Connect with us

ದಿನದ ಸುದ್ದಿ

ಬಾಗಲಕೋಟೆ | 2ನೇ ಹಂತದ ಗ್ರಾ.ಪಂ ಚುನಾವಣೆ ವಿವರ : ಡಿ.29ಕ್ಕೆ ಕಲಾದಗಿ ಗ್ರಾಮದ ಮತಗಟ್ಟೆ 51ಕ್ಕೆ ಮರು ಮತದಾನ

Published

on

ಸುದ್ದಿದಿನ,ಬಾಗಲಕೋಟೆ : ಜಿಲ್ಲೆಯ ಎರಡನೇ ಹಂತದಲ್ಲಿ 5 ತಾಲೂಕುಗಳಲ್ಲಿ ಬರುವ 102 ಗ್ರಾ.ಪಂ ಪಂಚಾಯತಿಗಳಿಗೆ ರವಿವಾರ ಶಾಂತಿಯುತವಾಗಿ ಮತದಾನ ನಡೆದಿದ್ದು, ಕಲಾದಗಿ ಗ್ರಾಮದ ಮತಗಟ್ಟೆ 51ಕ್ಕೆ ಡಿಸೆಂಬರ 29 ರಂದು ಮರು ಮತದಾನ ನಡೆಯಲಿದೆ.

ಎರಡನೇ ಹಂತದಲ್ಲಿ ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಹುನಗುಂದ, ಇಲಕಲ್ಲ, ಗುಳೇದಗುಡ್ಡ ಸೇರಿ ಒಟ್ಟು 5 ತಾಲೂಕುಗಳ ಒಟ್ಟು 102 ಗ್ರಾಮ ಪಂಚಾಯತಿಗಳ 1380 ಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಮತದಾನ ಪ್ರಾರಂಭವಾಗಿದ್ದು, 9 ಗಂಟೆ ಸುಮಾರಿಗೆ ಶೇ.6.75 ರಷ್ಟು ಮತದಾನವಾದರೆ, 11 ಗಂಟೆಗೆ ಶೇ.23.97 ರಷ್ಟು, ಮಧ್ಯಾಹ್ನ 1 ಗಂಟೆಗೆ ಶೇ.55.04 ರಷ್ಟು ಹಾಗೂ 3 ಗಂಟೆಗೆ ಶೇ.62.65 ರಷ್ಟು ಮತದಾನವಾದ ಬಗ್ಗೆ ವರದಿಯಾಗಿದೆ.

ಮರು ಮತದಾನ

ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮ ಪಂಚಾಯತಿಯ ವಾರ್ಡ ನಂ.11ರ ಮತಗಟ್ಟೆ ಸಂಖ್ಯೆ 51ಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಯ ಚಿಹ್ನೆ ಬದಲಾವಣೆಯಾಗಿರುವ ಕಾರಣ ಮತದಾನವನ್ನು ಬೆಳಿಗ್ಗೆ 7.30ಕ್ಕೆ ಸ್ಥಗಿತಗೊಳಿಸಲಾಗಿದೆ. ಸದರಿ ಮತಗಟ್ಟೆಗೆ ಡಿಸೆಂಬರ 29 ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮರು ಮತದಾನ ಜರುಗಿಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಉತ್ಸಾಹ ತೋರಿದ ಮಹಿಳಾ ಮತದಾರರು

ಜಿಲ್ಲೆಯ ಗುಳೇದಗುಡ್ಡ, ಬಾದಾಮಿ ಹಾಗೂ ಹುನಗುಂದ ತಾಲೂಕಿನ ವಿವಿಧ ಗ್ರಾಮಗಳ ಮತಗಟ್ಟೆಗಳಲ್ಲಿ ಮತದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿತು. ಗುಳೇದಗುಡ್ಡ ತಾಲೂಕಿನ ಕೆಲವಡಿ ಗ್ರಾಮದ ಮತಗಟ್ಟೆ ಸಂಖ್ಯೆ 29 ರಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ 824 ಮತದಾರರ ಪೈಕಿ 187 ಜನ ಮತದಾನ ಮಾಡಿದ್ದು, 94 ಪುರುಷ ಮತ್ತು 95 ಮಹಿಳಾ ಮತದಾರರಿದ್ದರು. ತಿಮ್ಮಸಾಗರ ಗ್ರಾಮದ ಮತಗಟ್ಟೆ ಸಂಖ್ಯೆ 32 ರಲ್ಲಿ 634 ಮತದಾರರ ಪೈಕಿ 229 ಮತದಾನವಾಗಿದ್ದು, ಅದರಲ್ಲಿ 105 ಪುರುಷ, 124 ಮಹಿಳಾ ಮತದಾರರಿದ್ದರು.

ಬಾದಾಮಿ ತಾಲೂಕಿನ ಪಟ್ಟದಕಲ್ಲ ಗ್ರಾಮದ ಮತಗಟ್ಟೆ ಸಂಖ್ಯೆ 139ಎ ರಲ್ಲಿ ಮಧ್ಯಾಹ್ನ 12 ಗಂಟೆಗೆ 650 ಮತದಾರರ ಪೈಕಿ 297 ಮತದಾನವಾಗಿದ್ದು, 139 ಪುರುಷ ಮತ್ತು 162 ಮಹಿಳೆಯರು ಮತದಾನ ಮಾಡಿದ್ದರು. 139 ಸಂಖ್ಯೆಯ ಮತಗಟ್ಟೆಯಲ್ಲಿ 596 ಮತದಾರರ ಪೈಕಿ 321 ಜನ ಮತದಾನ ಮಾಡಿದ್ದು, ಅದರಲ್ಲಿ 148 ಪುರುಷ, 172 ಮಹಿಳಾ ಮತದಾರರಿದ್ದರು. ಹುನಗುಂದ ತಾಲೂಕಿನ ಐಹೊಳೆ ಗ್ರಾಮದ ಮತಗಟ್ಟೆ ಸಂಖ್ಯೆ 70ರಲ್ಲಿ ಮಧ್ಯಾಹ್ನ 1 ಗಂಟೆಗೆ 713 ಮತದಾರರ ಪೈಕಿ 407 ಜನ ಮತ ಚಲಾಯಿಸಿದ್ದರು. ಅದರಲ್ಲಿ 168 ಪುರುಷ, 239 ಮಹಿಳಾ ಮತದಾರರಿದ್ದರು. 69 ಮತಗಟ್ಟೆಯಲ್ಲಿ 766 ಪೈಕಿ 358 ಜನ ಮತದಾನವಾಗಿದ್ದು ಕಂಡುಬಂದಿತು.

ಗುಳೇದಗುಡ್ಡ, ಬಾದಾಮಿ ಹಾಗೂ ಹುನಗುಂದ ತಾಲೂಕಿನ ಕೆಲವು ಗ್ರಾಮಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಾಗಿ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಲು ಸಾಲು ಸಾಲಾಗಿ ನಿಂತಿದ್ದರು. ಮತಗಟ್ಟೆಗಳಿಗೆ ಆಗಮಿಸುವ ಮತದಾರರನ್ನು ಆಶಾ ಕಾರ್ಯಕರ್ತೆಯರು ಕೈಗಳಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಯಾನಿಂಗ್ ಮಾಡಲಾಯಿತು. ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗಿತ್ತು.

ಚುನಾವಣಾ ವೀಕ್ಷಕ ಶಶಿಧರ ಕುರೇರ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಬೂಬಾಲನ್, ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೇರಿದಂತೆ ಇತರೆ ಅಧಿಕಾರಿಗಳು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending