ದಿನದ ಸುದ್ದಿ
ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿಯ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಇರಲು ಹೇಗೆ ಸಾಧ್ಯ? : ಸಿದ್ದರಾಮಯ್ಯ ಕಿಡಿ
ಸುದ್ದಿದಿನ ಡೆಸ್ಕ್ : ಕಳೆದ ಮೂರು ತಿಂಗಳುಗಳ ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದ ರೈತರು ಬೆಳೆ-ಮನೆ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲು ಮುಖ್ಯಮಂತ್ರಿ ಅವರು ತಕ್ಷಣ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕೆಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಒತ್ತಾಯಿಸುತ್ತಿದರು.
ಭಾನುವಾರ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಒಂದೆಡೆ ಕೊರೊನಾ, ಇನ್ನೊಂದೆಡೆ ಪ್ರವಾಹ, ಮತ್ತೊಂದೆಡೆ ಹಾಳಾಗಿ ಹೋಗಿರುವ ಶಾಂತಿ ಮತ್ತು ಸುವ್ಯವಸ್ಥೆ, ಇವೆಲ್ಲದರ ನಡುವೆ ಭ್ರಷ್ಟಾಚಾರದ ಹಗರಣಗಳು. ಈ ಬಗ್ಗೆ ಚರ್ಚೆ ನಡೆಸಲು ವಿಧಾನಮಂಡಲವೇ ಸೂಕ್ತ ವೇದಿಕೆ. ಆದರೆ ವಿರೋಧ ಪಕ್ಷಗಳನ್ನು ಎದುರಿಸುವ ಧೈರ್ಯವೇ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದರು.
ಇಲ್ಲಿಯ ವರೆಗೆ ಸರ್ಕಾರ ಪ್ರವಾಹದ ನಷ್ಟದ ಸಮೀಕ್ಷೆನೇ ಮಾಡಿಲ್ಲ. ಮುಖ್ಯಮಂತ್ರಿಗಳು ವಿಮಾನದಲ್ಲಿ ನೋಡಿ ಹೋದರು, ಕಂದಾಯ ಸಚಿವರು ಕಾಟಾಚಾರಕ್ಕೆ ಭೇಟಿ ನೀಡಿದರು, ಜಿಲ್ಲಾ ಸಚಿವರಾಗಲಿ, ಅಧಿಕಾರಿಗಳು ಜನರ ಬಳಿ ಹೋಗಿಯೇ ಇಲ್ಲ. ಇಡೀ ಸರ್ಕಾರವೇ ನೆರೆಯಲ್ಲಿ ಕೊಚ್ಚಿಕೊಂಡ ಹೋಗಿರುವಂತಹ ದುಸ್ಥಿತಿ ಇದೆ.
ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ, ನೆರೆನೀರಿನ ಶೀತ ಇಳಿಯದೆ ಹಿಂಗಾರು ಬಿತ್ತನೆ ಮಾಡೋ ಹಾಗಿಲ್ಲ. ಎರಡೂ ಬೆಳೆಗಳನ್ನು ಕಳೆದುಕೊಂಡಿರುವ ರೈತರ ಕಷ್ಟಗಳನ್ನು ಕೇಳುವವರೇ ಇಲ್ಲ. ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿ ಹೋಗಿರುವ ಸರ್ಕಾರ.
ಕಳೆದ ವಾರ ಬಾದಾಮಿಗೆ ಭೇಟಿ ನೀಡಿದ್ದೆ. ಇಂದು ಬೀದರ್ನ ಬಸವಕಲ್ಯಾಣ, ಹುಮ್ನಾಬಾದ್ ಮತ್ತಿತರ ಕಡೆ
ಹೋಗಿದ್ದೆ. ನಾಳೆ ಯಾದಗಿರಿಗೆ ಹೋಗಿ ಅಲ್ಲಿಂದ ಕಲ್ಬುರ್ಗಿಗೆ ಹೋಗುತ್ತೇನೆ. ನಾನು ಕಣ್ಣಾರೆ ನೋಡಿದ್ದು ಮತ್ತು ಕೇಳಿದ್ದನ್ನು ಆಧರಿಸಿ ಮುಖ್ಯಮಂತ್ರಿ ಅವರಿಗೆ ವಿವರವಾದ ಪತ್ರ ಬರೆಯುತ್ತೇನೆ.
ಒಂದು ಅಂದಾಜಿನ ಪ್ರಕಾರ ಸುಮಾರು ಆರುಕಾಲು ಲಕ್ಷ ಎಕರೆಯಲ್ಲಿ ರೈತರು ಬೆಳೆದ ಬೆಳೆ ಕಳೆದುಕೊಂಡಿದ್ದಾರೆ. ಕೇವಲ ಬೆಳೆಹಾನಿಯಿಂದಲೇ ರೂ. 1,500 ಕೋಟಿ ನಷ್ಟವಾಗಿದೆ. 1700 ಮನೆಗಳು ಬಿದ್ದಿವೆಯಂತೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಲ್ಲಿಯ ವರೆಗೆ ನಯಾಪೈಸೆ ಪರಿಹಾರವನ್ನೇ ಕೊಟ್ಟಿಲ್ಲ.
ಕೇಂದ್ರಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಿದರೆ ರೈತರ ನಷ್ಟ ಭರಿಸಲಾಗದು. ನಮ್ಮ ಸರ್ಕಾರ ಒಂದು ಹೆಕ್ಟೇರ್ ಗೆ ರೂ.25,000 ಪರಿಹಾರ ಕೊಟ್ಟಿತ್ತು. ಅದೇ ರೀತಿ ಕೊಡಬೇಕು. ಕಳೆದ ವರ್ಷದ ಪ್ರವಾಹದ ಹಾನಿಗೆ ಇಲ್ಲಿಯ ವರೆಗೆ ಪರಿಹಾರ ನೀಡದ ರಾಜ್ಯ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ?.
ಕಾಂಗ್ರೆಸ್ ಪಕ್ಷದಲ್ಲಿ ಯಾವ ಭಿನ್ನಮತವೂ ಇಲ್ಲ,
ಅವೆಲ್ಲ ನಡೆಯುತ್ತಿರುವುದು ಬಿಜೆಪಿಯಲ್ಲಿ. ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ದ ಕ್ರಮಕೈಗೊಳ್ಳುವ ತಾಕತ್ ಇಲ್ಲದ ಪಕ್ಷಕ್ಕೆ ನಮ್ಮ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕಿದೆ?
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ನಿರ್ಧರಿಸುತ್ತದೆ. ಉಳಿದವರು ಏನೇ ಹೇಳಿದರೂ ಇದೇ ಅಂತಿಮ ಸತ್ಯ. ಇದನ್ನು ನಾನೇ ಹೇಳುತ್ತಿರುವುದರಿಂದ ಇದರ ಬಗ್ಗೆ ಬೇರೆ ಚರ್ಚೆ ಬೇಡ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾವಿ ಬಟ್ಟೆ ಬದಲಾಯಿಸುವುದು ಒಳ್ಳೆಯದು. ಅವರಿಂದಾಗಿ ಆ ಬಟ್ಟೆಗೆ ಕಳಂಕ ಬಂದಿದೆ. 27 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿಯ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಇರಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ5 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ5 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoವಸತಿ ಯೋಜನೆಗೆ ಅರ್ಜಿ ಆಹ್ವಾನ

