Connect with us

ದಿನದ ಸುದ್ದಿ

ದೀಪಾವಳಿ ಅಲ್ಲ ‘ದೀಪ ದಾನ ಉತ್ಸವ’ ಆಚರಿಸೋಣ

Published

on

  • ವಿಶ್ವನಾಥ ಎಸ್ ಕರಡಿ

ಬೌದ್ಧರು(ಬಹುಜನರು)ಆಚರಣೆ ಮಾಡಬೇಕಿರುವುದು ದೀಪಾವಳಿ ಹಬ್ಬ ಅಲ್ಲ ಅದರ ಬದಲಾಗಿ ‘ದೀಪ ದಾನ ಉತ್ಸವ’ವನ್ನು ಆಚರಿಸಬೇಕು.

ಈ ದೀಪ ಧಾನ ಉತ್ಸವದ ಹಿನ್ನೆಲೆ ಏನೆಂದರೆ ಕಪಿಲವಸ್ತುವಿನ ರಾಜಕುಮಾರ ಸಿದ್ದಾರ್ಥ ಮನೆಯನ್ನು ಬಿಟ್ಟು ಹೋಗಿ ವೇಸಾಕ ಪೂರ್ಣಿಮೆಯಂದು ಭೋದಿ ಪ್ರಾಪ್ತಿ ಮಾಡಿಕೊಂಡು ಬುದ್ದ ಆಗುತ್ತಾರೆ. ಬುದ್ದ ಆದ ನಂತರ ಅವರು ಮನೆ ಬಿಟ್ಟು ಸತತ 17 ವರುಷಗಳ ನಂತರ ಕಪಿಲವಸ್ತುವಿಗೆ ಬುದ್ಧರಾಗಿ ಬಂದಾಗ ಊರಿನ ತುಂಬಾ ದೀಪಗಳನ್ನು ಪ್ರಜ್ವಲಿಸುವ ಮುಖಾಂತರ ಬುದ್ಧರನ್ನು ಸ್ವಾಗತಿಸುತ್ತಾರೆ.

ಸಾಮ್ರಾಟ ಅಶೋಕನು ಕಳಿಂಗ ಯುದ್ಧದ ನಂತರ ಶಸ್ತ್ರ ತ್ಯಾಗ ಮಾಡಿ ಬೌದ್ದ ಧಮ್ಮಕ್ಕೆ ಶರಣಾಗಿ ಒಂದು ತಿಂಗಳು ಬೌದ್ದ ಸ್ಥಳಗಳಿಗೆ ಭೇಟಿ ಕೊಡುತ್ತಾನೆ. ಈ ಭೇಟಿಯ ನಂತರ ಕಾರ್ತಿಕ ಅಮವಾಸೆಯ ದಿನ ಬುದ್ಧರನ್ನು ಕಪಿಲವಸ್ತುವಿಗೆ ಸ್ವಾಗತಿಸಿದ ದಿನವನ್ನು ಸಾಮ್ರಾಟ ಅಶೋಕನು ‘ದೀಪ ದಾನ ಉತ್ಸವ‘ ಎಂಬ ಆಚರಣೆಯನ್ನು ಮಾಡುತ್ತಾನೆ.

ದೀಪ ಧಾನ ಉತ್ಸವದಲ್ಲಿ ಹೊಸ ಬಟ್ಟೆ ಧರಿಸಿ ಬುದ್ದ, ಧಮ್ಮ, ಸಂಘಕ್ಕೆ ವಂದಿಸಿ ಸಿಹಿ ತಿಂಡಿ ಮಾಡಿ ತಿಂದು ಸ್ನೇಹಿತರು, ಬಂಧುಗಳು ತಂದೆ, ತಾಯಿ, ಮಕ್ಕಳು ಎಲ್ಲರೂ ಜ್ಞಾನದ ಸಂಕೇತವಾಗಿರುವ ದೀಪವನ್ನು ಒಬ್ಬರಿಗೊಬ್ಬರು ವಿನಿಮಯ ಮಾಡಿಕೊಂಡು ಈ ಹಬ್ಬವನ್ನು ಆಚರಿಸಬೇಕು. ಈ ಆಚರಣೆಯ ಉದ್ದೇಶ ಜ್ಞಾನವನ್ನು ವಿನಿಮಯ ಮಾಡಿಕೊಳ್ಳುವುದಾಗಿದೆ.

ಆದರೆ ಇಂದು ದೀಪ ದಾನ ಉತ್ಸವವನ್ನು ವಿಕೃತಗೊಳಿಸಿ ಮನುವಾದಿಗಳು ದೀಪಾವಳಿ ಮಾಡಿದ್ದಾರೆ ಈ ಹಬ್ಬದಲ್ಲಿ ಪಟಾಕಿ ಸಿಡಿಸಿ ಶಬ್ದಮಾಲಿನ್ಯ ಉಂಟುಮಾಡಿ ಲಕ್ಷ್ಮಿ ಪೂಜೆ ಮಾಡುತ್ತಾರೆ ಮತ್ತು ದನ ಪ್ರಾಪ್ತಿಗಾಗಿ ಬೇಡಿಕೊಳ್ಳುತ್ತಾರೆ. ಬುದ್ಧರ ತಾಯಿ ಮಹಾಮಾಯೆಯನ್ನು ಲಕ್ಷ್ಮಿ ದೇವಿಯನ್ನಾಗಿ ವಿಕೃತಿಸಿದ್ದು ಕೂಡ ಇದೆ.

