರೆಸಿದ್ದರಿAದ, ಸದನ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿತ್ತು.
ಇಂಧನ ಬೆಲೆ ಏರಿಕೆ, ಸಿಬ್ಬಂದಿ ವೇತನ ಹಾಗೂ ವಾಹನ ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ಉಂಟಾದ, ಆರ್ಥಿಕ ಹೊರೆ ತಗ್ಗಿಸಲು, ಕಳೆದ ಜನವರಿಯಲ್ಲಿ ಬಸ್ ಪ್ರಯಾಣ ದರವನ್ನು, ಶೇಕಡ 15ರಷ್ಟು ಹೆಚ್ಚಿಸಲಾಗಿದೆ ಎಂದು, ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿ ಶಾಸಕ ಕೇಶವಪ್ರಸಾದ್ ಅವರ ಪ್ರಶ್ನೆಗೆ ಸಚಿವರು, ಉತ್ತರಿಸಿದರು.
ರಾಜ್ಯ ಸಾರಿಗೆ ಸಂಸ್ಥೆ ಅಧೀನದ, ನಾಲ್ಕು ಸಾರಿಗೆ ನಿಗಮಗಳು, 5ಸಾವಿರದ 200 ಕೋಟಿ ರೂಪಾಯಿ ನಷ್ಟದಲ್ಲಿವೆ. ನಿಗಮಗಳ ಪುನಃಶ್ವೇತನಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು, ಸಮರ್ಥಿಸಿಕೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.
ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ; ಇಲ್ಲಿವೆ ಪ್ರಮುಖಾಂಶಗಳು
-
ದಿನದ ಸುದ್ದಿ5 days ago
ಮುಂದಿನ ನಾಯಕರಾಗಿ ತಯಾರಾಗಿ : ಪ್ರೊ ಇಗ್ನಿಸಿಯಸ್
-
ದಿನದ ಸುದ್ದಿ3 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ3 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ2 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ17 hours ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ16 hours ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ16 hours ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’