ದಿನದ ಸುದ್ದಿ
ಅಯೋಡಿನ್ ಕೊರತೆಯಿಂದ ಮಕ್ಕಳ ವಿಕಾಸಕ್ಕೆ ಅಡ್ಡಿ : ಡಾ. ಎಲ್.ಡಿ. ವೆಂಕಟೇಶ್
ಸುದ್ದಿದಿನ,ದಾವಣಗೆರೆ : ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ನಾವು ನಿತ್ಯ ಸೇವಿಸುವ ಆಹಾರದಲ್ಲಿ ಅತೀ ಮುಖ್ಯವಾಗಿ ನಮ್ಮ ದೇಹಕ್ಕೆ ಅವಶ್ಯಕವಾಗಿರುತ್ತದೆ, ಅಯೋಡಿನ್ ಕೊರತೆಯಿಂದ ಮಕ್ಕಳ ವಿಕಾಸಕ್ಕೆ ಅಡ್ಡಿಯಾಗುವುದಲ್ಲದೆ, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ, ತಾಲ್ಲೂಕು ಆಡಳಿತದ ಸಹಯೋಗದಲ್ಲಿ ತಹಸಿಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಅಯೋಡಿನ್ ಸಪ್ತಾಹ ಮತ್ತು ಕೋವಿಡ್-19 ಲಸಿಕೆ ಕುರಿತ ತಾಲ್ಲೂಕು ಮಟ್ಟದ ಟಾಸ್ಕ್‍ಫೋರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ನಾವು ನಿತ್ಯ ಸೇವಿಸುವ ಆಹಾರದಲ್ಲಿ ಅತೀ ಮುಖ್ಯವಾಗಿ ನಮ್ಮ ದೇಹಕ್ಕೆ ಬೇಕು. ಹಾಲು, ಸಮುದ್ರದ ಮೀನು, ಅಯೋಡಿನ್ ಇರುವಂತಹ ತರಕಾರಿಗಳನ್ನು ತಿನ್ನುವುದರಿಂದ ಈ ಪೋಷಕಾಂಶ ಪಡೆಯಬಹುದು. ಅಯೋಡಿನ್ ಕೊರತೆಯಾದರೆ ಮಹಿಳೆಯರಲ್ಲಿ ಪದೆ ಪದೇ ಗರ್ಭಪಾತವಾಗುತ್ತದೆ. ನಿಶಕ್ತಿ, ಬುದ್ಧಿ ಮಾಂಧ್ಯತೆ, ಕಿವುಡುತನ, ಮಂಕುತನದಿಂದ ಬಳಲುತ್ತಾರೆ.
ಸಾಮಾನ್ಯವಾಗಿ ಅಯೋಡಿನ್ ಕೊರತೆಯಿಂದ ಉಂಟಾಗುವ ಸಮಸ್ಯೆಗಳು ಮಕ್ಕಳು, ವಯಸ್ಕರರು, ಗರ್ಭಿಯರಿಗೆ ಬರುತ್ತದೆ. ಗಳಗಂಡ ರೋಗವು ಮನುಷ್ಯನಿಗೆ ಕುತ್ತಿಗೆ ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ. ಅಯೋಡಿನ್‍ಯುಕ್ತ ಉಪ್ಪಿನಲ್ಲಿ 15 ರಿಂದ 30ಪಿಪಿಎಂ ಪ್ರಮಾಣದಷ್ಟು ಅಯೋಡಿನ್ ಇರಬೇಕು. ವಯಸ್ಕರಿಗೆ 150ಮೈಕ್ರೋಗ್ರಾಂ, ಗರ್ಭಿಣಿಯರಿಗೆ 200 ಮೈಕ್ರೋಗ್ರಾಂ, ಮಕ್ಕಳಿಗೆ 120ಮೈಕ್ರೋಗ್ರಾಂ ನಷ್ಟು ಅಯೋಡಿನ್‍ಯುಕ್ತ ಉಪ್ಪು ಬಳಸಬೇಕು.
ಇದನ್ನು ನಾವು ನಮ್ಮ ಮನೆಯಲ್ಲಿಯೇ ಪರೀಕ್ಷಿಸಬಹುದು. ಮನೆಯಲ್ಲಿರುವ ಉಪ್ಪಿನ ಮೇಲೆ ಅಕ್ಕಿಗಂಜಿ ಅಥವಾ ನಿಂಬೆರಸ ಹಾಕಿದರೆ ನೀಲಿ ಬಣ್ಣಕ್ಕೆ ತಿರುಗಿದರೆ ಅದರಲ್ಲಿ ಅಯೋಡಿನ್ ಅಂಶ ಇದೆ ಎಂದು ತಿಳಿಯಬೇಕು.ಇಲಾಖೆಯಿಂದಲೇ ಅಯೋಡಿನ್ ಕಿಟ್‍ನೀಡಿ ಪ್ರತೀ ಮನೆ ಮತ್ತು ಹಾಸ್ಟೆಲ್, ಅಂಗನವಾಡಿ ಕೇಂದ್ರಗಳಲ್ಲಿ ಇದನ್ನು ಪರೀಕ್ಷಿಸಲಾಗುತ್ತದೆ ಎಂದರು.