ಒಟ್ಟಿನಲ್ಲಿ ಬಾಬಾಸಾಹೇಬರು ಹೇಳಿದಂತೆ ಕ್ರಾಂತಿಗೆ ಪ್ರತಿಕ್ರಾಂತಿಯನ್ನು ನಾವು ಸರಿಯಾಗಿ ತಿಳಿದುಕೊಂಡು ನಮ್ಮ ನೈಜ್ಯ ಸಂಸ್ಕೃತಿಯನ್ನು ಆಚರಿಸಿ ಸಂಭ್ರಮಿಸುವ ಅವಶ್ಯಕತೆ ಇದೆ. ಜಂಬೂದ್ವೀಪದ ಸಂಸ್ಕೃತಿಯಲ್ಲಿ ನಾವು ಮಾಡಿರುವ ಕ್ರಾಂತಿಗೆ ಮನು ಸಂತಾನಿಗಳು ಪ್ರತಿಕ್ರಾಂತಿ ಮಾಡಿದ್ದಾರೆ ಆ ಪ್ರತಿಕ್ರಾಂತಿಯ ವೈಭವಿಕೃತ ಹಬ್ಬಗಳನ್ನು ಆಚರಿಸುತ್ತಿದ್ದೇವೆ ಎಂಬುದು ದುಃಖದ ವಿಷಯ. ಅದರಲ್ಲೂ ಬಾಬಾಸಾಹೇಬರ ಹೋರಾಟದ ಬೆವರಿನ ಫಲ ಉಣ್ಣುತ್ತಿರುವ ನೌಕರಸ್ಥರೇ ಇದಕ್ಕೆ ಬೆನ್ನು ಬಿದ್ದಿದ್ದಾರೆ.

ಈ ದೀಪಾವಳಿ ಆಸುಪಾಸು #ಬಲಿಪಾಡ್ಯ ಎಂದು ಕೂಡ ಆಚರಿಸುವುದುಂಟು ಆ ದಿನವನ್ನು ಮೂಲನಿವಾಸಿ ದಾನವ(ದಾನ ನೀಡುವವರು)ರಾಜ ಬಳಿ ಚಕ್ರವರ್ತಿಯನ್ನು ವಾಮನ ಎನ್ನುವ ಬ್ರಾಹ್ಮಣ ಮೋಸದಿಂದ ಕೊಂದ ದಿನವನ್ನೂ ಕೂಡ ಮನು ಸಂತಾನಿಗಳು ಹಬ್ಬವೆಂದು ಆಚರಿಸುವುದುಂಟು. ಬಳಿ ಚಕ್ರವರ್ತಿ ಒಬ್ಬ ದಕ್ಷ ಆಡಳಿತಗಾರ ಹಾಗೂರೈತಾಪಿ ರಾಜ ಆಗಿದ್ದನು.

ಆದರೂ ಅವನನ್ನು ಮೋಸದಿಂದ ಕೊಲ್ಲಲಾಯಿತು ಎಂದು ಹೇಳುವ ಬದಲು ವಾಮನ ಎಂಬುವವ ಮೂರು ಹೆಜ್ಜೆ ಜಾಗ ದಾನ ಬೇಡಿದ ಆಗ ಒಂದು ಹೆಜ್ಜೆ ಭೂಮಿಮೇಲೆ ಇನ್ನೊಂದು ಆಕಾಶಕ್ಕೆ ಮತ್ತೊಂದು ಬಳಿ ಚಕ್ರವರ್ತಿಯ ತಲೆ ಮೇಲೆ ಇಟ್ಟು ಪಾತಾಳಕ್ಕೆ ತಳ್ಳಿದ ಎಂದು ಬುರುಡೆ ಬಿಟ್ಟು ಹಬ್ಬ ಆಚರಿಸುತ್ತಾರೆ. ಪುರಾಣದ ಕಥೆ ಏನೇ ಇರಲಿ ಆದರೆ ಆ ಕಥೆಯಿಂದ ನಮಗೆ ಅವರು ಮೋಸ ಮಾಡಿದ್ದಾರೆ ಮತ್ತು ಈಗಲೂ ಮಾಡುತ್ತಲಿದ್ದಾರೆ ಎಂಬ ವಿಷಯ ಸ್ಪಷ್ಟವಾಗುತ್ತದೆ.

ಒಟ್ಟಿನಲ್ಲಿ ನಾವು ಮನುವಾದಿಗಳು ನಮ್ಮನ್ನು ಮೂರ್ಖರನ್ನಾಗಿಸಲು ಹೆಣೆದಿರುವ ಮೋಸದ ಕಥೆಗಳನ್ನು ನಂಬದೆ ಅವರ ಶ್ರೇಷ್ಠತ್ವ ಸಾರುವ ಅರ್ಥ ಇಲ್ಲದ ವ್ಯರ್ಥ ಹಬ್ಬಗಳನ್ನು ಆಚರಿಸದೆ ನಮ್ಮದೇ ಇತಿಹಾಸ ಇರುವ ನಮ್ಮ ಸಂಸ್ಕೃತಿಯ ಹಬ್ಬಗಳನ್ನು ಆಚರಿಸಿ ನಮ್ಮ ಇತಿಹಾಸ ನೆನಪಿಸಿಕೊಳ್ಳುತ್ತಾ ಮುಂದಿನ ಪೀಳಿಗೆಗೆ ಮಾರ್ಗದರ್ಶನ ಮಾಡುತ್ತಾ ಬುದ್ದ, ಬಸವ, ಅಂಬೇಡ್ಕರರ ಹೋರಾಟದ ರಥವನ್ನು ಗುರಿ ಮುಟ್ಟಿಸುವ ಕಡೆಗೆ ಒಯ್ಯೋಣ ಬನ್ನಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending