ದಿನದ ಸುದ್ದಿ
ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್ ಕೈವಾಡವಿದೆ : ಸಿದ್ದರಾಮಯ್ಯ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/01/Siddaramaiah-suddidina-009.jpg&description=ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್ ಕೈವಾಡವಿದೆ : ಸಿದ್ದರಾಮಯ್ಯ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/01/Siddaramaiah-suddidina-009.jpg&description=ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್ ಕೈವಾಡವಿದೆ : ಸಿದ್ದರಾಮಯ್ಯ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ, ಬೆಂಗಳೂರು : ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ.
ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ ಎಂದರು.
ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ.
ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್ ಎಸ್ ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್ ಎಸ್ ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.
ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ.
ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?
ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ.
ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ?
ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ.
ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್ ಎಸ್ ಎಸ್, ಬಿಜೆಪಿಯವರ ಹುನ್ನಾರವಿದೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ.
ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ.
ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ.
ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್ ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ ಹೊರತು ಕರ್ನಾಟಕದ ಯಾವೊಬ್ಬ ನಾಯಕರಲ್ಲ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಷ್ಟೊಂದು ಪ್ರಭಾವಶಾಲಿಯಾಗಿದ್ದರೆ ಅವರು ಯಾಕೆ ಕಾಂಗ್ರೆಸ್ ಬಿಟ್ಟರಂತೆ? ಅವರ ಈಗಿನ ಮಾತು ಮತ್ತು ನಡವಳಿಕೆಗಳನ್ನು ನೋಡಿದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಒಳಗಿಂದೊಳಗೆ ವಿರೋಧಿಸಿರಬಹುದೇ ಎಂಬ ಸಂಶಯ ನನ್ನನ್ನು ಕಾಡುತ್ತಿದೆ.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು?
ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ? ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ4 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ7 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ1 day agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ6 hours agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ5 hours agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