ಕೋವಿಡ್-19 ಲಸಿಕೆ ಕಾರ್ಯಕ್ರಮವು ಪ್ರಥಮ ಹಂತದಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯವರಿಗೆ ನೀಡಲಾಗುತ್ತದೆ. ನಂತರದಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆಯನ್ನು ಶೀತಲ ಸರಪಳಿಯಲ್ಲಿ ಶೇಖರಣೆ ಮಾಡಿ ಇಡಲಾಗುತ್ತದೆ. ಈಗಾಗಲೇ ತಾಲ್ಲೂಕು ಮತ್ತು ಜಿಲ್ಲೆಯ ಬೇಡಿಕೆಯನ್ನು ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಾಗಿದೆ.
ಅದರಂತೆ ದಾವಣಗೆರೆ ತಾಲ್ಲೂಕಿನ ಸರ್ಕಾರಿ 2095, ಖಾಸಗಿ 2121 ಡೋಸ್ ಬೇಕಾಗುತ್ತದೆ ಅದರಂತೆ ಖಾಸಗಿ ಮತ್ತು ಸರ್ಕಾರಿ ಕರ್ತವ್ಯ ನಿರ್ವಹಿಸುವ ಆರೋಗ್ಯ ಸಿಬ್ಬಂದಿಯವರಿಗೂ, ಅಂಗನವಾಡಿ ಕಾರ್ಯಕರ್ತರಿಗೂ, ಆಶಾ ಕಾರ್ಯಕರ್ತರಿಗೂ ಹಾಗೂ ಸಾರ್ವಜನಿಕರಿಗೂ ಕ್ರಮವಾಗಿ ನೀಡಲಾಗುತ್ತದೆ.
ಇದೇ ಡಿಸೆಂಬರ್ 01 ರಿಂದ 30ರ ವರೆಗೆ ಸಕ್ರಿಯ ಕ್ಷಯ ರೋಗ ಪತ್ತೆ ಹಚ್ಚುವ ಹಾಗೂ ಚಿಕಿತ್ಸೆ ಅಂದೋಲನಾ ಕಾರ್ಯಕ್ರಮ ನಡೆಯುತ್ತಿದ್ದು, 2025 ರೊಳಗೆ ನಾವು ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಪ್ರತಿಯೊಬ್ಬ ನಾಗರೀಕರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಡಾ. ವೆಂಕಟೇಶ್ ತಿಳಿಸಿದರು.
ತಹಶೀಲ್ದಾರ್ ಬಿ.ಎನ್ ಗಿರೀಶ್ ಮಾತನಾಡಿ, ಯಾವುದೇ ಕಾರ್ಯಕ್ರಮಗಳು ಯಶಸ್ವಿ ಆಗಬೇಕಾದರೆ ವಿವಿಧ ಇಲಾಖೆಗಳ ಸಹಕಾರ ಅತೀ ಮುಖ್ಯವಾಗಿ ಬೇಕು. ಕೋವಿಡ್-19 ಲಸಿಕೆ ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ಬೆಂಬಲ ನೀಡುವುದರ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ಅದೇ ರೀತಿ ಯಾವುದೇ ಕಾರಣಕ್ಕೂ ಬಂಡಿಗಳಲ್ಲಿ ಬರುವ ಚೀಲದಲ್ಲಿ ಮಾರುವಂತಹ ಅಗ್ಗದ ಉಪ್ಪನ್ನು ಬಳಸಬಾರದು, ಅಯೋಡೈಸ್ಡ್ ಸಾಲ್ಟ್ ಎಂದು ನಮೂದಿಸಿದ ಸೂರ್ಯನ ಮಾರ್ಕ್ ಇರುವಂತಹ ಉಪ್ಪನ್ನು ಮತ್ತು ತರಕಾರಿಗಳನ್ನು ಅಂಗನವಾಡಿ ಕೇಂದ್ರ ಮತ್ತು ಹಾಸ್ಟೆಲ್‍ಗಳಲ್ಲಿ ಉಪಯೋಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್ ಉಮಾಪತಿ, ಆಹಾರ ಇಲಾಖೆ ಉಪನಿರ್ದೇಶಕ ಪ್ರಕಾಶ್, ತಾಲ್ಲೂಕು ಹಿರಿಯ ಪುರುಷ ಆರೋಗ್ಯ ಸಹಾಯಕ ವೆಂಕಟಾಚಲ ಕುಮಾರ್, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪಿ.ವಿ ರವಿ, ತಾಲ್ಲೂಕಿನ ಎಲ್ಲಾ ವಿವಿಧ ಇಲಾಖೆಯ ಅಧಿಕಾರಿಗಳು, ನಗರ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು, ಆರ್.ಬಿ.ಎಸ್.ಕೆ ತಂಡದ ವೈದ್ಯರು ಮತ್ತು ಸಿಬ್ಬಂದಿಯವರು, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕಛೇರಿಯ ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿಶ್ವ ಅಯೋಡಿನ್ ಸಪ್ತಾಹ ಅಂಗವಾಗಿ ಇಲಾಖೆಯಿಂದ ಸಿದ್ಧಪಡಿಸಿರುವ ಪ್ರಚಾರ ಸಾಮಗ್ರಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ10 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

